Coriander Leaves Health Benefits: ಕೊತ್ತಂಬರಿ ಸೊಪ್ಪು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಕಾರಿಯೇ? ಇದರಲ್ಲಿದೆ ಅದ್ಭುತ ಆರೋಗ್ಯ ಪ್ರಯೋಜನ

ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿಯ ಕಾರಣದಿಂದ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಹೃದಯ ಸಂಬಂಧಿ ಕಾಯಿಲೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ.  ಹಣ್ಣು ಮತ್ತು ತರಕಾರಿಗಳಂತಹ ಸಮತೋಲಿತ ಆಹಾರಗಳ ಸೇವನೆ ಮೂಲಕ ಈ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಅಲ್ಲದೆ ಕೊತ್ತಂಬರಿ ಸೊಪ್ಪು ಕೂಡಾ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಕೆಲವು ವರದಿಗಳು ಹೇಳಿವೆ. ಕೊತ್ತಂಬರಿ ಸೊಪ್ಪು ನಿಜವಾಗಿಯೂ ತುಂಬಾ ಪ್ರಯೋಜನಕಾರಿಯೇ? ಇದರ ಬಗ್ಗೆ ವೈದ್ಯಕೀಯ ವಿಜ್ಞಾನ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

Coriander Leaves Health Benefits: ಕೊತ್ತಂಬರಿ ಸೊಪ್ಪು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಕಾರಿಯೇ? ಇದರಲ್ಲಿದೆ ಅದ್ಭುತ ಆರೋಗ್ಯ ಪ್ರಯೋಜನ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 29, 2023 | 6:12 PM

ಇತ್ತೀಚಿನ ದಿನಗಳಲ್ಲಿ ಜನರನ್ನು ಕಾಡುವ ಗಂಭೀರ ಕಾಯಿಲೆಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಕೂಡಾ ಒಂದು. ಕೊಲೆಸ್ಟ್ರಾಲ್ ರಕ್ತದಲ್ಲಿ ಕಂಡುಬರುವ ಮೇಣದಂತಹ ವಸ್ತುವಾಗಿದ್ದು,  ಆರೋಗ್ಯಕರ ಕೋಶಗಳನ್ನು ನಿರ್ಮಿಸಲು ನಮ್ಮ ದೇಹಕ್ಕೆ ಕೊಲೆಸ್ಟ್ರಾಲ್ ಅಗತ್ಯವಿದೆ. ಆದರೆ ಹೆಚ್ಚಿನ ಮಟ್ಟದ ಕೊಲೆಸ್ಟ್ರಾಲ್  ಹೃದಯದ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಇದು ಅಪಧಮನಿಗಳಲ್ಲಿ ಸಂಗ್ರಹಗೊಳ್ಳುವ ಮೂಲಕ ರಕ್ತದ ಸಾಮಾನ್ಯ ಹರಿವನ್ನು ಅಡ್ಡಿಪಡಿಸುತ್ತದೆ. ಇದರಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು  ಮತು ಹೃದಯಾಘಾತಂದಹ ಗಂಭೀರ ಪರಿಸ್ಥಿತಿಗಳು ಗಮನಾರ್ಹವಾಗಿ ಹೆಚ್ಚುತ್ತದೆ. ಅನಾರೋಗ್ಯಕ ಜೀವನಶೈಲಿ ಮತ್ತು ಆಹಾರಪದ್ಧತಿಯ ಕಾರಣ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ.  ಆದರೆ ಹಣ್ಣುಗಳು ಮತು ತರಕಾರಿಗಳಂತಹ ಸಮತೋಲಿತ ಆಹಾರಗಳ ಸೇವನೆಯ ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು. ಅಲ್ಲದೆ ಕೊತ್ತಂಬರಿ ಸೊಪ್ಪು ಕೂಡಾ ಕೊಲೆಸ್ಟ್ರಾಲ್ ಮಟ್ಟವನ್ನು  ಕಡಿಮೆ ಮಾಡಲು  ಸಹಕಾರಿ  ಎಂದು ಕೆಲವು ವರದಿಗಳು ಹೇಳಿವೆ. ಕೊತ್ತಂಬರಿ ಸೊಪ್ಪು ನಿಜವಾಗಿಯೂ ತುಂಬಾ ಪ್ರಯೋಜನಕಾರಿಯೇ? ಇದರ ಬಗ್ಗೆ ವೈದ್ಯಕೀಯ ವಿಜ್ಞಾನ ಏನು ಹೇಳುತ್ತದೆ ಎಂದು ತಿಳಿಯೋಣ.

ಕೊತ್ತಂಬರಿ ಸೊಪ್ಪು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆಯೇ?

ವಿಟಮಿನ್ ಸಿ, ವಿಟಮಿನ್​​ ಕೆ, ಉತ್ಕರ್ಷ ನಿರೋಧಕಗಳು, ಫೋಲೇಟ್, ಬೀಟಾ ಕ್ಯಾರೋಟಿನ್ ನಂತಹ ಅನೇಕ  ಪೋಷಕಾಂಶಗಳು ಕೊತ್ತಂಬರಿ ಸೊಪ್ಪಿನಲ್ಲಿ ಕಂಡುಬರುತ್ತದೆ. ಹಾಗಾಗಿ ಮಿತ ಪ್ರಮಾಣದ ಕೊತ್ತಂಬರಿ ಸೊಪ್ಪಿನ ಸೇವನೆ ಆರೋಗ್ಯ ದೃಷ್ಟಿಯಿಂದ ಬಹಳ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಕೊತ್ತಂಬರಿ ಸೊಪ್ಪು ನಮ್ಮ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂಬುದರ ಕುರಿತು ನಡೆಸಿದ ಅಧ್ಯಯನಗಳು ಅದರ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಬಹಿರಂಗಪಡಿಸುತ್ತದೆ. ಹಲವು ಪ್ರಾಣಿ ಆಧಾರಿತ  ಅಧ್ಯಯನಗಳು ಕೊತ್ತಂಬರಿ ಸೊಪ್ಪು ಅಧಿಕ ರಕ್ತದೊತ್ತಡ ಮತ್ತು  ಕೆಟ್ಟ ಕೊಲೆಸ್ಟ್ರಾಲ್ (LDL) ಸೇರಿದಂತೆ ಹೃದ್ರೋಗದ ಅಪಾಯಕಾರಿ ಅಂಶಗಳನ್ನು ಕಡಿಮೆ ಮಾಡುತ್ತದೆ. ಮತ್ತು  ಹೃದಯದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಲು  ಪ್ರಯೋಜನಕಾರಿಯಾಗಿದೆ ಎಂಬುದನ್ನು ಕಂಡುಹಿಡಿದಿದೆ. ಹಾಗಾಗಿ ಕೊತ್ತಂಬರಿ ಸೊಪ್ಪಿನ ಸೇವನೆ ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು.

ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಕಾರಿ:

ಮತ್ತೊಂದು ಸಂಶೋಧನಾ ವರದಿಯು ಕೊತ್ತಂಬರಿ ಬೀಜದ ಸಾರವು ಮೂತ್ರವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಕಂಡುಹಿಡಿದಿದೆ. ಇದು ನಮ್ಮ ದೇಹದಿಂದ ಹೆಚ್ಚುವರಿ ಸೋಡಿಯಂ ಹೊರ ಹಾಕಲು ಸಹಾಯ ಮಾಡುತ್ತದೆ. ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯ ಜೊತೆಗೆ , ಅಧಿಕ ರಕ್ತದೊತ್ತಡವು ಹೃದಯದ ಆರೋಗ್ಯಕ್ಕೆ ಅಪಾಯಕಾರಿ ಅಂಶವಾಗಿದೆ. ಕೊತ್ತಂಬರಿ ಸೊಪ್ಪು ಮತ್ತು ಕೊತ್ತಂಬರಿ ಬೀಜಗಳನ್ನು ಸೇವಿಸುವುದರಿಂದ ಈ ಎರಡರ ಅಪಾಯವನ್ನು ಕಡಿಮೆ ಮಾಡಬಹುದು.

ಇದನ್ನೂ ಓದಿ: ಕೊತ್ತಂಬರಿ ಸೊಪ್ಪಿನ ಆರೋಗ್ಯಕರ ಪ್ರಯೋಜನಗಳು

ಮಧುಮೇಹಕ್ಕೆ ಉತ್ತಮ:

ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಜನರ ಆರೋಗ್ಯಕ್ಕೂ ಕೊತ್ತಂಬರಿ ಸೊಪ್ಪು ತುಂಬಾ ಪ್ರಯೋಜನಕಾರಿಯಾಗಿದೆ.  ಕೊತ್ತಂಬರಿ ಸೊಪ್ಪು ಮತ್ತು ಅದರ ಬೀಜಗಳಲ್ಲಿನ ಅಂಶಗಳು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಕೊತ್ತಂಬರಿ ಬೀಜಗಳು ರಕ್ತದಲ್ಲಿ ಸಕ್ಕರೆ ಹೆಚ್ಚಾಗುವುದನ್ನು ತಡೆಯುವ ಕಿಣ್ವಗಳ ಚಟುವಟಿಕೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅನೇಕ ಪ್ರಾಣಿ ಆಧಾರಿತ ಅಧ್ಯಯನಗಳು ತೋರಿಸಿವೆ. ಸ್ಥೂಲಕಾಯತೆ ಮತ್ತು ಅದಿಕ ರಕ್ತದೊತ್ತಡವನ್ನು ಹೊಂದಿರುವ ಇಲಿಗಳ ಮೇಲೆ ನಡಸಿದ ಅಧ್ಯಯನವು ಕೊತ್ತಂಬರಿ ಬೀಜದ ಸಾರವು ಆರು ಗಂಟೆಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು  4mmol/L ರಷ್ಟು ಕಡಿಮೆ ಮಾಡುತ್ತದೆ ಎಂದು ಕಂಡುಹಿಡಿದಿದೆ.

ಕೊತ್ತಂಬರಿ ಸೊಪ್ಪಿನಲ್ಲಿರುವ  ಉತ್ಕರ್ಷ ನಿರೋಧಕ ಗುಣಲಕ್ಷಣಗಳು ಇದನ್ನು ಇನ್ನಷ್ಟು ವಿಶೇಷವನ್ನಾಗಿಸಿದೆ:

ಕೊತ್ತಂಬರಿ ಸೊಪ್ಪು ಹಲವಾರು ಔಷಧೀಯ ಗುಣಗಳನ್ನು ಹೊಂದಿದ್ದರೂ, ಅದರಲ್ಲಿರುವ ಉತ್ಕರ್ಷಣ ನಿರೋಧಕ ಗುಣವು ಇದನ್ನು ಹೆಚ್ಚು ವಿಶೇಷವಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ. ಉತ್ಕರ್ಷಣ ನಿರೋಧಕ ವಸ್ತುಗಳು ದೇಹದಲ್ಲಿನ ಫ್ರೀ ರಾಡಿಕಲ್ ಗಳಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ, ಇದು ಚರ್ಮಕ್ಕೆ ಪ್ರಯೋಜನಕಾರಿ ಮಾತ್ರವಲ್ಲದೆ ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುವಲ್ಲಿ  ತುಂಬಾ ಪ್ರಯೋಜನಕಾರಿಯಾಗಿದೆ. ಆಹಾರದಲ್ಲಿ ಉತ್ಕರ್ಷಣ ನಿರೋಧಕಗಳ ಪ್ರಮಾಣವನ್ನು ಹೆಚ್ಚಿಸುವುದರಿಂದ ದೀರ್ಘಕಾಲದ ಕಾಯಿಲೆಗಳ ಅಪಾಯದಿಂದ ಪಾರಾಗಬಹುದು ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಹಾಗಾಗಿ ಕೊತ್ತಂಬರಿ ಸೊಪ್ಪಿನ ಸೇವನೆ ಮೂಲಕ ಅಧಿಕ ಕೊಲೆಸ್ಟ್ರಾಲ್ ಮಾತ್ರವಲ್ಲದೆ ಅನೇಕ ಆರೋಗ್ಯ ಸಮಸ್ಯೆಗಳು ಬಾರದಂತೆ ತಡೆಯಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:10 pm, Fri, 29 September 23

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್