Diabetes Control Tips: ಈ ಕೆಲವು ನೈಸರ್ಗಿಕ ಮಾರ್ಗಗಳನ್ನು ಅನುಸರಿಸುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಡಿ

ಕಳಪೆಮಟ್ಟದ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಕಾರಣ, ಇತ್ತೀಚಿಗೆ ಮಧುಮೇಹ ಕಾಯಿಲೆಯ ಸಂಖ್ಯೆಯು ಹೆಚ್ಚಾಗಿದೆ. ಈ ಕಾಯಿಲೆಗೆ ಔಷಧಿಯ ಹೊರತಾಗಿ ನಿಮ್ಮ ದೈನಂದಿನ ಜೀವನಶೈಲಿಯಲ್ಲಿ ಕೆಲವು ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು. ಹಾಗಾದರೆ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುವ ನೈಸರ್ಗಿಕ ಮಾರ್ಗಗಳು ಯಾವುವು ಎಂಬುದನ್ನು ನೋಡೋಣ.

Diabetes Control Tips: ಈ ಕೆಲವು ನೈಸರ್ಗಿಕ ಮಾರ್ಗಗಳನ್ನು ಅನುಸರಿಸುವ  ಮೂಲಕ ಮಧುಮೇಹವನ್ನು  ನಿಯಂತ್ರಣದಲ್ಲಿಡಿ
Diabetes Control
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Sep 16, 2023 | 5:56 AM

ಇಂದು ವಿಶ್ವದಾದ್ಯಂತ ವೇಗವಾಗಿ ಹೆಚ್ಚುತ್ತಿರುವ ರೋಗಗಳಲ್ಲಿ ಮಧುಮೇಹವೂ ಒಂದು. ಇಂದಿನ ದಿನಗಳಲ್ಲಿನ ಅನಾರೋಗ್ಯಕರ ಆಹಾರ ಸೇವನೆ, ಹಾಗೂ ಕಳಪೆ ಮಟ್ಟದ ಜೀವನಶೈಲಿ ಪಾಲನೆಯ ಕಾರಣದಿಂದ ವೃದ್ಧರಿಂದ ಹಿಡಿದು ಚಿಕ್ಕ ಮಕ್ಕಳಲ್ಲೂ ಸಕ್ಕರೆ ಕಾಯಿಲೆ ಕಾಣಿಸಿಕೊಳ್ಳುತ್ತಿದೆ. ಇದು ಗಂಭೀರ ದೀರ್ಘಕಾಲದ ಕಾಯಿಲೆಯಾಗಿದ್ದು, ಇದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟ ಗಮನಾರ್ಹವಾಗಿ ಹೆಚ್ಚಾಗುತ್ತದೆ, ಇದು ದೇಹದ ಇನ್ಸುಲಿನ್ ಉತ್ಪಾದನಾ ಸಾಮರ್ಥ್ಯದ ಮೇಲೆ ಪರಿಣಾಮವನ್ನು ಬೀರುತ್ತದೆ. ಈ ಕಾಯಿಲೆಯನ್ನು ಅದರ ಮೂಲದಿಂದ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಆದರೆ ಸರಿಯಾದ ಆಹಾರ ಪದ್ಧತಿ ಮತ್ತು ಆರೋಗ್ಯಕರ ಜೀವನಶೈಲಿಯ ಪಾಲನೆಯ ಮೂಲಕ ಅದನ್ನು ನಿಯಂತ್ರಣದಲ್ಲಿಡಬಹುದು. ನೀವೂ ಸಹ ಶುಗರ್ ಪೇಷೆಂಟ್ ಆಗಿದ್ದರೆ, ಈ ಕೆಲವು ನೈಸರ್ಗಿಕ ಮಾರ್ಗಗಳನ್ನು ಅಳವಡಿಸಿಕೊಳ್ಳುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ನೈಸರ್ಗಿಕ ಮಾರ್ಗಗಳು:

ಒತ್ತಡದಿಂದ ದೂರವಿರಿ:

ಒತ್ತಡವು ಮಧುಮೇಹದ ಅಪಾಯವನ್ನು ಹೆಚ್ಚಿಸುವ ಒಂದು ಅಂಶವಾಗಿದೆ. ಜನರಲ್ಲಿ ಹೆಚ್ಚುತ್ತಿರುವ ಒತ್ತಡವು ದೇಹದಲ್ಲಿ ಗ್ಲುಕಗನ್ ಮತ್ತು ಕಾರ್ಟಿಸೋಲ್ ಹಾರ್ಮೋನುಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ, ವ್ಯಕ್ತಿಯ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗಬಹುದು. ಅಂತಹ ಪರಿಸ್ಥಿತಿಯಲ್ಲಿ ನಿಯಮಿತ ವ್ಯಾಯಾಮ, ಧ್ಯಾನ ಮತ್ತು ವಿಶ್ರಾಂತಿಯನ್ನು ಸಹಾಯದಿಂದ ಒತ್ತಡವನ್ನು ಹೋಗಲಾಡಿಸುವ ಮೂಲಕ ಮಧುಮೇಹವನ್ನು ಕೂಡಾ ನಿಯಂತ್ರಣದಲ್ಲಿಡಬಹುದು.

ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯಿರಿ:

ದಿನವಿಡೀ ಸಾಕಷ್ಟು ಪ್ರಮಾಣದ ನೀರನ್ನು ಕುಡಿಯುವುದರಿಂದಲೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ವಾಸ್ತವವಾಗಿ ನೀರಿನ ಸಹಾಯದಿಂದ ಮೂತ್ರಪಿಂಡಗಳು ಮೂತ್ರದ ಮೂಲಕ ದೇಹದಿಂದ ಹೆಚ್ಚುವರಿ ಸಕ್ಕರೆಯನ್ನು ತೆಗೆದುಹಾಕುತ್ತವೆ. ಒಂದು ಅಧ್ಯಯನದ ಪ್ರಕಾರ ಹೆಚ್ಚು ನೀರು ಕುಡಿಯುವವರಲ್ಲಿ ಹೈ ಗ್ಲೈಸೀಮಿಯಾ ಬರುವ ಸಾಧ್ಯತೆಯೂ ಕಡಿಮೆ ಇರುತ್ತದೆ. ಆದ್ದರಿಂದ ಪ್ರತಿನಿತ್ಯ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಸೇವನೆ ಮಾಡಿ.

ನೆಲ್ಲಿಕಾಯಿ:

ನೆಲ್ಲಿಕಾಯಿಯು ಅಧಿಕ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಕ್ರೋಮಿಯಂ ಎಂಬ ಖನಿಜವನ್ನು ಹೊಂದಿರುತ್ತದೆ, ಇದು ಕಾರ್ಬೋಹೈಡ್ರೇಟ್ ಗಳನ್ನು ನಿಯಂತ್ರಿಸುತ್ತದೆ ಮತ್ತು ನಿಮ್ಮ ದೇಹವನ್ನು ಇನ್ಸುಲಿನ್ ಗೆ ಹೆಚ್ಚು ಸ್ಪಂದಿಸುವಂತೆ ಮಾಡುತ್ತದೆ. ಹಾಗಾಗಿ ಪ್ರತಿನಿತ್ಯ ನೆಲ್ಲಿಕಾಯಿನ್ನು ಸೇವಿಸುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು.

ಇದನ್ನೂ ಓದಿ: ಸಾದ ಚಹಾದ ಬದಲಿಗೆ ಬಾರ್ಲಿ ಚಹಾ ಕುಡಿಯಿರಿ, ಇದರಲ್ಲಿದೆ ಆರೋಗ್ಯ ಪ್ರಯೋಜನ 

ಪ್ರತಿನಿತ್ಯ ವ್ಯಾಯಾಮ ಮಾಡಿ:

ಮಧುಮೇಹವನ್ನು ನಿಯಂತ್ರಣದಲ್ಲಿಡಲು ನೀವು ಪ್ರತಿನಿತ್ಯ ವ್ಯಾಯಾಮವನ್ನು ಮಾಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಸಂಶೋಧನೆಯ ಪ್ರಕಾರ, ವ್ಯಾಯಾಮವು ಮಧುಮೇಹಕ್ಕೆ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡುತ್ತದೆ. ತಜ್ಞರ ಪ್ರಕಾರ ವಾಕಿಂಗ್, ಜಾಗಿಂಗ್, ಈಜು ಇತ್ಯಾದಿ ವ್ಯಾಯಾಮಗಳು ಮಧುಮೇಹವನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ವ್ಯಾಯಾಮವು ತೂಕವನ್ನು ನಿಯಂತ್ರಣದಲ್ಲಿಡುವ ಮೂಲಕ ರಕ್ತಪರಿಚಲನೆಯು ಸರಿಯಾಗಿ ಸಾಗಲು ಸಹಾಯ ಮಾಡುತ್ತದೆ. ಇದರಿಂದಾಗಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ನಿಯಂತ್ರಣದಲ್ಲಿರುತ್ತದೆ.

ಉತ್ತಮ ನಿದ್ರೆಯನ್ನು ಪಡೆಯಿರಿ:

ಬಿಡುವಿಲ್ಲದ ಜೀವನಶೈಲಿ, ಒತ್ತಡದ ಕಾರಣದಿಂದಾಗಿ ಹೆಚ್ಚಿನವರು ಸಾಕಷ್ಟು ಪ್ರಮಾಣದ ನಿದ್ರೆಯನ್ನು ಪಡೆಯುವುದಿಲ್ಲ. ನಿದ್ರೆಯ ಕೊರತೆಯು ಕೂಡಾ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಲು ಕಾರಣವಾಗಬಹುದು. ವಾಸ್ತವವಾಗಿ, ಸರಿಯಾಗಿ ನಿದ್ರೆ ಮಾಡದಿದ್ದರೆ, ದೇಹದಲ್ಲಿ ಕಾರ್ಟಿಸೋಲ್ ಹಾರ್ಮೋನು ಮಟ್ಟವು ಹೆಚ್ಚಾಗುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಟೈಪ್-2 ಮಧುಮೇಹ ಮತ್ತು ಹೃದಯದ ಕಾಯಿಲೆಯ ಅಪಾಯವನ್ನು ಸಹ ಹೆಚ್ಚಿಸುತ್ತದೆ. ಹಾಗಾಗಿ 7 ರಿಂದ 8 ಗಂಟೆಗಳ ಕಾಲ ನಿದ್ರೆಯನ್ನು ಪಡೆಯುವುದು ಅವಶ್ಯಕ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ