Low BP Home Remedies: ತಕ್ಷಣ ಲೋ ಬಿಪಿ ಆದ್ರೆ ಗಾಬರಿಯಾಗಬೇಡಿ: ಈ ಮನೆಮದ್ದು ಟ್ರೈ ಮಾಡಿ
ಕ್ತದೊತ್ತಡವನ್ನು ಸಾಮಾನ್ಯ ಸ್ಥಿತಿಯಲ್ಲಿಡುವುದು ಬಹಳ ಮುಖ್ಯ. ಅಧಿಕ ರಕ್ತದೊತ್ತಡದಂತೆ ಕಡಿಮೆ ರಕ್ತದೊತ್ತಡವು ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಕಡಿಮೆ ರಕ್ತದೊತ್ತಡವನ್ನು ʼಹೈಪೊಟೆನ್ಷನ್ʼ ಎಂದೂ ಕರೆಯಲಾಗುತ್ತದೆ. ಈ ಸ್ಥಿತಿಯಲ್ಲಿ ತಲೆತಿರುಗುವಿಕೆ, ಕಣ್ಣುಗಳಲ್ಲಿ ಕತ್ತಲೆ ಆವರಿಸಿದಂತಾಗುವುದು, ತಲೆನೋವು, ವಾಂತಿ-ವಾಕರಿಕೆ, ಆಯಾಸ ಮತ್ತು ದೌರ್ಬಲ್ಯದಂತಹ ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ.

ಜಡ ಜೀವನಶೈಲಿ ಮತ್ತು ಅನಾರೋಗ್ಯಕ ಆಹಾರ ಪದ್ಧತಿಯ ಕಾರಣದಿಂದಾಗಿ ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ರಕ್ತದೊತ್ತಡವನ್ನು ಸಾಮಾನ್ಯ ಸ್ಥಿತಿಯಲ್ಲಿಡುವುದು ಬಹಳ ಮುಖ್ಯ. ಅಧಿಕ ರಕ್ತದೊತ್ತಡದಂತೆ ಕಡಿಮೆ ರಕ್ತದೊತ್ತಡವು ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಕಡಿಮೆ ರಕ್ತದೊತ್ತಡವನ್ನು ʼಹೈಪೊಟೆನ್ಷನ್ʼ ಎಂದೂ ಕರೆಯಲಾಗುತ್ತದೆ. ಈ ಸ್ಥಿತಿಯಲ್ಲಿ ತಲೆತಿರುಗುವಿಕೆ, ಕಣ್ಣುಗಳಲ್ಲಿ ಕತ್ತಲೆ ಆವರಿಸಿದಂತಾಗುವುದು, ತಲೆನೋವು, ವಾಂತಿ-ವಾಕರಿಕೆ, ಆಯಾಸ ಮತ್ತು ದೌರ್ಬಲ್ಯದಂತಹ ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಸಮಯಕ್ಕೆ ಸರಿಯಾಗಿ ರಕ್ತದೊತ್ತಡವನ್ನು ನಿಯಂತ್ರಿಸದಿದ್ದರೆ, ಹೃದಯಾಘಾತ ಮತ್ತು ಪಾರ್ಶ್ವವಾಯುಗಳಂತಹ ಮಾರಣಾಂತಿಕ ಸಮಸ್ಯೆಗಳು ಸಂಭವಿಸಬಹುದು. ಅಂತಹ ಪರಿಸ್ಥಿತಿಯಲ್ಲಿ ಕೆಲವು ಆಯುರ್ವೇದ ಪರಿಹಾರಗಳು ಕಡಿಮೆ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ.
ಕಡಿಮೆ ರಕ್ತದೊತ್ತಡ ಸಮಸ್ಯೆಗೆ ಆಯುರ್ವೇದ ಪರಿಹಾರಗಳು:
ಕಲ್ಲುಪ್ಪು:
ರಕ್ತದೊತ್ತಡ ಇದ್ದಕ್ಕಿದ್ದಂತೆ ಕಡಿಮೆಯಾದರೆ, ಅದನ್ನು ನಿಯಂತ್ರಿಸಲು ನೀವು ಕಲ್ಲು ಉಪ್ಪನ್ನು ಬಳಸಬಹುದು. ಇದರಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಮ್ ಇರುವುದರಿಂದ ಇದು ರಕ್ತದೊತ್ತಡ ನಿಯಂತ್ರಣದಲ್ಲಿಡು ಸಹಾಯ ಮಾಡುತ್ತದೆ. ಹಠಾತ್ ರಕ್ತದೊತ್ತಡ ಕಡಿಮೆಯಾದರೆ ಅರ್ಧ ಚಮಚ ಕಲ್ಲುಪ್ಪನ್ನು ಒಂದು ಲೋಟ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಪರಿಸ್ಥಿತಿಯನ್ನು ನಿಯಂತ್ರಿಸಬಹುದು.
ತುಳಸಿ ಎಲೆ:
ಕಡಿಮೆ ರಕ್ತದೊತ್ತಡ ಸಮಸ್ಯೆಗೆ ತುಳಸಿ ಎಲೆಗಳು ಕೂಡಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ತುಳಸಿ ಎಲೆಗಳಲ್ಲಿ ಪೊಟ್ಯಾಸಿಯಮ್, ಮೆಗ್ನೇಸಿಯಮ್ ಮತ್ತು ವಿಟಮಿನ್ ಸಿ ಅಧಿಕ ಪ್ರಮಾಣದಲ್ಲಿದೆ. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಪ್ರತಿದಿನ 5 ರಿಂದ 6 ತುಳಸಿ ಎಲೆಗಳನ್ನು ಜಗಿಯುವುದರಿಂದ ಕಡಿಮೆ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ಕರಿಮೆಣಸು:
ಕಡಿಮೆ ರಕ್ತದೊತ್ತಡ ಸಮಸ್ಯೆಯನ್ನು ತೊಡೆದುಹಾಕಲು ಕರಿಮೆಣಸು ಸಹ ಪ್ರಯೋಜನಕಾರಿ. ಕಡಿಮೆ ಮತ್ತು ಅಧಿಕ ರಕ್ತದೊತ್ತಡ ಎರಡು ಸಮಸ್ಯೆಗಳಿಗೂ ಈ ಮನೆಮದ್ದು ಪ್ರಯೋಜನಕಾರಿಯಾಗಿದೆ. ರಕ್ತದೊತ್ತಡ ಇದ್ದಕ್ಕಿದ್ದಂತೆ ಕಡಿಮೆಯಾದರೆ ಉಗುರುಬೆಚ್ಚಗಿನ ನೀರಿನಲ್ಲಿ ಕರಿಮೆಣಸನ್ನು ಬೆರೆಸಿ ಸೇವಿಸಿ. ಆದರೆ ದಿನಕ್ಕೆ 2 ಗ್ರಾಂ ಗಳಿಗಿಂತ ಹೆಚ್ಚು ಕರಿಮೆಣಸನ್ನು ಸೇವನೆ ಮಾಡಬಾರದು.
ಒಣದ್ರಾಕ್ಷಿ:
ಒಣದ್ರಾಕ್ಷಿ ಕಡಿಮೆ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ಸಹ ಬಹಳ ಪ್ರಯೋಜನಕಾರಿಯಾಗಿದೆ. 4 ರಿಂದ 5 ಒಣದ್ರಾಕ್ಷಿಗಳನ್ನು ರಾತ್ರಿಯಿಡಿ ನೆನೆಸಿ ಮತ್ತು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ. ಪ್ರತಿದಿನ ಹೀಗೆ ಮಾಡುವುದರಿಂದ ಬಿಪಿ ನಿಯಂತ್ರಣಕ್ಕೆ ಬರುತ್ತದೆ.
ಅಶ್ವಗಂಧ:
ಅಶ್ವಗಂಧವನ್ನು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ. ಅದರಂತೆ ಕಡಿಮೆ ರಕ್ತದೊತ್ತಡ ಸಮಸ್ಯೆಗೂ ಅಶ್ವಗಂಧದ ಸೇವನೆ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಪೋಷಕಾಂಶಗಳು ರಕ್ತದೊತ್ತಡವನ್ನು ನಿಯಂತ್ರಿಣದಲ್ಲಿಡಲು ಸಹಾಯ ಮಾಡುತ್ತದೆ. ಒಂದು ಚಮಚ ಅಶ್ವಗಂಧದ ಪುಡಿಯನ್ನು ಒಂದು ಲೋಟ ಉಗುರುಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ಹೆಚ್ಚು ನೀರು ಕುಡಿಯಿರಿ:
ದೇಹದಲ್ಲಿ ನೀರಿನ ಕೊರತೆಯು ಕೂಡಾ ರಕ್ತದೊತ್ತಡ ಇದ್ದಕ್ಕಿದ್ದಂತೆ ಕಡಿಮೆಯಾಗಲು ಕಾರಣವಾಗಬಹುದು. ಹಾಗಾಗಿ ದಿನಕ್ಕೆ ಕನಿಷ್ಠ ಎರಡರಿಂದ ಮೂರು ಲೀಟರ್ ನೀರನ್ನು ಕುಡಿಯುವುದು ಮುಖ್ಯ. ಲೋ ಬಿಪಿ ಸಮಸ್ಯೆ ಕಾಣಿಸಿಕೊಂಡರೆ ಎಳನೀರು, ಮರಸೇಬಿನ ಜ್ಯೂಸ್, ಮಾವಿನಕಾಯಿ ಪನ್ನಾ ಸಹ ಕುಡಿಯಬಹುದು. ಇದು ನಿಮ್ಮ ದೇಹಕ್ಕೆ ಅಗತ್ಯವಾದ ಎಲೆಕ್ಟ್ರೋಲೈಟ್ಗಳನ್ನು ಒದಗಿಸುತ್ತದೆ. ಅಲ್ಲದೆ ನೀವು ದಾಳಿಂಬೆ ಜ್ಯೂಸ್ ಕೂಡಾ ಸೇವಿಸಬಹುದು. ಇದರಲ್ಲಿ ಆಂಟಿಆಕ್ಸಿಡೆಂಟ್ ಸಮೃದ್ಧವಾಗಿದ್ದು, ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: