AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಮನೆಯ ಯಜಮಾನನಾದವನಿಗೆ ಈ ಅಭ್ಯಾಸಗಳು ಇರಲೇಬಾರದು ಎಂದಿದ್ದಾರೆ ಚಾಣಕ್ಯ

ಪ್ರತಿಯೊಂದು ಮನೆಯಲ್ಲೂ ಆ ಮನೆಯ ಯಜಮಾನ ನಿರ್ಣಾಯಕ ಪಾತ್ರ ವಹಿಸುತ್ತಾರೆ. ಆತ ಕುಟುಂಬದ ಆಧಾರಸ್ತಂಭ ಅಂತ ಹೇಳಿದ್ರೆ ತಪ್ಪಾಗಲಾರದು. ಅವನು ಸರಿಯಾದ ದಾರಿಯಲ್ಲಿ ನಡೆದರೆ ಮಾತ್ರ ಕುಟುಂಬ ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯ. ಅದೇ ಮನೆಯ ಯಜಮಾನನಾದವನಿಗೆ ಕೆಲವೊಂದು ಕೆಟ್ಟ ಅಭ್ಯಾಸಗಳಿದ್ದರೆ, ಆತನ ಕಾರಣದಿಂದಾಗಿ ಆತನ ಕುಟುಂಬದವರಿಗೆ ಶಾಂತಿ, ನೆಮ್ಮದಿ ಅನ್ನೋದೇ ಇರೋದಿಲ್ಲ ಎಂದಿದ್ದಾರೆ ಆಚಾರ್ಯ ಚಾಣಕ್ಯ. ಹಾಗಿದ್ರೆ ಮನೆಯ ಯಜಮಾನನ ಯಾವ ಗುಣಗಳು ಕುಟುಂಬಸ್ಥರ ನೆಮ್ಮದಿಯನ್ನು ಕೆಡಿಸುತ್ತದೆ ಎಂಬುದನ್ನು ನೋಡೋಣ ಬನ್ನಿ.

Chanakya Niti: ಮನೆಯ ಯಜಮಾನನಾದವನಿಗೆ ಈ ಅಭ್ಯಾಸಗಳು ಇರಲೇಬಾರದು ಎಂದಿದ್ದಾರೆ ಚಾಣಕ್ಯ
ಸಾಂದರ್ಭಿಕ ಚಿತ್ರ Image Credit source: Unsplash
ಮಾಲಾಶ್ರೀ ಅಂಚನ್​
|

Updated on: Nov 22, 2026 | 8:54 PM

Share

ಮನೆಯ ಯಜಮಾನನಾದವನು ಕುಟುಂಬದ (Family) ಆಧಾರಸ್ತಂಭ ಅಂತಾನೇ ಹೇಳಬಹುದು. ಅವನು ಸರಿಯಾದ ದಾರಿಯಲ್ಲಿ ನಡೆದರೆ ಮಾತ್ರ ಕುಟುಂಬ ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯ. ಅಲ್ಲದೆ ಮನೆಯ ಯಜಮಾನನ ನಡವಳಿಕೆ, ನಿರ್ಧಾರಗಳು ಮತ್ತು ಅಭ್ಯಾಸಗಳು ಇಡೀ ಕುಟುಂಬದ ಮೇಲೆ ಪರಿಣಾಮ ಬೀರುತ್ತವೆ. ಅದಕ್ಕಾಗಿಯೇ ಮನೆಯ ಯಜಮಾನನಾದವನು ಜವಾಬ್ದಾರನಾಗಿರಬೇಕು, ಪ್ರತಿಯೊಂದು ನಿರ್ಧಾರವನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು. ಜೊತೆಗೆ ಉತ್ತಮ ಗುಣಗಳನ್ನು ಹೊಂದಿರಬೇಕು. ಆಗ ಮಾತ್ರ ನೆಮ್ಮದಿಯ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ. ಅದೇ ಮನೆಯ ಯಜನಮಾನನಿಗೆ ಈ ಕೆಲವೊಂದು ಗುಣಗಳಿದ್ದರೆ, ಮನೆಯ ಶಾಂತಿ, ನೆಮ್ಮದಿಯೇ ಹಾಳಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಹಾಗಿದ್ರೆ ಯಜಮಾನನ ಯಾವ ಗುಣಗಳು ಮನೆಯ ವಾತಾವರಣವನ್ನು ಹಾಳು ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಮನೆಯ ಯಜಮಾನನಿಗೆ ಈ ಮೂರು ಗುಣಗಳಿರಬಾರದು:

ಹಣವನ್ನು ವ್ಯರ್ಥ ಮಾಡುವುದು:

ಅತಿಯಾದ ಖರ್ಚು ಒಳ್ಳೆಯದಲ್ಲ ಎಂದಿದ್ದಾರೆ ಆಚಾರ್ಯ ಚಾಣಕ್ಯ. ಅತಿಯಾದ ಖರ್ಚುಗಳು ಆರ್ಥಿಕ ಸಮಸ್ಯೆಗಳು ಉದ್ಭವಿಸಲು ಕಾರಣವಾಗುತ್ತದೆ. ಹೀಗಿರುವಾಗ ಮನೆಯ ಯಜಮಾನನೇ ಅತಿಯಾದ ಖರ್ಚುಗಳನ್ನು ಮಾಡಿದರೆ, ಕುಟುಂಬ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟರೆ ಮನೆಯ ಶಾಂತಿಯೂ ಹಾಳಾಗುತ್ತದೆ. ಆದ್ದರಿಂದ ಮನೆಯ ಯಜಮಾನ ಹಣವನ್ನು ಅತಿಯಾಗಿ ಖರ್ಚು ಮಾಡಬಾರದು. ಬದಲಿಗೆ ಹಿರಿಯರ ಆರೋಗ್ಯ, ಮಕ್ಕಳ ಶಿಕ್ಷಣ ಇತ್ಯಾದಿಗಳನ್ನು ಗಮನದಲ್ಲಿಟ್ಟುಕೊಂಡು ಉಳಿತಾಯಕ್ಕೆ ಆದ್ಯತೆ ನೀಡಬೇಕು.

ವ್ಯಸನಗಳಿಗೆ ದಾಸರಾಗುವುದು:

ಮನೆಯ ಯಜಮಾನನಿಗೆ ಜೂಜಾಟ, ಮದ್ಯಪಾನ, ಧೂಮಪಾನದಂತಹ ಕೆಟ್ಟ ಚಟಗಳಿದ್ದರೆ, ಇದು ಮನೆಯ ಮೇಲೂ ಪರಿಣಾಮ ಬೀರುತ್ತದೆ. ಹೌದು ಇದು ಗಂಡ ಹೆಂಡತಿಯ ನಡುವೆ ಜಗಳ, ಕುಟುಂಬಸ್ಥರ ನಡುವೆ ಮನಸ್ತಾಪ, ಆರ್ಥಿಕ ಸಂಕಷ್ಟ ಇವೆಲ್ಲದಕ್ಕೂ ಕಾರಣವಾಗುತ್ತದೆ. ಇದರಿಂದ ಮನೆಯ ನೆಮ್ಮದಿಯೇ ಹಾಳಾಗುತ್ತದೆ. ಅಲ್ಲದೆ  ಯಜಮಾನನ ಕೆಟ್ಟ ಚಟಗಳು ಮನೆಯ ಗೌರವಕ್ಕೂ ಧಕ್ಕೆ ತರುತ್ತದೆ. ಆದ್ದರಿಂದ ಮನೆಯ ಮುಖ್ಯಸ್ಥನಿಗೆ ಯಾವುದೇ ರೀತಿಯ ಕೆಟ್ಟ ಚಟಗಳಿರಬಾರದು.

ಇದನ್ನೂ ಓದಿ: ಈ ಗುಣಗಳಿರುವ ಗಂಡ್ಮಕ್ಳು ತಮ್ಮ ತಂದೆ-ತಾಯಿ ಹೆಮ್ಮೆ ಪಡುವಂತೆ ಮಾಡುತ್ತಾರೆ

ಮಹಿಳೆಯರಿಗೆ ಅಗೌರವ ತೋರುವುದು:

ಮನೆಯ ಮುಖ್ಯಸ್ಥನು ಕುಟುಂಬದಲ್ಲಿನ ಮಹಿಳೆಯರನ್ನು ಗೌರವಿಸಬೇಕು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಮಹಿಳೆಯರಿಗೆ ಸರಿಯಾದ ಗೌರವವನ್ನು ನೀಡದ ಮನೆಯಲ್ಲಿ ಸಂತೋಷ ಮತ್ತು ಶಾಂತಿ ಇರುವುದಿಲ್ಲ. ಕೆಲವೊಮ್ಮೆ ಮನೆಯ ಯಜಮಾನ ತನ್ನ ಹೆಂಡತಿ, ತಾಯಿ, ಮಗಳ ಅಭಿಪ್ರಾಯಕ್ಕೆ ಬೆಲೆ ನೀಡುವುದಿಲ್ಲ. ಮನೆಯಲ್ಲಿರುವ ಮಹಿಳೆಯರನ್ನು ಕೀಳಾಗಿ ಕಾಣುತ್ತಾರೆ. ಇದು ಮಹಿಳೆಯರ ಮನಸ್ಸಿಗೆ ನೋವನ್ನು ಉಂಟುಮಾಡುತ್ತದೆ. ಅಲ್ಲದೆ ಯಜಮಾನನಾದವನು ಮಹಿಳೆಯರನ್ನು ಕೀಳಾಗಿ ಕಂಡರೆ ಮನೆಯಲ್ಲಿರುವ ಇತರ ಪುರುಷ ಸದಸ್ಯರೂ ಕೂಡ ಇದೇ ಗುಣಗಳನ್ನು ಕಲಿಯುತ್ತಾರೆ. ಈ ಅಭ್ಯಾಸಗಳು ಕುಟುಂಬದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ತಾರಕ್ಕೇರಿದ ಮಾಜಿ ಸಿಎಂ ಜಗನ್-ಸಹೋದರಿ ನಡುವಿನ ಆಸ್ತಿ ವಿವಾದ
ತಾರಕ್ಕೇರಿದ ಮಾಜಿ ಸಿಎಂ ಜಗನ್-ಸಹೋದರಿ ನಡುವಿನ ಆಸ್ತಿ ವಿವಾದ
ನಾವು ಶಿವಭಕ್ತರು, ಶಿವ ದೇವಾಲಯದಲ್ಲಿ ಮದುವೆ: ಐಶ್ವರ್ಯಾ-ಶಿಶಿರ್
ನಾವು ಶಿವಭಕ್ತರು, ಶಿವ ದೇವಾಲಯದಲ್ಲಿ ಮದುವೆ: ಐಶ್ವರ್ಯಾ-ಶಿಶಿರ್
‘ಬಸವ ಮಂಟಪ’ವಿವಾದ: ಲೇಖಕ ರವಿ ಹಂಜ್​​ಗೆ ಶಾಕ್ ಕೊಟ್ಟ ಬೆಳಗಾವಿ ಪೊಲೀಸ್ರು
‘ಬಸವ ಮಂಟಪ’ವಿವಾದ: ಲೇಖಕ ರವಿ ಹಂಜ್​​ಗೆ ಶಾಕ್ ಕೊಟ್ಟ ಬೆಳಗಾವಿ ಪೊಲೀಸ್ರು
ಸರ್ಕಾರಿ ಶಾಲೆಗೆ ಬಿಸಿಯೂಟ ಅಕ್ಕಿ ಪೂರೈಸದ ಪ್ರಕರಣದಲ್ಲಿ ಇಬ್ಬರು ಸಸ್ಪೆಂಡ್
ಸರ್ಕಾರಿ ಶಾಲೆಗೆ ಬಿಸಿಯೂಟ ಅಕ್ಕಿ ಪೂರೈಸದ ಪ್ರಕರಣದಲ್ಲಿ ಇಬ್ಬರು ಸಸ್ಪೆಂಡ್
ಮನವಿ ನೀಡಿದವರ ಬಳಿ ಸಚಿವ ಮಧು ಬಂಗಾರಪ್ಪ ದರ್ಪ: ವಿಡಿಯೋ ವೈರಲ್
ಮನವಿ ನೀಡಿದವರ ಬಳಿ ಸಚಿವ ಮಧು ಬಂಗಾರಪ್ಪ ದರ್ಪ: ವಿಡಿಯೋ ವೈರಲ್
ಬೆಂಗಳೂರು ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಬೆಂಗಳೂರು ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಚಿನ್ನ ಖರೀದಿಸಬೇಡಿ ಎಂಬ ಕರೆಯನ್ನು ಪಾಲಿಸಿದ ಭಾರತೀಯರಿಗೆ ಮೋದಿ ಮೆಚ್ಚುಗೆ
ಚಿನ್ನ ಖರೀದಿಸಬೇಡಿ ಎಂಬ ಕರೆಯನ್ನು ಪಾಲಿಸಿದ ಭಾರತೀಯರಿಗೆ ಮೋದಿ ಮೆಚ್ಚುಗೆ
ಕೊಚ್ಚಿನ್ ಏರ್​ಪೋರ್ಟ್​ನಲ್ಲಿ ಲೇಖಕ ರವಿ ಹಂಜ್ ವಿಚಾರಣೆ
ಕೊಚ್ಚಿನ್ ಏರ್​ಪೋರ್ಟ್​ನಲ್ಲಿ ಲೇಖಕ ರವಿ ಹಂಜ್ ವಿಚಾರಣೆ
ಬರದಿಂದ ರೈತರು ಸಂಕಷ್ಟದಲ್ಲಿರುವಾಗ ಗದಗ ಡಿಸಿ ನಿವಾಸದಲ್ಲಿ ಮೋಜು-ಮಸ್ತಿ
ಬರದಿಂದ ರೈತರು ಸಂಕಷ್ಟದಲ್ಲಿರುವಾಗ ಗದಗ ಡಿಸಿ ನಿವಾಸದಲ್ಲಿ ಮೋಜು-ಮಸ್ತಿ
ನವೆಂಬರ್ 23ರಿಂದ 29ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 23ರಿಂದ 29ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ