AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Post-Festival Detox Drinks: ಹಬ್ಬದ ದಿನ ಅತಿಯಾಗಿ ತಿಂದಿದ್ದೀರಾ? ದೇಹ ಹಗುರವಾಗಿಸಲು ಈ ಡಿಟಾಕ್ಸ್ ಪಾನೀಯ ಸೇವಿಸಿ

ದೀಪಾವಳಿ ಸಮಯದಲ್ಲಿ ಎಲ್ಲರೂ ತುಸು ಹೆಚ್ಚೇ  ಹಬ್ಬದ ಊಟವನ್ನು ಸವಿಯುತ್ತಾರೆ. ಆದರೆ ಹೆಚ್ಚು ಎಣ್ಣೆಯುಕ್ತ ಪದಾರ್ಥಗಳು ಮತ್ತು ಮಸಾಲೆಯುಕ್ತ ಆಹಾರ, ಸಿಹಿ ತಿಂಡಿಗಳನ್ನು  ಸೇವನೆ ಮಾಡುವುದರಿಂದ ಹೊಟ್ಟೆ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಮತ್ತು ಇದರೊಂದಿಗೆ  ದೇಹದಲ್ಲಿ ಹಲವಾರು ರೀತಿಯಲ್ಲಿ ವಿಷಕಾರಿ ಅಂಶಗಳು ಸಂಗ್ರಹವಾಗುತ್ತದೆ. ಈ ವಿಷಕಾರಿ ಅಂಶಗಳನ್ನು ತೆಗೆದುಹಾಕಲು ಈ ಕೆಲವು ಬಗೆಯ ಡಿಟಾಕ್ಸ್ ಪಾನೀಯಗಳು ಸಹಕಾರಿಯಾಗಿದೆ.  

Post-Festival Detox Drinks: ಹಬ್ಬದ ದಿನ ಅತಿಯಾಗಿ ತಿಂದಿದ್ದೀರಾ? ದೇಹ ಹಗುರವಾಗಿಸಲು ಈ ಡಿಟಾಕ್ಸ್ ಪಾನೀಯ ಸೇವಿಸಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Nov 14, 2023 | 5:56 PM

Share

ದೀಪಾವಳಿ ಅಥವಾ ಯಾವುದೇ ಹಬ್ಬವಿರಲಿ, ಈ ಸಂಭ್ರಮದಲ್ಲಿ ಪ್ರತಿಯೊಬ್ಬರೂ ವಿವಿಧ ರೀತಿಯ ಭಕ್ಷ್ಯಗಳನ್ನು ತಿಂದು ಆನಂದಿಸುತ್ತಾರೆ. ಇಲ್ಲದೆ ಹೋದರೆ ಹಬ್ಬ ಅಪೂರ್ಣವೆನಿಸುತ್ತದೆ.  ಆದರೆ ನೀವು ಹೆಚ್ಚಿನ ಪ್ರಮಾಣದಲ್ಲಿ ಮಸಾಲೆಯುಕ್ತ ಪದಾರ್ಥಗಳು, ಕರಿದ ಆಹಾರಗಳು, ಸಿಹಿತಿಂಡಿಗಳನ್ನು ಸೇವಿಸಿದಾಗ ದೇಹದಲ್ಲಿ ವಿಷಕಾರಿ ಅಂಶಗಳು ಸಂಗ್ರಹಗೊಳ್ಳಲು ಪ್ರಾರಂಭಿಸುತ್ತದೆ. ಇದರಿಂದ ಹೊಟ್ಟೆ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಎಣ್ಣೆಯುಕ್ತ, ಮಸಾಲೆಯುಕ್ತ ಮತ್ತು ಸಿಹಿ ಪದಾರ್ಥಗಳನ್ನು ಅತಿಯಾಗಿ ಸೇವನೆ ಮಾಡುವುದರಿಂದ ಬೊಜ್ಜು ಹೆಚ್ಚಾಗುವುದು ಮಾತ್ರವಲ್ಲದೆ ಗ್ಯಾಸ್ ಮತ್ತು ಅಸಿಡಿಟಿಯ ಸಮಸ್ಯೆಯೂ ಉಂಟಾಗುತ್ತದೆ. ಆದ್ದರಿಂದ  ದೇಹದಲ್ಲಿ ಸಂಗ್ರಹಗೊಂಡ ವಿಷಕಾರಿ  ಅಂಶಗಳನ್ನು  ತೆಗೆದುಹಾಕುವುದು ಅತ್ಯಗತ್ಯ.  ಇದಕ್ಕಾಗಿ ನೀವು ವಿವಿಧ ಬಗೆಯ ಡಿಟಾಕ್ಸ್ ಪಾನೀಯಗಳನ್ನು ಸೇವನೆ ಮಾಡಬಹುದು.  ಈ ಪಾನೀಯಗಳು ದೇಹದೊಳಗೆ ಸಂಗ್ರಹವಾದ ವಿಷಕಾರಿ ಅಂಶಗಳನ್ನು ತೆಗೆದುಹಾಕುವ ಮೂಲಕ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು  ಚಯಾಪಚಯಕ್ರಿಯೆಯನ್ನು (metabolism)  ಉತ್ತಮಗೊಳಿಸುತ್ತದೆ.

ಹಬ್ಬದ ನಂತರ ದೇಹವನ್ನು ಹಗುರವಾಗಿಸಲು ಈ ಕೆಲವು ಡಿಟಾಕ್ಸ್ ಪಾನೀಯಗಳನ್ನು ಕುಡಿಯಿರಿ:

ಸೌತೆಕಾಯಿ ಮತ್ತು ಪುದೀನಾ ಡಿಟಾಕ್ಸ್ ಪಾನೀಯ: ಸೌತೆಕಾಯಿ ಮತ್ತು ಪುದೀನಾ ಡಿಟಾಕ್ಸ್ ಪಾನೀಯ ದೇಹದಿಂದ ವಿಷವನ್ನು ಹೊರ ಹಾಕುವುದು ಮಾತ್ರವಲ್ಲದೆ, ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು  ತೂಕ ಇಳಿಕೆಗೂ ಸಹಕಾರಿಯಾಗಿದೆ. ಮನೆಯಲ್ಲಿಯೇ ಸುಲಭವಾಗಿ ಲಭ್ಯವಿರುವ ಸೌತೆಕಾಯಿ ಮತ್ತು ಪುದೀನ ಎಲೆಗಳನ್ನು ಉಪಯೋಗಿಸಿಕೊಂಡು ಡಿಟಾಕ್ಸ್ ಪಾನೀಯವನ್ನು ತಯಾರಿಸಬಹುದು. ಇದಕ್ಕಾಗಿ ಒಂದು ಜಗ್ ಅಥವಾ ಬಾಟಲಿ ತೆಗೆದುಕೊಂಡು ಅದಕ್ಕೆ ಎರಡು ಲೋಟ ನೀರು ಹಾಕಿ, ಬಳಿಕ ಅದಕ್ಕೆ ಸೌತೆಕಾಯಿ ತುಂಡು ಮತ್ತು ಪುದೀನ ಎಲೆ ಹಾಗೂ ಸ್ವಲ್ಪ ನಿಂಬೆ ರಸವನ್ನು ಸೇರಿಸಿ ಮಿಶ್ರಣ ಮಾಡಿಕೊಂಡು, ಈ ನೀರನ್ನು ದಿನವೀಡಿ ಕುಡಿಯಿರಿ.

ನಿಂಬೆ ಮತ್ತು ಶುಂಠಿ ಡಿಟಾಕ್ಸ್ ಪಾನೀಯ: ನೀವು ನಿಂಬೆ ಮತ್ತು ಶುಂಠಿಯಿಂದಲೂ ಡಿಟಾಕ್ಸ್ ಪಾನೀಯವನ್ನು ತಯಾರಿಸಬಹುದು. ಇದು ದೇಹದಿಂದ ವಿಷವನ್ನು ಹೊರ ಹಾಕುವುದರ ಜೊತೆಗೆ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಹಬ್ಬ ಹರಿದಿನಗಳಲ್ಲಿ ಸಿಹಿ ತಿಂಡಿಗಳನ್ನು ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಈ ಪಾನೀಯವನ್ನು ಕುಡಿಯಬಹುದು. ಈ  ಡಿಟಾಕ್ಸ್ ಪಾನೀಯವನ್ನು ತಯಾರಿಸಲು 1 ಲೋಟ ಉಗುರು ಬೆಚ್ಚಗಿ ನೀರನ್ನು ತೆಗೆದುಕೊಂಡು, ಅದಕ್ಕೆ ಒಂದು ಇಂಚು ಶುಂಠಿ ತುಂಡನ್ನು ತುರಿದು  ಸೇರಿಸಿ ಮತ್ತು ಸ್ವಲ್ಪ  ನಿಂಬೆರಸವನ್ನು ಸೇರಿಸಿ ಎಲ್ಲವನ್ನು ಚೆನ್ನಾಗಿ ಮಿಶ್ರಣ ಮಾಡಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.

ದಾಲ್ಚಿನ್ನಿ ಡಿಟಾಕ್ಸ್ ಪಾನೀಯ: ದಾಲ್ಚಿನ್ನಿ ಹೊಟ್ಟೆಯಿಂದ ವಿಷಕಾರಿ ಅಂಶಗಳನ್ನು ತೆಗೆದುಹಾಕಲು ಸಹಕಾರಿಯಾಗಿದೆ. ಜೊತೆಗೆ ಇದು ಚಯಾಪಚಯಕ್ರಿಯೆಯನ್ನು ಬಲಪಡಿಸುತ್ತದೆ ಮತ್ತು ಹೊಟ್ಟೆಯ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಈ ಡಿಟಾಕ್ಸ್ ಪಾನೀಯವನ್ನು ತಯಾರಿಸಲು 1 ಲೋಟ ಉಗುರು ಬೆಚ್ಚಗಿನ ನೀರನ್ನು ತೆಗೆದುಕೊಂಡು ಅದರಲ್ಲಿ ಒಂದು ಚಮಚ ದಾಲ್ಚಿನ್ನಿ ಪುಡಿಯನ್ನು ಮಿಶ್ರಣ ಮಾಡಿ, ರಾತ್ರಿ ಮಲಗುವ ಮುನ್ನ ಕುಡಿಯಿರಿ.

ಕೊತ್ತಂಬರಿ ನೀರು: ಕೊತ್ತಂಬರಿ ನೀರು ನೈಸರ್ಗಿಕ ಮೂತ್ರವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದನ್ನು ಸೇವನೆ ಮಾಡುವ ಮೂಲಕ ದೇಹದಲ್ಲಿರುವ ವಿಷಕಾರಿ ಅಂಶವನ್ನು ಮೂತ್ರದ ಮೂಲಕ ಹೊರಹಾಕಬಹುದು. ಅಲ್ಲದೆ ಇದು ಯಕೃತ್ತನ್ನು ಆರೋಗ್ಯಕರವಾಗಿರಿಸುತ್ತದೆ, ಚಯಾಪಚಯಕ್ರಿಯೆಯನ್ನು  ಸುಧಾರಿಸುತ್ತದೆ. ಇದಕ್ಕಾಗಿ ಒಂದು ಪಾತ್ರೆಯನ್ನು ಒಂದು ಲೋಟ ನೀರನ್ನು ಸೇರಿಸಿ,  ಅದಕ್ಕೆ ಸ್ವಲ್ಪ ಕೊತ್ತಂಬರಿ ಬೀಜಗಳನ್ನು ಹಾಕಿ 10 ನಿಮಿಷಗಳ ಕಾಲ ಕುದಿಸಿ  ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.

ಇದನ್ನೂ ಓದಿ: ಬೆಳಿಗ್ಗೆ ಎದ್ದ ಕೂಡಲೇ ಕುಡಿಯಬೇಕಾದ 5 ಉತ್ತಮ ಡಿಟಾಕ್ಸ್ ಪಾನೀಯಗಳು

ಜೀರಿಗೆ ನೀರು: ಜೀರಿಗೆ ನೀರು ಉತ್ಕರ್ಷಣ ನಿರೋಧಕಗಳು, ಆಂಟಿ ಮೈಕ್ರೊಬಿಯಲ್ ಔಷಧೀಯ ಗುಣಗಳನ್ನು ಹೊಂದಿದ್ದು, ಇದು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಮತ್ತು ಇದರ ಸೇವನೆಯಿಂದ ಚಯಾಪಚಯಕ್ರಿಯೆಯು ವೇಗಗೊಳ್ಳುತ್ತದೆ.  ಇದಕ್ಕಾಗಿ ರಾತ್ರಿ   1 ಚಮಚ ಜೀರಿಗೆಯನ್ನು ಒಂದು ಲೋಟ ನೀರಿನಲ್ಲಿ ಹಾಕಿ ನೆನೆಸಿಡಿ , ಮರುದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಜೀರಿಗೆ ನೀರನ್ನು  ಸೇವನೆ ಮಾಡಿ.

ಗ್ರೀನ್ ಟೀ: ಗ್ರೀನ್ ಟೀ ಕೂಡಾ ಒಂದು ಉತ್ತಮ ಡಿಟಾಕ್ಸ್ ಪಾನೀಯವಾಗಿದೆ. ಇದು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು, ಇದು ದೇಹದಿಂದ ವಿಷವನ್ನು ಹೊರಹಾಕುವ ಕೆಲಸವನ್ನು ಮಾಡುತ್ತದೆ. ಅಲ್ಲದೆ ಇದು ಚಯಾಪಚಯಕ್ರಿಯೆಯನ್ನು  ವೇಗಗೊಳಿಸಲು ಸಹ ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?