AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಎಲ್ಲರೂ ನಿಮ್ಮನ್ನು ಗೌರವಿಸಬೇಕೆಂದರೆ ತಕ್ಷಣವೇ ಈ ಅಭ್ಯಾಸಗಳನ್ನು ತ್ಯಜಿಸಿ

ನಮ್ಮನ್ನು ಎಲ್ಲರೂ ಇಷ್ಟಪಡಬೇಕು, ನಮ್ಮನ್ನು ಎಲ್ಲರೂ ಗೌರವಿಸಬೇಕು ಎಂದು ಬಯಸುತ್ತೇವೆ. ಈ ಗೌರವವು ಅತ್ಯಗತ್ಯ. ಇದು ವೈಯಕ್ತಿಕ ಮತ್ತು ವೃತ್ತಿಪೆ ಜೀವನದ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಈ ಗೌರವನ್ನು ಗಳಿಸಬೇಕು ಎಂದಾದರೆ ಈ ಕೆಲವೊಂದು ಅಭ್ಯಾಸಗಳನ್ನು ತ್ಯಜಿಸಬೇಕು ಎಂದಿದ್ದಾರೆ ಆಚಾರ್ಯ ಚಾಣಕ್ಯ. ಚಾಣಕ್ಯರು ಹೇಳಿರುವಂತೆ ಯಾವ ಅಭ್ಯಾಸಗಳನ್ನು ತ್ಯಜಿಸುವ ಮೂಲಕ ಗೌರವವನ್ನು ಗಳಿಸಲು ಸಾಧ್ಯ ಎಂಬುದನ್ನು ನೋಡೋಣ ಬನ್ನಿ.

Chanakya Niti: ಎಲ್ಲರೂ ನಿಮ್ಮನ್ನು ಗೌರವಿಸಬೇಕೆಂದರೆ ತಕ್ಷಣವೇ ಈ ಅಭ್ಯಾಸಗಳನ್ನು ತ್ಯಜಿಸಿ
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Jun 03, 2026 | 8:05 PM

Share

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಬಹಳಷ್ಟು ಸಂಗತಿಗಳನ್ನು ವಿವರಿಸಿದ್ದಾರೆ. ಹೌದು ಯಶಸ್ಸು, ಶ್ರೀಮಂತಿಕೆ, ಪತಿ ಪತ್ನಿಯರ ಸಂಬಂಧ, ಸ್ನೇಹ, ಕುಟುಂಬ ಹೀಗೆ ಹಲವಾರು ಸಂಗತಿಗಳ ಬಗ್ಗೆ ಹೇಳಿದ್ದಾರೆ. ಇವರು ನೀಡಿರುವ ಈ ಸಲಹೆಗಳನ್ನು ಪಾಲಿಸುವ ಮೂಲಕ ಒಬ್ಬ ವ್ಯಕ್ತಿ ಯಶಸ್ವಿ ಜೀವನವನ್ನು ಸಾಧಿಸಲು ಸಾಧ್ಯ. ಅದೇ ರೀತಿ ಆಚಾರ್ಯ ಚಾಣಕ್ಯರು ಹೇಳಿರುವ ಈ ಒಂದಷ್ಟು ಸಲಹೆಗಳನ್ನು ಪಾಲಿಸುವ ಮೂಲಕ ಗೌರವನ್ನು ಗಳಿಸಲು ಕೂಡ ಸಾಧ್ಯ. ನಮ್ಮನ್ನು ಎಲ್ಲರೂ ಇಷ್ಟಪಡಬೇಕು, ನಮ್ಮನ್ನು ಎಲ್ಲರೂ ಗೌರವಿಸಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಈ ಗೌರವ ನಿಮಗೆ ಸಿಗಬೇಕೆಂದರೆ ಈ ಕೆಲವು ಅಭ್ಯಾಸಗಳನ್ನು ತ್ಯಜಿಸಿ.

ಗೌರವ ಗಳಿಸಲು ಏನು ಮಾಡಬೇಕು?

ದುರಾಸೆಯನ್ನು ಬಿಟ್ಟುಬಿಡಿ: ಎಂದಿಗೂ ದುರಾಸೆಯಿಂದ ಇರಬಾರದು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ದುರಾಸೆಯು ನಿಮ್ಮನ್ನು ಇತರರಿಂದ ದೂರವಿಡುತ್ತದೆ ಮತ್ತು ನಿಮ್ಮ ಯಶಸ್ಸಿಗೆ ಅಡ್ಡಿಯಾಗುತ್ತದೆ. ದುರಾಸೆಯ ವ್ಯಕ್ತಿಯನ್ನು ಸಮಾಜದಲ್ಲಿ ಅಥವಾ ಕುಟುಂಬದಲ್ಲಿ ಯಾರೂ ಇಷ್ಟಪಡುವುದಿಲ್ಲ, ಅಂತಹವರಿಗೆ ಯಾವ ಗೌರವವವೂ ಇರುವುದಿಲ್ಲ, ಆದ್ದರಿಂದ ನೀವು ದುರಾಸೆಯನ್ನು ಬಿಟ್ಟುಬಿಡಬೇಕು.

ಇತರರನ್ನು ಟೀಕಿಸಬೇಡಿ: ಚಾಣಕ್ಯ ನೀತಿಯ ಪ್ರಕಾರ, ಇತರರನ್ನು ಟೀಕಿಸುವುದು ಒಳ್ಳೆಯ ಗುಣವಲ್ಲ. ಇತರರನ್ನು ಟೀಕಿಸುವ ಜನರಿಗೆ  ಸಮಾಜದಲ್ಲಿ ಕಿಂಚಿತ್ತು ಗೌರವವೂ ಇರುವುದಿಲ್ಲ, ಅಂತಹ ವ್ಯಕ್ತಿಗಳನ್ನು ಯಾರು ಹತ್ತಿರಕ್ಕೂ ಸೇರಿಸಲು ಇಷ್ಟಪಡುವುದಿಲ್ಲ. ಆದ್ದರಿಂದ, ನೀವು ಯಾರನ್ನೂ ಎಂದಿಗೂ ಟೀಕಿಸಬಾರದು. ಜೊತೆಗೆ ಟೀಕಾಕಾರರಿಂದಲೂ ದೂರವಿರಬೇಕು.

ಇದನ್ನೂ ಓದಿ: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಾಣಕ್ಯರ ಮಾತುಗಳನ್ನು ಪಾಲಿಸಿ

ಅಹಂಕಾರ ತ್ಯಜಿಸಿ: ಮನುಷ್ಯನಾದವನಿಗೆ ಅಹಂಕಾರ ಇರಬಾರದು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಅಹಂಕಾರಪಡುವ ಜನರನ್ನು ಯಾರು ಇಷ್ಟಪಡುವುದಿಲ್ಲ, ಅವರಿಗೆ ಯಾವ ಗೌರವವೂ ಇರುವುದಿಲ್ಲ. ಈ ಅಹಂಕಾರ ಗೌರವವನ್ನು ಹಾಳು ಮಾಡುವುದಲ್ಲದೆ, ನಿಮ್ಮ ಯಶಸ್ಸಿಗೂ ಅಡ್ಡಿಯಾಗುತ್ತದೆ. ಆದ್ದರಿಂದ ಎಂದಿಗೂ ಅಹಂಕಾರ ಪಡಬೇಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು