Coconut Benefits : ಚರ್ಮ, ಕೂದಲಿನ ಆರೈಕೆಗೆ ನಿತ್ಯ ಸೇವಿಸಿ ತೆಂಗಿನಕಾಯಿ

ತೆಂಗಿನಕಾಯಿಯಿಲ್ಲದೇ ಭಾರತೀಯ ಅಡುಗೆಗಳು ರುಚಿಸುವುದೇ ಇಲ್ಲ. ಹೀಗಾಗಿ ತೆಂಗಿನಕಾಯಿ ಹಾಗೂ ತೆಂಗಿನೆಣ್ಣೆಯನ್ನು ವಿವಿಧ ಖಾದ್ಯಗಳನ್ನು ತಯಾರಿಕೆ ಬಳಸಲಾಗುತ್ತದೆ. ಅದಲ್ಲದೇ ತ್ವಚೆ ಮತ್ತು ಕೂದಲಿನ ಆರೈಕೆಯಲ್ಲಿ ತೆಂಗಿನ ಪಾತ್ರವು ಅಗಾಧವಾಗಿದೆ. ನಿಯಮಿತವಾಗಿ ತೆಂಗಿನಕಾಯಿ ಸೇವನೆಯಿಂದಾಗಿ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದ್ದು, ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Coconut Benefits : ಚರ್ಮ, ಕೂದಲಿನ ಆರೈಕೆಗೆ ನಿತ್ಯ ಸೇವಿಸಿ ತೆಂಗಿನಕಾಯಿ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 26, 2024 | 3:23 PM

ಪ್ರತಿದಿನ ಚಟ್ನಿ, ಸಾಂಬಾರ್, ಪಲ್ಯ ಹೀಗೆ ವಿವಿಧ ಆಹಾರಗಳಲ್ಲಿ ತೆಂಗಿನಕಾಯಿಯನ್ನು ಬಳಸುವುದಷ್ಟೇ ಅಲ್ಲದೇ, ಹಸಿಯಾಗಿ ತಿನ್ನುವುದರಿಂದ ಹಲವಾರು ಲಾಭಗಳನ್ನು ಕಾಣಬಹುದು. ತೆಂಗಿನಕಾಯಿಯಲ್ಲಿ ವಿಟಮಿನ್ ಇ, ವಿಟಮಿನ್ ಬಿ ಮತ್ತು ವಿಟಮಿನ್ ಸಿ, ಕ್ಯಾಲ್ಸಿಯಂ, ಕಬ್ಬಿಣಾಂಶ, ಫಾಸ್ಪರಸ್ ಮತ್ತು ಖನಿಜಾಂಶಗಳಿಂದ ಸಮೃದ್ಧವಾಗಿದೆ. ಹೀಗಾಗಿ ಸೌಂದರ್ಯ ವರ್ಧನೆಗಾಗಿ ಹಾಗೂ ತೂಕ ಕಮ್ಮಿ ಮಾಡಿಕೊಳ್ಳಬೇಕೆನ್ನುವವರು ಇದನ್ನು ನಿಯಮಿತವಾಗಿ ಸೇವಿಸುವುದು ಪರಿಣಾಮಕಾರಿಯಾಗಿದೆ.

ತೆಂಗಿನಕಾಯಿ ಸೇವನೆಯಿಂದ ಆಗುವ ಪ್ರಯೋಜನಗಳು

* ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ : ತೆಂಗಿನಕಾಯಿಯಲ್ಲಿ ಫೈಬರ್ ಅಂಶವು ಹೇರಳವಾಗಿದ್ದು, ಇದರಲ್ಲಿ ನಾರಿನಾಂಶವು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಹೊಟ್ಟೆ ಉಬ್ಬರ ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಿ ಜೀರ್ಣಾಂಗ ಕ್ರಿಯೆಯು ಸರಿಯಾಗಿ ಆಗುವಂತೆ ಮಾಡುತ್ತದೆ.

* ಕೂದಲು ಹಾಗೂ ಚರ್ಮದ ಆರೈಕೆಗೂ ಸಹಕಾರಿ : ತೆಂಗಿನ ಕಾಯಿಯಲ್ಲಿರುವ ಜೀವಸತ್ವಗಳು ಮತ್ತು ಖನಿಜಗಳು ಕೂದಲ ಆರೋಗ್ಯವನ್ನು ಕಾಪಾಡುವುದಲ್ಲದೆ, ತ್ವಚೆಯ ಆರೋಗ್ಯಕರವಾಗಿ ಮತ್ತು ಯಂಗ್ ಆಗಿ ಕಾಣಿಸುವಂತೆ ಮಾಡುತ್ತದೆ. ಚರ್ಮದ ಮೇಲಿನ ಸುಕ್ಕುಗಳು, ಮುಖದ ಮೇಲಿನ ಕಲೆಗಳನ್ನು ನಿವಾರಿಸಿ ಸೂರ್ಯನ ಕಿರಣಗಳಿಂದ ತ್ವಚೆಯನ್ನು ರಕ್ಷಿಸುತ್ತದೆ.

* ತೂಕ ಇಳಿಕೆಗೆ ಸಹಕಾರಿ : ತೆಂಗಿನ ಕಾಯಿಯಲ್ಲಿ ಆರೋಗ್ಯಕರ ಕೊಬ್ಬುಗಳು, ಪ್ರೋಟೀನ್ ಗಳು, ವಿವಿಧ ಜೀವಸತ್ವಗಳು ಹಾಗೂ ಖನಿಜಗಳಿಂದ ಸಮೃದ್ಧವಾಗಿದೆ. ಹಸಿ ತೆಂಗಿನಕಾಯಿ ಸೇವನೆಯಿಂದ ಆರೋಗ್ಯಕರವಾಗಿ ತೂಕ ಇಳಿಸಿಕೊಳ್ಳಬಹುದು. ಹಸಿವನ್ನು ನಿಯಂತ್ರಿಸಲು ಮತ್ತು ಅತಿಯಾಗಿ ತಿನ್ನುವುದನ್ನು ಕಡಿಮೆ ಮಾಡುತ್ತದೆ. ಅದಲ್ಲದೇ ಹಠಾತ್ ಕಡುಬಯಕೆಗಳನ್ನು ತಡೆದು ಅತಿಯಾದ ಕ್ಯಾಲೋರಿ ಸೇವನೆಯನ್ನು ತಡೆಯುವ ಮೂಲಕ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

* ಹೃದಯದ ಆರೋಗ್ಯವನ್ನು ಕಾಪಾಡುತ್ತದೆ : ತೆಂಗಿನಕಾಯಿಯಲ್ಲಿರುವ ಆರೋಗ್ಯಕರ ಕೊಬ್ಬು, ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದು ಉತ್ತಮ ಕೊಲೆಸ್ಟ್ರಾಲನ್ನು ಹೆಚ್ಚಿಸಿ, ಕೆಟ್ಟ ಕೊಲೆಸ್ಟ್ರಾಲನ್ನು ಕಡಿಮೆ ಮಾಡುವ ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

* ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ : ಹಸಿ ತೆಂಗಿನಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ ಮತ್ತು ಬ್ಯಾಕ್ಟಿರಿಯಾ ವಿರೋಧಿ ಗುಣಗಳು ಹೇರಳವಾಗಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ, ದೇಹವು ಸೋಂಕುಗಳು, ವೈರಸ್ ಗಳು ಮತ್ತು ಹಾನಿಕಾರಕ ಬ್ಯಾಕ್ಟಿರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

* ಮೂಳೆಗಳನ್ನು ಬಲಪಡಿಸುತ್ತದೆ : ಹಸಿ ತೆಂಗಿನಕಾಯಿಯು ಕ್ಯಾಲ್ಸಿಯಂ ಮತ್ತು ಮೆನ್ನೀಸಿಯಮ್‌ನಂತಹ ಅಗತ್ಯವಾದ ಖನಿಜಗಳಲ್ಲಿ ಸಮೃದ್ಧವಾಗಿದ್ದು, ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಹೀಗಾಗಿ ಇದರ ನಿಯಮಿತ ಸೇವನೆಯು ಆಸ್ಟಿಯೊಪೊರೋಸಿಸ್ ಸೇರಿದಂತೆ ಮೂಳೆ ಸಂಬಂಧಿತ ಅಸ್ವಸ್ಥತೆಗಳನ್ನು ತಡೆಯುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು