AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮಹಿಳೆಯರು ದಿನಕ್ಕೆ ಎಷ್ಟು ಗಂಟೆ ನಿದ್ದೆ ಮಾಡ್ಬೇಕು? ಸಂಶೋಧಕರು ಹೇಳುವುದೇನು?

ಪಿಟ್ಸ್‌ಬರ್ಗ್ ವಿಶ್ವವಿದ್ಯಾನಿಲಯದಲ್ಲಿ ನಡೆಸಲಾದ ಸಂಶೋಧನೆಯೊಂದರ ಪ್ರಕಾರ ರಾತ್ರಿಯಲ್ಲಿ 7 ಗಂಟೆಗಳ ಕಾಲ ನಿದ್ರೆ ಮಾಡದಿದ್ದರೆ ಅಥವಾ ನಿದ್ರಾಹೀನತೆಯು ಮಹಿಳೆಯರಲ್ಲಿ ಹೃದಯಾಘಾತದ ಅಪಾಯವನ್ನು 70 ಪ್ರತಿಶತದಷ್ಟು ಹೆಚ್ಚಿಸುತ್ತದೆ ಎಂದು ಸಂಶೋಧಕರು ಬಹಿರಂಗಪಡಿಸಿದ್ದಾರೆ.

Health Tips: ಮಹಿಳೆಯರು ದಿನಕ್ಕೆ ಎಷ್ಟು ಗಂಟೆ ನಿದ್ದೆ ಮಾಡ್ಬೇಕು? ಸಂಶೋಧಕರು ಹೇಳುವುದೇನು?
ಅಕ್ಷತಾ ವರ್ಕಾಡಿ
|

Updated on: Mar 02, 2024 | 12:15 PM

Share

ಮಹಿಳೆಯರು ಸಾಕಷ್ಟು ನಿದ್ದೆ ಮಾಡದಿದ್ದರೆ, ಇದೇ ಪರಿಸ್ಥಿತಿ ಹಲವಾರು ದಿನಗಳವರೆಗೆ ಮುಂದುವರಿದರೆ, ಶೀಘ್ರದಲ್ಲೇ ಹೃದ್ರೋಗಕ್ಕೆ ತುತ್ತಾಗುವ ಸಾಧ್ಯತೆಯಿದೆ ಎಂದು ಹೊಸ ಸಂಶೋಧನೆಯೊಂದು ತಿಳಿಸಿದೆ. ಇಷ್ಟು ಮಾತ್ರವಲ್ಲದೆ ಪಿಟ್ಸ್‌ಬರ್ಗ್ ವಿಶ್ವವಿದ್ಯಾನಿಲಯದಲ್ಲಿ ನಡೆಸಲಾದ ಈ ಸಂಶೋಧನೆಯೊಂದರ ಪ್ರಕಾರ ರಾತ್ರಿಯಲ್ಲಿ 7 ಗಂಟೆಗಳ ಕಾಲ ನಿದ್ರೆ ಮಾಡದಿದ್ದರೆ, ಆಕೆಗೆ ಹೃದಯಾಘಾತ ಆಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ನಿದ್ರಾಹೀನತೆಯು ಮಹಿಳೆಯರಲ್ಲಿ ಈ ಅಪಾಯವನ್ನು 70 ಪ್ರತಿಶತದಷ್ಟು ಹೆಚ್ಚಿಸುತ್ತದೆ ಎಂದು ಸಂಶೋಧಕರು ಬಹಿರಂಗಪಡಿಸಿದ್ದಾರೆ.

42 ರಿಂದ 52 ವರ್ಷ ವಯಸ್ಸಿನ 2,517 ಮಹಿಳೆಯರ ಮೇಲೆ ವಿಜ್ಞಾನಿಗಳು ಈ ಸಂಶೋಧನೆ ನಡೆಸಿದ್ದಾರೆ. ಅವರನ್ನು 22 ವರ್ಷಗಳ ಕಾಲ ಟ್ರ್ಯಾಕ್ ಮಾಡಲಾಗಿತ್ತು. ಅವರು ಎಷ್ಟು ಹೊತ್ತು ಮಲಗುತ್ತಾರೆ ಮತ್ತು ಅವರ ಹೃದಯ ಸ್ಥಿತಿಯನ್ನು ಗಣನೆಗೆ ತೆಗೆದುಕೊಳ್ಳಲಾಗಿತ್ತು. ಆಗಾಗ್ಗೆ ನಿದ್ರಾ ಭಂಗವನ್ನು ಹೊಂದಿರುವ ನಾಲ್ಕು ಮಹಿಳೆಯರಲ್ಲಿ ಒಬ್ಬರಿಗೆ ಹೃದ್ರೋಗದ ಅಪಾಯವು ಶೇಕಡಾ 70 ರಷ್ಟು ಹೆಚ್ಚಾಗುತ್ತದೆ ಎಂದು ಸಂಶೋಧನೆಯು ಕಂಡುಹಿಡಿದಿದೆ. ಅದೇ ಸಮಯದಲ್ಲಿ, 5 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವ ಮಹಿಳೆಯರಲ್ಲಿ, 72 ಪ್ರತಿಶತದಷ್ಟು ಹೃದಯಾಘಾತಗಳು, ಪಾರ್ಶ್ವವಾಯು, ಹೃದಯ ವೈಫಲ್ಯ ಮತ್ತು ಅಪಧಮನಿಯ ಕಾಯಿಲೆಗಳು ಕಂಡುಬಂದಿವೆ.

ಇದನ್ನೂ ಓದಿ: Hair Care: ಸ್ಟ್ರೈಟನರ್ ಇಲ್ಲದೆ ಕೂದಲನ್ನು ಸ್ಟ್ರೈಟ್ ಮಾಡುವುದು ಹೇಗೆ?

ನಿದ್ರೆಯ ಕೊರತೆಯು ಅಧಿಕ ರಕ್ತದೊತ್ತಡ, ಇನ್ಸುಲಿನ್ ಸಮಸ್ಯೆಗಳು ಮತ್ತು ಮಹಿಳೆಯರಲ್ಲಿ ರಕ್ತನಾಳಗಳಿಗೆ ಹಾನಿಯಾಗಬಹುದು ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇದಲ್ಲದೇ ನಿದ್ರೆಯ ಕೊರತೆಯು ಮಹಿಳೆಯರಲ್ಲಿ ಸ್ಥೂಲಕಾಯತೆಯ ಅಪಾಯವನ್ನು ಹೆಚ್ಚಿಸುತ್ತದೆ.

ನಿದ್ರಾಹೀನತೆಯ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆ?

  • ತಜ್ಞರ ಪ್ರಕಾರ, ದೇಹ ಮತ್ತು ಮನಸ್ಸನ್ನು ಶಾಂತವಾಗಿಡಲು ಧ್ಯಾನ, ಮಂತ್ರ ಮತ್ತು ಯೋಗವನ್ನು ಅಭ್ಯಾಸ ಮಾಡಬೇಕು.
  • ವಾರಕ್ಕೆ 150 ನಿಮಿಷಗಳ ವ್ಯಾಯಾಮ ಮಾಡುವುದು ನಿದ್ರಾಹೀನತೆಯನ್ನು ನಿವಾರಿಸುತ್ತದೆ.
  • ಒತ್ತಡದಿಂದ ನಿಮಗೆ ನಿದ್ರೆ ಬರದಿದ್ದರೆ ಸ್ವಯಂ ಮಸಾಜ್ ಮೂಲಕ ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು.
  • ನಿಮ್ಮ ಆಹಾರದಲ್ಲಿ ಮೆಗ್ನೀಸಿಯಮ್ ಸಮೃದ್ಧವಾಗಿರುವ ಆಹಾರವನ್ನು ಸೇರಿಸಿ. ಮಲಗುವ ಸಮಯಕ್ಕೆ 2 ಗಂಟೆಗಳ ಮೊದಲು ಊಟ ಮಾಡಿ. ಚಹಾ ಮತ್ತು ಕಾಫಿಯನ್ನು ತಪ್ಪಿಸಿ.
  • ಮಲಗುವ 2 ಗಂಟೆಗಳ ಮೊದಲು ಮೊಬೈಲ್​​ ದೂರವಿಡಿ, ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ ಮತ್ತು ಕೋಣೆಯಲ್ಲಿ ದೀಪಗಳನ್ನು ಆಫ್ ಮಾಡಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ