ಸೇಬು ತಿನ್ನಲು ಸರಿಯದ ಸಮಯ ಯಾವುದು? ಇಲ್ಲಿದೆ ಮಾಹಿತಿ

Best Time To Eat Apple: ಸೇಬಿನಲ್ಲಿ ಹೇರಳವಾದ  ಜೀವಸತ್ವಗಳು, ಖನಿಜಗಳು ಮತ್ತು ಪೋಷಕಾಂಶಗಳು  ಕಂಡುಬರುತ್ತವೆ. ಆದ್ದರಿಂದಲೇ, ಆರೋಗ್ಯ ತಜ್ಞರು ಪ್ರತಿನಿತ್ಯ ಸೇಬನ್ನು ಸೇವನೆ ಮಾಡಬೇಕು ಎಂದು ಸಲಹೆಯನ್ನು ನೀಡುತ್ತಾರೆ.  ಸೇಬು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಆದರೆ ತಪ್ಪಾದ ಸಮಯದಲ್ಲಿ ಅದನ್ನು ಸೇವಿಸಿದರೆ, ಅದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರಬಹುದು. ಹಾಗಾಗಿ  ಸೇಬು ತಿನ್ನಲು ಸರಿಯಾದ ಸಮಯ ಯಾವುದು ಎಂಬುದರ ಬಗ್ಗೆ ತಿಳಿದುಕೊಳ್ಳುವುದು ಅತ್ಯಗತ್ಯ. 

ಸೇಬು ತಿನ್ನಲು ಸರಿಯದ ಸಮಯ ಯಾವುದು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 15, 2023 | 6:30 PM

ಸೇಬು ( Apple) ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವಂತಹ ಹಣ್ಣು. ಇದನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳೂ ದೊರೆಯುತ್ತದೆ. ದಿನನಿತ್ಯ ಸೇಬು ತಿನ್ನುವವರು ರೋಗಗಳಿಂದ ದೂರವಿರುತ್ತಾರೆ ಎಂದು  ವರದಿಗಳು ಹೇಳುತ್ತವೆ. ಪೋಷಕಾಂಶಗಳ ಹೊರತಾಗಿ ಅನೇಕ ಜೀವಸತ್ವಗಳು ಮತ್ತು ಖನಿಜಗಳು ಸೇಬಿನಲ್ಲಿ ಕಂಡುಬರುತ್ತದೆ.  ಆದ್ದರಿಂದ ಒಟ್ಟಾರೆ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಪ್ರತಿದಿನ ಒಂದಾದರೂ ಸೇಬನ್ನು ಸೇವನೆ ಮಾಡಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಆದರೆ ತಪ್ಪಾದ ಸಮಯದಲ್ಲಿ ಸೇಬನ್ನು ಸೇವನೆ ಮಾಡಿದರೆ ಅದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ಸೇಬು ತಿನ್ನಲು ಸರಿಯಾದ ಸಮಯದ ಯಾವುದು ಎಂಬುದರ ಬಗ್ಗೆ ತಿಳಿದಿರಬೇಕು.  ಹಾಗಾದರೆ ಸೇಬು ತಿನ್ನಲು ಸರಿಯಾದ ಸಮಯ ಯಾವುದು ಎಂಬುದನ್ನು ನೋಡೋಣ.

ಸೇಬು ತಿನ್ನಲು ಸರಿಯಾದ ಸಮಯ ಯಾವುದು:

ಆಯುರ್ವೇದದ ಪ್ರಕಾರ ಖಾಲಿ ಹೊಟ್ಟೆಯಲ್ಲಿ ಯಾವತ್ತೂ ಸೇಬು ತಿನ್ನಬಾರದು. ಏಕೆಂದರೆ ಖಾಲಿ ಹೊಟ್ಟೆಯಲ್ಲಿ ಸೇಬು ತಿಂದರೆ, ನೀವು ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆಯಿಂದ ಬಳಲುವ ಸಾಧ್ಯತೆ ಇರುತ್ತದೆ. ಹಾಗಾಗಿ  ಬೆಳಗ್ಗಿನ ಉಪಹಾರದ ನಂತರ ಸೇಬು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು.  ಈ ಸಮಯದಲ್ಲಿ ಸೇಬು ತಿನ್ನುವುದರಿಂದ ಅದು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸಲು ಸಹಾಯ ಮಾಡುತ್ತದೆ.
ಆದರೆ ಸಂಜೆಯ ನಂತರ ಅಪ್ಪಿತಪ್ಪಿಯೂ ಸೇಬನ್ನು ಸೇವಿಸಬೇಡಿ. ಸಂಜೆಯ ನಂತರ ಸೇಬು ತಿನ್ನುವುದರಿಂದ  ಅದು ಜೀರ್ಕ್ರಿಯೆಯ  ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರಬಹುದು. ಮತ್ತು ಮಲಬದ್ಧತೆ, ಗ್ಯಾಸ್ ಇತ್ಯಾದಿ ಸಮಸ್ಯೆಗಳು ಕೂಡಾ ನಿಮ್ಮನ್ನು ಬಾಧಿಸಬಹುದು.  ಹಾಗಾಗಿ ಅಪ್ಪಿತಪ್ಪಿಯೂ ರಾತ್ರಿಯ ಸಮಯದಲ್ಲಿ ಸೇಬನ್ನು ಸೇವಿಸಬೇಡಿ.  ಅಲ್ಲದೆ ಆಹಾರದ ಫೈಬರ್ ಸೇಬಿನಲ್ಲಿ ಕಂಡುಬರುತ್ತದೆ ಮತ್ತು ಇದು ಪೆಕ್ಟಿನ್ ಎಂಬ ಅಂಶವನ್ನು ಹೊಂದಿರುತ್ತದೆ. ಇದು ನಿದ್ರೆ ಅಥವಾ ಒತ್ತಡಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಉಂಟುಮಾಡಬಹುದು. ಆದ್ದರಿಂದ ಬೆಳಗ್ಗಿನ ಸಮಯದಲ್ಲಿ ಸೇಬು ತಿನುವುದು ಒಳ್ಳೆಯದು.

ಸೇಬು ತಿನ್ನುವುದು ಹೇಗೆ:

ಸೇಬು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಅಧಿಕ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡಲು ಸೇಬು ಸಹಾಯಕವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುವ ಫೈಬರ್ ಅಂಶವನ್ನು ಒಳಗೊಂಡಿರುತ್ತದೆ. ಇದಲ್ಲದೆ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅನೇಕ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ ಮತ್ತು ವಿಟಮಿನ್ ಕೆ ಜೀವಸತ್ವಗಳನ್ನು ಸಹ ಹೊಂದಿದೆ. ಹಾಗಾಗಿ ಇದು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ.  ಇಷ್ಟೆಲ್ಲಾ ಪ್ರಯೋಜನವನ್ನು ಹೊಂದಿರುವ ಸೇಬನ್ನು ಹೆಚ್ಚಿನವರು ಸಿಪ್ಪೆ ತೆಗೆದು ತಿನ್ನುತ್ತಾರೆ. ಸೇಬಿನ ಸಿಪ್ಪೆಯನ್ನು ಎಂದಿಗೂ ತೆಗೆಯಬೇಡಿ  ಏಕೆಂದರೆ ಅದು ಅನೇಕ ಅಗತ್ಯ ಪೋಷಕಾಂಶಗಳನ್ನು ಹೊಂದಿರುತ್ತದೆ. ಹಾಗಾಗಿ ಸಿಪ್ಪೆ ಸಮೇತ ಸೇಬನ್ನು ತಿನ್ನುವುದು ಒಳ್ಳೆಯದು. ಇದರ ಹೊರತಾಗಿ ಪ್ಯಾಕ್ ಮಾಡಿದ ಸೇಬಿನ ಜ್ಯೂಸ್ ಸೇವನೆಯನ್ನು  ತಪ್ಪಿಸಿ,  ಏಕೆಂದರೆ ಇದರಲ್ಲಿ ಹೆಚ್ಚಿನ  ಸಕ್ಕರೆ ಇರುತ್ತದೆ.
ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ