ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವ ಅಭ್ಯಾಸ ನಿಮಗಿದೆಯೇ?

ಎಳನೀರು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಆದರೆ ನೀವು ಎಳನೀರು ಕುಡಿಯುವ ಸರಿಯಾದ ಸಮಯದ ಬಗ್ಗೆ ತಿಳಿದುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವ ಅಭ್ಯಾಸ ನಿಮಗಿದೆಯೇ?
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವ ಅಭ್ಯಾಸ Image Credit source: Mishry
Follow us
|

Updated on:Mar 08, 2023 | 7:19 PM

ಬೇಸಿಗೆ ಆರಂಭವಾಗಿದೆ, ಈ ಸಮಯದಲ್ಲಿ ನಿಮ್ಮ ದೇಹವನ್ನು ತಂಪಾಗಿಡುವಲ್ಲಿ ಎಳನೀರು ಉತ್ತಮ ಆಯ್ಕೆಯಾಗಿದೆ. ಎಳನೀರು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಆದರೆ ನೀವು ಎಳನೀರು ಕುಡಿಯುವ ಸರಿಯಾದ ಸಮಯದ ಬಗ್ಗೆ ತಿಳಿದುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಎನ್ನುವ ಸಂಶಯ ಸಾಕಷ್ಟು ಜನರಲ್ಲಿದೆ. ಆದ್ದರಿಂದ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದರಿಂದ ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ.

ನೀವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಅವುಗಳು ಈ ಕೆಳಗಿನಂತಿವೆ:

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ :

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಂಗಿನ ನೀರನ್ನು ಕುಡಿಯುವುದು ಚಯಾಪಚಯವನ್ನು ಉತ್ತೇಜಿಸುತ್ತದೆ, ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಉತ್ತಮ ಅಭ್ಯಾಸವಾಗಿದೆ.

ಇದನ್ನೂ ಓದಿ: ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್‌ನಲ್ಲಿಟ್ಟು ತಿನ್ನುವ ಅಭ್ಯಾಸ ನಿಮಗಿದೆಯಾ?

ಮೊಡವೆಗಳನ್ನು ತೆಗೆದುಹಾಕುತ್ತದೆ:

ಮುಖದ ಮೇಲೆ ಹೊಳಪನ್ನು ಕಾಪಾಡಿಕೊಳ್ಳಲು ಎಳನೀರು ಸಹಾಯ ಮಾಡುತ್ತದೆ. ನಿರ್ಜಲೀಕರಣವು ಚರ್ಮವನ್ನು ಹಾನಿಯುಂಟು ಮಾಡುತ್ತದೆ. ಜೊತೆಗೆ ನಿಮ್ಮ ಮುಖದಲ್ಲಿ ಮೊಡವೆ ಉಂಟಾಗಲು ಕಾರಣವಾಗುತ್ತದೆ. ಎಳನೀರು ದೇಹಕ್ಕೆ ತೇವಾಂಶವನ್ನು ನೀಡುವುದರಿಂದ ನಿಮ್ಮ ಚರ್ಮದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.

ಎಳನೀರಿನ ಇತರ ಆರೋಗ್ಯ ಪ್ರಯೋಜನಗಳು:

  • ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿದೆ.
  • ಮಧುಮೇಹವನ್ನು ಸಮಸ್ಥಿತಿಯಲ್ಲಿಡುವಲ್ಲಿ ಎಳನೀರು ಉತ್ತಮ ಔಷಧಿಯಾಗಿದೆ.
  • ಮೂತ್ರಪಿಂಡದ ಕಲ್ಲುಗಳ ತಡೆಗಟ್ಟುವಿಕೆಯಲ್ಲಿ ಎಳನೀರು ಸಹಾಯಕವಾಗಿದೆ.
  • ಮೂತ್ರನಾಳದ ಸೋಂಕಿನಿಂದ ನಿಮಗೆ ರಕ್ಷಣೆಯನ್ನು ನೀಡುತ್ತದೆ.
  • ಆಯಾಸ ಮತ್ತು ಒತ್ತಡವನ್ನು ಕಡಿಮೆ ಮಾಡಲು ಎಳನೀರು ಉತ್ತಮ ಮೂಲವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 7:18 pm, Wed, 8 March 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ