Children’s Day 2024 : ನವೆಂಬರ್ 14ರಂದೇ ಮಕ್ಕಳ ದಿನಾಚರಣೆ ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವದ ಸವಿನೆನಪಿಗಾಗಿ ಪ್ರತಿ ವರ್ಷ ನವೆಂಬರ್ 14 ರಂದು ಮಕ್ಕಳ ದಿನಚಾರಣೆ ಆಚರಿಸಲಾಗುತ್ತದೆ. ಮಕ್ಕಳ ಹಕ್ಕುಗಳು, ಕಾಳಜಿ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಈ ದಿನವು ಹೊಂದಿದೆ. ಹಾಗಾದ್ರೆ ಈ ದಿನದ ಇತಿಹಾಸ, ಮಹತ್ವ ಹಾಗೂ ಆಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Children's Day 2024 : ನವೆಂಬರ್ 14ರಂದೇ ಮಕ್ಕಳ ದಿನಾಚರಣೆ ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 13, 2024 | 5:46 PM

ಮಕ್ಕಳು ದೇವರಿಗೆ ಸಮಾನ, ಮಕ್ಕಳ ಮುಗ್ಧತೆ, ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮಕ್ಕಳಿಗಾಗಿಯೇ ಮೀಸಲಿಟ್ಟ ದಿನವೇ ನವೆಂಬರ್ 14. ಈ ವಿಶೇಷ ದಿನದಂದು ಭಾರತದಾದ್ಯಂತ ಮಕ್ಕಳ ದಿನಚಾರಣೆ ಆಚರಿಸಲಾಗುತ್ತದೆ. ಚಾಚಾ ನೆಹರೂ ಎಂದು ಜನಪ್ರಿಯರಾಗಿದ್ದ ಪಂಡಿತ್ ಜವಹರಲಾಲ್‌ ನೆಹರೂರವರಿಗೆ ಮಕ್ಕಳೆಂದರೆ ಎಲ್ಲಿಲ್ಲದ ಪ್ರೀತಿ. ಮಕ್ಕಳೇ ದೇಶದ ಭವಿಷ್ಯ ಎನ್ನುತ್ತಿದ್ದರು. ರಾಷ್ಟ್ರದ ಅಭಿವೃದ್ಧಿಗೆ ದೇಶದ ಮೊದಲ ಪ್ರಧಾನಿ ನೆಹರೂ ನೀಡಿದ ಕೊಡುಗೆ ಮತ್ತು ಮಕ್ಕಳ ಮೇಲಿನ ಪ್ರೀತಿಗೆ ಗೌರವವಾಗಿ ದೇಶದಲ್ಲಿ ಈ ದಿನ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದನ್ನು ಬಾಲ ದಿವಸ್‌ ಎಂದೂ ಕರೆಯುತ್ತಾರೆ.

ಮಕ್ಕಳ ದಿನಾಚರಣೆಯ ಇತಿಹಾಸ

ಭಾರತವು 1956 ರಿಂದ ಮಕ್ಕಳ ದಿನವನ್ನು ಆಚರಿಸಲಾಗುತ್ತಿದೆ. ನೆಹರೂ ಅವರ ಮರಣದ ಮೊದಲು ಭಾರತವು ವಿಶ್ವಸಂಸ್ಥೆಯ ಸಾರ್ವತ್ರಿಕ ಮಕ್ಕಳ ದಿನಾಚರಣೆಯೊಂದಿಗೆ ನವೆಂಬರ್ 20 ರಂದು ಮಕ್ಕಳ ದಿನವನ್ನು ಆಚರಿಸುತ್ತಿತ್ತು. ಆದರೆ, ನೆಹರೂರವರ ಮರಣದ ಬಳಿಕ ಗೌರವಾರ್ಥವಾಗಿ ಈ ದಿನವನ್ನು ರಾಷ್ಟ್ರೀಯ ಮಕ್ಕಳ ದಿನ ಎಂದು ಆಚರಿಸಲು ಸಂಸತ್ತು ತೀರ್ಮಾನಿಸಿತು. ಅಂದಿನಿಂದ ಪ್ರತಿ ವರ್ಷ ನವೆಂಬರ್ 14ರಂದು ಮಕ್ಕಳ ದಿನ ಆಚರಿಸಲಾಗುತ್ತಿದೆ.

ನವೆಂಬರ್ 14 ರಂದೇ ಮಕ್ಕಳ ದಿನಾಚರಣೆ ಏಕೆ?

ನವೆಂಬರ್ 14 ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಹುಟ್ಟಿದ ದಿನ. ಅವರ ಜನ್ಮವಾರ್ಷಿಕೋತ್ಸವವನ್ನು ಮಕ್ಕಳ ದಿನ ಎಂದು ಆಚರಿಸಲಾಗುತ್ತದೆ. ನೆಹರೂ ಮಕ್ಕಳ ಶಿಕ್ಷಣ ಮತ್ತು ಹಕ್ಕುಗಳ ಪ್ರತಿಪಾದಕರಾಗಿದ್ದರು ಹಾಗೂ ಮಕ್ಕಳನ್ನು ರಾಷ್ಟ್ರದ ನಿಜವಾದ ಶಕ್ತಿ ಮತ್ತು ಸಮಾಜದ ಅಡಿಪಾಯ ಎನ್ನುತ್ತಿದ್ದರು. ಜವಾಹರ್ ಲಾಲ್ ನೆಹರೂ ಮಕ್ಕಳನ್ನು ತುಂಬಾ ಇಷ್ಟಪಡುತ್ತಿದ್ದರು. ಇದಕ್ಕೆ ಮಕ್ಕಳು ಅವರನ್ನು ಚಾಚಾ ನೆಹರೂ ಎಂದು ಕರೆಯುತ್ತಿದ್ದರು. ಹೀಗಾಗಿ ಅವರ ಹುಟ್ಟುಹಬ್ಬದ ದಿನವೇ ಮಕ್ಕಳ ದಿನಾಚರಣೆಯನ್ನು ಆಚರಿಸುತ್ತ ಬರಲಾಗುತ್ತಿದೆ.

ಮಕ್ಕಳ ದಿನಾಚರಣೆಯ ಮಹತ್ವ ಹಾಗೂ ಆಚರಣೆ

ಮಕ್ಕಳ ದಿನಾಚರಣೆಯಂದು ಮಕ್ಕಳ ಹಕ್ಕು, ಮಕ್ಕಳ ರಕ್ಷಣೆ ವಿಚಾರಗಳಲ್ಲಿ ಜಾಗೃತಿ ಮೂಡಿಸುವುದು. ಸುರಕ್ಷಿತ ಮತ್ತು ಆರೋಗ್ಯಕರ ಬಾಲ್ಯವನ್ನು ಉತ್ತೇಜಿಸುವುದು. ಈ ದಿನವು ಮಕ್ಕಳ ಹಕ್ಕುಗಳನ್ನು ಗುರುತಿಸಲು ಮತ್ತು ಎತ್ತಿಹಿಡಿಯಲು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಶಿಕ್ಷಣ, ಪೋಷಣೆ ಮತ್ತು ಸುರಕ್ಷಿತ ಮನೆಯ ವಾತಾವರಣದೊಂದಿಗೆ ಮಕ್ಕಳ ಯೋಗಕ್ಷೇಮಕ್ಕೆ ಒತ್ತು ನೀಡುತ್ತದೆ. ಭಾರತದಲ್ಲಿ ಮಕ್ಕಳ ದಿನದಂದು ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಸಿಹಿತಿಂಡಿಗಳು ಮತ್ತು ಉಡುಗೊರೆಗಳೊಂದಿಗೆ ನೀಡುವುದರೊಂದಿಗೆ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಬಹುಮಾನ ವಿತರಿಸಲಾಗುತ್ತದೆ.

ಇದನ್ನೂ ಓದಿ: ಮುಗ್ಧ ಮನಸ್ಸಿನ ಮಕ್ಕಳಿಗೆ ಈ ರೀತಿ ಶುಭಾಶಯ ಕೋರಿ

ಮಕ್ಕಳ ಶಿಕ್ಷಣಕ್ಕೆ ನೆಹರುರವರ ಕೊಡುಗೆಗಳು

ಮಕ್ಕಳ ನೆಚ್ಚಿನ ಚಾಚಾ ಜವಾಹರಲಾಲ್‌ ನೆಹರೂ ರವರು ನಾಳೆ ನಿಮ್ಮದು ಎಂದು ಮಕ್ಕಳಿಗೆ ಯಾವಾಗಲೂ ಹೇಳುತ್ತಿದ್ದರು. ಮಕ್ಕಳೇ ಈ ದೇಶದ ಭವಿಷ್ಯ ಎಂದು ಜವಾಹರಲಾಲ್ ನೆಹರು ನಂಬಿದ್ದರು. ಮಕ್ಕಳು ಉತ್ತಮ ಶಿಕ್ಷಣ ಪಡೆದರೆ ಅದ್ಭುತಗಳನ್ನು ಸೃಷ್ಟಿಸಬಹುದು ಎನ್ನುತ್ತಿದ್ದರು. ದೇಶದ ಮಕ್ಕಳಿಗೆ ಅಗತ್ಯ ಶಿಕ್ಷಣವನ್ನು ಪೂರೈಸಬೇಕೆಂಬುದು ಅವರ ಧ್ಯೇಯ ಆಗಿತ್ತು. ಈ ಹಿನ್ನಲೆಯಲ್ಲಿ ಜವಾಹರ್ ಲಾಲ್ ನೆಹರೂ ಅವರು ಪ್ರಧಾನಿಯಾಗಿದ್ದಾಗ ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅವರು ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅನ್ನು ಸ್ಥಾಪಿಸಿದರು. ನೆಹರು ಯಾವಾಗಲೂ ಮಕ್ಕಳ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್