AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fish Oil Benefits: ಮೀನಿನ ಎಣ್ಣೆಯ ಸೇವನೆಯಿಂದ ಲಭಿಸುತ್ತೆ ಹಲವು ಆರೋಗ್ಯ ಪ್ರಯೋಜನ

ಮೀನಿನ ಸೇವನೆಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯವಾಗಿದೆ. ದೇಹದಲ್ಲಿ ಒಮೆಗಾ-3 ಕೊಬ್ಬಿನಾಮ್ಲದ ಕೊರತೆಯನ್ನು ಸರಿದೂಗಿಸಲು ನೀವು ಮೀನಿನ ಎಣ್ಣೆಯನ್ನು ಬಳಸಬಹುದು. ಇವುಗಳು ಕ್ಯಾಪ್ಸುಲ್ ರೂಪದಲ್ಲಿ ಲಭ್ಯವಿದ್ದು, ಇದರ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. 

Fish Oil Benefits: ಮೀನಿನ ಎಣ್ಣೆಯ ಸೇವನೆಯಿಂದ ಲಭಿಸುತ್ತೆ ಹಲವು ಆರೋಗ್ಯ ಪ್ರಯೋಜನ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Sep 28, 2023 | 3:13 PM

Share

ಮೀನು (Fish Oil) ತಿನ್ನುವುದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಮೀನಿನಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಕ್ಯಾಲ್ಸಿಯಂ, ಕಬ್ಬಿಣ,  ವಿಟಮಿನ್ ಡಿ ಯಂತಹ ಅನೇಕ ಪೋಷಕಾಂಶಗಳಿವೆ. ಈ ಎಲ್ಲಾ ಪೋಷಕಾಂಶಗಳು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯವಾಗಿದೆ. ಆದರೆ ಕೆಲವು ಜನರು ಮಾಂಸಹಾರವನ್ನು ತಿನ್ನಲು ಇಷ್ಟಪಡುವುದಿಲ್ಲ. ಹಾಗಿರುವಾಗ ಒಮೆಗಾ-3 ಕೊಬ್ಬಿನಾಮ್ಲಗಳ ಕೊರತೆಯನ್ನು ನೀಗಿಸಲು ಮೀನಿನ ಎಣ್ಣೆಯನ್ನು ಆಹಾರದ ಭಾಗವನ್ನಾಗಿ ಮಾಡಬಹುದು. ಇವುಗಳು ಕ್ಯಾಪ್ಸುಲ್ ರೂಪದಲ್ಲಿ ಲಭ್ಯವಿದ್ದು, ಇದರ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಮೀನಿನ ಎಣ್ಣೆಯ ಪ್ರಯೋಜನಗಳು:

ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ:

ಮೀನಿನ ಎಣ್ಣೆಯನ್ನು  ಮೀನಿನ ಅಂಗಾಂಶಗಳಿಂದ ಹೊರತೆಗೆಯಲಾಗುತ್ತದೆ. ಇದು ಒಮೆಗಾ 3 ಮತ್ತು ಇತರೆ ಕೊಬ್ಬಿನಾಮ್ಲಗಳ ಜೊತೆಗೆ ಅನೇಕ ಪೋಷಕಾಂಶಗಳನ್ನು ಹೊಂದಿರುತ್ತದೆ. ಮೀನಿನ ಎಣ್ಣೆ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಾಗುತ್ತದೆ. ಈ ಎಣ್ಣೆಯ ಸಹಾಯದಿಂದ ದೇಹದಲ್ಲಿನ ಹೃದಯರಕ್ತನಾಳಗಳ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಮೀನಿನ ಎಣ್ಣೆಯ ಸೇವನೆಯು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ  ಮತ್ತು ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಸಹ ಕಡಿಮೆ ಮಾಡುತ್ತದೆ.

ಮೂಳೆಗಳನ್ನು ಬಲಪಡಿಸಲು ಸಹಕಾರಿ:

ಮೀನಿನ ಎಣ್ಣೆಯು ಮೂಳೆಗಳನ್ನು ಬಲಪಡಿಸುತ್ತದೆ  ಮತ್ತು ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರ ನಿಯಮಿತ ಸೇವನೆಯು ಸಂಧಿವಾತದಂತಹ ಕಾಯಿಲೆಗಳಿಂದ ಪರಿಹಾರವನ್ನು ನೀಡುತ್ತದೆ .

ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿ:

ಇನ್ಸುಲಿನ್ ಸಂವೇದನೆಯನ್ನು  ಹೆಚ್ಚಿಸುವ ಮೂಲಕ ಮಧುಮೇಹದಿಂದ ಉಪಶಮನ ನೀಡುವ ಗುಣ ಮೀನಿನ ಎಣ್ಣೆಯಲ್ಲಿದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಟೈಪ್ 2 ಮಧುಮೇಹದಿಂದ ಬಳಲುತ್ತಿರುವ ರೋಗಿಗಳಿಗೆ ಮೀನಿನ ಎಣ್ಣೆಯು ತುಂಬಾ ಪ್ರಯೋಜನಕಾರಿಯಾಗಿದೆ. ಮತ್ತು ಇದರ ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ:

ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಮೀನಿನ ಎಣ್ಣೆ ಸಹ ಸಹಾಯ ಮಾಡುತ್ತದೆ. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಶೀತ ಮತ್ತು ಜ್ವರ ಬಾರದಂತೆ ತಡೆಯುತ್ತದೆ. ಅಲ್ಲದೆ ಇದು ಶ್ವಾಸಕೋಶವನ್ನು ಆರೋಗ್ಯಕರವಾಗಿಡಲು ಸಹ ಸಹಕಾರಿಯಾಗಿದೆ.

ಇದನ್ನೂ ಓದಿ: ಅತಿಯಾದ ಮೀನು ಸೇವನೆ ಕರುಳಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು

ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಕಾರಿ:

ಮೀನಿನ ಎಣ್ಣೆಯು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣವನ್ನು ಹೊಂದಿದೆ. ಇದರಲ್ಲಿ  ಕಂಡುಬರುವ ಐಕೋಸಾಪೆಂಟೆನೊಯಿಕ್ ಆಮ್ಲ (ಇಪಿಎ) ಮತ್ತು ಡೊಕೊಸಾಹೆಕ್ಸೆನೊಯಿಕ್ ಆಸಿಡ್ (ಡಿ.ಹೆಚ್.ಎ)  ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಕ್ಯಾನ್ಸರ್ ರೋಗವನ್ನು ತಡೆಗಟ್ಟುವಲ್ಲಿ ಸಹಕಾರಿ:

ಮೀನಿನ ಎಣೆಯನ್ನು ಕ್ಯಾನ್ಸರ್ ತಡೆಗಟ್ಟುವಲ್ಲಿ ಪರಿಣಾಮಕಾರಿ ಎಂದು  ಪರಿಗಣಿಸಲಾಗಿದೆ. ಇದರಲ್ಲಿ ಕಂಡುಬರುವ ಒಮೆಗಾ 3 ಕೊಬ್ಬಿನಾಮಮ್ಲಗಳು  ದೇಹದಲ್ಲಿನ ಸಾಮಾನ್ಯ ಜೀವಕೋಶಗಳ ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯಿಂದ  ಸ್ತನ ಕ್ಯಾನ್ಸರ್, ಪ್ರಾಸ್ಟೇಟ್ ಮತ್ತು ಕರುಳಿನ ಕ್ಯಾನ್ಸರ್ ನಂತಹ ಕಾಯಿಲೆಯಿಂದ ರಕ್ಷಣೆಯನ್ನು ಪಡೆಯಬಹುದು.

ಗರ್ಭಿಣಿಯರಿಗೆ ಪ್ರಯೋಜನಕಾರಿ:

ಗರ್ಭಿಣಿಯರಿಗೆ ಮೀನಿನ ಎಣ್ಣೆಯನ್ನು ಬಳಸಲು ಸಲಹೆ ನೀಡಲಾಗುತ್ತದೆ.  ಮೀನಿನ ಎಣ್ಣೆಯು ಗರ್ಭಿಣಿ ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ.  ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಗರ್ಭದಲ್ಲಿನ ಮಗುವಿನ ಬೆಳವಣಿಗೆಗೆ ತುಂಬಾ ಒಳ್ಳೆಯದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ