ಮಲಬದ್ಧತೆಯನ್ನು ಹೆಚ್ಚಿಸುವ 5 ಅಪಾಯಕಾರಿ ಅಂಶಗಳಿವು

Constipation: ದೀರ್ಘಕಾಲದ ಮಲಬದ್ಧತೆಗೆ ಹಲವು ವಿಚಾರಗಳು ಕಾರಣವಾಗುತ್ತವೆ. ಕೆಟ್ಟ ಅಭ್ಯಾಸಗಳನ್ನು ಗುರುತಿಸುವುದು ಮತ್ತು ಪರಿಹರಿಸುವುದು ಮಲಬದ್ಧತೆಯನ್ನು ತಡೆಗಟ್ಟುವಲ್ಲಿ ಮತ್ತು ನಿವಾರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಮಲಬದ್ಧತೆಯನ್ನು ಹೆಚ್ಚಿಸುವ 5 ಅಪಾಯಕಾರಿ ಅಂಶಗಳಿವು
ಮಲಬದ್ಧತೆ
Follow us
ಸುಷ್ಮಾ ಚಕ್ರೆ
|

Updated on: Jan 01, 2024 | 2:10 PM

ಮಲಬದ್ಧತೆಯೆಂಬುದು ಜೀವನಶೈಲಿಯ ಅಭ್ಯಾಸಗಳು ಸೇರಿದಂತೆ ವಿವಿಧ ಅಂಶಗಳಿಂದ ಉಂಟಾಗಬಹುದಾದ ಜೀರ್ಣಕಾರಿ ಸಮಸ್ಯೆಯಾಗಿದೆ. ಕೆಲವೊಮ್ಮೆ ತಾತ್ಕಾಲಿಕವಾಗಿ ಮಲಬದ್ಧತೆ ಉಂಟಾಗುವುದು ಸಾಮಾನ್ಯ. ಆದರೆ, ಇದೇ ಪುನರಾವರ್ತಿತವಾದರೆ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ದೀರ್ಘಕಾಲದ ಮಲಬದ್ಧತೆಗೆ ಹಲವು ವಿಚಾರಗಳು ಕಾರಣವಾಗುತ್ತವೆ. ಕೆಟ್ಟ ಅಭ್ಯಾಸಗಳನ್ನು ಗುರುತಿಸುವುದು ಮತ್ತು ಪರಿಹರಿಸುವುದು ಮಲಬದ್ಧತೆಯನ್ನು ತಡೆಗಟ್ಟುವಲ್ಲಿ ಮತ್ತು ನಿವಾರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಮಲಬದ್ಧತೆಗೆ ಕಾರಣವಾಗಬಹುದಾದ 5 ಅಭ್ಯಾಸಗಳ ಬಗ್ಗೆ ಮಾಹಿತಿ ಇಲ್ಲಿದೆ.

ಅಸಮರ್ಪಕ ನೀರಿನ ಸೇವನೆ:

ನಮ್ಮ ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯ ನಿರ್ವಹಿಸಲು ನೀರಿನ ಅಗತ್ಯವಿದೆ. ನಮ್ಮ ದೇಹ ನಿರ್ಜಲೀಕರಣಗೊಂಡಾಗ ಮಲ ಒಣಗಿ, ಗಟ್ಟಿಯಾಗುತ್ತದೆ. ಇದು ಮಲಬದ್ಧತೆಗೆ ಕಾರಣವಾಗುತ್ತದೆ. ದಿನವಿಡೀ ಸಾಕಷ್ಟು ನೀರು ಕುಡಿಯುವ ಮೂಲಕ ಮಲಬದ್ಧತೆಯನ್ನು ನಿವಾರಿಸಿಕೊಳ್ಳಬಹುದು. ಸಕ್ಕರೆ ಪಾನೀಯಗಳು, ಕಾಫಿ ಮತ್ತು ಆಲ್ಕೋಹಾಲ್ ಸೇವನೆಯನ್ನು ಆದಷ್ಟೂ ಕಡಿಮೆ ಮಾಡಿ. ಇದು ನಿರ್ಜಲೀಕರಣಕ್ಕೆ ಕಾರಣವಾಗಬಹುದು.

ಇದನ್ನೂ ಓದಿ: Home remedies: ಮಲಬದ್ಧತೆಯ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಇಲ್ಲಿದೆ ನೈಸರ್ಗಿಕ ಮನೆಮದ್ದು

ಕಡಿಮೆ ಫೈಬರ್ ಅಂಶವಿರುವ ಆಹಾರ ಸೇವನೆ:

ಕಡಿಮೆ ಫೈಬರ್ ಅಂಶವಿರುವ ಆಹಾರವು ಮಲಬದ್ಧತೆಗೆ ಸಾಮಾನ್ಯ ಕಾರಣವಾಗಿದೆ. ಫೈಬರ್ ಮಲಕ್ಕೆ ಸೇರಿದಾಗ ಅದನ್ನು ಮೃದುಗೊಳಿಸುತ್ತದೆ. ಇದರಿಂದ ಮಲವಿಸರ್ಜನೆ ಸರಾಗವಾಗುತ್ತದೆ. ಸಂಸ್ಕರಿಸಿದ ಆಹಾರಗಳು, ಸಂಸ್ಕರಿಸಿದ ಧಾನ್ಯಗಳು, ಹಣ್ಣುಗಳು ಮತ್ತು ತರಕಾರಿಗಳ ಕೊರತೆಯು ದೇಹದಲ್ಲಿ ಫೈಬರ್ ಕೊರತೆಗೆ ಕಾರಣವಾಗಬಹುದು. ಆರೋಗ್ಯಕರ ಜೀರ್ಣಕ್ರಿಯೆಯನ್ನು ಹೆಚ್ಚಿಸಲು ನಿಮ್ಮ ಆಹಾರದಲ್ಲಿ ಧಾನ್ಯಗಳು, ಹಣ್ಣುಗಳು, ತರಕಾರಿಗಳು ಮತ್ತು ದ್ವಿದಳ ಧಾನ್ಯಗಳಂತಹ ಫೈಬರ್-ಭರಿತ ಆಹಾರಗಳನ್ನು ಸೇರಿಸಿ.

ಜಡ ಜೀವನಶೈಲಿ:

ಸೋಮಾರಿಯಾಗಿರುವುದು, ಜಡವಾದ ಜೀವನಶೈಲಿಯಿಂದ ಜೀರ್ಣಾಂಗ ವ್ಯವಸ್ಥೆಯು ನಿಧಾನವಾಗುತ್ತದೆ. ಇದರಿಂದ ಮಲಬದ್ಧತೆ ಉಂಟಾಗಬಹುದು. ನಿಯಮಿತ ವ್ಯಾಯಾಮವು ಮಲ ವಿಸರ್ಜನೆಯನ್ನು ಸರಾಗಗೊಳಿಸುತ್ತದೆ. ವಾರದ ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ಮಧ್ಯಮ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರಯತ್ನಿಸಿ. ವಾಕಿಂಗ್, ಜಾಗಿಂಗ್ ಅಥವಾ ಯೋಗದಂತಹ ಸರಳ ಚಟುವಟಿಕೆಗಳು ಮಲಬದ್ಧತೆ ನಿವಾರಣೆಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ರಾಮಲಲ್ಲಾನ ವಿಗ್ರಹ ಫೈನಲ್, ಈ ಮೂರ್ತಿ ನಿಮ್ಮೊಂದಿಗೆ ಮಾತನಾಡುತ್ತದೆ: ಬಿಮಲೇಂದ್ರ

ಒತ್ತಡ ಮತ್ತು ಆತಂಕ:

ಒತ್ತಡ ಮತ್ತು ಆತಂಕವು ಮಲಬದ್ಧತೆಯನ್ನು ಉಲ್ಬಣಗೊಳಿಸಬಹುದು. ಹೆಚ್ಚಿನ ಒತ್ತಡದ ಮಟ್ಟಗಳು ಜೀರ್ಣಾಂಗ ವ್ಯವಸ್ಥೆಯ ನೈಸರ್ಗಿಕ ಲಯವನ್ನು ಅಡ್ಡಿಪಡಿಸಬಹುದು, ಜೀರ್ಣಕ್ರಿಯೆಯನ್ನು ನಿಧಾನಗೊಳಿಸಬಹುದು. ವಿಶ್ರಾಂತಿ ತಂತ್ರಗಳು, ಸಾವಧಾನತೆ ಮತ್ತು ಜೀವನಶೈಲಿಯ ಹೊಂದಾಣಿಕೆಗಳ ಮೂಲಕ ಒತ್ತಡವನ್ನು ನಿರ್ವಹಿಸುವುದು ಜೀರ್ಣಕಾರಿ ಆರೋಗ್ಯದ ಮೇಲೆ ಪಾಸಿಟಿವ್ ಪರಿಣಾಮ ಬೀರುತ್ತದೆ.

ಪ್ರಚೋದನೆಯನ್ನು ನಿರ್ಲಕ್ಷಿಸುವುದು:

ಮಲ ವಿಸರ್ಜನೆ ಮಾಡಲು ಅರ್ಜೆಂಟ್ ಆದಾಗ ಟಾಯ್ಲೆಟ್​ಗೆ ಹೋಗದಿರುವುದು ಮಲಬದ್ಧತೆಗೆ ಕಾರಣವಾಗಬಹುದು. ದೇಹವು ಮಲ ವಿಸರ್ಜಿಸುವ ಅಗತ್ಯವನ್ನು ಸೂಚಿಸಿದಾಗ ತಕ್ಷಣವೇ ಪ್ರತಿಕ್ರಿಯಿಸುವುದು ಅತ್ಯಗತ್ಯ. ಇಲ್ಲವಾದರೆ ಇದು ಕೊಲೊನ್‌ನಲ್ಲಿ ಹೆಚ್ಚಿದ ನೀರಿನ ಹೀರಿಕೊಳ್ಳುವಿಕೆಗೆ ಕಾರಣವಾಗಬಹುದು. ಇದು ಗಟ್ಟಿಯಾದ ಮಲಕ್ಕೆ ಕಾರಣವಾಗುತ್ತದೆ. ದಿನವೂ ಒಂದೇ ಸಮಯದಲ್ಲಿ ಮಲ ವಿಸರ್ಜನೆ ಮಾಡುವ ಅಭ್ಯಾಸ ರೂಢಿಸಿಕೊಂಡರೆ ನಿಮ್ಮ ದೇಹ ಅದಕ್ಕೆ ಹೊಂದಿಕೊಳ್ಳುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್