ಮೀನು (Fish Oil) ತಿನ್ನುವುದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಮೀನಿನಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಕ್ಯಾಲ್ಸಿಯಂ, ಕಬ್ಬಿಣ, ವಿಟಮಿನ್ ಡಿ ಯಂತಹ ಅನೇಕ ಪೋಷಕಾಂಶಗಳಿವೆ. ಈ ಎಲ್ಲಾ ಪೋಷಕಾಂಶಗಳು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯವಾಗಿದೆ. ಆದರೆ ಕೆಲವು ಜನರು ಮಾಂಸಹಾರವನ್ನು ತಿನ್ನಲು ಇಷ್ಟಪಡುವುದಿಲ್ಲ. ಹಾಗಿರುವಾಗ ಒಮೆಗಾ-3 ಕೊಬ್ಬಿನಾಮ್ಲಗಳ ಕೊರತೆಯನ್ನು ನೀಗಿಸಲು ಮೀನಿನ ಎಣ್ಣೆಯನ್ನು ಆಹಾರದ ಭಾಗವನ್ನಾಗಿ ಮಾಡಬಹುದು. ಇವುಗಳು ಕ್ಯಾಪ್ಸುಲ್ ರೂಪದಲ್ಲಿ ಲಭ್ಯವಿದ್ದು, ಇದರ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಮೀನಿನ ಎಣ್ಣೆಯನ್ನು ಮೀನಿನ ಅಂಗಾಂಶಗಳಿಂದ ಹೊರತೆಗೆಯಲಾಗುತ್ತದೆ. ಇದು ಒಮೆಗಾ 3 ಮತ್ತು ಇತರೆ ಕೊಬ್ಬಿನಾಮ್ಲಗಳ ಜೊತೆಗೆ ಅನೇಕ ಪೋಷಕಾಂಶಗಳನ್ನು ಹೊಂದಿರುತ್ತದೆ. ಮೀನಿನ ಎಣ್ಣೆ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಾಗುತ್ತದೆ. ಈ ಎಣ್ಣೆಯ ಸಹಾಯದಿಂದ ದೇಹದಲ್ಲಿನ ಹೃದಯರಕ್ತನಾಳಗಳ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಮೀನಿನ ಎಣ್ಣೆಯ ಸೇವನೆಯು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಸಹ ಕಡಿಮೆ ಮಾಡುತ್ತದೆ.
ಮೀನಿನ ಎಣ್ಣೆಯು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರ ನಿಯಮಿತ ಸೇವನೆಯು ಸಂಧಿವಾತದಂತಹ ಕಾಯಿಲೆಗಳಿಂದ ಪರಿಹಾರವನ್ನು ನೀಡುತ್ತದೆ .
ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುವ ಮೂಲಕ ಮಧುಮೇಹದಿಂದ ಉಪಶಮನ ನೀಡುವ ಗುಣ ಮೀನಿನ ಎಣ್ಣೆಯಲ್ಲಿದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಟೈಪ್ 2 ಮಧುಮೇಹದಿಂದ ಬಳಲುತ್ತಿರುವ ರೋಗಿಗಳಿಗೆ ಮೀನಿನ ಎಣ್ಣೆಯು ತುಂಬಾ ಪ್ರಯೋಜನಕಾರಿಯಾಗಿದೆ. ಮತ್ತು ಇದರ ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಮೀನಿನ ಎಣ್ಣೆ ಸಹ ಸಹಾಯ ಮಾಡುತ್ತದೆ. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಶೀತ ಮತ್ತು ಜ್ವರ ಬಾರದಂತೆ ತಡೆಯುತ್ತದೆ. ಅಲ್ಲದೆ ಇದು ಶ್ವಾಸಕೋಶವನ್ನು ಆರೋಗ್ಯಕರವಾಗಿಡಲು ಸಹ ಸಹಕಾರಿಯಾಗಿದೆ.
ಇದನ್ನೂ ಓದಿ: ಅತಿಯಾದ ಮೀನು ಸೇವನೆ ಕರುಳಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು
ಮೀನಿನ ಎಣ್ಣೆಯು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣವನ್ನು ಹೊಂದಿದೆ. ಇದರಲ್ಲಿ ಕಂಡುಬರುವ ಐಕೋಸಾಪೆಂಟೆನೊಯಿಕ್ ಆಮ್ಲ (ಇಪಿಎ) ಮತ್ತು ಡೊಕೊಸಾಹೆಕ್ಸೆನೊಯಿಕ್ ಆಸಿಡ್ (ಡಿ.ಹೆಚ್.ಎ) ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಮೀನಿನ ಎಣೆಯನ್ನು ಕ್ಯಾನ್ಸರ್ ತಡೆಗಟ್ಟುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿ ಕಂಡುಬರುವ ಒಮೆಗಾ 3 ಕೊಬ್ಬಿನಾಮಮ್ಲಗಳು ದೇಹದಲ್ಲಿನ ಸಾಮಾನ್ಯ ಜೀವಕೋಶಗಳ ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯಿಂದ ಸ್ತನ ಕ್ಯಾನ್ಸರ್, ಪ್ರಾಸ್ಟೇಟ್ ಮತ್ತು ಕರುಳಿನ ಕ್ಯಾನ್ಸರ್ ನಂತಹ ಕಾಯಿಲೆಯಿಂದ ರಕ್ಷಣೆಯನ್ನು ಪಡೆಯಬಹುದು.
ಗರ್ಭಿಣಿಯರಿಗೆ ಮೀನಿನ ಎಣ್ಣೆಯನ್ನು ಬಳಸಲು ಸಲಹೆ ನೀಡಲಾಗುತ್ತದೆ. ಮೀನಿನ ಎಣ್ಣೆಯು ಗರ್ಭಿಣಿ ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಗರ್ಭದಲ್ಲಿನ ಮಗುವಿನ ಬೆಳವಣಿಗೆಗೆ ತುಂಬಾ ಒಳ್ಳೆಯದು.
ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: