AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಈ ಮೂರು ವಿಷಯಗಳ ಬಗ್ಗೆ ಕೋಪಗೊಳ್ಳುವುದು ಸರಿಯಲ್ಲ ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ಯಶಸ್ಸನ್ನು ಗಳಿಸಲು ಯಾವ ತತ್ವಗಳನ್ನು ಅನುಸರಿಸಬೇಕು ಎಂದು ಹೇಳಿರುವಂತೆ ಮನುಷ್ಯನಾದವನು ಈ ಮೂರು ವಿಷಯಗಳಿಗೆ ಎಂದಿಗೂ ಕೋಪಗೊಳ್ಳಬಾರದು ಎಂದಿದ್ದಾರೆ. ಚಾಣಕ್ಯರು ಹೇಳಿರುವ ಆ ಮೂರು ವಿಷಯಗಳ್ಯಾವುವು, ಯಾವ ಕಾರಣಕ್ಕೆ ಕೋಪ ಮಾಡಿಕೊಳ್ಳುವುದು ಸೂಕ್ತವಲ್ಲ ಎಂಬುದನ್ನು ನೋಡೋಣ ಬನ್ನಿ.

Chanakya Niti: ಈ ಮೂರು ವಿಷಯಗಳ ಬಗ್ಗೆ ಕೋಪಗೊಳ್ಳುವುದು ಸರಿಯಲ್ಲ ಎನ್ನುತ್ತಾರೆ ಚಾಣಕ್ಯ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Nov 30, 2025 | 7:59 PM

Share

ಕೋಪ (Anger) ಮತ್ತು ಕೋಪದಲ್ಲಿ ಮಾತನಾಡುವ ಕೆಲವೊಂದು ಪದಗಳು ಸಂಬಂಧವನ್ನೇ ಹಾಳು ಮಾಡುತ್ತದೆ. ಅದಕ್ಕಾಗಿಯೇ ಅತಿಯಾದ ಕೋಪ ಒಳ್ಳೆಯದಲ್ಲ ಎಂದು  ಹೇಳುವುದು. ಅದರಲ್ಲೂ ಈ ಮೂರು ವಿಷಯಗಳ ಬಗ್ಗೆ ಕೋಪಗೊಳ್ಳಲೇಬಾರದು ಎಂದು ಆಚಾರ್ಯ ಚಾಣಕ್ಯರು  ಹೇಳಿದ್ದಾರೆ. ಹೌದು ಈ ಮೇಲೆ ಕೋಪಗೊಳ್ಳುವ ಬದಲು ಬುದ್ಧಿವಂತಿಕೆಯಿಂದ, ಶಾಂತ ರೀತಿಯಲ್ಲಿ  ವರ್ತಿಸುವುದು ಉತ್ತಮ ಎಂದಿದ್ದಾರೆ. ಆ ಮೂರು ವಿಷಯಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ಈ ಮೂರು ವಿಷಯಗಳ ಬಗ್ಗೆ ಕೋಪಗೊಳ್ಳಬೇಡಿ:

ಪುಟ್ಟ ಮಕ್ಕಳ ತಪ್ಪುಗಳ ಬಗ್ಗೆ:  ಚಿಕ್ಕ ಮಕ್ಕಳು ಕಲಿಕೆಯ ಹಂತದಲ್ಲಿರುತ್ತಾರೆ. ಏನಾದರೂ ಕಲಿಯುವಾಗ ಸಾಕಷ್ಟು ತಪ್ಪುಗಳನ್ನು ಮಾಡುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಕೋಪಗೊಂಡರೆ ಅಥವಾ ಗದರಿಸಿದರೆ, ಮಕ್ಕಳು ಭಯಪಡುತ್ತಾರೆ. ಈ ಭಯದಿಂದಾಗಿ ಅವರ ಕಲಿಕಾ ಸಾಮರ್ಥ್ಯ ಕಡಿಮೆಯಾಗುತ್ತದೆ.

ಹಿರಿಯರ ಮಾತಿನ ಮೇಲೆ: ಕೆಲವೊಮ್ಮೆ ಹಿರಿಯರ ಮಾತುಗಳು ನಮ್ಮ ಸ್ವಂತ ಆಲೋಚನೆಗೆ ಹೊಂದಿಕೆಯಾಗುವುದಿಲ್ಲ, ಅವರು ಪದೇ ಪದೇ ಹೇಳಿದ್ದನ್ನೇ ಹೇಳಿ ಕಿರಿಕಿರಿ ಮಾಡುತ್ತಾರೆ ಎಂದು ಹಲವರು ಕೋಪಗೊಳ್ಳುತ್ತಾರೆ. ಹೀಗೆ ಹಿರಿಯರ ಮಾತಿನ ಮೇಲೆ ಕೋಪಗೊಳ್ಳುವುದು ಸರಿಯಲ್ಲ ಎನ್ನುತ್ತಾರೆ ಚಾಣಕ್ಯರು.

ಇದನ್ನೂ ಓದಿ: ಚಾಣಕ್ಯರ ಪ್ರಕಾರ ಗುಣಗಳಿರುವ ಹೆಣ್ಣಿದ್ದರೆ ಮನೆ ಬಂಗಾರದಂತಿರುತ್ತದೆ

ಪ್ರತಿಕೂಲ ಸಂದರ್ಭಗಳಲ್ಲಿ ಕೋಪಗೊಳ್ಳಬಾರದು: ಆಚಾರ್ಯ ಚಾಣಕ್ಯ ಹೇಳುವಂತೆ, ಕೆಲವೊಮ್ಮೆ ನಾವು ಜೀವನದಲ್ಲಿ ನಮ್ಮ ನಿಯಂತ್ರಣಕ್ಕೆ ಮೀರಿದ ಸನ್ನಿವೇಶಗಳನ್ನು ಎದುರಿಸುತ್ತೇವೆ. ಅಂತಹ ಸಂದರ್ಭಗಳಲ್ಲಿ, ಕೋಪವು ಸಮಸ್ಯೆಗಳನ್ನು ಬಗೆಹರಿಸುವ ಬದಲು ಅವುಗಳನ್ನು ಇನ್ನಷ್ಟು ಹದಗೆಡಿಸುತ್ತದೆ. ಹಾಗಾಗಿ ಅಂತಹ ಸಂದರ್ಭಗಳಲ್ಲಿ, ನೀವು ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಬೇಕು ಮತ್ತು ಬುದ್ಧಿವಂತಿಕೆಯಿಂದ ವರ್ತಿಸಬೇಕು ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ