AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya Ram Mandir Prasad: ಅಯೋಧ್ಯೆಯಲ್ಲಿ ಪ್ರಸಾದ ತಯಾರಿಸುವ ಈ ಬಾಣಸಿಗನಿಂದ 12 ವಿಶ್ವ ದಾಖಲೆ

ಅಯೋಧ್ಯೆ ರಾಮಮಂದಿರದಲ್ಲಿ 7000 ಕೆಜಿ ಹಲ್ವಾವನ್ನು ಪ್ರಸಾದ ರೂಪದಲ್ಲಿ ತಯಾರಿಸಲಾಗುತ್ತಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಸಾದ ಸಿದ್ಧಪಡಿಸುವುದರ ಹಿಂದೆ ಯಾರ ಕೈವಾಡವಿದೆ ಎಂಬುದು ಭಕ್ತರಲ್ಲಿ ಕುತೂಹಲ ಮೂಡಿಸಿದೆ.ಈ ಪ್ರಸಾದದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ ನಾಗ್ಪುರದ 12 ವಿಶ್ವ ದಾಖಲೆ ಮುಡಿಗೇರಿಸಿಕೊಂಡಿರುವ ಬಾಣಸಿಗ ವಿಷ್ಣು ಮನೋಹರ್.

Ayodhya Ram Mandir Prasad: ಅಯೋಧ್ಯೆಯಲ್ಲಿ ಪ್ರಸಾದ ತಯಾರಿಸುವ ಈ ಬಾಣಸಿಗನಿಂದ 12 ವಿಶ್ವ ದಾಖಲೆ
Chef Vishnu ManoharImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 13, 2024 | 3:01 PM

Share

ಅಯೋಧ್ಯೆಯ ಭವ್ಯವಾದ ರಾಮಮಂದಿರ ಜನವರಿ 22 ರಂದು ಉದ್ಘಾಟನೆಗೊಳ್ಳಲಿದೆ. ರಾಮ ಹುಟ್ಟಿದ ನೆಲದಲ್ಲಿ ರಾಮಮಂದಿರವನ್ನು ಕಣ್ತುಂಬಿಸಿಕೊಳ್ಳಬೇಕು ಎಂಬ ಸಾಕಷ್ಟು ಭಕ್ತರ ಕನಸು ಇದೀಗಾ ನನಸಾಗುತ್ತಿದೆ.ಈ ವಿಶೇಷ ಸಂದರ್ಭದಲ್ಲಿ ಅಯೋಧ್ಯೆ ರಾಮಮಂದಿರದಲ್ಲಿ 7000 ಕೆಜಿ ಹಲ್ವಾವನ್ನು ಪ್ರಸಾದ ರೂಪದಲ್ಲಿ ತಯಾರಿಸಲಾಗುತ್ತಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಸಾದ ಸಿದ್ಧಪಡಿಸುವುದರ ಹಿಂದೆ ಯಾರ ಕೈವಾಡವಿದೆ ಎಂಬುದು ಭಕ್ತರಲ್ಲಿ ಕುತೂಹಲ ಮೂಡಿಸಿದೆ.ಈ ಪ್ರಸಾದದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ ನಾಗ್ಪುರದ 12 ವಿಶ್ವ ದಾಖಲೆ ಮುಡಿಗೇರಿಸಿಕೊಂಡಿರುವ ಬಾಣಸಿಗ ವಿಷ್ಣು ಮನೋಹರ್.

ಪ್ರಸಾದಕ್ಕಾಗಿ 1400 ಕೆಜಿ ಕಡಾಯಿ:

ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಸಾದವಾಗಿ 7000 ಕೆಜಿ ಹಲ್ವಾವನ್ನು ತಯಾರಿಸಲಾಗುತ್ತದೆ. ಈ ಪ್ರಸಾದವನ್ನು 1.5 ಲಕ್ಷ ರಾಮ ಭಕ್ತರಿಗೆ ನೀಡಲಾಗುತ್ತದೆ. ನಾಗ್ಪುರದ ವಿಷ್ಣು ಮನೋಹರ್ ಅವರು ಈ ಭಾರಿ ಪ್ರಮಾಣದ ಹಲ್ವಾ ತಯಾರಿಸುವ ಹೊಣೆ ಹೊತ್ತಿದ್ದಾರೆ.ಇಷ್ಟು ದೊಡ್ಡ ಪ್ರಮಾಣದಲ್ಲಿ ಹಲ್ವಾ ತಯಾರಿಸಲು ನಾಗ್ಪುರದಿಂದ ಕಡಾಯಿಯನ್ನೂ ತರಿಸಲಾಗಿದ್ದು,ಸುಮಾರು 1400 ಕೆ.ಜಿ ತೂಕದ ಈ ಕಡಾಯಿಯಲ್ಲಿ ರಾಮನ ಪ್ರಸಾದವನ್ನು ತಯಾರಿಸಲಾಗುತ್ತದೆ.

ಈ ಹಲ್ವಾ ತಯಾರಿಸಲು 900 ಕೆಜಿ 900 ಕೆಜಿ ಸೂಜಿ ರವೆ, 1000 ಕೆಜಿ ಸಕ್ಕರೆ, 2500 ಲೀಟರ್ ಹಾಲು, 300 ಕೆಜಿ ಡ್ರೈ ಫ್ರೂಟ್ಸ್, 1000 ಕೆಜಿ ತುಪ್ಪ ಮತ್ತು 2500 ಲೀಟರ್ ನೀರನ್ನು ಬಳಸಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.

12 ವಿಶ್ವ ದಾಖಲೆಗಳನ್ನು ಬರೆದ ಈ ಬಾಣಸಿಗ:

ಇಲ್ಲಿಯವರೆಗೆ ವಿಷ್ಣು ಮನೋಹರ್ ಅವರು 12 ವಿಶ್ವ ದಾಖಲೆಗಳನ್ನು ಮಾಡಿದ್ದಾರೆ. ಇತ್ತೀಚೆಗಷ್ಟೇ 285 ನಿಮಿಷದಲ್ಲಿ ಅನ್ನ ಸೇರಿದಂತೆ 75 ಬಗೆಯ ಖಾದ್ಯಗಳನ್ನು ತಯಾರಿಸಿ ವಿಶ್ವ ದಾಖಲೆಯನ್ನು ಬರೆದಿದ್ದರು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Published On - 12:46 pm, Fri, 12 January 24

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್