ಸಾಂದರ್ಭಿಕ ಚಿತ್ರ
Image Credit source: Pinterest
ಹುಟ್ಟಿದ ಪ್ರತಿಯೊಂದು ಜೀವಿಯು ಸಹ ಸಾಯಲೇಬೇಕು. ಇದು ಪ್ರಕೃತಿಯ ನಿಯಮ ಕೂಡ ಹೌದು. ಪ್ರತಿನಿತ್ಯ ಒಂದಲ್ಲಾ ಒಂದು ಸಾವಿನ ಸುದ್ದಿಗಳು ಕೇಳಿ ಬರುತ್ತಲೇ ಇರುತ್ತವೆ. ಹೀಗೆ ಯಾರಾದರೂ ತೀರಿ ಹೋದರೆ ಅವರ ಅಂತ್ಯಕ್ರಿಯೆಯಲ್ಲಿ (funerals) ಭಾಗವಹಿಸುವ ಒಂದಷ್ಟು ಜನ ಬಿಳಿ ಬಣ್ಣದ ವಸ್ತ್ರವನ್ನು ಧರಿಸುತ್ತಾರೆ. ಸಾಮಾನ್ಯವಾಗಿ ಬಾಲಿವುಡ್ ತಾರೆಯರು ಮರಣ ಹೊಂದಿದವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಸಂದರ್ಭದಲ್ಲಿ ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದನ್ನು ನೀವು ನೋಡಿರುತ್ತೀರಿ ಅಲ್ವಾ. ಅಷ್ಟಕ್ಕೂ ಸಾವಿನ ಮನೆಯಲ್ಲಿ ಬಿಳಿ ಬಣ್ಣದ ಬಟ್ಟೆ ಧರಿಸುವುದೇಕೆ ಗೊತ್ತಾ? ಇದರ ಹಿಂದಿನ ಕಾರಣವೇನು ಎಂಬುದನ್ನು ತಿಳಿಯಿರಿ.
ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವವರು ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸೋದೇಕೆ?
ಅಂತ್ಯಕ್ರಿಯೆಯಲ್ಲಿ ಭಾಗವಹಿಸುವವರು ಬಿಳಿ ಬಣ್ಣದ ಬಟ್ಟೆಯನ್ನು ಧರಿಸುತ್ತಾರೆ. ಇದರ ಹಿಂದೆ ಧಾರ್ಮಿಕ ಮಹತ್ವ ಮತ್ತು ನಂಬಿಕೆಯೂ ಇದೆ. ಅಂತ್ಯಕ್ರಿಯೆಯ ಸಮಯದಲ್ಲಿ ಬಿಳಿ ಬಟ್ಟೆಗಳನ್ನು ಧರಿಸುವ ಸಂಪ್ರದಾಯವು ಸನಾತನ ಧರ್ಮದಲ್ಲಿ ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ.
- ಇದನ್ನು ಧರಿಸುವುದರ ಮುಖ್ಯ ಉದ್ದೇಶ ಮನಸ್ಸನ್ನು ಶಾಂತಗೊಳಿಸುವುದು ಮತ್ತು ದುಃಖದ ಸಮಯದಲ್ಲಿ ಕುಟುಂಬಕ್ಕೆ ಮಾನಸಿಕ ಬೆಂಬಲವನ್ನು ನೀಡುವುದು. ಹಾಗಾಗಿ ಶಾಂತಿಯನ್ನು ಕಾಪಾಡಿಕೊಳ್ಳಲು ಮತ್ತು ಕುಟುಂಬ ಸದಸ್ಯರು ದುಃಖವನ್ನು ಶಾಂತಿಯಿಂದ ನಿಭಾಯಿಸಲು ಪ್ರೋತ್ಸಾಹಿಸಲು ಜನರು ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಾಗ ಬಿಳಿ ಬಟ್ಟೆಗಳನ್ನು ಧರಿಸುತ್ತಾರೆ.
- ಸನಾತನ ಧರ್ಮದಲ್ಲಿ, ಬಿಳಿ ಬಣ್ಣವನ್ನು ಶಾಂತಿ, ಶುದ್ಧತೆ ಮತ್ತು ಸರಳತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅಂತ್ಯಕ್ರಿಯೆಗಳು ದುಃಖ ಮತ್ತು ಭಾವನಾತ್ಮಕ ನೋವಿನ ಸಮಯವಾಗಿದ್ದು, ಈ ಸಮಯದಲ್ಲಿ ಬಿಳಿ ಬಣ್ಣದ ಬಟ್ಟೆ ಧರಿಸುವುದು ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
- ಹಿಂದೂ ಧರ್ಮದಲ್ಲಿ, ಸತ್ಯ, ಜ್ಞಾನ ಮತ್ತು ಸದ್ಭಾವನೆಯನ್ನು ಜೀವನದ ಮೂರು ಪ್ರಮುಖ ಸದ್ಗುಣಗಳೆಂದು ಪರಿಗಣಿಸಲಾಗುತ್ತದೆ ಮತ್ತು ಬಿಳಿ ಬಣ್ಣವು ಅವುಗಳನ್ನು ಪ್ರತಿನಿಧಿಸುತ್ತದೆ. ಆದ್ದರಿಂದ ಈ ಬಣ್ಣದ ಬಟ್ಟೆಯನ್ನು ಧರಿಸುತ್ತಾರೆ.
- ಇನ್ನೊಂದು ಕಾರಣವೇನೆಂದರೆ, ಆತ್ಮವು ದೇಹವನ್ನು ತೊರೆದಾಗ, ಅದು ಮೋಕ್ಷದತ್ತ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ, ಆತ್ಮದ ಶಾಂತಿಯನ್ನು ಖಚಿತಪಡಿಸಿಕೊಳ್ಳಲು, ಮೃತರ ಆತ್ಮಕ್ಕೆ ಶಾಂತಿ ಸಿಗುವಂತೆ ನೋಡಿಕೊಳ್ಳಲು, ಶೋಕ ಸಮಯದಲ್ಲಿ ಶಾಂತಿಯುತ ಮತ್ತು ಪವಿತ್ರ ವಾತಾವರಣವನ್ನು ಕಾಪಾಡಿಕೊಳ್ಳಲು ಬಿಳಿ ಬಣ್ಣದ ಬಟ್ಟೆ ಧರಿಸಲಾಗುತ್ತದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ