AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dengue: ಜ್ವರ ಇಲ್ಲದಿದ್ದರೂ ಡೆಂಗ್ಯೂ ಬರಬಹುದೇ? ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಡೆಂಗ್ಯೂ ಎಂದರೆ ಜ್ವರ, ತಲೆನೋವು ಮತ್ತು ಮೈ-ಕೈ ನೋವು ಕಾಣಿಸಿಕೊಳ್ಳುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ ಕೆಲವು ಸಂದರ್ಭಗಳಲ್ಲಿ ಜ್ವರವಿಲ್ಲದೆಯೂ ಡೆಂಗ್ಯೂ ಸೋಂಕು ಇರಬಹುದು. ವಾಂತಿ, ಹೊಟ್ಟೆ ನೋವು, ಅತಿಸಾರ, ಸುಸ್ತು, ದೇಹ ನೋವು ಸೇರಿದಂತೆ ಹಲವು ಅಸಹಜ ಲಕ್ಷಣಗಳು ಕಾಣಿಸಿಕೊಳ್ಳಬಹುದು. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸಬಾರದು ಎಂದು ವೈದ್ಯರು ಎಚ್ಚರಿಸಿದ್ದಾರೆ.

Dengue: ಜ್ವರ ಇಲ್ಲದಿದ್ದರೂ ಡೆಂಗ್ಯೂ ಬರಬಹುದೇ? ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
Dengue Fever
ಮಾಲಾಶ್ರೀ ಅಂಚನ್​
| Edited By: |

Updated on: Sep 15, 2026 | 10:10 AM

Share

ಮುಖ್ಯಾಂಶಗಳು

  • ಜ್ವರವಿಲ್ಲದಿದ್ದರೂ ಡೆಂಗ್ಯೂ ಬರಬಹುದೇ?
  • ಡೆಂಗ್ಯೂನಲ್ಲಿ ಕಾಣಿಸಿಕೊಳ್ಳುವ ಅಸಹಜ ಲಕ್ಷಣಗಳು ಯಾವುವು?
  • ಜ್ವರ ಕಡಿಮೆಯಾದ ಬಳಿಕವೂ ಡೆಂಗ್ಯೂ ಅಪಾಯ ಇರುತ್ತದೆಯೇ?

ಮಳೆಗಾಲದಲ್ಲಿ ಜ್ವರ (Fever), ವಾಂತಿ, ವಾಕರಿಕೆ ಅಥವಾ ಅತಿಸಾರದಂತಹ ಸಮಸ್ಯೆಗಳು ಕಾಣಿಸಿಕೊಂಡಾಗ ಡೆಂಗ್ಯೂ ಇರಬಹುದೇ ಎಂಬ ಅನುಮಾನ ಮೂಡುವುದು ಸಹಜ. ಡೆಂಗ್ಯೂ ಎಂದಾಕ್ಷಣ ಹೆಚ್ಚಿನ ಜ್ವರ, ತಲೆನೋವು, ಮೈ-ಕೈ ನೋವು ಮತ್ತು ಸುಸ್ತು ನೆನಪಾಗುತ್ತದೆ. ಆದರೆ ಡೆಂಗ್ಯೂ ಸೋಂಕಿಗೆ ಒಳಗಾದ ಪ್ರತಿಯೊಬ್ಬರಲ್ಲೂ ಇದೇ ರೀತಿಯ ಲಕ್ಷಣಗಳು ಕಾಣಿಸಿಕೊಳ್ಳಬೇಕೆಂದಿಲ್ಲ. ಕೆಲವರಲ್ಲಿ ಲಕ್ಷಣಗಳು ಸೌಮ್ಯವಾಗಿರಬಹುದು ಅಥವಾ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಲಕ್ಷಣಗಳಿಗಿಂತ ಭಿನ್ನವಾಗಿರಬಹುದು.

ಡೆಂಗ್ಯೂನ ಪ್ರಮುಖ ಲಕ್ಷಣಗಳಲ್ಲಿ ಜ್ವರವೂ ಒಂದು. ಆದರೆ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕಿನ ಲಕ್ಷಣಗಳ ತೀವ್ರತೆ ಬದಲಾಗಬಹುದು. ಕೆಲವು ಸಂದರ್ಭಗಳಲ್ಲಿ ಯಾವುದೇ ಸ್ಪಷ್ಟ ಲಕ್ಷಣಗಳೇ ಕಾಣಿಸಿಕೊಳ್ಳದೆ ಸೋಂಕು ಇರಬಹುದು. ಇನ್ನೂ ಕೆಲವರಲ್ಲಿ ಜ್ವರ ಕಡಿಮೆ ಪ್ರಮಾಣದಲ್ಲಿರಬಹುದು. ಕೆಲವೊಮ್ಮೆ ಜ್ವರ ಕಡಿಮೆಯಾದ ಬಳಿಕವೂ ಇತರ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹೀಗಾಗಿ ಜ್ವರವಿಲ್ಲ ಎಂಬ ಒಂದೇ ಕಾರಣಕ್ಕೆ ಡೆಂಗ್ಯೂ ಸಾಧ್ಯತೆಯನ್ನು ತಳ್ಳಿಹಾಕುವುದು ಸರಿಯಲ್ಲ ಎಂದು ವೈದ್ಯರು ಎಚ್ಚರಿಸಿದ್ದಾರೆ.

ಯಥಾರ್ಥ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆಂತರಿಕ ವೈದ್ಯಕೀಯ ವಿಭಾಗದ ಹಿರಿಯ ಸಲಹೆಗಾರರಾದ ಡಾ. ರೇಷು ಅಗರ್ವಾಲ್ ಅವರ ಪ್ರಕಾರ, ಸುತ್ತಮುತ್ತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿರುವ ಸಂದರ್ಭದಲ್ಲಿ ವ್ಯಕ್ತಿಗೆ ಹಠಾತ್‌ ಸುಸ್ತು, ಮೈ ನೋವು ಅಥವಾ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಂಡರೆ ಜ್ವರವಿಲ್ಲದಿದ್ದರೂ ಡೆಂಗ್ಯೂ ಸಾಧ್ಯತೆಯನ್ನು ಪರಿಗಣಿಸಬೇಕು.

ಜ್ವರ ಇಲ್ಲದ ಡೆಂಗ್ಯೂನಲ್ಲಿ ಯಾವ ಲಕ್ಷಣಗಳು ಕಾಣಿಸಬಹುದು?

ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಲಕ್ಷಣಗಳಿಗಿಂತ ಭಿನ್ನವಾಗಿ, ಇಂತಹ ಡೆಂಗ್ಯೂ ಪ್ರಕರಣಗಳಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚು ಕಾಡಬಹುದು. ವಾಂತಿ, ಅತಿಸಾರ, ಹೊಟ್ಟೆ ನೋವು, ಅಜೀರ್ಣದ ಜತೆಗೆ ಸುಸ್ತು, ತಲೆನೋವು, ಕಣ್ಣಿನ ನೋವು, ಸ್ನಾಯು ಮತ್ತು ಕೀಲುಗಳಲ್ಲಿ ನೋವು, ಹಸಿವಾಗದಿರುವುದು ಹಾಗೂ ಚರ್ಮದ ಮೇಲೆ ಕೆಂಪು ಕಲೆಗಳು ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ ಡೆಂಗ್ಯೂ ದೇಹದ ಇತರ ಪ್ರಮುಖ ಅಂಗಗಳ ಮೇಲೂ ಪರಿಣಾಮ ಬೀರಬಹುದು.

ನಿದ್ರೆ ಇಲ್ಲದೆ ಮನುಷ್ಯ ಎಷ್ಟು ದಿನ ಬದುಕಬಲ್ಲ? ಹೆಚ್ಚು ಹೊತ್ತು ನಿದ್ರೆ ಮಾಡದಿದ್ದರೆ ಏನಾಗುತ್ತದೆ?

ನಿರಂತರ ಹೊಟ್ಟೆ ನೋವು, ಪದೇಪದೇ ವಾಂತಿ, ಉಸಿರಾಟದ ತೊಂದರೆ, ಮೂಗು ಅಥವಾ ಹಲ್ಲಿನ ಒಸಡುಗಳಿಂದ ರಕ್ತಸ್ರಾವ ಹಾಗೂ ತೀವ್ರ ಚಡಪಡಿಕೆಯಂತಹ ಲಕ್ಷಣಗಳು ಕಾಣಿಸಿಕೊಂಡರೆ ವಿಶೇಷ ಎಚ್ಚರಿಕೆ ವಹಿಸಬೇಕು. ಇವುಗಳನ್ನು ಕೇವಲ ಸುಸ್ತು ಅಥವಾ ಹವಾಮಾನ ಬದಲಾವಣೆಯಿಂದ ಉಂಟಾದ ಸಮಸ್ಯೆ ಎಂದು ನಿರ್ಲಕ್ಷಿಸಬಾರದು.

ಜ್ವರ ಕಡಿಮೆಯಾದರೆ ಅಪಾಯ ಮುಗಿಯಿತೇ?

ಡೆಂಗ್ಯೂ ಬಗ್ಗೆ ಇರುವ ಸಾಮಾನ್ಯ ತಪ್ಪು ಕಲ್ಪನೆ ಎಂದರೆ ಜ್ವರ ಕಡಿಮೆಯಾದ ಬಳಿಕ ಅಪಾಯವೂ ಮುಗಿಯುತ್ತದೆ ಎಂಬುದು. ಆದರೆ ಕೆಲವು ರೋಗಿಗಳಲ್ಲಿ ಜ್ವರ ಕಡಿಮೆಯಾಗುವ ಸಮಯದಲ್ಲೇ ಮತ್ತಷ್ಟು ಸಮಸ್ಯೆಗಳು ಆರಂಭವಾಗಬಹುದು. ಈ ಸಂದರ್ಭದಲ್ಲಿ ದೇಹದಲ್ಲಿ ನೀರಿನ ಕೊರತೆ ಸೇರಿದಂತೆ ಇತರ ತೊಂದರೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಜ್ವರ ಕಡಿಮೆಯಾದ ಬಳಿಕವೂ ರೋಗಿಯ ಆರೋಗ್ಯದ ಮೇಲೆ ನಿಗಾ ಇರಿಸುವುದು ಮುಖ್ಯ ಎಂದು ವೈದ್ಯರು ಹೇಳಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?