AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖದ ಹೊಳಪನ್ನು ಹೆಚ್ಚಿಸಲು ಪ್ರತಿದಿನ ಬೆಳಗ್ಗೆ ತಪ್ಪದೇ ಈ ಪಾನೀಯಗಳನ್ನು ಸೇವಿಸಿ

ಸ್ಕಿನ್‌ ಗ್ಲೋ ಆಗಿರ್ಬೇಕು ಎಂದು ಎಲ್ಲರೂ ಬಯಸುತ್ತಾರೆ. ಇದಕ್ಕಾಗಿ ಹಲವರು ಸೌಂದರ್ಯ ತಜ್ಞರು, ಬ್ಯೂಟಿ ಪಾರ್ಲರ್‌ ಮೊರೆ ಹೋಗ್ತಾರೆ. ಇಷ್ಟೆಲ್ಲಾ ದುಬಾರಿ ಖರ್ಚು ಮಾಡುವ ಬದಲು ಪ್ರತಿದಿನ ಬೆಳಗ್ಗೆ ತಪ್ಪದೆ ಈ ಒಂದಷ್ಟು ಪಾನೀಯಗಳನ್ನು ಕುಡಿಯುವುದರಿಂದ ಬಲು ಸುಲಭವಾಗಿ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು. ಹಾಗಿದ್ರೆ ಮುಖದ ಹೊಳಪನ್ನು ಹೆಚ್ಚಿಸಲು ಸಹಕಾರಿಯಾಗುವ ಆ ಪಾನೀಯಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ಮುಖದ ಹೊಳಪನ್ನು ಹೆಚ್ಚಿಸಲು ಪ್ರತಿದಿನ ಬೆಳಗ್ಗೆ ತಪ್ಪದೇ ಈ ಪಾನೀಯಗಳನ್ನು ಸೇವಿಸಿ
ಸಾಂದರ್ಭಿಕ ಚಿತ್ರ Image Credit source: Google
ಮಾಲಾಶ್ರೀ ಅಂಚನ್​
|

Updated on: Aug 30, 2025 | 9:33 AM

Share

ತ್ವಚೆಯ ಆರೋಗ್ಯದ ಬಗ್ಗೆ ಎಲ್ಲರಿಗೂ ಕಾಳಜಿ ಇರುತ್ತದೆ. ಅದರಲ್ಲೂ ಹೆಣ್ಮಕ್ಕಳು ನಮ್ಮ ತ್ವಚೆ ನಮ್ಮ ತ್ವಚೆ ಚಂದ್ರನಂತೆ ಫಳ ಫಳ ಹೊಳೆಯಬೇಕು, ಕ್ಲೀಯರ್‌ ಸ್ಕಿನ್‌ ನಮ್ಮದಾಗಬೇಕು ಎಂದು ತುಸು ಹೆಚ್ಚೇ ಬಯಸುತ್ತಾರೆ. ಈ ಮುಖದ ಹೊಳಪನ್ನು ಹೆಚ್ಚಿಸುವ ಸಲುವಾಗಿ ದುಬಾರಿ ಉತ್ಪನ್ನಗಳು, ಸೌಂದರ್ಯ ಚಿಕಿತ್ಸೆಗಳನ್ನು ಆಶ್ರಯಿಸುತ್ತಾರೆ. ಆದರೆ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಒಳಗಿನಿಂದಲೇ ಪೋಷಣೆಯನ್ನು ನೀಡಬೇಕು. ಅವುಗಳಲ್ಲಿ ಈ ಒಂದಷ್ಟು ಪಾನೀಯಗಳು (Drinks For Glowing Skin) ಕೂಡ ಒಂದು. ಈ ಪಾನೀಯಗಳನ್ನು ಪ್ರತಿನಿತ್ಯ ಬೆಳಗ್ಗೆ ಸೇವನೆ ಮಾಡುವುದರಿಂದ ಯಾವುದೇ ದುಬಾರಿ ವೆಚ್ಚವಿಲ್ಲದೆ ಬಲು ಸುಲಭವಾಗಿ ನೀವು ನಿಮ್ಮ ತ್ವಚೆಯ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು. ಮುಖದ ಕಾಂತಿಯನ್ನು ಹೆಚ್ಚಿಸಲು ಸಹಕಾರಿಯಾಗಿರುವ ಆ ಪಾನೀಯಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಮುಖದ ಹೊಳಪನ್ನು ಹೆಚ್ಚಿಸಲು ಸಹಕಾರಿ ಈ ಪಾನೀಯಗಳು:

ನಿಂಬೆ ನೀರು: ನಿಂಬೆಹಣ್ಣು ವಿಟಮಿನ್ ಸಿ ಯ ಉತ್ತಮ ಮೂಲವಾಗಿದೆ, ಈ ವಿಟಮಿನ್‌ ಸಿ  ಕಾಲಜನ್ ಉತ್ಪಾದನೆಗೆ ಅತ್ಯಗತ್ಯ. ಅಲ್ಲದೆ ನಿಂಬೆ ರಸದಲ್ಲಿ ನೈಸರ್ಗಿಕ ಸಂಕೋಚನ ಮತ್ತು ಹೊಳಪು ನೀಡುವ ಗುಣವಿದ್ದು, ಇದು ಚರ್ಮದ ಹೊಳಪನ್ನು ಹೆಚ್ಚಿಸಲು ಮತ್ತು ಕಲೆಗಳನ್ನು ನಿವಾರಿಸಲು ಸಹಕಾರಿ. ಹಾಗಾಗಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ರಸ ಹಾಕಿ ಕುಡಿಯಿರಿ. ಇದು ಚರ್ಮದ ಕಾಂತಿಯನ್ನು ಹೆಚ್ಚಿಸುವುದರ ಜೊತೆಗೆ ದೇಹದಿಂದ ವಿಷವನ್ನು ಹೊರ ಹಾಕಲು ಸಹಾಯ ಮಾಡುತ್ತದೆ.

ಗ್ರೀನ್‌ ಟೀ: ಗ್ರೀನ್‌ ಟೀ ತೂಕ ಇಳಿಕೆಗೆ ಮಾತ್ರವಲ್ಲದೆ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹ ತುಂಬಾನೇ ಸಹಕಾರಿಯಾಗಿದೆ. ಗ್ರೀನ್‌ ಟೀ ಉತ್ಕರ್ಷಣ ನಿರೋಧಕಗಳಲ್ಲಿ ಅದರಲ್ಲೂ ಕ್ಯಾಟೆಚಿನ್‌ನ ಸಮೃದ್ಧ ಮೂಲವಾಗಿದ್ದು, ಇದು ಯುವಿ ಕಿರಣಗಳಿಂದ ಉಂಟಾಗುವ ಹಾನಿಯಿಂದ ಚರ್ಮವನ್ನು ರಕ್ಷಿಸುತ್ತದೆ, ಉರಿಯೂತವನ್ನು ಕಡಿಮೆ ಮಾಡುತ್ತದೆ, ಚರ್ಮದ ಕೋಶಗಳನ್ನು ಆರೋಗ್ಯಕರವಾಗಿರಿಸುತ್ತದೆ. ಹಾಗಾಗಿ ಪ್ರತಿದಿನ ಬೆಳಗ್ಗೆ ಗ್ರೀನ್‌ ಟೀ ಕುಡಿಯುವ ಮೂಲಕ ತ್ವಚೆಯ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು.

ಇದನ್ನೂ ಓದಿ
Image
ಮುಖದ ಹೊಳಪು ಹೆಚ್ಚಿಸಲು ಬೆಳಗ್ಗೆ ಪಾಲಿಸಬೇಕಾದ ಅಭ್ಯಾಸಗಳು
Image
ಬಾಳೆಹಣ್ಣಿನ ಸಿಪ್ಪೆಯಿಂದ ಮುಖದ ಹೊಳಪು ಹೆಚ್ಚಿಸಬಹುದು, ಹೀಗೆ ಮಾಡಿ
Image
ಯಶಸ್ಸಿಗಾಗಿ ಯಶಸ್ವಿ ಜನರ ಬೆಳಗಿನ ಈ ಅಭ್ಯಾಸಗಳನ್ನು ತಪ್ಪದೇ ಪಾಲಿಸಿ
Image
ಬೆಳಗಿನ ಸಮಯದ ಈ ಅಭ್ಯಾಸಗಳು ನಿಮ್ಮ ಆರೋಗ್ಯವನ್ನೇ ಹಾಳುಮಾಡುತ್ತೆ

ಇದನ್ನೂ ಓದಿ: ನಿಮ್ಮ ಮುಖ ಪಳ ಪಳ ಹೊಳೆಯಬೇಕೆಂದರೆ ಪ್ರತಿದಿನ ಬೆಳಗ್ಗೆ ಈ ಕೆಲಸಗಳನ್ನು ಮಾಡಬೇಕು

ಎಳನೀರು: ಎಳನೀರು ದೇಹವನ್ನು ರಿಫ್ರೆಶ್‌ ಮಾಡುವುದಲ್ಲದೆ, ಇದು ನಿಮ್ಮ ಚರ್ಮಕ್ಕೆ ನೈಸರ್ಗಿಕ ಮಾಯಿಶ್ಚರೈಸರ್‌ ಆಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಎಳನೀರು ಪೊಟ್ಯಾಸಿಯಂ, ಮೆಗ್ನೇಸಿಯಂ ಮತ್ತು ಕ್ಯಾನ್ಸಿಯಂನಿಂದ ಸಮೃದ್ಧವಾಗಿದ್ದು, ಇದು ದೇಹಕ್ಕೆ ಜಲಸಂಚಯನವನ್ನು ಒದಗಿಸುತ್ತದೆ. ಹೀಗೆ ದೇಹವು ಹೈಡ್ರೇಟ್‌ ಆದಾಗ ಚರ್ಮವೂ ಹೊಳೆಯುತ್ತದೆ. ಜೊತೆಗೆ ಈ ಪಾನೀಯ ಜೀವಕೋಶದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ವಯಸ್ಸಾಗುವಿಕೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಹಾಗಾಗಿ ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯಿರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!