AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ರಾತ್ರಿ ಮಲಗಿದಾಗ ಬಾಯಿ ಒಣಗುತ್ತದೆಯೇ? ಇಲ್ಲಿದೆ ಸರಳ ಮನೆ ಮದ್ದುಗಳು

ಅಬ್ಬಬ್ಬಾ ಉರಿ ಸೆಕೆ, ಯಾವಾಗ ಮಳೆ ಬರುತ್ತದೆಯೋ ಎಂದು ಗೊಣಗಾಟ ಶುರುವಾಗಿದೆ. ಸದ್ಯಕ್ಕಂತೂ ಜನರಿಗೆ ಬಿಸಿಲಿನ ತಾಪವನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಕೆಲವರಂತೂ ಬೇಸಿಗೆಯಲ್ಲಿ ಕಾಡುವ ಹಲವಾರು ಆರೋಗ್ಯ ಸಮಸ್ಯೆಗಳಿಂದ ಬೇಸೆತ್ತು ಹೋಗಿದ್ದಾರೆ. ಈ ಬೇಸಿಗೆ ಶುರುವಾದರೆ ಹೆಚ್ಚಿನವರಲ್ಲಿ ಬಾಯಿಯೂ ಒಣಗಿದಂತೆ ಆಗುತ್ತದೆ. ಒಂದು ವೇಳೆ ನಿಮಗೂ ಈ ಸಮಸ್ಯೆಯೂ ಕಾಡುತ್ತಿದ್ದರೆ ಮನೆಯಲ್ಲಿರುವ ಈ ಪದಾರ್ಥಗಳೇ ಉತ್ತಮ ಔಷಧಿಗಳಾಗಿ ಕಾರ್ಯನಿರ್ವಹಿಸುತ್ತದೆ.

Health Care Tips in Kannada : ರಾತ್ರಿ ಮಲಗಿದಾಗ ಬಾಯಿ ಒಣಗುತ್ತದೆಯೇ? ಇಲ್ಲಿದೆ ಸರಳ ಮನೆ ಮದ್ದುಗಳು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 18, 2024 | 4:17 PM

Share

ಬೇಸಿಗೆ ಪ್ರಾರಂಭವಾದ ತಕ್ಷಣ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಕೆಲವರಿಗೆ ಈ ಸಮಯದಲ್ಲಿ ರಾತ್ರಿ ಮಲಗಿದ ಬಳಿಕ ಬಾಯಿ ಒಣಗುವ (Dry Mouth) ಸಮಸ್ಯೆಯೂ ಕಾಡುವುದಿದೆ. ಬಾಯಿ ಒಣಗಲು ದೇಹದಲ್ಲಿ ನೀರಿನ ಕೊರತೆ, ಮಧುಮೇಹ, ತಂಬಾಕು, ಆಲ್ಕೋಹಾಲ್ ನಂತಹ ಅಭ್ಯಾಸಗಳು ಹಾಗೂ ಮತ್ತು ಔಷಧಿಗಳ ಸೇವನೆಯೂ ಕಾರಣವಾಗಿರಬಹುದು. ಬಾಯಿ ಒಣಗುವ ಸಮಸ್ಯೆಗೆ ಮನೆಯಲ್ಲೇ ಸುಲಭವಾಗಿ ಪರಿಹಾರ ಕಂಡುಕೊಳ್ಳಬಹುದು.

ಬಾಯಿ ಒಣಗುವುದಕ್ಕೆ ಸರಳ ಮನೆ ಮದ್ದುಗಳು:

  • ದೇಹದಲ್ಲಿ ನೀರಿನ ಕೊರತೆಯಿಂದಾಗಿ, ಬಾಯಿ ಒಣಗಲು ಪ್ರಾರಂಭಿಸುತ್ತದೆ. ಹೀಗಾಗಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.
  • ಬಾಯಿ ಒಣಗಲು ಬ್ಯಾಕ್ಟೀರಿಯಾ ಮತ್ತು ಸೋಂಕಿನ ಸಮಸ್ಯೆಯೂ ಕಾರಣವಾಗಿರಬಹುದು. ಸಾಧ್ಯವಾದಷ್ಟು ನಾಲಿಗೆ ಹಾಗೂ ಬಾಯಿಯ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ.
  • ಹಸಿ ಶುಂಠಿಯನ್ನು ನೀರಿನಲ್ಲಿ ಕುದಿಸಿ, ಒಂದೆರಡು ಚಮಚ ಜೇನುತುಪ್ಪ ಬೆರೆಸಿ ಸೇವಿಸುವುದು ಕೂಡ ಪರಿಣಾಮಕಾರಿಯಾಗಿದೆ.
  • ದಿನನಿತ್ಯ ನಿಯಮಿತವಾಗಿ ಆಲೋವೆರಾ ಜ್ಯೂಸ್ ಮಾಡಿ ಕುಡಿಯುವುದು ಕೂಡ ಒಣ ಬಾಯಿ ಸಮಸ್ಯೆಗೆ ರಾಮಬಾಣವಾಗಿದೆ.
  • ದಿನಕ್ಕೆ ಎರಡರಿಂದ ಮೂರು ಬಾರಿ ಅರ್ಧ ಚಮಚದಷ್ಟು ಜೀರಿಗೆಯನ್ನು ಚೆನ್ನಾಗಿ ಜಗಿದು ನುಂಗಬೇಕು. ಇಲ್ಲವಾದರೆ ಜೀರಿಗೆ ಕಷಾಯ ಮಾಡಿ ಕುಡಿಯುವುದು ಈ ಒಣ ಬಾಯಿಗೆ ಪರಿಣಾಮಕಾರಿಯಾಗಿದೆ.
  • ಬಾಯಿ ಒಣಗುವ ಸಮಸ್ಯೆಯಿದ್ದವರು ಕೊಬ್ಬರಿ ಎಣ್ಣೆಯಿಂದ ಬಾಯಿ ಮುಕ್ಕಳಿಸುತ್ತಿರಬೇಕು. ಆ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಬಾಯಿ ಮುಕ್ಕಳಿಸಬೇಕು ಹೀಗೆ ಮಾಡುವುದರಿಂದ ಬಾಯಿಯೂ ತೇವದಿಂದ ಇರುತ್ತದೆ.
  • ಒಂದು ಲೋಟ ಉಗುರುಬೆಚ್ಚನೆಯ ನೀರಿಗೆ ಅರ್ಧ ನಿಂಬೆಯ ರಸ ಹಾಗೂ ಸ್ವಲ್ಪ ಜೇನು ತುಪ್ಪ ಬೆರೆಸಿ ಸೇವಿಸುವುದು ಉತ್ತಮವಾದ ಮನೆ ಮದ್ದಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ