AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆಲಸ ಮಾಡುವುದರಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು! ಹೇಗೆ ಎಂದು ತಿಳಿದುಕೊಳ್ಳಿ

ದೇಹದ ತೂಕ ಇಳಿಸಲು ಒಂದಷ್ಟು ಸಲಹೆಗಳು: ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ತಮ್ಮ ದೇಹದ ಆಕಾರವನ್ನು ಕಾಪಾಡಿಕೊಳ್ಳಲು ಮತ್ತು ತಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಜಿಮ್‌ಗೆ ಹೋಗುತ್ತಾರೆ. ಆದರೆ ಮನೆಗೆಲಸವನ್ನು ಮಾಡುವುದರಿಂದ ಕ್ಯಾಲೊರಿಗಳನ್ನು ದಹಿಸಬಹುದು ಮತ್ತು ಜಿಮ್‌ಗಿಂತ ಉತ್ತಮ ಫಲಿತಾಂಶವನ್ನು ಪಡೆಯಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ.

ಮನೆಗೆಲಸ ಮಾಡುವುದರಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು! ಹೇಗೆ ಎಂದು ತಿಳಿದುಕೊಳ್ಳಿ
ಮನೆಗೆಲಸ ಮಾಡುವುದರಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 14, 2023 | 1:35 PM

Share

ಮನೆಗೆಲಸದ ಮಹಿಳೆ (House Maid) ಒಂದು ದಿನ ಚಕ್ಕರ್​ ಹೊಡೆದರೆ ಚಿಂತಿಸಬೇಡಿ. ಮನೆ ಶುಚಿಗೊಳಿಸುವುದರಿಂದ ಹಿಡಿದು ಬಟ್ಟೆ ಒಗೆಯುವುದು, ಅಡುಗೆ ಮಾಡುವುದು ಹೀಗೆ ಹಲವು ಕೆಲಸಗಳನ್ನು ನಾನೊಬ್ಬಳೇ ಮಾಡುವುದು ಹೇಗಪ್ಪಾ ಎಂದು ರೇಗಬೇಡಿ. ಇದೆಲ್ಲವನ್ನೂ ನೀವೇ ಮಾಡುವುದರಿಂದ ಆಗುವ ಲಾಭಗಳು ನಿಮಗೆ ತಿಳಿದರೆ ನೀವು ಪ್ರತಿದಿನ ಎಲ್ಲಾ ಕೆಲಸಗಳನ್ನು ನಾನೇ ಮಾಡುವೆ ಎಂದು ಸಜ್ಜಾಗುತ್ತೀರಿ. ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ತಮ್ಮ ದೇಹದ ಆಕಾರವನ್ನು ಕಾಪಾಡಿಕೊಳ್ಳಲು ಮತ್ತು ತಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಜಿಮ್‌ಗೆ ಹೋಗುತ್ತಾರೆ. ಇನ್ನು ಕೆಲವರು ಮನೆಯಲ್ಲಿ ಯೋಗ ಮತ್ತು ವ್ಯಾಯಾಮ ಮಾಡುತ್ತಾರೆ. ಆದರೆ ಮನೆಗೆಲಸವನ್ನು ಮಾಡುವುದರಿಂದ ಕ್ಯಾಲೊರಿಗಳನ್ನು ದಹಿಸಬಹುದು ಮತ್ತು ಜಿಮ್‌ಗಿಂತ (Gym, health) ಉತ್ತಮ ಫಲಿತಾಂಶವನ್ನು ಪಡೆಯಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ.

ಮನೆ ಗುಡಿಸುವುದು, ನೆಲ ಗುಡಿಸುವುದು, ಪಾತ್ರೆ ತೊಳೆಯುವುದು, ಮೆಟ್ಟಿಲುಗಳನ್ನು ತೊಳೆಯುವುದು ಮುಂತಾದ ಶ್ರಮದಾಯಕ ಕೆಲಸಗಳು ಮಾಡುವುದು ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ಅಂದರೆ ಜಿಮ್‌ಗೆ ಹೋಗದೆ ಮನೆಗೆಲಸ ಮಾಡುವ ಮೂಲಕ ನಿಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ತಜ್ಞರ ಪ್ರಕಾರ, ನೀವು ಮನೆಯಲ್ಲಿ ಒಂದು ಗಂಟೆ ಕೆಲಸ ಮಾಡಿದರೆ, ಅದು ಜಿಮ್‌ನಲ್ಲಿ 20 ನಿಮಿಷಗಳ ತಾಲೀಮು ಮಾಡುವುದಕ್ಕೆ ಸಮಾನವಾಗಿರುತ್ತದೆ.

ಇದನ್ನೂ ಓದಿ: ಊಟದ ನಂತರ ಕಾಫಿ ಕುಡಿಯುವ ಅಭ್ಯಾಸವಿದೆಯೇ? ಇದು ಆರೋಗ್ಯಕ್ಕೆ ಹಾನಿಕಾರಕ

ಮನೆಯ ಶುಚಿಗೊಳಿಸುವುದನ್ನು ವ್ಯಾಕ್ಯೂಮ್ ಕ್ಲೀನರ್ ಅಥವಾ ಮಾಪ್ ಮೂಲಕ ಮಾಡಬಹುದು. ಆದರೆ ಸ್ವಚಲ್ಪವೇ ಶ್ರಮ ಹಾಕಲು ನೀವು ಸಿದ್ಧವಾದರೆ ಅಂದರೆ ನಿಮ್ಮ ಮೊಣಕಾಲುಗಳ ಮೇಲೆ ಕುಳಿತುಕೊಂಡು ಬಾಗಿ ದೈಹಿಕ ಶ್ರಮವನ್ನು ಮಾಡಿದರೆ ಸಾಕು… ಅಂದರೆ ಮನೆ ಸಾರಿಸಿದರೆ ಸಾಕು. ಈ ರೀತಿ ಮಾಡುವುದರಿಂದ ಹೊಟ್ಟೆಯ ಕೆಳಭಾಗದಲ್ಲಿ ಒತ್ತಡ ಹೆಚ್ಚುತ್ತದೆ ಮತ್ತು ಸೊಂಟದ ಸುತ್ತಲಿನ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ.

ಪದೇ ಪದೆ ಮನೆಯಲ್ಲಿ ಕುಳಿತು-ಏಳುವ ಕೆಲಸಗಳು (ಸಿಟ್-ಅಪ್‌ಗಳು) ಮಾಡುವುದರಿಂದ ಕೀಲುಗಳ ಸಮಸ್ಯೆ ಸುಧಾರಿಸುತ್ತದೆ. ಇನ್ನು ಆಗಾಗ ಕಿಟಕಿಗಳ ಒರೆಸುವುದನ್ನು ವಾಡಿಕೆ ಮಾಡಿಕೊಳ್ಳಿ. ಇನ್ನು ನಿಮ್ಮ ದೈನಂದಿನ ಜೀವನದಲ್ಲಿ ಮನೆಯನ್ನು ಸ್ವಚ್ಛಗೊಳಿಸುವ ಅಭ್ಯಾಸವನ್ನು ಅಳವಡಿಸಿಕೊಳ್ಳುವುದು… ಹೀಗೆ ಮಾಡುವುದರಿಂದ ನಿಮ್ಮ ತೂಕವನ್ನು ಕಳೆದುಕೊಳ್ಳಲು ಮತ್ತು ಹಣವನ್ನು ಉಳಿಸಲು ಸಹಾಯ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ