AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯ ದಣಿವು ತಣಿಸಲು ಸಹಕಾರಿ ಈ ಪಾನೀಯ

ಬೇಸಿಗೆಯ ಆಗಮನದೊಂದಿಗೆ, ಶಾಖದ ಹೊಡೆತ, ನಿರ್ಜಲೀಕರಣ ಮತ್ತು ಆಯಾಸದಂತಹ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ. ಹಾಗಾಗಿ ಇಂತಹ ಸಂದರ್ಭದಲ್ಲಿ ದೇಹವನ್ನು ತಂಪಾಗಿಸಲು ಮತ್ತು ಶಕ್ತಿಯನ್ನು ಕಾಪಾಡಿಕೊಳ್ಳಲು ಈ ಕೆಲವೊಂದು ಪಾನೀಯಗಳನ್ನು ಪಾನೀಯಗಳನ್ನು ಸೇವನೆ ಮಾಡಬೇಕು. ಇವು ದಾಹ ನೀಗಿಸುವುದರ ಜೊತೆಗೆ ದೇಹಕ್ಕೆ ಅಗತ್ಯವಾದ ಪೋಷಕಾಂಶವನ್ನು ಸಹ ಒದಗಿಸುತ್ತವೆ.

ಬೇಸಿಗೆಯ ದಣಿವು ತಣಿಸಲು ಸಹಕಾರಿ ಈ ಪಾನೀಯ
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on: Mar 12, 2026 | 7:38 PM

Share

ಬೇಸಿಗೆ  ಋತುವಿನಲ್ಲಿ (summer) ವಿಪರೀತ ಶಾಖ ಇರುವ ಕಾರಣ ನಿರ್ಜಲೀಕರಣ, ಆಯಾಸ, ದಣಿವು, ದೇಹ ಉರಿ, ಶಾಖದ ಹೊಡೆದ, ಜೀರ್ಣಕಾರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ.  ಹಾಗಾಗಿ ಈ ಸಮಸ್ಯೆಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಬಹುತೇಕರು ಹೆಚ್ಚಿನ ನೀರಿನಂಶವಿರುವ ಕಾಲೋಚಿತ ಹಣ್ಣುಗಳು ಮತ್ತು ಹಸಿರು ತರಕಾರಿಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಕೆಲವೊಂದು ಪಾನೀಯಗಳನ್ನು ಸೇವನೆ ಮಾಡುವ ಮೂಲಕ ಬೇಸಿಗೆಯ ದಣಿವನ್ನು ತಣಿಸಬಹುದು.

ಬೇಸಿಗೆಯ ದಾಹ ನೀಗಿಸಲು  ಸಹಕಾರಿ ಈ ಪಾನೀಯ:

ನಿಂಬೆ ಶರಬತ್ತು ಮತ್ತು ಆಮ್‌ ಪನ್ನಾ: ಬೇಸಿಗೆಯ ದಾಹ ತಣಿಸಲು ನಿಂಬೆ ಶರಬತ್ತು ಸೇವನೆ ಮಾಡುವುದು ಉತ್ತಮ ಎಂದು ಪರಿಗಣಿಸಲಾಗಿದೆ. ಇದರ ವಿಟಮಿನ್ ಸಿ ಮತ್ತು ಎಲೆಕ್ಟ್ರೋಲೈಟ್‌ಗಳು ತ್ವರಿತ ಶಕ್ತಿಯನ್ನು ಒದಗಿಸಲು ಸಹಾಯ ಮಾಡುತ್ತವೆ. ಇದಲ್ಲದೆ ಹಸಿ ಮಾವಿನಿಂದ ತಯಾರಿಸಿದ ಆಮ್ ಪನ್ನಾವನ್ನೂ ಸಹ ಸೇವನೆ ಮಾಡಬಹುದ. ಇದು ವಿಟಮಿನ್ ಎ, ವಿಟಮಿನ್ ಸಿ ಮತ್ತು ಫೈಬರ್‌ನಲ್ಲಿ ಸಮೃದ್ಧವಾಗಿದ್ದು, ಇದು ದೇಹವನ್ನು ತಂಪಾಗಿಸುವುದಲ್ಲದೆ, ಶಾಖದ ಹೊಡೆತದಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ಪುದೀನ ಮತ್ತು ಸೌತೆಕಾಯಿ ಶರಬತ್ತು: ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸಲು ಪುದೀನ ಮತ್ತು ಸೌತೆಕಾಯಿಯಿಂದ ತಯಾರಿಸಿದ ಪಾನೀಯವನ್ನು ಸೇವನೆ ಮಾಡುವುದು ಉತ್ತಮ. ಇವೆರಡರಲ್ಲೂ ನೀರಿನಾಂಶ ಹೆಚ್ಚಿದ್ದು, ಇದು ದೇಹವನ್ನು ದೀರ್ಘಕಾಲದವರೆಗೆ ಹೈಡ್ರೀಕರಿಸಲು ಸಹಾಯ ಮಾಡುತ್ತದೆ. ಇದು ದೇಹವನ್ನು ಪೋಷಿಸುವುದು ಮಾತ್ರವಲ್ಲದೆ ಶಾಖದಿಂದ ಪರಿಹಾರವನ್ನು ನೀಡುತ್ತದೆ.

ಎಳನೀರು: ಇದು ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಂತಹ ಅನೇಕ ಅಗತ್ಯ ಅಂಶಗಳನ್ನು ಹೊಂದಿದ್ದು, ಇದು ದೇಹದಲ್ಲಿ ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಹಾಗಾಗಿ ಬೇಸಿಗೆಯಲ್ಲಿ ದಿನಕ್ಕೊಂದು ಬಾರಿ ಎಳನೀರು ಕುಡಿಯುವುದರಿಂದ ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳಬಹುದು.

ಕಬ್ಬಿನ ರಸ: ಬೇಸಿಗೆಯಲ್ಲಿ ಕಬ್ಬಿನ ರಸವು ಅತ್ಯಂತ ಜನಪ್ರಿಯ ಪಾನೀಯಗಳಲ್ಲಿ ಒಂದಾಗಿದೆ. ಇದರಲ್ಲಿ ಗ್ಲೂಕೋಸ್, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅನೇಕ ಅಗತ್ಯ ಖನಿಜಗಳಿವೆ, ಇದು ದೇಹಕ್ಕೆ ತ್ವರಿತ ಶಕ್ತಿಯನ್ನು ಒದಗಿಸುತ್ತದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಬೆವರಿನ ವಾಸನೆಯನ್ನು ಹೋಗಲಾಡಿಸಿ, ದಿನವಿಡೀ ಫ್ರೆಶ್‌ ಆಗಿರಲು ಏನು ಮಾಡಬೇಕು?

ಮಜ್ಜಿಗೆ: ಈ ಬೇಸಿಗೆಯಲ್ಲಿ ಮಜ್ಜಿಗೆಯನ್ನು ಕುಡಿಯುವುದು ಸಹ ತುಂಬಾನೇ ಒಳ್ಳೆಯದು. ಇದು ಹೊಟ್ಟೆಗೆ ತಂಪಾಗಿಸುವ ಮತ್ತು ಉಲ್ಲಾಸಕರ ಅನುಭವವನ್ನು ನೀಡುತ್ತದೆ. ಅಲ್ಲದೆ ಮಜ್ಜಿಗೆ ದೇಹವನ್ನು ತಂಪಾಗಿಸುತ್ತದೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ಆಮ್ಲೀಯತೆಯಿಂದ ಪರಿಹಾರವನ್ನು ಒದಗಿಸುತ್ತದೆ.

ಸಾಕಷ್ಟು ನೀರು ಕುಡಿಯುವುದು ಮುಖ್ಯ: ಬೇಸಿಗೆಯಲ್ಲಿ ಅತ್ಯಂತ ಮುಖ್ಯವಾದ ವಿಷಯವೆಂದರೆ ಸಾಕಷ್ಟು ನೀರು ಕುಡಿಯುವುದು. ಆರೋಗ್ಯವಂತ ವ್ಯಕ್ತಿಯು ಪ್ರತಿದಿನ ಸುಮಾರು ಎರಡೂವರೆ ರಿಂದ ಮೂರು ಲೀಟರ್ ನೀರು ಕುಡಿಯಬೇಕು. ಕಠಿಣ ಕೆಲಸ ಮಾಡುವ ಅಥವಾ ದೈಹಿಕ ಚಟುವಟಿಕೆಯಲ್ಲಿ ತೊಡಗಿರುವ ಜನ ಇನ್ನೂ ಹೆಚ್ಚು ನೀರು ಕುಡಿಯಬೇಕು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!