Chartered Accountants day 2024 : ಲೆಕ್ಕ ಪರಿಶೋಧಕರ ದಿನದಂದು ಶುಭಾಶಯ ಕೋರಲು ಇಲ್ಲಿದೆ ಸಂದೇಶಗಳು

ದೇಶದಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾವನ್ನು ಸ್ಥಾಪನೆ ಮಾಡಿದ ದಿನವಾದ ಜುಲೈ 1ರಂದು ಪ್ರತಿ ವರ್ಷ ಸಿಎ ದಿನ ಅಥವಾ ಚಾರ್ಟೆಡ್ ಅಕೌಂಟೆಂಟ್ ದಿನವೆಂದು ಆಚರಿಸಲಾಗುತ್ತದೆ. ಈ ದಿನವನ್ನು ಸಿಎ ಸಂಸ್ಥಾಪನಾ ದಿನ ಎಂದು ಕರೆಯಲಾಗುತ್ತದೆ. ಈ ವಿಶೇಷ ದಿನದಂದು ಲೆಕ್ಕ ಪರಿಶೋಧಕರಾಗಿ ಕೆಲಸ ಮಾಡುತ್ತಿರುವವರಿಗೆ ಈ ರೀತಿ ಸಂದೇಶ ಕಳುಹಿಸಿ ಶುಭಾಶಯಗಳನ್ನು ಕೋರಬಹುದು.

Chartered Accountants day 2024 : ಲೆಕ್ಕ ಪರಿಶೋಧಕರ ದಿನದಂದು ಶುಭಾಶಯ ಕೋರಲು ಇಲ್ಲಿದೆ ಸಂದೇಶಗಳು
ಲೆಕ್ಕ ಪರಿಶೋಧಕರ ದಿನ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 01, 2024 | 10:08 AM

ಇತ್ತೀಚೆಗಿನ ದಿನಗಳಲ್ಲಿ ಸಿಎ ಗಳಿಗೆ ಬಾರಿ ಬೇಡಿಕೆಯಿದ್ದು, ಆದರೆ ಲೆಕ್ಕ ಪರಿಶೋಧಕರ ಸಂಖ್ಯೆಗಳು ಮಾತ್ರ ಕಡಿಮೆಯೇ ಇದೆ. ಇದಕ್ಕೆ ಮುಖ್ಯ ಕಾರಣ ಈ ಸಿಎ ತಯಾರಿಯು ತುಂಬಾನೇ ಕಠಿಣವಾಗಿರುವುದಾಗಿದೆ. ಇಂದಿನ ಹಣಕಾಸು ಮತ್ತು ಉದ್ಯಮ ವಲಯದಲ್ಲಿ ಸಿಎ ಅಥವಾ ಚಾರ್ಟರ್ಡ್ ಅಕೌಂಟೆಂಟ್ಸ್ ಅಥವಾ ಲೆಕ್ಕ ಪರಿಶೋಧಕರ ಪಾತ್ರವು ಅಗಾಧವಾದದ್ದು. ಲೆಕ್ಕಪತ್ರ ನಿರ್ವಹಣೆ ಕ್ಷೇತ್ರದ ವೃತ್ತಿಪರರು ಮತ್ತು ಚಾರ್ಟರ್ಡ್ ಅಕೌಂಟೆಂಟ್‌ ಗಳಿಗಾಗಿ ಈ ದಿನವನ್ನು ಮೀಸಲಿಡಲಾಗಿದೆ. ಆರ್ಥಿಕತೆಯ ವಿವಿಧ ಕ್ಷೇತ್ರಗಳಲ್ಲಿ ಸಿಎಗಳ ಕೊಡುಗೆಗಳನ್ನು ಗೌರವಿಸುವ ದಿನವಾಗಿದೆ. ಹೀಗಾಗಿ ಪ್ರತಿ ವರ್ಷ ಜುಲೈ 1 ರಂದು ಚಾರ್ಟರ್ಡ್ ಅಕೌಂಟೆಂಟ್ಸ್ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ‘ಸುಸ್ಥಿರ ಭವಿಷ್ಯಕ್ಕಾಗಿ ನಾವೀನ್ಯತೆ’ ಥೀಮ್ ನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ದಿನವನ್ನು ಆಚರಿಸಲಾಗುತ್ತಿದೆ.

* ಹಣಕಾಸಿನ ಸಮಗ್ರತೆಯನ್ನು ಕಾಪಾಡಿಕೊಳ್ಳಲು ನಿಮ್ಮ ಸಮರ್ಪಣೆ ಮತ್ತು ಬದ್ಧತೆಗೆ ಧನ್ಯವಾದಗಳು. ಎಲ್ಲಾ ಚಾರ್ಟರ್ಡ್ ಅಕೌಂಟೆಂಟ್‌ಗಳಿಗೆ ಚಾರ್ಟರ್ಡ್ ಅಕೌಂಟೆಂಟ್ಸ್ ದಿನದ ಶುಭಾಶಯಗಳು.

* ಹಣಕಾಸಿನ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಆರ್ಥಿಕ ಬೆಳವಣಿಗೆಗೆ ಚಾರ್ಟರ್ಡ್ ಅಕೌಂಟೆಂಟ್‌ಗಳ ಅಮೂಲ್ಯ ಪಾತ್ರ ಅಗಾಧ. ಇಂದು ನಿಮ್ಮ ದಿನವಾಗಿದ್ದು, ಚಾರ್ಟರ್ಡ್ ಅಕೌಂಟೆಂಟ್ ದಿನದ ಶುಭಾಶಯಗಳು.

* ಹಣಕಾಸು ಜಗತ್ತಿನಲ್ಲಿ ಉತ್ಕೃಷ್ಟರಾಗಿರುವ ಚಾರ್ಟರ್ಡ್ ಅಕೌಂಟೆಂಟ್‌ಗಳನ್ನು ಗೌರವಿಸುತ್ತೇವೆ. ನಿಮ್ಮ ಸಮರ್ಪಣೆ, ನಿಖರತೆ ಮತ್ತು ನೈತಿಕ ಮಾನದಂಡಗಳು ಮತ್ತು ಸಂಸ್ಥೆಗಳ ಯಶಸ್ಸಿಗೆ ಕಾರಣವಾಗಿದೆ. ಚಾರ್ಟರ್ಡ್ ಅಕೌಂಟೆಂಟ್ ದಿನದ ಶುಭಾಶಯಗಳು.

* ನಿಮ್ಮ ವೃತ್ತಿಪರ ಪ್ರಯಾಣವು ನಿರಂತರ ಬೆಳವಣಿಗೆ, ಅವಕಾಶಗಳು ಮತ್ತು ಗಮನಾರ್ಹ ಸಾಧನೆಗಳಿಂದ ತುಂಬಿರಲಿ. ಚಾರ್ಟರ್ಡ್ ಅಕೌಂಟೆಂಟ್ ದಿನದ ಶುಭಾಶಯಗಳು.

ಇದನ್ನೂ ಓದಿ: ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನ! ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ

* ಲೆಕ್ಕಪರಿಶೋಧನೆ, ತೆರಿಗೆ ಮತ್ತು ಹಣಕಾಸು ನಿರ್ವಹಣೆಯಲ್ಲಿ ನಿಮ್ಮ ಕೌಶಲ್ಯಗಳು ಶ್ಲಾಘನೀಯ. ಹಣಕಾಸು ಜಗತ್ತಿನಲ್ಲಿ ಪ್ರಕಾಶಮಾನವಾಗಿ ಹೊಳೆಯುವ ನಿಮಗೆ ಚಾರ್ಟರ್ಡ್ ಅಕೌಂಟೆಂಟ್ ದಿನದ ಶುಭಾಶಯಗಳು

* ಆರ್ಥಿಕತೆಯ ಬೆಳವಣಿಗೆಗೆ ಮತ್ತು ಪಾರದರ್ಶಕತೆಗೆ ಶ್ರಮಿಸುತ್ತಿರುವ ಸಿಎ ಗಳಿಗೆ ಚಾರ್ಟರ್ಡ್ ಅಕೌಂಟೆಂಟ್ ದಿನದ ಹಾರ್ಥಿಕ ಶುಭಾಶಯಗಳು

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್