AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ದಾಳಿಂಬೆ ಹಣ್ಣು ತಿನ್ನುವುದರಿಂದ ಲಭಿಸುವ ಪ್ರಯೋಜನಗಳೇನು ಗೊತ್ತಾ?

ವಿಟಮಿನ್ ಸಿ, ಪೊಟ್ಯಾಸಿಯಮ್, ಫೈಬರ್ ಮತ್ತು ವಿವಿಧ ಉತ್ಕರ್ಷಣ ನಿರೋಧಕಗಳು ಸೇರಿದಂತೆ ಹಲವಾರು ಪೋಷಕಾಂಶಗಳಿಂದ ಕೂಡಿರುವ ದಾಳಿಂಬೆ ಹಣ್ಣು ರುಚಿಕರ ಮಾತ್ರವಲ್ಲ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ. ಅದರಲ್ಲೂ ಈ ಹಣ್ಣನ್ನು ಪ್ರತಿನಿತ್ಯ ಸೇವನೆ ಮಾಡುವುದರಿಂದ ದೇಹ ಮತ್ತು ಆರೋಗ್ಯದಲ್ಲಿ ಹಲವಾರು ಸಕಾರಾತ್ಮಕ ಬದಲಾವಣೆಗಳು ಸಂಭವಿಸುತ್ತಂತೆ. ಹಾಗಿದ್ದರೆ ಪ್ರತಿದಿನ ದಾಳಿಂಬೆ ಹಣ್ಣು ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ಪ್ರತಿದಿನ ದಾಳಿಂಬೆ ಹಣ್ಣು ತಿನ್ನುವುದರಿಂದ ಲಭಿಸುವ ಪ್ರಯೋಜನಗಳೇನು ಗೊತ್ತಾ?
ದಾಳಿಂಬೆ ಹಣ್ಣಿನ ಪ್ರಯೋಜನImage Credit source: Unsplash
ಮಾಲಾಶ್ರೀ ಅಂಚನ್​
|

Updated on: Mar 17, 2026 | 7:34 PM

Share

ಹಣ್ಣುಗಳು ನಮ್ಮ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ ಸಣ್ಣ ಸಣ್ಣ ಮಾಣಿಕ್ಯದಂತೆ ಕೆಂಪು ಬೀಜಗಳನ್ನು ಹೊಂದಿರುವ ದಾಳಿಂಬೆ ಹಣ್ಣು (pomegranate) ಪೋಷಕಾಂಶಗಳು ಮತ್ತು ಆರೋಗ್ಯ ಪ್ರಯೋಜನಗಳ ಶಕ್ತಿ ಕೇಂದ್ರ ಎಂದಿನಿಸಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ನಾರಿನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್, ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ತುಂಬಾನೇ ಸಹಕಾರಿಯಾಗಿದೆ.  ಅದರಲ್ಲೂ ಪ್ರತಿದಿನ ದಾಳಿಂಬೆ ತಿನ್ನುವುದರಿಂದ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಂತೆ. ಹಾಗಿದ್ರೆ ಪ್ರತಿನಿತ್ಯ ಒಂದು ಬೌಲ್‌ ದಾಳಿಂಬೆ ಹಣ್ಣು ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ಪ್ರತಿದಿನ ದಾಳಿಂಬೆ ತಿನ್ನುವುದರಿಂದ ಲಭಿಸುವ  ಪ್ರಯೋಜನಗಳನ್ನು ತಿಳಿಯಿರಿ:

ರಕ್ತಹೀನತೆಯನ್ನು ನಿವಾರಿಸುತ್ತದೆ:  ದಾಳಿಂಬೆಯಲ್ಲಿ ಕಬ್ಬಿಣಾಂಶ ಹೇರಳವಾಗಿದೆ. ಇದು ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ, ಇದು ರಕ್ತಹೀನತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ಮುಖದ ನೈಸರ್ಗಿಕ ಹೊಳಪನ್ನು ಹೆಚ್ಚಿಸುತ್ತದೆ.

ಉರಿಯೂತವನ್ನು ಕಡಿಮೆ ಮಾಡುತ್ತದೆ: ದಾಳಿಂಬೆಯು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.  ಇದನ್ನು ತಿನ್ನುವುದರಿಂದ ಸಂಧಿವಾತ ಮತ್ತು ದೀರ್ಘಕಾಲದ ಉರಿಯೂತದಿಂದ ಪರಿಹಾರ ಸಿಗುತ್ತದೆ. ಇದಲ್ಲದೆ, ದಾಳಿಂಬೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ, ಇದರಿಂದಾಗಿ ಉರಿಯೂತ ಕಡಿಮೆಯಾಗುತ್ತದೆ.

ಹೃದಯಕ್ಕೆ ಪ್ರಯೋಜನಕಾರಿ: ದಾಳಿಂಬೆ ಹೃದಯ ಸಂಬಂಧಿ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಬಹಳ ಸಹಾಯಕವಾಗಿದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಪಾಲಿಫಿನಾಲ್‌ಗಳು ಕೊಲೆಸ್ಟ್ರಾಲ್‌ ಕಡಿಮೆ ಮಾಡಲು, ಆರೋಗ್ಯಕರ ರಕ್ತನಾಳಗಳನ್ನು ಕಾಪಾಡಿಕೊಳ್ಳಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.  ಅಲ್ಲದೆ ಇದು ಹೃದಯಾಘಾತದ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ: ದಾಳಿಂಬೆಯಲ್ಲಿ ಉರಿಯೂತ ನಿವಾರಕ ಗುಣಗಳು ಮತ್ತು ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ಬಿಳಿ ರಕ್ತ ಕಣಗಳ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇವುಗಳನ್ನು ನಿಯಮಿತವಾಗಿ ತಿನ್ನುವುದರಿಂದ ಶೀತ, ಕೆಮ್ಮು, ನೆಗಡಿಯಂತಹ ಸಾಮಾನ್ಯ ಸೋಂಕುಗಳನ್ನು ತಡೆಗಟ್ಟಬಹುದು.

ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ:  ದಾಳಿಂಬೆಯು ದೇಹಕ್ಕೆ ಅಗತ್ಯವಿರುವ 45% ಫೈಬರ್ ಅನ್ನು ಹೊಂದಿದ್ದು, ಇದು ಮಲಬದ್ಧತೆಯನ್ನು ನಿವಾರಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಸ್ಮರಣಶಕ್ತಿ ಮತ್ತು ಮೆದುಳಿಗೆ ಒಳ್ಳೆಯದು:  ಅಧ್ಯಯನಗಳ ಪ್ರಕಾರ, ದಾಳಿಂಬೆಯನ್ನು ಪ್ರತಿದಿನ ತಿನ್ನುವುದರಿಂದ ಸ್ಮರಣಶಕ್ತಿ ಸುಧಾರಿಸುತ್ತದೆ ಮತ್ತು ವಯಸ್ಸಾದಂತೆ ಸಂಭವಿಸುವ ಆಲ್ಝೈಮರ್ನಂತಹ ಕಾಯಿಲೆಗಳಿಂದ ರಕ್ಷಿಸುತ್ತದೆ. ಇದು ಮೆದುಳಿನ ಕೋಶಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ.

ಇದನ್ನೂ ಓದಿ: ಅಡುಗೆಯ ರುಚಿ ಹೆಚ್ಚಿಸುವ ಕೊತ್ತಂಬರಿ ಸೊಪ್ಪು ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿಯಂತೆ‌

ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ:  ದಾಳಿಂಬೆಯಲ್ಲಿರುವ ವಯಸ್ಸಾಗುವಿಕೆಯನ್ನು ತಡೆಯುವ ಗುಣಗಳು ಚರ್ಮದ ಕೋಶಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ, ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ, ಸುಕ್ಕುಗಳನ್ನು ನಿವಾರಿಸುತ್ತದೆ.  ಮತ್ತು ಚರ್ಮವನ್ನು ಆರೋಗ್ಯಕರ, ತಾಜಾವಾಗಿ ಕಾಣುವಂತೆ ಮಾಡುತ್ತದೆ.

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ: ದಾಳಿಂಬೆ ಸೇವನೆಯು ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹ ಇರುವವರಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.

ಶಕ್ತಿಯನ್ನು ಒದಗಿಸುತ್ತದೆ: ದಾಳಿಂಬೆಗಳು ಅನೇಕ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ಅವುಗಳು ಫ್ರಕ್ಟೋಸ್ ಮತ್ತು ಗ್ಲೂಕೋಸ್ ಅನ್ನು ಸಹ ಒಳಗೊಂಡಿರುತ್ತವೆ, ಇದು ತ್ವರಿತ ಶಕ್ತಿಯನ್ನು ನೀಡುತ್ತದೆ. ಆದ್ದರಿಂದ, ಪ್ರತಿದಿನ ಉಪಹಾರದ ಸಮಯದಲ್ಲಿ ದಾಳಿಂಬೆಯನ್ನು ಸೇವಿಸುವುದರಿಂದ ದಿನವಿಡೀ ಶಕ್ತಿಯನ್ನು ಕಾಪಾಡಿಕೊಳ್ಳಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ