ಪ್ರತಿದಿನ ಪಪ್ಪಾಯಿ ಹಣ್ಣಿನ ಜ್ಯೂಸ್ ಸೇವಿಸಿದರೆ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ?
ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ ಎನ್ನಲಾಗಿದೆ ಈ ಹಣ್ಣಿನಲ್ಲಿ ವಿಟಮಿನ್ ಎ, ಕ್ಯಾಲ್ಸಿಯಂ, ಫೈಬರ್, ಮೆಗ್ನೀಸಿಯಮ್, ಕಬ್ಬಿಣ, ಆಂಟಿ-ಆಕ್ಸಿಡೆಂಟ್ ಅಂಶಗಳು ಹೇರಳವಾಗಿದೆ. ಈ ಪಪ್ಪಾಯಿ ಹಣ್ಣನ್ನು ಹಾಗೆಯೂ ತಿನ್ನಬಹುದು, ಇಲ್ಲದಿದ್ದರೆ ಜ್ಯೂಸ್ ಮಾಡಿ ಕುಡಿಯುವುದರಿಂದಲೂ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿದಿನವು ಈ ಪಪ್ಪಾಯಿ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ.
ಪಪ್ಪಾಯಿ ಅಥವಾ ಪರಂಗಿ ಹಣ್ಣು ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ. ಎಲ್ಲಾ ಋತುವಿನಲ್ಲಿಯೂ ಸಿಗುವ ಹಣ್ಣಾದ ಕಾರಣ ಈ ಹಣ್ಣನ್ನು ಕಡೆಗಣಿಸುವವರೇ ಹೆಚ್ಚು. ಆದರೆ ಈ ಪಪ್ಪಾಯಿ ಹಣ್ಣು ನೈಸರ್ಗಿಕವಾದ ಸಿಹಿ ಅಂಶವನ್ನು ಹೊಂದಿದ್ದು, ಮಕ್ಕಳಿಂದ ಹಿಡಿದು ದೊಡ್ಡವರೆಗೂ ಎಲ್ಲರೂ ಕೂಡ ಇಷ್ಟ ಪಡುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಈ ಹಣ್ಣು ಅಷ್ಟೇನು ದುಬಾರಿಯಿಲ್ಲದಿದ್ದರೂ ಕೊಂಡುಕೊಳ್ಳುವವರ ಸಂಖ್ಯೆ ಸ್ವಲ್ಪ ಕಡಿಮೆ ಎನ್ನಬಹುದು. ಆದರೆ ಈ ಪಪ್ಪಾಯಿ ಹಣ್ಣನ್ನು ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಅಧಿಕವಾಗಿದೆ.
ಪಪ್ಪಾಯಿ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ಆಗುವ ಲಾಭಗಳು
* ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ: ಪ್ರತಿನಿತ್ಯ ಪಪ್ಪಾಯಿ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಚರ್ಮದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸತ್ತ ಜೀವಕೋಶಗಳನ್ನು ತೊಡೆದುಹಾಕುವ ಮೂಲಕ ಮೊಡವೆಗಳು, ಮುಖದ ಮೇಲಿನ ಗುಳ್ಳೆಗಳು ಹಾಗೂ ಸುಕ್ಕುಗಟ್ಟುವಿಕೆಯಂತಹ ಸಮಸ್ಯೆಗಳನ್ನು ದೂರ ಮಾಡುತ್ತದೆ.
* ರೋಗ ನಿರೋಧಕ ಶಕ್ತಿ ಹೆಚ್ಚಿಸುವಿಕೆ: ಪಪ್ಪಾಯಿ ಹಣ್ಣಿನಲ್ಲಿ ವಿಟಮಿನ್ ಸಿ ಅಂಶವು ಹೇರಳವಾಗಿರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಸೋಂಕುಗಳು ಬಾರದಂತೆ ತಡೆಯುತ್ತದೆ.
* ಹೃದಯದ ಆರೋಗ್ಯವನ್ನು ಕಾಪಾಡುತ್ತದೆ : ಪಪ್ಪಾಯಿಯಲ್ಲಿ ಪೊಟ್ಯಾಸಿಯಮ್ ಜೊತೆಗೆ ಆಂಟಿ-ಆಕ್ಸಿಡೆಂಟ್ ಗಳಿದ್ದು ಈ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಿ, ಹೃದಯ ಸಂಬಂಧಿ ಕಾಯಿಲೆಗಳು ಬಾರದಂತೆ ನೋಡಿಕೊಳ್ಳುತ್ತದೆ.
ಇದನ್ನೂ ಓದಿ:ಗರ್ಭಾವಸ್ಥೆಯಲ್ಲಿ ಪಪ್ಪಾಯಿ ತಿನ್ನಬಾರದೇ? ತಜ್ಞರು ಹೇಳುವುದೇನು?
* ಕರುಳಿನ ಆರೋಗ್ಯದ ರಕ್ಷಣೆ: ಪಪ್ಪಾಯಿ ಹಣ್ಣಿನ ರಸವನ್ನು ಕುಡಿಯುವುದರಿಂದ ಜಂತುಹುಳುವಿನ ಸಮಸ್ಯೆಯನ್ನು ನಿವಾರಣೆಯಾಗುತ್ತದೆ. ಅದಲ್ಲದೇ ಹೊಟ್ಟೆಯಲ್ಲಿನ ಹುಣ್ಣಿನ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.
* ಕೂದಲು ಬೆಳವಣಿಗೆಗೆ ಸಹಾಯಕಾರಿ : ಪಪ್ಪಾಯಿ ಹಣ್ಣಿನ ರಸವನ್ನು ದಿನನಿತ್ಯ ಸೇವನೆ ಮಾಡುವುದರಿಂದ ಕೂದಲು ಉದುರುವಿಕೆ ಸೇರಿದಂತೆ ಇನ್ನಿತ್ತರ ಸಮಸ್ಯೆಗಳು ದೂರವಾಗುತ್ತದೆ. ಕೂದಲು ಬೆಳವಣಿಗೆಗೂ ಸಹಾಯಕವಾಗಿದೆ.
* ತೂಕ ನಷ್ಟಕ್ಕೂ ಪ್ರಯೋಜನಕಾರಿ : ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬೇಕೆನ್ನುವವರು ಪ್ರತಿದಿನ ಪಪ್ಪಾಯಿ ಹಣ್ಣನ್ನು ಸೇವಿಸಿದರೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಹದಿನೈದು ದಿನಗಳವರೆಗೆ ಈ ಜ್ಯೂಸ್ ಸೇವಿಸಿದರೆ ತೂಕದಲ್ಲಿ ವ್ಯತ್ಯಾಸ ಕಾಣಬಹುದು.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ