Ice Bath: ಐಸ್ ನೀರಿನಿಂದ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಾ?

Ice Bath Benefits: ಐಸ್​ನಷ್ಟು ತಣ್ಣನೆಯ ನೀರಿನಲ್ಲಿ ಮುಳುಗುವುದು ಅಥವಾ ತಣ್ಣನೆಯ ಸ್ನಾನವನ್ನು ಮಾಡುವುದು ಕೂಡ ಒಂದು ಥೆರಪಿ. ಇದನ್ನು ಕೋಲ್ಡ್ ಇಮ್ಮರ್ಶನ್ ಥೆರಪಿ ಅಥವಾ ಕ್ರೈಯೊಥೆರಪಿ ಎಂದೂ ಕರೆಯಲಾಗುತ್ತದೆ. ಈ ಅಭ್ಯಾಸವನ್ನು ವಿವಿಧ ಆರೋಗ್ಯ ಪ್ರಯೋಜನಗಳಿಗಾಗಿ ಬಳಸಲಾಗುತ್ತದೆ.

Ice Bath: ಐಸ್ ನೀರಿನಿಂದ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಾ?
ಐಸ್ ಸ್ನಾನ Image Credit source: iStock
Follow us
ಸುಷ್ಮಾ ಚಕ್ರೆ
|

Updated on: Nov 07, 2023 | 2:15 PM

ಕೆಲವರಿಗೆ ಕೊತ ಕೊತ ಕುದಿಯುವ ನೀರನ್ನು ಮೈಮೇಲೆ ಹೊಯ್ದುಕೊಂಡು ಸ್ನಾನ ಮಾಡಿಕೊಂಡರೆ ಮಾತ್ರ ಸಮಾಧಾನ. ಇನ್ನು ಕೆಲವರಿಗೆ ಎಷ್ಟೇ ಚಳಿಯಿದ್ದರೂ ಉಗುರು ಬೆಚ್ಚಗಿನ ನೀರಿನಲ್ಲೇ ಸ್ನಾನ ಮಾಡುವ ಅಭ್ಯಾಸ. ಮತ್ತೆ ಕೆಲವರಿಗೆ ತಣ್ಣೀರಿನ ಸ್ನಾನವೆಂದರೆ ಬಹಳ ಪ್ರೀತಿ. ಆದರೆ, ನೀವು ಎಂದಾದರೂ ಐಸ್ ಸ್ನಾನ ಮಾಡಿದ್ದೀರಾ? ಐಸ್​ನಷ್ಟು ತಣ್ಣನೆಯ ನೀರಿನಲ್ಲಿ ಮುಳುಗುವುದು ಅಥವಾ ತಣ್ಣನೆಯ ಸ್ನಾನವನ್ನು ಮಾಡುವುದು ಕೂಡ ಒಂದು ಥೆರಪಿ. ಇದನ್ನು ಕೋಲ್ಡ್ ಇಮ್ಮರ್ಶನ್ ಥೆರಪಿ ಅಥವಾ ಕ್ರೈಯೊಥೆರಪಿ ಎಂದೂ ಕರೆಯಲಾಗುತ್ತದೆ. ಈ ಅಭ್ಯಾಸವನ್ನು ವಿವಿಧ ಆರೋಗ್ಯ ಪ್ರಯೋಜನಗಳಿಗಾಗಿ ಬಳಸಲಾಗುತ್ತದೆ.

ಐಸ್ ನೀರಿನಿಂದ ಸ್ನಾನ ಮಾಡುವುದರಿಂದ ಆಗುವ 5 ಆರೋಗ್ಯ ಪ್ರಯೋಜನಗಳು ಇಲ್ಲಿವೆ:

1. ಉರಿಯೂತವನ್ನು ಕಡಿಮೆ ಮಾಡುತ್ತದೆ:

ಐಸ್ ಸ್ನಾನವು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ. ಇದು ನೋವನ್ನು ನಿವಾರಿಸಲು ಅಥವಾ ಗಾಯದಿಂದ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಆರೋಗ್ಯ ಸಲಹೆಗಳು: ಜ್ವರ ಬಂದಾಗ ಸ್ನಾನ ಮಾಡಬಹುದೇ? ಸ್ನಾನ ಮಾಡಿದರೆ ಏನಾಗುತ್ತೆ ಗೊತ್ತಾ?

2. ಸ್ನಾಯುವಿನ ಚೇತರಿಕೆ ಹೆಚ್ಚಿಸುತ್ತದೆ:

ಐಸ್ ಸ್ನಾನದಿಂದ ಉಂಟಾಗುವ ತಂಪಾದ ತಾಪಮಾನವು ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ. ಸ್ನಾಯುಗಳಿಂದ ಲ್ಯಾಕ್ಟಿಕ್ ಆಮ್ಲ ಮತ್ತು ಇತರ ಚಯಾಪಚಯ ತ್ಯಾಜ್ಯ ಉತ್ಪನ್ನಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ಸ್ನಾಯುವಿನ ಚೇತರಿಕೆಯನ್ನು ಹೆಚ್ಚಿಸುತ್ತದೆ ಮತ್ತು ವ್ಯಾಯಾಮದ ನಂತರದ ನೋವನ್ನು ಕಡಿಮೆ ಮಾಡುತ್ತದೆ.

3. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ತಣ್ಣನೆಯ ತಾಪಮಾನಕ್ಕೆ ದೇಹವನ್ನು ಒಡ್ಡಿಕೊಳ್ಳುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡಲು ಮತ್ತು ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ದಿನವೂ ತಣ್ಣೀರಿನಲ್ಲಿ ಸ್ನಾನ ಮಾಡಿದರೆ ಹೀಗೆಲ್ಲ ಆಗುತ್ತಂತೆ!

4. ಉತ್ತಮ ನಿದ್ರೆಯನ್ನು ನೀಡುತ್ತದೆ:

ಮಲಗುವ ಮುನ್ನ ಐಸ್ ಸ್ನಾನ ಮಾಡುವುದರಿಂದ ನಿಮ್ಮ ದೇಹದ ಉಷ್ಣತೆಯನ್ನು ಕಡಿಮೆ ಮಾಡಬಹುದು. ಇದು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ.

5. ಚಯಾಪಚಯವನ್ನು ವೇಗಗೊಳಿಸುತ್ತದೆ:

ಶೀತಕ್ಕೆ ದೇಹವನ್ನು ಒಡ್ಡಿಕೊಳ್ಳುವಿಕೆಯು ಕೊಬ್ಬಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದು ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ತಣ್ಣೀರಿಗೆ ಒಡ್ಡಿಕೊಂಡಾಗ ದೇಹದ ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ. ಇದು ಒಟ್ಟಾರೆ ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಹೃದಯ ಸಂಬಂಧಿ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್