AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಚಾಣಕ್ಯರ ಪ್ರಕಾರ ಮದುವೆಯಾಗುವ ಗಂಡು-ಹೆಣ್ಣಿನ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು ಗೊತ್ತಾ?

ಆಚಾರ್ಯ ಚಾಣಕ್ಯರು ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಗಂಡ ಹೆಂಡತಿ ಹೇಗಿರಬೇಕು, ಸಂಸಾರ ಹೇಗೆ ಸಾಗಿಸಬೇಕು ಎಂಬುದರ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಅವರು ವೈವಾಹಿಕ ಜೀವನದಲ್ಲಿ ಗಂಡ ಹೆಂಡತಿಯ ನಡುವಿನ ವಯಸ್ಸಿನ ಅಂತರವೂ ಪ್ರಮುಖ ಪಾತ್ರ ವಹಿಸುತ್ತದೆ. ಹೆಚ್ಚಿನ ವಯಸ್ಸಿನ ಅಂತರವು ಸಂಸಾರದಲ್ಲಿ ಬಿರುಕು ಮೂಡಲು ಕಾರಣವಾಗಬಹುದು ಎಂದಿದ್ದಾರೆ. ಹಾಗಿದ್ದರೆ ಮದುವೆಯಾಗುವ ಗಂಡು-ಹೆಣ್ಣಿನ ನಡುವೆ ವಯಸ್ಸಿನ ಅಂತರ ಎಷ್ಟಿದ್ದರೆ ಚೆಂದ ಎಂಬುದನ್ನು ನೋಡೋಣ ಬನ್ನಿ.

Chanakya Niti: ಚಾಣಕ್ಯರ ಪ್ರಕಾರ ಮದುವೆಯಾಗುವ ಗಂಡು-ಹೆಣ್ಣಿನ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು ಗೊತ್ತಾ?
ಚಾಣಕ್ಯ ನೀತಿImage Credit source: Pinterest
ಮಾಲಾಶ್ರೀ ಅಂಚನ್​
|

Updated on: Jun 21, 2026 | 5:32 PM

Share

ಮದುವೆಗೆ ಜಾತಿ, ಧರ್ಮ, ವಯಸ್ಸಿನ ಅಂತರ ಇದ್ಯಾವುದು ಲೆಕ್ಕಕ್ಕೆ ಬರೋದಿಲ್ಲ. ಗಂಡು ಹೆಣ್ಣಿನ ನಡುವೆ ಪ್ರೀತಿ, ತಿಳುವಳಿಕೆ, ನಂಬಿಕೆ ಇದ್ದರೆ ಸಾಕು ಎಂದು ಹಲವರು ಹೇಳುವುದುಂಟು. ಆದರೆ ಚಾಣಕ್ಯರ ಪ್ರಕಾರ. ವೈವಾಹಿಕ ಜೀವನವು ಸುಂದರವಾಗಿರಲು ಪ್ರೀತಿ ಮತ್ತು ನಂಬಿಕೆ ಮುಖ್ಯವಿರುವಂತೆ ವಯಸ್ಸಿನ ಅಂತರವು (age gap) ಸಹ ಸಂಬಂಧದ ದಿಕ್ಕನ್ನು ನಿರ್ಧರಿಸುತ್ತದೆ. ಗಂಡ ಮತ್ತು ಹೆಂಡತಿಯ ನಡುವಿನ ವಯಸ್ಸಿನ ವ್ಯತ್ಯಾಸವು ತುಂಬಾ ಹೆಚ್ಚಿರಬಾರದು. ಮದುವೆಯು ಮಾನಸಿಕ, ಭಾವನಾತ್ಮಕ ಮತ್ತು ದೈಹಿಕ ಸಮತೋಲನದ ವಿಷಯವಾಗಿದೆ ಮತ್ತು ದೊಡ್ಡ ವಯಸ್ಸಿನ ವ್ಯತ್ಯಾಸವು ಈ ಸಮತೋಲನವನ್ನು ದುರ್ಬಲಗೊಳಿಸಬಹುದು ಎಂದಿದ್ದಾರೆ. ಹಾಗಿದ್ದರೆ ಗಂಡ ಹೆಂಡತಿಯ ನಡುವೆ ಮದುವೆಯಾಗುವ ಹುಡುಗ ಮತ್ತು ಹುಡುಗಿಯ ನಡುವೆ ಏಜ್‌ ಗ್ಯಾಪ್‌ ಎಷ್ಟಿರಬೇಕು ಎಂಬುದನ್ನು ನೋಡೋಣ ಬನ್ನಿ.

ಗಂಡ ಹೆಂಡತಿಯ ನಡುವಿನ ವಯಸ್ಸಿನ ಅಂತರ ಎಷ್ಟಿರಬೇಕು?

ಆಚಾರ್ಯ ಚಾಣಕ್ಯರ ಪ್ರಕಾರ, ಗಂಡನು ತನ್ನ ಹೆಂಡತಿಗಿಂತ ದೊಡ್ಡವನಾಗಿರಬೇಕು, ಇದರಿಂದ ಅವನು ತನ್ನ ಅನುಭವ, ತಾಳ್ಮೆ ಮತ್ತು ಪ್ರಬುದ್ಧತೆಯಿಂದ ತನ್ನ ಕುಟುಂಬ ಜೀವನವನ್ನು ನಿರ್ವಹಿಸಬಹುದು. ಆದರೆ ಪತಿ ಪತ್ನಿಯರ ವಯಸ್ಸಿನ ಅಂತರವು ತೀರಾ ಹೆಚ್ಚಿರಬಾರದು ಎಂದು ಒತ್ತಿ ಹೇಳಿದ್ದಾರೆ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವು ನಿರ್ಣಾಯಕವಾಗಿದೆ. ದಂಪತಿಗಳ ನಡುವೆ ವಯಸ್ಸಿನ ಅಂತರ ತೀರಾ ಹೆಚ್ಚಿದ್ದರೆ ಅದರಿಂದ ದಾಂಪತ್ಯ ಜೀವನದಲ್ಲಿ ಬಿರುಕು ಮೂಡುವ ಸಾಧ್ಯತೆ ಇರುತ್ತದೆ.ಚಾಣಕ್ಯರ ಪ್ರಕಾರ ಒಬ್ಬ ಪುರುಷ ತನಗಿಂತ ತೀರಾ ಚಿಕ್ಕ ವಯಸ್ಸಿನ ಮಹಿಳೆಯನ್ನು ಮದುವೆಯಾಗುವುದು ಸೂಕ್ತವಲ್ಲ.  ಏಕೆಂದರೆ ಅಂತಹ ವಿವಾಹಗಳು ಹೆಚ್ಚು ಕಾಲ ಉಳಿಯುವುದಿಲ್ಲ. ಆದ್ದರಿಂದ ಮದುವೆಯಾಗುವ ಗಂಡು ಮತ್ತು ಹೆಣ್ಣಿನ ನಡುವೆ  3 ರಿಂದ 5 ವರ್ಷಗಳ ವಯಸ್ಸಿನ ಅಂತರವಿದ್ದರೆ ಸಾಕು ಎಂದಿದ್ದಿದ್ದಾರೆ.

ಇದನ್ನೂ ಓದಿ: ಈ ಅಭ್ಯಾಸಗಳನ್ನು ಬದಲಾಯಿಸದಿದ್ದರೆ ನಿಮ್ಮ ಆದಾಯ ಎಂದಿಗೂ ಹೆಚ್ಚಳವಾಗುವುದಿಲ್ಲ

ಹೆಚ್ಚಿನ ವಯಸ್ಸಿನ ಅಂತರ ಸಂಬಂಧಕ್ಕೆ ಅಪಾಯಕಾರಿ:

ಗಂಡ ಮತ್ತು ಹೆಂಡತಿಯ ನಡುವಿನ ವಯಸ್ಸಿನ ಅಂತರ ಕಡಿಮೆ ಇದ್ದಷ್ಟೂ ಒಳ್ಳೆಯದು ಎಂದು ಆಚಾರ್ಯ ಚಾಣಕ್ಯ ತಮ್ಮ ನೀತಿಯಲ್ಲಿ ಹೇಳಿದ್ದಾರೆ. 3 ರಿಂದ 5 ವರ್ಷಗಳ ವ್ಯತ್ಯಾಸ ಇಬ್ಬರಿಗೂ ಸೂಕ್ತವೆಂದು ಪರಿಗಣಿಸಲಾಗಿದೆ. ಗಂಡ ಮತ್ತು ಹೆಂಡತಿಯ ನಡುವಿನ ವಯಸ್ಸಿನ ಅಂತರ ಕಡಿಮೆ ಇದ್ದಷ್ಟೂ ದಂಪತಿಗಳ ನಡುವೆ ಹೊಂದಾಣಿಕೆ, ತಿಳುವಳಿಕೆ ಹೆಚ್ಚಾಗುತ್ತದೆ, ಅವರು ಒಟ್ಟಿಗೆ ತಪ್ಪುಗಳನ್ನು ಮಾಡುತ್ತಾರೆ, ಒಟ್ಟಿಗೆ ಸಂತೋಷದ ಜೀವನವನ್ನು ನಡೆಸುತ್ತಾರೆ ಮತ್ತು ಕುಟುಂಬ ಜೀವನದ ಸರಳತೆಗಳನ್ನು ಒಟ್ಟಿಗೆ ಕಲಿಯುತ್ತಾರೆ. ಅಲ್ಲದೆ ಅವರು ಒಂದೇ ರೀತಿಯ ಆಸಕ್ತಿಗಳು, ಆಲೋಚನೆಗಳು ಮತ್ತು ಜೀವನಶೈಲಿಯಲ್ಲಿ ಹೊಂದಿರುತ್ತಾರೆ.   ಅದೇ ವಯಸ್ಸಿನ ಅಂತರ ತೀರಾ ಹೆಚ್ಚಿದ್ದರೆ, ಗಂಡ ಹೆಂಡತಿಯ ಮನಸ್ಥಿತಿಯೂ ಬೇರೆ ಬೇರೆ ಇರುತ್ತದೆ, ಈ ಆಲೋಚನೆಗಳಲ್ಲಿನ ವ್ಯತ್ಯಾಸ, ಜೀವನದ ವಿಭಿನ್ನ ದೃಷ್ಟಿಕೋನ ಆಗಾಗ್ಗೆ ಮನಸ್ತಾಪ, ಜಗಳಗಳು ನಡೆಯಲು ಕಾರಣವಾಗಬಹುದು. ಇದು ಸಂಬಂಧವನ್ನು ದುರ್ಬಲಗೊಳಿಸುತ್ತದೆ ಮತ್ತು ವಿಚ್ಛೇದನಕ್ಕೆ ಕಾರಣವಾಗಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ