ಕುಟುಂಬದಲ್ಲಿ ಯಾರಿಗಾದರೂ ಮಧುಮೇಹವಿದೆಯೇ?; ನಿಮ್ಮ ಆರೋಗ್ಯದ ಬಗ್ಗೆಯೂ ಎಚ್ಚರವಿರಲಿ

Diabetes: ಮಧುಮೇಹವು ದೀರ್ಘಕಾಲದ ಕಾಯಿಲೆಯಾಗಿದ್ದು, ಮೇದೋಜ್ಜೀರಕ ಗ್ರಂಥಿಯು ಸಾಕಷ್ಟು ಇನ್ಸುಲಿನ್ ಅನ್ನು ಉತ್ಪಾದಿಸದಿದ್ದಾಗ ಅಥವಾ ದೇಹವು ಉತ್ಪಾದಿಸುವ ಇನ್ಸುಲಿನ್ ಅನ್ನು ಪರಿಣಾಮಕಾರಿಯಾಗಿ ಬಳಸಲು ಸಾಧ್ಯವಾಗದೆ ಇದ್ದಾಗ ಡಯಾಬಿಟಿಸ್ ಉಂಟಾಗುತ್ತದೆ. ಇನ್ಸುಲಿನ್ ಎಂಬುದು ನಮ್ಮ ರಕ್ತದಲ್ಲಿನ ಗ್ಲೂಕೋಸ್ ಅನ್ನು ನಿಯಂತ್ರಿಸುವ ಒಂದು ಹಾರ್ಮೋನ್ ಆಗಿದೆ. ಮಧುಮೇಹದ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳಿವೆ.

ಕುಟುಂಬದಲ್ಲಿ ಯಾರಿಗಾದರೂ ಮಧುಮೇಹವಿದೆಯೇ?; ನಿಮ್ಮ ಆರೋಗ್ಯದ ಬಗ್ಗೆಯೂ ಎಚ್ಚರವಿರಲಿ
ಮಧುಮೇಹ
Follow us
ಸುಷ್ಮಾ ಚಕ್ರೆ
|

Updated on: Mar 09, 2024 | 7:29 PM

ಡಯಾಬಿಟಿಸ್ ನಮ್ಮ ದೇಹವು ರಕ್ತದಲ್ಲಿನ ಸಕ್ಕರೆಯನ್ನು (ಗ್ಲೂಕೋಸ್) ಹೇಗೆ ಬಳಸುತ್ತದೆ ಎಂಬುದರ ಮೇಲೆ ಪರಿಣಾಮ ಬೀರುವ ರೋಗಗಳ ಗುಂಪನ್ನು ಸೂಚಿಸುತ್ತದೆ. ಸ್ನಾಯುಗಳು ಮತ್ತು ಅಂಗಾಂಶಗಳನ್ನು ರೂಪಿಸುವ ಜೀವಕೋಶಗಳಿಗೆ ಗ್ಲುಕೋಸ್ ಶಕ್ತಿಯ ಪ್ರಮುಖ ಮೂಲವಾಗಿದೆ. ಇದು ಮೆದುಳಿನ ಇಂಧನದ ಮುಖ್ಯ ಮೂಲವಾಗಿದೆ. ಮಧುಮೇಹ ವಂಶವಾಹಿನಿಯಾಗಿಯೂ ಮುಂದಿನ ತಲೆಮಾರಿಗೆ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ, ನಿಮ್ಮ ಕುಟುಂಬದಲ್ಲಿ ಯಾರಿಗಾದರೂ ಡಯಾಬಿಟಿಸ್ ಇದ್ದರೆ ನೀವು ಹೆಚ್ಚು ಜಾಗ್ರತೆ ವಹಿಸುವುದು ಅತ್ಯಗತ್ಯ.

ಮಧುಮೇಹದ ಮುಖ್ಯ ಕಾರಣವು ಅದರ ಪ್ರಕಾರವನ್ನು ಅವಲಂಬಿಸಿ ಬದಲಾಗುತ್ತದೆ. ಆದರೆ ನೀವು ಯಾವುದೇ ರೀತಿಯ ಮಧುಮೇಹವನ್ನು ಹೊಂದಿದ್ದರೂ, ಅದು ರಕ್ತದಲ್ಲಿ ಹೆಚ್ಚುವರಿ ಸಕ್ಕರೆ ಮಟ್ಟಕ್ಕೆ ಕಾರಣವಾಗುತ್ತದೆ. ರಕ್ತದಲ್ಲಿ ಹೆಚ್ಚಿನ ಸಕ್ಕರೆಯು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ದೀರ್ಘಕಾಲದ ಮಧುಮೇಹ ಸಮಸ್ಯೆಗಳಲ್ಲಿ ಟೈಪ್ 1 ಡಯಾಬಿಟಿಸ್ ಮತ್ತು ಟೈಪ್ 2 ಡಯಾಬಿಟಿಸ್ ಸೇರಿವೆ.

ರಕ್ತದಲ್ಲಿನ ಸಕ್ಕರೆ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಾದಾಗ ಪ್ರಿಡಿಯಾಬಿಟಿಸ್ ಉಂಟಾಗುತ್ತದೆ. ಆದರೆ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ಮಧುಮೇಹ ಎಂದು ಕರೆಯುವಷ್ಟು ಹೆಚ್ಚಿರುವುದಿಲ್ಲ. ಅದನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪ್ರಿಡಿಯಾಬಿಟಿಸ್ ಮಧುಮೇಹಕ್ಕೆ ಕಾರಣವಾಗಬಹುದು. ಗರ್ಭಾವಸ್ಥೆಯ ಮಧುಮೇಹವು ಗರ್ಭಾವಸ್ಥೆಯಲ್ಲಿ ಮಾತ್ರ ಸಂಭವಿಸುತ್ತದೆ. ಆದರೆ ಮಗುವಿನ ಜನನದ ನಂತರ ಅದು ಹೋಗಬಹುದು.

ಇದನ್ನೂ ಓದಿ: ಡಯಾಬಿಟಿಸ್ ಸಮಸ್ಯೆ ಇದೆಯಾ?; ಈ ಹಣ್ಣುಗಳನ್ನು ತಿನ್ನುವ ಮುನ್ನ ಯೋಚಿಸಿ

ನಮ್ಮ ಸುತ್ತಲೂ ಹೆಚ್ಚುತ್ತಿರುವ ಮಧುಮೇಹ ಪ್ರಕರಣಗಳು ನಮ್ಮ ಆರೋಗ್ಯ ಮತ್ತು ನಾವು ಏನು ತಿನ್ನುತ್ತೇವೆ ಎಂಬುದರ ಬಗ್ಗೆ ಉತ್ತಮ ಕಾಳಜಿಯನ್ನು ತೆಗೆದುಕೊಳ್ಳಬೇಕು ಎಂದು ನಮಗೆ ಪ್ರೇರೇಪಿಸುತ್ತದೆ. ಮಧುಮೇಹದ ಕುಟುಂಬದ ಇತಿಹಾಸ ಹೊಂದಿರುವವರಿಗೆ, ಅನಾರೋಗ್ಯವನ್ನು ತಪ್ಪಿಸಲು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ, ಪ್ರಪಂಚದಾದ್ಯಂತ ಸುಮಾರು 537 ಮಿಲಿಯನ್ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಇದು ಅಧಿಕ ರಕ್ತದ ಸಕ್ಕರೆಯ ಮಟ್ಟದಿಂದ ನಿರೂಪಿಸಲ್ಪಟ್ಟಿದೆ. ಅಂಕಿಅಂಶಗಳ ಪ್ರಕಾರ, ಮಧುಮೇಹ ಹೊಂದಿರುವ ಶೇ. 90ರಿಂದ 95ರಷ್ಟು ಜನರು ಟೈಪ್ 2 ಮಧುಮೇಹವನ್ನು ಹೊಂದಿದ್ದಾರೆ. ಇದು ಯಾವುದೇ ವಯಸ್ಸಿನಲ್ಲಿ ಬೆಳೆಯಬಹುದು.

ಟೈಪ್ 2 ಡಯಾಬಿಟಿಸ್ ಗಂಭೀರವಾದ, ದೀರ್ಘಕಾಲದ ಆರೋಗ್ಯ ಸಮಸ್ಯೆಯಾಗಿದ್ದು ಅದು ಹೃದ್ರೋಗ, ಪಾರ್ಶ್ವವಾಯು, ಕುರುಡುತನ ಮತ್ತು ಮೂತ್ರಪಿಂಡ ವೈಫಲ್ಯದಂತಹ ಇತರ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ನೀವು ಟೈಪ್ 2 ಮಧುಮೇಹವನ್ನು ತಡೆಗಟ್ಟಬಹುದು. ಆ ಬಗ್ಗೆ ನೀವು ಗಮನ ಹರಿಸದಿದ್ದರೆ ಅದರಿಂದ ಪ್ರಾಣಕ್ಕೇ ಅಪಾಯ ಉಂಟಾಗಬಹುದು. ಆದ್ದರಿಂದ, ಮಧುಮೇಹದ ಕುಟುಂಬದ ಇತಿಹಾಸ ಹೊಂದಿರುವ ವ್ಯಕ್ತಿಗಳು ಅಪಾಯವನ್ನು ಕಡಿಮೆ ಮಾಡಲು ಈ 5 ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಒಳ್ಳೆಯದು.

ಕುಟುಂಬದಲ್ಲಿ ಯಾರಿಗಾದರೂ ಮಧುಮೇಹ ಸಮಸ್ಯೆ ಇದ್ದರೆ ನೀವು 5 ಸಲಹೆಗಳನ್ನು ಪಾಲಿಸಿ.

ಸಾಕಷ್ಟು ಪ್ರೋಟೀನ್ ತೆಗೆದುಕೊಳ್ಳಿ:

ಪ್ರತಿ ಕಿಲೋಗ್ರಾಂಗೆ ನೀವು ಕನಿಷ್ಟ 1 ಗ್ರಾಂ ಪ್ರೋಟೀನ್ ಅನ್ನು ಪ್ರತಿದಿನ ತೆಗೆದುಕೊಳ್ಳಬೇಕು. ಈ ಪೋಷಕಾಂಶದ ಶಕ್ತಿಯು ಸ್ನಾಯುವಿನ ದ್ರವ್ಯರಾಶಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಕಾರ್ಬೋಹೈಡ್ರೇಟ್‌ಗಳನ್ನು ಬುದ್ದಿಪೂರ್ವಕವಾಗಿ ಸೇವಿಸಿ:

ಕಾರ್ಬೋಹೈಡ್ರೇಟ್‌ಗಳು ನಮ್ಮ ದೇಹದ ಶತ್ರುಗಳಲ್ಲ. ಆದರೆ ಅವುಗಳನ್ನು ಅತಿಯಾಗಿ ಸೇವಿಸುವುದು ಒಳ್ಳೆಯದಲ್ಲ. ನಮ್ಮ ಊಟದಲ್ಲಿ ಸೀಮಿತ ಪ್ರಮಾಣದಲ್ಲಿ ಕಾರ್ಬೋಹೈಡ್ರೇಟ್‌ಗಳನ್ನು ಸೇರಿಸಿಕೊಂಡರೆ ಏನೂ ತೊಂದರೆಯಾಗುವುದಿಲ್ಲ. ಅದರ ಬದಲು ಪ್ರೋಟೀನ್‌ಗಳು, ತರಕಾರಿಗಳು, ಕಾಳುಗಳು ಮತ್ತು ಆರೋಗ್ಯಕರ ಕೊಬ್ಬುಗಳನ್ನು ಸೇವಿಸಿ. ಆಗ ನೀವು ಕಾರ್ಬೋಹೈಡ್ರೇಟ್‌ಗಳನ್ನು ಅತಿಯಾಗಿ ಸೇವಿಸುವುದಿಲ್ಲ. ಇದು ರಕ್ತಪ್ರವಾಹದಲ್ಲಿ ಕಡಿಮೆ ಗ್ಲೂಕೋಸ್ ಅನ್ನು ಬಿಡುಗಡೆ ಮಾಡುತ್ತದೆ, ರಕ್ತದಲ್ಲಿನ ಸಕ್ಕರೆಯನ್ನು ಉಳಿಸಿಕೊಳ್ಳುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುತ್ತದೆ.

ಇದನ್ನೂ ಓದಿ: Snoring: ಸಂಗಾತಿಯ ಗೊರಕೆಯಿಂದ ನಿದ್ರೆ ಮಾಡಲು ಆಗುತ್ತಿಲ್ಲವೇ? ಹೀಗೆ ಮಾಡಿ

ಒತ್ತಡವನ್ನು ನಿರ್ವಹಿಸಿ:

ದೀರ್ಘಕಾಲದ ಒತ್ತಡವು ಇನ್ಸುಲಿನ್ ಪ್ರತಿರೋಧಕ್ಕೆ ಕಾರಣವಾಗಬಹುದು. ಇದು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ವಿಶ್ರಾಂತಿ ಮತ್ತು ಭಾವನಾತ್ಮಕ ಯೋಗಕ್ಷೇಮವನ್ನು ಉತ್ತೇಜಿಸಲು ಸಾವಧಾನತೆ ಧ್ಯಾನ, ಆಳವಾದ ಉಸಿರಾಟ ಮತ್ತು ಯೋಗದಂತಹ ಒತ್ತಡ ಕಡಿಮೆ ಮಾಡುವ ತಂತ್ರಗಳನ್ನು ಅಭ್ಯಾಸ ಮಾಡಿ.

ಚಟುವಟಿಕೆಯಿಂದಿರಿ:

ನಿಯಮಿತ ದೈಹಿಕ ಚಟುವಟಿಕೆಯು ತೂಕವನ್ನು ಕಳೆದುಕೊಳ್ಳಲು ಮತ್ತು ಬಯಸಿದ ದೇಹವನ್ನು ಪಡೆಯಲು ಸಹಾಯ ಮಾಡುತ್ತದೆ. ಆದರೆ ಇದು ಮಧುಮೇಹವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ನಿಮ್ಮ ದಿನಚರಿಯಲ್ಲಿ ವೇಗದ ನಡಿಗೆ, ಜಾಗಿಂಗ್ ಅಥವಾ ಶಕ್ತಿ ತರಬೇತಿಯಂತಹ ವಾರಕ್ಕೆ ಕನಿಷ್ಠ 150 ನಿಮಿಷಗಳ ಮಧ್ಯಮ ತೀವ್ರತೆಯ ವ್ಯಾಯಾಮವನ್ನು ಅಳವಡಿಸಿಕೊಳ್ಳಿ.

ಊಟದ ನಡುವೆ ಅಂತರವನ್ನು ಇರಿಸಿ:

ಪ್ರತಿ ಊಟದ ನಡುವೆ 4-5 ಗಂಟೆಗಳ ಅಂತರವನ್ನು ಕಾಪಾಡಿಕೊಳ್ಳುವುದು ಮತ್ತು ರಾತ್ರಿಯ ಊಟದ ನಂತರ ಲಘು ಆಹಾರದಿಂದ ದೂರವಿರುವುದು ಗ್ಲೂಕೋಸ್ ನಿಯಂತ್ರಣ ಮತ್ತು ಒಟ್ಟಾರೆ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಈ ಉಪವಾಸದ ಅವಧಿಯು ಗ್ಲೂಕೋಸ್ ಅನ್ನು ಪರಿಣಾಮಕಾರಿಯಾಗಿ ಪ್ರಕ್ರಿಯೆಗೊಳಿಸಲು ನಮ್ಮ ದೇಹಗಳನ್ನು ಶಕ್ತಗೊಳಿಸುತ್ತದೆ, ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ತ್ವರಿತ ಏರಿಳಿತಗಳನ್ನು ಕಡಿಮೆ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ