Child Health: ಮಕ್ಕಳಲ್ಲಿ ಬೊಜ್ಜು ಹೆಚ್ಚುತ್ತಿರುವುದಕ್ಕೆ ಪೋಷಕರೇ ಕಾರಣ!

ಮೊಬೈಲ್, ಟಿವಿಯ ಹುಚ್ಚು ಹೆಚ್ಚಿಸಿಕೊಳ್ಳುತ್ತಿರುವ ಮಕ್ಕಳು ಹೊರಗೆ ಆಟವಾಡುವ ಅಭ್ಯಾಸವನ್ನೇ ಬಿಟ್ಟಿದ್ದಾರೆ. ಇದರಿಂದ ದೈಹಿಕ ಚಟುವಟಿಕೆಯಿಲ್ಲದೆ ಮಕ್ಕಳಲ್ಲಿ ಸ್ಥೂಲಕಾಯತೆ ಹೆಚ್ಚಾಗುತ್ತಿದೆ. ಇದರ ಜೊತೆಗೆ ಮಕ್ಕಳಿಗೆ ಆರೋಗ್ಯಕರವಾದ ಆಹಾರಕ್ಕಿಂತಲೂ ಜಂಕ್​ಫುಡ್ ಎಂದರೆ ಬಹಳ ಇಷ್ಟ. ಅದೇ ಕಾರಣದಿಂದ ಮಕ್ಕಳಲ್ಲಿ ಬೊಜ್ಜು ಹೆಚ್ಚಾಗುತ್ತಿದೆ. ಇದಕ್ಕೆ ಪರಿಹಾರವೇನು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Child Health: ಮಕ್ಕಳಲ್ಲಿ ಬೊಜ್ಜು ಹೆಚ್ಚುತ್ತಿರುವುದಕ್ಕೆ ಪೋಷಕರೇ ಕಾರಣ!
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Mar 06, 2024 | 11:59 AM

ಜಂಕ್ ಫುಡ್ (Junk Food) ಮಕ್ಕಳ ದೈನಂದಿನ ಆಹಾರಕ್ರಮವನ್ನು ಆವರಿಸಿಕೊಂಡುಬಿಟ್ಟಿದೆ. ಮಕ್ಕಳಿಗೆ ಆರೋಗ್ಯಕರ ಆಹಾರಕ್ಕಿಂತಲೂ ಪಿಜ್ಜಾ, ಚಿಪ್ಸ್, ಬರ್ಗರ್, ಸ್ಯಾಂಡ್​ವಿಚ್, ನೂಡಲ್ಸ್, ಮ್ಯಾಗಿ ರೀತಿಯ ಜಂಕ್​ಫುಡ್​ಗಳೇ ಹೆಚ್ಚು ಇಷ್ಟವಾಗುತ್ತಿದೆ. ಇದರಿಂದ ಮಕ್ಕಳಲ್ಲಿ ಸ್ಥೂಲಕಾಯತೆಯ ಸಮಸ್ಯೆ ಕೂಡ ಹೆಚ್ಚಾಗುತ್ತಿದೆ. ಇದು ಚಿಕ್ಕ ಮಕ್ಕಳಲ್ಲಿ ಹೃದ್ರೋಗಗಳು (Heart Problems), ಮಧುಮೇಹ (Diabetes), ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್, ಮೂಳೆಯ ಸಮಸ್ಯೆ ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಅಲ್ಟ್ರಾ ಸಂಸ್ಕರಿಸಿದ ಆಹಾರಗಳ ಜನಪ್ರಿಯತೆಯು ಕಳೆದ ಕೆಲವು ದಶಕಗಳಿಂದ ಹೆಚ್ಚುತ್ತಿದೆ. ಮಕ್ಕಳ ದೇಹದಲ್ಲಿ ಹೆಚ್ಚು ಕೊಬ್ಬು ಸಂಗ್ರಹವಾಗುವುದಕ್ಕೆ ಇದು ಮುಖ್ಯ ಕಾರಣವಾಗಿದೆ. ಬರ್ಗರ್ ಮತ್ತು ಪಿಜ್ಜಾ ಅಥವಾ ಆಲೂಗೆಡ್ಡೆ ಚಿಪ್ಸ್ ಅಥವಾ ಚಾಕೊಲೇಟ್ ಮುಂತಾದವು ಹೆಚ್ಚಿನ ಕ್ಯಾಲೋರಿ, ಸಕ್ಕರೆ ಮತ್ತು ಕೊಬ್ಬಿನ ಅಂಶವನ್ನು ಹೊಂದಿರುತ್ತವೆ. ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್‌ನಲ್ಲಿ ಪ್ರಕಟವಾದ ಹೊಸ ವಿಶ್ಲೇಷಣೆಯು 1990ರಿಂದ ಸ್ಥೂಲಕಾಯದ ಜಾಗತಿಕ ದರವು ಮಕ್ಕಳಲ್ಲಿ 4 ಪಟ್ಟು ಹೆಚ್ಚಾಗಿದೆ ಮತ್ತು ವಯಸ್ಕರಲ್ಲಿ ಈ ಬೊಜ್ಜಿನ ಸಮಸ್ಯೆ ದ್ವಿಗುಣಗೊಂಡಿದೆ ಎಂದು ಹೇಳಿದೆ.

ಇದನ್ನೂ ಓದಿ: ಹೊಟ್ಟೆಯ ಬೊಜ್ಜು ಕರಗಿಸಲು ಸಹಾಯ ಮಾಡುವ 7 ತರಕಾರಿ ಜ್ಯೂಸ್​ಗಳಿವು

ಬೊಜ್ಜು ದೇಹದ ಸಾಮಾನ್ಯ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರಬಹುದು ಮತ್ತು ಅನೇಕ ಆರೋಗ್ಯ ತೊಡಕುಗಳಿಗೆ ಕಾರಣವಾಗಬಹುದು. ಅಪೌಷ್ಟಿಕತೆಯ ಹಲವಾರು ರೂಪಗಳು ಹೆಚ್ಚುತ್ತಿವೆ ಮತ್ತು ಕಡಿಮೆ ಪೋಷಣೆಯೊಂದಿಗೆ ಜಂಕ್ ಫುಡ್‌ಗಳು ನಮ್ಮ ದೇಹ ಮತ್ತು ಮನಸ್ಸಿಗೆ ಹೆಚ್ಚು ಹಾನಿ ಮಾಡುತ್ತಿವೆ. ಈ ಆಹಾರಗಳಲ್ಲಿನ ಹೆಚ್ಚಿನ ಕ್ಯಾಲೋರಿಗಳು ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತವೆ. ಸಂಸ್ಕರಿತ ಆಹಾರಗಳಲ್ಲಿ ಕಂಡುಬರುವ ಹಾನಿಕಾರಕ ಅಂಶಗಳು ಮತ್ತು ಸಂರಕ್ಷಕಗಳು ಕೂಡ ಅಪಾಯಕಾರಿ. ಇದು ಮಕ್ಕಳಲ್ಲಿ ಸ್ಥೂಲಕಾಯತೆಯ ಅಪಾಯವನ್ನು ಹೆಚ್ಚಿಸುತ್ತದೆ. ತಮಗೆ ಸುಲಭವಾಗಲಿ ಎಂದು ಪೋಷಕರು ಕೆಲವೊಮ್ಮೆ ಈ ಜಂಕ್​ಫುಡ್​ಗಳನ್ನು ಮಕ್ಕಳಿಗೆ ಅಭ್ಯಾಸ ಮಾಡಿಸುತ್ತಾರೆ. ಇದು ಮಕ್ಕಳ ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಭಾರೀ ಪರಿಣಾಮ ಬೀರುತ್ತದೆ ಎಂದು ಮುಂಬೈನ ಖಾರ್ಘರ್‌ನ ಮದರ್‌ಹುಡ್ ಹಾಸ್ಪಿಟಲ್ಸ್‌ನ ಕನ್ಸಲ್ಟೆಂಟ್ ಪೀಡಿಯಾಟ್ರಿಶಿಯನ್ ಮತ್ತು ನಿಯೋನಾಟಾಲಜಿಸ್ಟ್ ಡಾ. ಅಮಿತ್ ಪಿ ಘವಾಡೆ ಹಿಂದುಸ್ತಾನ್​ ಟೈಮ್ಸ್​ಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

“ಜಂಕ್ ಫುಡ್ ಸೇವನೆಯು ಬೊಜ್ಜು ಸಂಬಂಧಿತ ಕಾಯಿಲೆಗಳಾದ ಮಧುಮೇಹ, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಸಮಸ್ಯೆಗಳು, ಹೃದ್ರೋಗ, ಮತ್ತು ಕೆಲವು ರೀತಿಯ ಕ್ಯಾನ್ಸರ್‌ಗಳಿಗೆ ಕೂಡ ಕಾರಣವಾಗಬಹುದು. ಜಂಕ್ ಫುಡ್‌ನ ಲಭ್ಯತೆ ಮತ್ತು ಕೈಗೆಟುಕುವ ದರ ಅನೇಕರಿಗೆ ಅನುಕೂಲಕರ ಆಯ್ಕೆಯಾಗಿದೆ” ಎಂದು ಡಾ ಘವಾಡೆ ಹೇಳಿದ್ದಾರೆ.

ಇದನ್ನೂ ಓದಿ: Weight Loss: ಬೇಗ ದೇಹದ ಕೊಬ್ಬು ಕರಗಿಸಲು ಬೆಳಗ್ಗೆ ಇದನ್ನು ಕುಡಿಯಿರಿ

ಕಡಿಮೆ ಫೈಬರ್, ಅಧಿಕ ಸಕ್ಕರೆ ಮತ್ತು ಉಪ್ಪನ್ನು ಹೊಂದಿರುವ ಜಂಕ್ ಫುಡ್ ಕರುಳಿನ ಆರೋಗ್ಯವನ್ನು ಹಾಳುಮಾಡುತ್ತದೆ ಮತ್ತು ಪ್ರತಿಯಾಗಿ ಪ್ರತಿರಕ್ಷಣಾ ಕಾರ್ಯದ ಮೇಲೆ ಪರಿಣಾಮ ಬೀರುತ್ತದೆ. ಇದು ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಚಿಕ್ಕ ಮಕ್ಕಳು ಮತ್ತು ಹದಿಹರೆಯದವರಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ಆಹಾರಗಳ ಅತಿಯಾದ ಸೇವನೆಯಿಂದ ಖಿನ್ನತೆ, ಆತಂಕ, ಆಕ್ರಮಣಶೀಲತೆ ಹೆಚ್ಚುತ್ತಿದೆ. ಇದಷ್ಟೇ ಅಲ್ಲ, ಸಂಸ್ಕರಿತ ಆಹಾರಗಳು, ಸಕ್ಕರೆ ಮತ್ತು ಅನಾರೋಗ್ಯಕರ ಕೊಬ್ಬಿನ ಆಹಾರವು ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾದ ಸಮತೋಲನವನ್ನು ಅಡ್ಡಿಪಡಿಸುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳಿಗೆ ಮತ್ತು ಪ್ರತಿರಕ್ಷಣಾ ಕಾರ್ಯದ ತೊಂದರೆಗೆ ಕಾರಣವಾಗುತ್ತದೆ. ಇದು ಮಕ್ಕಳ ನಡವಳಿಕೆಯ ಮೇಲೆ ಪರಿಣಾಮ ಬೀರಬಹುದು. ಇದು ಮಕ್ಕಳಲ್ಲಿ ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸಬಹುದು ಎಂದು ಸಂಶೋಧನೆ ಸೂಚಿಸುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ