Health Care Tips in Kannada : ಬೇಸಿಗೆಯಲ್ಲಿ ಕಾಡುವ ಮಲಬದ್ಧತೆ ಸಮಸ್ಯೆಗೆ ಮನೆಯಲ್ಲಿದೆ ಸುಲಭ ಪರಿಹಾರ

ಇಂದಿಗೂ ಕೂಡ ಮನೆಯಲ್ಲೇ ತಯಾರಿಸುವ ಔಷಧಿಗಳಿಗೆ ಬಹಳಷ್ಟು ಬೇಡಿಕೆಯಿವೆ. ಇವತ್ತಿಗೂ ಹೆಚ್ಚಿನವರು ಜ್ವರ, ಶೀತ, ನೆಗಡಿ ಹಾಗೂ ಸಣ್ಣಪುಟ್ಟ ಕಾಯಿಲೆಗಳಿಗೆ ಈ ಮನೆಮದ್ದುಗಳನ್ನೆ ಬಳಸುತ್ತಾರೆ. ಅದಲ್ಲದೆ ಬೇಸಿಗೆ ಕಾಲದಲ್ಲಿ ಕಾಡುವ ಸಮಸ್ಯೆಗಳು ನೂರರಾಗಿದ್ದರೂ ಅದರಲ್ಲಿ ಒಂದು ಮಲಬದ್ಧತೆ ಸಮಸ್ಯೆ. ಈ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ಮನೆಯಲ್ಲೇ ಔಷಧಿಯನ್ನು ತಯಾರಿಸಿ ಬಹುಬೇಗನೇ ಗುಣ ಪಡಿಸಿಕೊಳ್ಳಬಹುದು.

Health Care Tips in Kannada : ಬೇಸಿಗೆಯಲ್ಲಿ ಕಾಡುವ ಮಲಬದ್ಧತೆ ಸಮಸ್ಯೆಗೆ ಮನೆಯಲ್ಲಿದೆ ಸುಲಭ ಪರಿಹಾರ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 17, 2024 | 5:35 PM

ಸುಡು ಬಿಸಿಲಿನ ತಾಪಮಾನದ ನಡುವೆ ಆರೋಗ್ಯವಂತೂ ಹದಗೆಟ್ಟರೆ ಕೇಳುವುದೇ ಬೇಡ. ಈ ಬೇಸಿಗೆಯಲ್ಲಿ ಆಹಾರ ಕ್ರಮದಲ್ಲಾಗುವ ಸಣ್ಣ ಪುಟ್ಟ ಬದಲಾವಣೆಯಿಂದ ಮಲಬದ್ಧತೆ ಸಮಸ್ಯೆಯೂ ಹೆಚ್ಚಿನವರಲ್ಲಿ ಕಾಡುವುದಿದೆ. ಮಲಬದ್ಧತೆ ಸಮಸ್ಯೆಯಿದ್ದರೆ ವ್ಯಕ್ತಿಯು ನರಕಯಾತನೆಯನ್ನು ಅನುಭವಿಸುತ್ತಾನೆ. ಆದರೆ ಪ್ರಾರಂಭದಲ್ಲಿ ಮನೆ ಮದ್ದಿನ ಮೂಲಕ ಪರಿಹಾರ ಮಾಡಿಕೊಂಡು ಸಮಸ್ಯೆಯೂ ಅತಿಯಾದರೆ ವೈದ್ಯರನ್ನು ಭೇಟಿಯಾಗುವುದು ಒಳಿತು.

ಮಲಬದ್ಧತೆ ಸಮಸ್ಯೆಗೆ ಸರಳ ಮನೆಮದ್ದುಗಳು:

  • ದೇಹಕ್ಕೆ ನೀರು ಕಡಿಮೆಯಾದ ಕೂಡಲೇ ಈ ಮಲಬದ್ಧತೆ ಸಮಸ್ಯೆಯೂ ಕಾಣಿಸಿಕೊಳ್ಳುತ್ತದೆ. ದಿನನಿತ್ಯ ಸರಿಯಾಗಿ ನೀರು ಕುಡಿಯುವ ಅಭ್ಯಾಸದಿಂದ ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು.
  • ಮಲಬದ್ಧತೆ ಸಮಸ್ಯೆಯಿಂದ ಬಳಲುವವರು ರಾತ್ರಿ ಮಲಗುವ ಮುನ್ನ 2 ಅಥವಾ 3 ಅಂಜೂರಗಳನ್ನು ಶುದ್ಧ ನೀರಿಗೆ ಹಾಕಿ ನೆನೆಸಿಟ್ಟು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಈ ಆರೋಗ್ಯ ಸಮಸ್ಯೆಯೂ ದೂರವಾಗುತ್ತದೆ.
  • ರಾತ್ರಿಯಿಡೀ ನೆನೆಸಿಟ್ಟ ಕಪ್ಪು ದ್ರಾಕ್ಷಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಈ ಸಮಸ್ಯೆಗೆ ಸುಲಭ ಪರಿಹಾರವನ್ನು ಕಂಡುಕೊಳ್ಳಬಹುದು.
  • ನಿಯಮಿತವಾಗಿ ಸೋಂಪು ಕಾಳಿನ ನೀರಿನ ಸೇವನೆಯಿಂದ ಮಲಬದ್ಧತೆ ಸಮಸ್ಯೆಯೂ ನಿವಾರಣೆಯಾಗುತ್ತದೆ.
  • ಬಾರ್ಲಿಯ ನೀರನ್ನು ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆಯೂ ಕಡಿಮೆಯಾಗುತ್ತದೆ.
  • ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನುಗ್ಗೆ ಸೊಪ್ಪಿನ ರಸವನ್ನು ಕುದಿಸಿ ಸೇವಿಸುವುದು ಪರಿಣಾಮಕಾರಿಯಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Wed, 17 April 24

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ