Constipation: ನಿಮ್ಮ ದಿನನಿತ್ಯದ ಈ ಅಭ್ಯಾಸಗಳು ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತವೆ

ಅನಾರೋಗ್ಯಕರ ಆಹಾರ ಸೇವನೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನುಂಟು ಮಾಡುತ್ತವೆ. ಯಾಕೆಂದರೆ ನೀವು ಸೇವಿಸುವ ಆಹಾರ ಸರಿಯಿಲ್ಲದಿದ್ದಾಗ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಾ ಹೋಗುತ್ತದೆ. ಆಹಾರದ ಹೊರತಾಗಿ, ಕೆಲವು ಅಭ್ಯಾಸಗಳು ಸಹ ಹೊಟ್ಟೆಯ ಅಸ್ವಸ್ಥತೆಗೆ ಕಾರಣವಾಗಬಹುದು. ಅವು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Constipation: ನಿಮ್ಮ ದಿನನಿತ್ಯದ ಈ ಅಭ್ಯಾಸಗಳು ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತವೆ
constipation
Follow us
ಅಕ್ಷತಾ ವರ್ಕಾಡಿ
|

Updated on: Dec 13, 2023 | 6:53 PM

ಕೆಲಸದ ಒತ್ತಡ, ಅನಾರೋಗ್ಯಕರ ಆಹಾರ ಕ್ರಮದಿಂದಾಗಿ ಜನರು ವೇಗವಾಗಿ ರೋಗಗಳಿಗೆ ತುತ್ತಾಗುತ್ತಾರೆ. ವಿಶೇಷವಾಗಿ ಚಳಿಗಾಲ ಆರಂಭವಾದ ಕೂಡಲೇ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಾ ಹೋದಂತೆ ನೀವು ವಿವಿಧ ಸೋಂಕುಗಳಿಂದ ಚೇತರಿಸಿಕೊಳ್ಳಲು ಸಾಕಷ್ಟು ಸಮಯ ಬೇಕಾಗುತ್ತದೆ. ಚಳಿಗಾಲದಲ್ಲಿ ಅನೇಕ ಜನರಲ್ಲಿ ಕಾಡುವ ಸಮಸ್ಯೆಗಳಲ್ಲಿ ಮಲಬದ್ಧತೆಯೂ ಕೂಡ ಒಂದು. ಈ ಸಮಸ್ಯೆಯು ಸಾಮಾನ್ಯವಾಗಿ ದೈನಂದಿನ ಕೆಲಸದಲ್ಲಿ ಅಡಚಣೆಯನ್ನು ಉಂಟುಮಾಡುತ್ತದೆ. ನೀವು ಸಹ ಮಲಬದ್ಧತೆಯಿಂದ ಬಳಲುತ್ತಿದ್ದರೆ,ಈ ಸಮಸ್ಯೆಗೆ ಕಾರಣವಾಗುವ ನಿಮ್ಮ ದೈನಂದಿನ ಕೆಲವು ಅಭ್ಯಾಸಗಳನ್ನು ತಿಳಿದುಕೊಳ್ಳಿ.

ಮಲಬದ್ಧತೆಗೆ ಕಾರಣವಾಗುವ ದೈನಂದಿನ ಕೆಲವು ಅಭ್ಯಾಸಗಳು:

ಫಾಸ್ಟ್ ಫುಡ್ ತಿನ್ನುವ ಅಭ್ಯಾಸ:

ಅನೇಕ ಜನರು ಫಾಸ್ಟ್ ಫುಡ್ ತಿನ್ನುವ ಅಭ್ಯಾಸವನ್ನು ಹೊಂದಿರುತ್ತಾರೆ. ಫಾಸ್ಟ್ ಫುಡ್​​ಗಳ ಅತಿಯಾದ ಸೇವನೆ ಜೀರ್ಣಕ್ರಿಯೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಪರಿಣಾಮ ಉಬ್ಬುವುದು ಮತ್ತು ಅನಿಲ ಮತ್ತು ಮಲಬದ್ಧತೆಗೆ ಕಾರಣವಾಗಬಹುದು.

ಸಂಸ್ಕರಿಸಿದ ಆಹಾರ ಸೇವನೆ:

ಬದಲಾದ ಆಹಾರ ಪದ್ಧತಿಯಿಂದಾಗಿ ಅನೇಕ ಜನರು ಸಂಸ್ಕರಿಸಿದ ಆಹಾರವನ್ನು ಸೇವಿಸುತ್ತಿದ್ದಾರೆ. ಅಂತಹ ಆಹಾರಗಳು ಕೊಬ್ಬು, ಸಕ್ಕರೆ ಮತ್ತು ಕೃತಕ ಪದಾರ್ಥಗಳನ್ನು ಹೊಂದಿರುತ್ತವೆ, ಇದು ಜೀರ್ಣಕ್ರಿಯೆಯನ್ನು ಕಷ್ಟಕರವಾಗಿಸುತ್ತದೆ. ಪರಿಣಾಮ ಹೊಟ್ಟೆಯ ಸಮಸ್ಯೆ ಉದ್ಭವಿಸುತ್ತದೆ.

ಉಪಾಹಾರ ಸೇವಿಸದಿರುವುದು:

ಬೆಳಗ್ಗೆ ಕೆಲಸಕ್ಕೆ ಅಥವಾ ಕಾಲೇಜಿಗೆ ಹೋಗುವ ಅವಸರದಲ್ಲಿ ಉಪಹಾರ ಸೇವಿಸದೆ ಇರುವುದು ಹೊಟ್ಟೆಯ ಸಮಸ್ಯೆಗೆ ಮತ್ತೊಂದು ಕಾರಣ. ಮುಂಜಾನೆ ಉಪಹಾರವನ್ನು ಸೇವಿಸದಿರುವುದು ನಿಮ್ಮ ಜೀರ್ಣಕ್ರಿಯೆಯನ್ನು ಹದಗೆಡಿಸುತ್ತದೆ ಮತ್ತು ಮಲಬದ್ಧತೆಗೆ ಕಾರಣವಾಗಬಹುದು.

ಇದನ್ನೂ ಓದಿ: ಭಾರತದಲ್ಲಿ ಗೂಗಲ್​​​ ಅಣ್ಣನಲ್ಲಿ ಕೇಳಿದ ಟಾಪ್ 10 ಪಾಕವಿಧಾನಗಳು

ಆಲ್ಕೋಹಾಲ್ ಸೇವನೆ:

ಮದ್ಯಪಾನ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಹಾನಿಕಾರಕವಾಗಿದೆ. ಅದಕ್ಕಾಗಿಯೇ ವೈದ್ಯರು ಮತ್ತು ತಜ್ಞರು ಸಾಮಾನ್ಯವಾಗಿ ಇದರಿಂದ ದೂರವಿರಲು ಸಲಹೆ ನೀಡುತ್ತಾರೆ. ನೀವು ಆಲ್ಕೋಹಾಲ್ ಕುಡಿಯುವ ಚಟವನ್ನು ಹೊಂದಿದ್ದರೆ, ಅದು ನಿಮ್ಮ ಹೊಟ್ಟೆಯ ಒಳಪದರವನ್ನು ಕೆರಳಿಸಬಹುದು ಮತ್ತು ಜೀರ್ಣಕ್ರಿಯೆಗೆ ಅಡ್ಡಿಪಡಿಸಬಹುದು.

ಕಡಿಮೆ ನೀರು ಕುಡಿಯುವುದು:

ಆರೋಗ್ಯವಾಗಿರಲು ಸಾಕಷ್ಟು ನೀರು ಕುಡಿಯಿರಿ. ನೀವು ನೀರನ್ನು ಕುಡಿಯದಿದ್ದರೆ, ಅದು ನಿರ್ಜಲೀಕರಣಕ್ಕೆ ಕಾರಣವಾಗಬಹುದು. ಇದು ಹೊಟ್ಟೆಯ ಕಾರ್ಯನಿರ್ವಹಣೆಯನ್ನು ಸಹ ದುರ್ಬಲಗೊಳಿಸುತ್ತದೆ. ಕಡಿಮೆ ನೀರು ಕುಡಿಯುವುದರಿಂದ ಆಹಾರದ ಜೀರ್ಣಕ್ರಿಯೆಗೆ ಅಡ್ಡಿಯಾಗಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು