AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಊಟ ಮಾಡದೆ ಖಾಲಿ ಹೊಟ್ಟೆಯಲ್ಲಿ ಮಲಗುವ ಅಭ್ಯಾಸ ಎಷ್ಟು ಡೇಂಜರಸ್‌ ಗೊತ್ತಾ?

ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿ ಅನೇಕ ಜನರು ರಾತ್ರಿ ಊಟ ಬಿಟ್ಟು ಖಾಲಿ ಹೊಟ್ಟೆಯಲ್ಲಿ ಮಲಗುವ ಅಭ್ಯಾಸವನ್ನು ಅನುಸರಿಸುತ್ತಾರೆ. ಇನ್ನೂ ಕೆಲವರು ಕೆಲಸದ ಒತ್ತಡ ಮತ್ತು ಸಮಯದ ಅಭಾವದಿಂದಾಗಿ ರಾತ್ರಿ ಊಟ ಮಾಡದೆ ಮಲಗುತ್ತಾರೆ. ನೀವು ಕೂಡ ಇದೇ ರೀತಿ ನೀವು ಕೂಡ ರಾತ್ರಿ ಊಟ ಮಾಡದೇ ಮಲಗ್ತೀರಾ? ಈ ಅಭ್ಯಾಸದಿಂದ ದೇಹಕ್ಕೆ ಏನೆಲ್ಲಾ ಪರಿಣಾಮಗಳು ಬೀರುತ್ತವೆ ನೋಡಿ.

ರಾತ್ರಿ ಊಟ ಮಾಡದೆ ಖಾಲಿ ಹೊಟ್ಟೆಯಲ್ಲಿ ಮಲಗುವ ಅಭ್ಯಾಸ ಎಷ್ಟು ಡೇಂಜರಸ್‌ ಗೊತ್ತಾ?
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on: Jun 13, 2026 | 7:56 PM

Share

ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೌಷ್ಟಿದಾಯಕ ಆಹಾರವನ್ನು ಸೇವಿಸುವಂತೆ ರಾತ್ರಿ ಹಗುರವಾದ ಆಹಾರವನ್ನು ಸೇವನೆ ಮಾಡಬೇಕು ಎಂದು ಹೇಳುತ್ತಾರೆ. ಆದರೆ ಕೆಲಸದ ಒತ್ತಡ, ಆಯಾಸ ಮತ್ತು ಕೆಲವೊಮ್ಮೆ ಕೋಪದಿಂದಾಗಿ ಅನೇಕ ಜನರು ರಾತ್ರಿ (night) ಊಟ ಮಾಡದೆ ಖಾಲಿ ಹೊಟ್ಟೆಯಲ್ಲಿ ಮಲಗುತ್ತಾರೆ. ಇನ್ನೂ ಕೆಲವರು ತೂಕ ಇಳಿಸಿಕೊಳ್ಳುವ ಸಲುವಾಗಿ ರಾತ್ರಿ ಊಟವನ್ನು ಸ್ಕಿಪ್‌ ಮಾಡುತ್ತಾರೆ. ರಾತ್ರಿ ಊಟ ಮಾಡದೆ  ಖಾಲಿ ಹೊಟ್ಟೆಯಲ್ಲಿ ಮಲಗುವ ಈ ಅಭ್ಯಾಸವು ದೇಹಕ್ಕೆ ತುಂಬಾ ಹಾನಿಕಾರಕವಂತೆ. ಹಾಗಿದ್ದರೆ ಊಟ ಮಾಡದೆ ಮಲಗುವುದರಿಂದ ಏನೆಲ್ಲಾ ತೊಂದರೆಗಳು ಕಾಣಿಸಿಕೊಳ್ಳುತ್ತವೆ ಎಂಬುದನ್ನು ನೋಡೋಣ ಬನ್ನಿ.

ರಾತ್ರಿ ಊಟ ಮಾಡದೆ ಮಲಗುವುದರಿಂದ ಏನಾಗುತ್ತದೆ?

ಹೊಟ್ಟೆಯ ಕಿರಿಕಿರಿ ಮತ್ತು ಆಮ್ಲೀಯತೆ ಅಪಾಯ ಹೆಚ್ಚಾಗುತ್ತದೆ: ದೀರ್ಘಕಾಲ ಖಾಲಿ ಹೊಟ್ಟೆಯಲ್ಲಿ ಇದ್ದರೆ ಇದು ಜಠರದುರಿತ, ಆಮ್ಲೀಯತೆ, ಎದೆಯುರಿ ಮತ್ತು ಹೊಟ್ಟೆಯ ಕಿರಿಕಿರಿಯಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಇದಲ್ಲದೆ ರಾತ್ರಿ ಊಟ ಮಾಡದೆ ಮಲಗಿದೆ ವಿಶೇಷವಾಗಿ ಬೆಳಿಗ್ಗೆ ಎದ್ದ ನಂತರ ತಲೆನೋವು, ವಾಕರಿಕೆ ಮತ್ತು ಆಯಾಸದಂತಹ ಲಕ್ಷಣಗಳು ಸಹ ಕಾಣಿಸಿಕೊಳ್ಳಬಹುದು.

ನಿದ್ರೆಯ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು: ಹಸಿವಿನಿಂದ ಕೆಲವರಿಗೆ ಗಾಢ ನಿದ್ರೆ ಬರದಿರಬಹುದು. ಇದರಿಂದಾಗಿ ರಾತ್ರಿಯಲ್ಲಿ ಪದೇ ಪದೇ ಎಚ್ಚರಗೊಳ್ಳುವುದು, ಮಧ್ಯರಾತ್ರಿ ಹಸಿವಾಗುವುದು, ಬೆಳಿಗ್ಗೆ ಉತ್ಸಾಹವಿಲ್ಲದೆ ಎಚ್ಚರಗೊಳ್ಳುವುದು ಮುಂತಾದ ಸಮಸ್ಯೆಗಳು ಉಂಟಾಗಬಹುದು. ಲಘು ಭೋಜನವು ಉತ್ತಮ ನಿದ್ರೆ ಮತ್ತು ದೈಹಿಕ ಆರೋಗ್ಯಕ್ಕೆ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

ಪೌಷ್ಟಿಕಾಂಶದ ಕೊರತೆಯ ಸಾಧ್ಯತೆ: ರಾತ್ರಿ ಊಟ ಮಾಡದೆ ಮಲಗುವ ಅಬ್ಯಾಸದಿಂದ   ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳ ಕೊರತೆ ಉಂಟಾಗಬಹುದು, ಇದು ಸ್ನಾಯು ದೌರ್ಬಲ್ಯ, ರೋಗನಿರೋಧಕ ಶಕ್ತಿ ಕಡಿಮೆಯಾಗುವುದು ಮತ್ತು ತೀವ್ರ ಆಯಾಸಕ್ಕೆ ಕಾರಣವಾಗಬಹುದು.

ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ: ಆಗಾಗ್ಗೆ ಭೋಜನವನ್ನು ಬಿಟ್ಟುಬಿಡುವುದು ಅಥವಾ ಸರಿಯಾಗಿ ತಿನ್ನದಿದ್ದರೆ ನಿಮ್ಮ ಚಯಾಪಚಯ ಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಇದು ಇನ್ಸುಲಿನ್ ಮಟ್ಟವನ್ನು ಅಡ್ಡಿಪಡಿಸಬಹುದು. ಸರಿಯಾದ ಸಮಯದಲ್ಲಿ ಸರಿಯಾದ ಆಹಾರವನ್ನು ಸೇವಿಸದಿರುವುದು ನಿಮ್ಮ ಹಾರ್ಮೋನುಗಳ ಮೇಲೆ ಪರಿಣಾಮ ಬೀರುತ್ತದೆ, ಇದು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಇದನ್ನೂ ಓದಿ:  ಉತ್ತಮ ನಿದ್ರೆ ಪಡೆಯಲು ಬಯಸಿದರೆ ಬೆಡ್‌ರೂಮ್‌ನಲ್ಲಿ ಗಿಡಗಳನ್ನಿಡಿ

ರಾತ್ರಿಯಲ್ಲಿ  ಏನು ತಿನ್ನಬೇಕು?

ಖಾಲಿ ಹೊಟ್ಟೆಯಲ್ಲಿ ಮಲಗುವ ಬದಲು, ಹಗುರವಾದ, ಸುಲಭವಾಗಿ ಜೀರ್ಣವಾಗುವ ಆಹಾರವನ್ನು ಸೇವಿಸುವುದು ಉತ್ತಮ. ತರಕಾರಿ ಸೂಪ್, ಓಟ್ ಮೀಲ್, ಹಣ್ಣುಗಳು, ಮೊಸರು, ಸಣ್ಣ ಪ್ರಮಾಣದಲ್ಲಿ ಚಪಾತಿ ಮತ್ತು ಹೆಸರುಕಾಳಿನ ಗಂಜಿ ಮುಂತಾದ ಆಹಾರಗಳು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತವೆ ಮತ್ತು ಇವು ಜೀರ್ಣಾಂಗ ವ್ಯವಸ್ಥೆಯ ಮೇಲೆ ಹೆಚ್ಚು ಒತ್ತಡ ಹೇರುವುದಿಲ್ಲ.

ರಾತ್ರಿ ಊಟವನ್ನು ಸಂಪೂರ್ಣವಾಗಿ ಬಿಟ್ಟುಬಿಡುವುದಕ್ಕಿಂತ ಮಲಗುವ  ಎರಡು ಅಥವಾ ಮೂರು ಗಂಟೆಗಳ ಮೊದಲು ಮಧ್ಯಮ ಮತ್ತು ಆರೋಗ್ಯಕರ ಊಟವನ್ನು ಸೇವಿಸುವುದು ಉತ್ತಮ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ತೂಕ ಇಳಿಸಿಕೊಳ್ಳಲು ಬಯಸುವವರು ಊಟವನ್ನು ಬಿಟ್ಟುಬಿಡುವ ಬದಲು, ಸಮತೋಲಿತ ಆಹಾರ, ವ್ಯಾಯಾಮ ಮತ್ತು ನಿಯಮಿತ ಜೀವನಶೈಲಿಯನ್ನು ಅನುಸರಿಸಬೇಕು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ