National Energy Conservation Day 2025: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸುವುದೇಕೆ ಗೊತ್ತಾ?

ಇಂಧನ ಸಂರಕ್ಷಣೆಯ ಮಹತ್ವ ಮತ್ತು ಶಕ್ತಿಯ ವಿವೇಚನಾಯುಕ್ತ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ಸಂರಕ್ಷಣೆ, ಸುಸ್ಥಿರ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಡಿಸೆಂಬರ್‌ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಹಿನ್ನೆಲೆಯ ಬಗ್ಗೆ ತಿಳಿಯೋಣ ಬನ್ನಿ.

National Energy Conservation Day 2025: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸುವುದೇಕೆ ಗೊತ್ತಾ?
ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನ
Image Credit source: vecteezy

Updated on: Dec 14, 2025 | 9:48 AM

ಇಂಧನವು ಅಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದ್ದು, ಇದರ ಅತಿಯಾದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುವುದಲ್ಲದೆ, ಮಿತಿಮೀರಿದ ಇಂಧನ ಬಳಕೆಯಿಂದ ಭವಿಷ್ಯದಲ್ಲಿ ಇಂಧನಗಳು ಸಿಗುವುದೇ ಕಷ್ಟಸಾಧ್ಯವಾಗಬಹುದು. ಈಗಲೇ ನೈಸರ್ಗಿಕ ಶಕ್ತಿ (Energy) ಮೂಲಗಳಾದ ಪೆಟ್ರೋಲಿಯಂ ಉತ್ಪನ್ನಗಳು, ಕಲ್ಲಿದ್ದಲು, ನೈಸರ್ಗಿಕ ಅನಿಲಗಳು ಭೂಮಿಯಲ್ಲಿ ಖಾಲಿಯಾಗುತ್ತಿದ್ದು, ಸುಸ್ಥಿರ ಭವಿಷ್ಯಕ್ಕಾಗಿ, ಇಂಧನ ಉಳಿತಾಯ ಮಾಡುವುದು ಮತ್ತು ಇಂಧನಗಳನ್ನು ವಿವೇಚನೆಯಿಂದ ಬಳಸುವುದು ಅತೀ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪರಿಸರವನ್ನು ಸಂರಕ್ಷಿಸುವ ಜೊತೆಗೆ ಇಂಧನ ಸಂರಕ್ಷಣೆಯ ಮಹತ್ವ ಮತ್ತು ಶಕ್ತಿಯ ವಿವೇಚನಾಯುಕ್ತ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ಡಿಸೆಂಬರ್‌ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಇತಿಹಾಸವೇನು?

ಇಂಧನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಭಾರತದಲ್ಲಿ ಮೊದಲ ಬಾರಿಗೆ 1991 ರಲ್ಲಿ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಯಿತು. ಕೇಂದ್ರ ವಿದ್ಯುತ್ ಸಚಿವಾಲಯದ ಅಡಿಯಲ್ಲಿ ರೂಪುಗೊಂಡ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ-BEE ಸಂಸ್ಥೆ 1991 ರಲ್ಲಿ ಇಂಧನ ಸಂರಕ್ಷಣಾ ದಿನವನ್ನು ಆಚರಿಸುವ ಮಹತ್ತರ ನಿರ್ಧಾರವನ್ನು ತೆಗೆದುಕೊಂಡಿತು. ಭಾರತ ಸರ್ಕಾರದ ಅಧೀನದಲ್ಲಿರುವ ಈ ಒಂದು ಸಾಂವಿಧಾನಿಕ ಸಂಸ್ಥೆ ಶಕ್ತಿಯ ಬಳಕೆಯನ್ನು ಕಡಿಮೆ ಮಾಡಲು ಹಲವಾರು ಕಾರ್ಯತಂತ್ರಗಳು ಮತ್ತು ನೀತಿಗಳನ್ನು ಜಾರಿಗೆ ತಂದಿದೆ. ಆ ಬಳಿಕ ಪ್ರತಿ ವರ್ಷವೂ ಸಹ ಭಾರತದಲ್ಲಿ ಡಿಸೆಂಬರ್‌ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಪರ್ವತ ದಿನಾಚರಣೆಯ ಉದ್ದೇಶವೇನು ಗೊತ್ತಾ?

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಮಹತ್ವವೇನು?

  • ಜನರಿಗೆ ಶಕ್ತಿಯ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಇಂಧನಗಳನ್ನು ಕಡಿಮೆ ಬಳಕೆ ಮಾಡುವ ಮೂಲಕ ಇಂಧನವನ್ನು ಹೇಗೆ ಸಂರಕ್ಷಿಸಬಹುದು ಎಂಬ ಬಗ್ಗೆ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ.
  • ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವು ಕೇವಲ ಸಾಂಕೇತಿಕ ಕಾರ್ಯಕ್ರಮವಲ್ಲ, ಬದಲಾಗಿ ಶಕ್ತಿಯ ವಿವೇಚನಾಯುಕ್ತ ಬಳಕೆಗೆ ಪ್ರಬಲ ಸಂದೇಶವಾಗಿದೆ. ಈ ದಿನದ ಮೂಲಕ, ಪ್ರತಿಯೊಂದು ಸಣ್ಣ ಪ್ರಯತ್ನವು ಶಕ್ತಿಯನ್ನು ಉಳಿಸಬಹುದು ಮತ್ತು ನಮ್ಮ ಭವಿಷ್ಯದ ಪೀಳಿಗೆಗೆ ಸಂಪನ್ಮೂಲಗಳ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದು ನಾಗರಿಕರಿಗೆ ಅರಿವು ಮೂಡಿಸಲಾಗುತ್ತದೆ.
  • ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವು ಇಂಧನ ಸಂರಕ್ಷಣೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ನಮ್ಮ ಜವಾಬ್ದಾರಿಯನ್ನು ನೆನಪಿಸುವ ಒಂದು ಪ್ರಮುಖ ಸಂದರ್ಭವಾಗಿದ್ದು, ಇದು ದೇಶದ ಪ್ರತಿಯೊಬ್ಬ ನಾಗರಿಕನು ಸಕ್ರಿಯ ಮತ್ತು ಜವಾಬ್ದಾರಿಯುತ ಪಾತ್ರವನ್ನು ವಹಿಸಲು ಪ್ರೇರೇಪಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ