AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ದೇಹದ ನೀರಿನಾಂಶ ಕಾಪಾಡಿಕೊಳ್ಳಲು ಈ ಹಣ್ಣುಗಳನ್ನು ಪ್ರತಿನಿತ್ಯ ಸೇವನೆ ಮಾಡಿ

ಸುಡು ಬೇಸಿಗೆಯ ಸಮಯದಲ್ಲಿನ ತೀವ್ರ ಹವಾಮಾನ ವೈಪರಿತ್ಯದಿಂದಾಗಿ ದೇಹದ ತೇವಾಂಶ ಸಂಪೂರ್ಣವಾಗಿ ಕುಂದಿ ಹೋವಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತವೆ. ಹಾಗಾಗಿ ಸಾಕಷ್ಟು ನೀರು ಕುಡಿಯುವುದು ತುಂಬಾನೇ ಮುಖ್ಯ. ನೀರಿನ ಜೊತೆಗೆ ಈ ಒಂದಷ್ಟು ಹಣ್ಣುಗಳನ್ನು ಸೇವನೆ ಮಾಡುವ ಮೂಲಕವೂ ಸುಡು ಬೇಸಿಗೆಯಲ್ಲಿ ನಿರ್ಜಲೀಕರಣದ ಸಮಸ್ಯೆಯಿಂದ ಪಾರಾಗಬಹುದು.

ಬೇಸಿಗೆಯಲ್ಲಿ ದೇಹದ ನೀರಿನಾಂಶ ಕಾಪಾಡಿಕೊಳ್ಳಲು  ಈ ಹಣ್ಣುಗಳನ್ನು ಪ್ರತಿನಿತ್ಯ ಸೇವನೆ ಮಾಡಿ
ಸಾಂದರ್ಭಿಕ ಚಿತ್ರImage Credit source: vecteezy
ಮಾಲಾಶ್ರೀ ಅಂಚನ್​
|

Updated on: Mar 28, 2026 | 9:11 PM

Share

ಬೇಸಿಗೆ (summer) ಸಮಯದಲ್ಲಿನ ವಿಪರೀತ ಉರಿ ಬಿಸಿಲು ನಮ್ಮನ್ನು ಹೈರಾಣಾಗಿಸಿ ಬಿಡುತ್ತದೆ.  ಈ ಸಮಯದಲ್ಲಿ ದೇಹವನ್ನು ಎಷ್ಟು ಪ್ರಮಾಣದಲ್ಲಿ ತಂಪಾಗಿ ಮತ್ತು ಚೈತನ್ಯಭರಿತವಾಗಿ ಇಟ್ಟುಕೊಂಡರೂ ಸಾಲದು. ಹೌದು ಉರಿ ಬಿಸಿಲಿನ ಬೇಗೆಗೆ ಬೆವರು ನೀರಿನಂತೆ ಹರಿದು ಹೋಗುತ್ತಾ ಇರುತ್ತದೆ. ಇದರಿಂದಾಗಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಬೇಸಿಗೆಯಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆಯಿಂದ ಪಾರಾಗಲು ಜನ ನೀರಿನ ಜೊತೆಗೆ ಫ್ರೂಟ್ಸ್‌ ಜ್ಯೂಸ್‌ಗಳನ್ನು ಸಹ ಸೇವನೆ ಮಾಡುತ್ತಾರೆ. ಇವುಗಳ ಜೊತೆಗೆ ಈ ಒಂದಷ್ಟು ಹಣ್ಣುಗಳನ್ನು ಸೇವನೆ ಮಾಡುವ ಮೂಲಕವೂ ದೇಹದಲ್ಲಿ ಸಾಕಷ್ಟು ಪ್ರಮಾಣದ ನೀರಿನಾಂಶವನ್ನು ಕಾಪಾಡಿಕೊಳ್ಳಬಹುದು.

ನಿರ್ಜಲೀಕರಣದಿಂದ ಪಾರಾಗಲು ಸೇವನೆ ಮಾಡಿ ಈ ಹಣ್ಣು:

ಕಿತ್ತಳೆ: ಕಿತ್ತಳೆ ಹಣ್ಣು ನೀರಿನಾಂಶದ ಉತ್ತಮ ಮೂಲವಾಗಿದ್ದು, ಇದು ವಿಟಮಿನ್ ಸಿ ಯಿಂದ ಸಮೃದ್ಧವಾಗಿವೆ. ಅವುಗಳ ಹೆಚ್ಚಿನ ನೀರಿನ ಅಂಶವು ಬಿಸಿ ವಾತಾವರಣದಲ್ಲಿ ದೇಹಕ್ಕೆ ಉತ್ತಮ ಜಲಸಂಚಯನವನ್ನು ಒದಗಿಸುತ್ತವೆ. ಇದಲ್ಲದೆ, ಇದರಲ್ಲಿರುವ ವಿಟಮಿನ್‌ ಸಿ ಅಂಶವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ

ಕಲ್ಲಂಗಡಿ: ಬೇಸಿಗೆಯಲ್ಲಿ  ನಿರ್ಜಲೀಕರಣ ಸಮಸ್ಯೆಯಿಂದ ಪಾರಾಗಲು ಮತ್ತು ದೇಹದಲ್ಲಿ  ನೀರಿನಂಶವನ್ನು ಕಾಪಾಡಿಕೊಳ್ಳಲು ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡುವುದು ಉತ್ತಮ. ಇದರಲ್ಲಿ ಶೇಕಡಾ 92 ರಷ್ಟು ನೀರು ಇರುವುದರಿಂದ ಇದು ಬೇಸಿಗೆಗೆ ಸೂಕ್ತವಾದ ಹಣ್ಣಾಗಿದೆ. ಇದು ಜಲಸಂಚಯನವನ್ನು ಒದಗಿಸುವುದಲ್ಲದೆ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ.

ಸ್ಟ್ರಾಬೆರಿ: ತಿನ್ನಲು ರುಚಿಕರವಾಗಿರುವ ಸ್ಟ್ರಾಬೆರಿ ಉತ್ತಮ ಪ್ರಮಾಣದ ನೀರನ್ನು ಸಹ ಹೊಂದಿರುತ್ತವೆ. ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಸ್ಟ್ರಾಬೆರಿಗಳು  ಸ್ವತಂತ್ರ ರಾಡಿಕಲ್ ಹಾನಿ ಮತ್ತು ಶಾಖದಿಂದ ದೇಹವನ್ನು ರಕ್ಷಿಸುತ್ತವೆ.

ಇದನ್ನೂ ಓದಿ: ಸುಡು ಬೇಸಿಗೆಯಲ್ಲಿ ಅನಾನಸ್‌ ಜ್ಯೂಸ್‌ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಅನಾನಸ್: ಅನಾನಸ್ ಬೇಸಿಗೆಯಲ್ಲಿ ಸೇವಿಸಬಹುದಾದ ಒಂದು ಉತ್ತಮ ಹಣ್ಣು. ಈ ಹಣ್ಣು ರುಚಿಕರವಾಗಿರುವುದಲ್ಲದೆ, ದೇಹಕ್ಕೆ ಜಲಸಂಚಯನವನ್ನೂ ಒದಗಿಸುತ್ತದೆ. ಇದಲ್ಲದೆ, ಅನಾನಸ್ ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುವ ಅಗತ್ಯ ಪೋಷಕಾಂಶಗಳನ್ನು ಒಳಗೊಂಡಿದೆ.

ಸೌತೆಕಾಯಿ: ಸೌತೆಕಾಯಿಗಳು 96 ಪ್ರತಿಶತದಷ್ಟು ನೀರನ್ನು ಹೊಂದಿರುತ್ತವೆ, ಇದು ದೇಹಕ್ಕೆ ಉತ್ತಮ ಪ್ರಮಾಣದ ಜಲ ಸಂಚಯನವನ್ನು ಒದಗಿಸುತ್ತದೆ. ಹಾಗಾಗಿ ಈ ಬೇಸಿಗೆಯಲ್ಲಿ ನೀವು ದಿನನಿತ್ಯ ಸೌತೆಕಾಯಿ ಸೇವನೆ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು