Eid-ul-Adha 2024: ತ್ಯಾಗ ಬಲಿದಾನದ ಪ್ರತೀಕವೇ ಈ ‘ಬಕ್ರೀದ್ ‘ ಏನಿದರ ವಿಶೇಷತೆ?

ಪ್ರವಾದಿ ಹಜರತ್ ಇಬ್ರಾಹಿಂ ಅವರ ತ್ಯಾಗ, ಬಲಿದಾನ, ಅಚಲ ದೈವಭಕ್ತಿ ಹಾಗೂ ಅವರ ಪುತ್ರ ಹಜರತ್ ಇಸ್ಮಾಯಿಲ್ ಅವರ ದೈವಭಕ್ತಿಯನ್ನು ಸಾಂಕೇತಿಸುವ ದಿನವಾಗಿದೆ. ಈ ಬಕ್ರೀದ್ ಹಬ್ಬದಂದು ತ್ಯಾಗ-ಬಲಿದಾನವನ್ನು ಸ್ಮರಿಸಲಾಗುತ್ತದೆ. ಹಾಗಾದ್ರೆ ಈ ಬಕ್ರೀದ್ ಹಬ್ಬದ ವಿಶೇಷತೆ ಹಾಗೂ ಮಹತ್ವದ ಬಗೆಗಿನ ಮಾಹಿತಿ ಇಲ್ಲಿದೆ.

Eid-ul-Adha 2024: ತ್ಯಾಗ ಬಲಿದಾನದ ಪ್ರತೀಕವೇ ಈ 'ಬಕ್ರೀದ್ ' ಏನಿದರ ವಿಶೇಷತೆ?
Bakrid 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Jun 16, 2024 | 4:11 PM

ಮುಸ್ಲಿಂ ಬಾಂಧವರ ಪ್ರಮುಖ ಹಬ್ಬಗಳಲ್ಲಿ ಬಕ್ರೀದ್ ಕೂಡ ಒಂದು. ಈ ಹಬ್ಬವನ್ನು ಈದ್-ಉಲ್-ಅಜಾ ಎಂದೂ ಕರೆಯುತ್ತಾರೆ. ರಂಜಾನ್ ಮುಗಿದ 70 ದಿನಗಳ ನಂತರ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ. ಹೀಗಾಗಿ ಈ ಹಬ್ಬವನ್ನು ಇಸ್ಲಾಮಿಕ್ ಕ್ಯಾಲೆಂಡರ್‌ನ ಕೊನೆಯ ತಿಂಗಳ ಜು-ಅಲ್-ಹಿಜ್‌ನಲ್ಲಿ ಆಚರಿಸಲಾಗುತ್ತದೆ. ಆದರೆ ಈ ಈದ್-ಉಲ್-ಅದಾ ಆಚರಣೆಗೆ ನಿರ್ದಿಷ್ಟ ದಿನಾಂಕ ಎಂಬುದಿಲ್ಲ ಚಂದ್ರನು ಗೋಚರಿಸಿದ ನಂತರವೇ ಬಕ್ರೀದ್ ಆಚರಿಸುವ ಸಂಪ್ರದಾಯವಿದೆ. ಈ ಬಾರಿ ಬಕ್ರೀದ್ ಹಬ್ಬವನ್ನು ಜೂನ್ 17ರ ಸೋಮವಾರದಂದು ಆಚರಿಸಲಾಗುತ್ತಿದೆ.

ಬಕ್ರೀದ್ ಹಬ್ಬದ ಇತಿಹಾಸ:

ಬಕ್ರೀದ್ ಆಚರಣೆಯ ಹಿಂದೆ ಹಜರತ್ ಇಬ್ರಾಹಿಂ ಅವರ ತ್ಯಾಗ ಬಲಿದಾನದ ಕಥೆಯಿದೆ. ಹಜರತ್ ಇಬ್ರಾಹಿಂ ಎನ್ನುವವರು ದೇವರ ಮೇಲೆ ಅಪಾರ ನಂಬಿಕೆಯನ್ನು ಹೊಂದಿದ್ದ ವ್ಯಕ್ತಿಯಾಗಿದ್ದರು. ಹೀಗಿರುವಾಗ ಒಂದೊಮ್ಮೆ ಹಜರತ್ ಇಬ್ರಾಹಿಂ ತನ್ನ ಮಗನನ್ನು ತ್ಯಾಗ ಮಾಡುತ್ತಿದ್ದಾನೆ ಎಂದು ಕನಸು ಕಾಣುತ್ತಾನೆ. ಕನಸನ್ನು ಸಂದೇಶವೆಂದು ಭಾವಿಸಿ, ತನ್ನ ಮಗನನ್ನು ಬಲಿ ಕೊಡಲು ಮುಂದಾಗುತ್ತಾನೆ. ಆದರೆ ದೇವರು ಮಗನ ಬದಲು ಪ್ರಾಣಿಯನ್ನು ಬಲಿ ಕೊಡುವ ಸಂದೇಶವನ್ನು ನೀಡುತ್ತಿದ್ದಂತೆ, ಮಗನ ಬದಲಿಗೆ ತನ್ನ ಪ್ರೀತಿಯ ಕುರಿ ಮರಿಯನ್ನು ಬಲಿ ನೀಡುತ್ತಾನೆ. ಇದನ್ನು ಬಕ್ರಾ-ಈದ್’ ಅಂದರೆ ಬಕ್ರೀದ್ ಎಂದು ಕರೆಯಲಾಗುತ್ತದೆ. ಈ ಕಾರಣದಿಂದಲೇ ಈದ್-ಉಲ್-ಅಜಾ ದಿನದಂದು ಮೇಕೆಯನ್ನು ಬಲಿಕೊಡುವ ಸಂಪ್ರದಾಯವು ಪ್ರಾರಂಭವಾಯಿತು ಎನ್ನಬಹುದು.

ಇದನ್ನೂ ಓದಿ: ಅಪ್ಪಂದಿರ ದಿನವನ್ನು ವಿಶೇಷವಾಗಿ ಆಚರಿಸಿ, ನಿಮ್ಮ ತಂದೆಯನ್ನು ಖುಷಿಪಡಿಸಿ

ಬಕ್ರೀದ್ ಹಬ್ಬದ ಸಂಪ್ರದಾಯ ಹಾಗೂ ಆಚರಣೆ ಹೇಗೆ?

ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ. ಈ ದಿನದಂದು ಮುಸ್ಲಿಂ ಬಾಂಧವರು ಬೆಳಿಗ್ಗೆ ಎದ್ದು ನಮಾಜ್ ಮಾಡಲು ಹೋಗುತ್ತಾರೆ. ಮುಸ್ಲಿಂರ ಈ ಹಬ್ಬದಂದು ತಮ್ಮ ಮನೆಗಳಲ್ಲಿ ಸಾಕಿರುವ ಅಥವಾ ಹಬ್ಬಕ್ಕೆ ಕೆಲವೇ ದಿನವಿರುವಾಗಲೇ ತಂದ ಮೇಕೆಗಳನ್ನು ಬಲಿ ಕೊಡುವ ಪದ್ಧತಿಯಿದೆ. ಮೇಕೆಯನ್ನು ಬಲಿ ಕೊಟ್ಟ ಬಳಿಕ, ಈ ಮಾಂಸವನ್ನು ಮೂರು ಭಾಗಗಳಾಗಿ ವಿಂಗಡಿಸಲಾಗುತ್ತದೆ. ಮೊದಲ ಭಾಗವನ್ನು ಸಂಬಂಧಿಕರು, ಸ್ನೇಹಿತರು ಮತ್ತು ನೆರೆಹೊರೆಯವರಿಗೆ ನೀಡಲಾಗುತ್ತದೆ. ಎರಡನೆಯ ಭಾಗವನ್ನು ಬಡವರು ಮತ್ತು ನಿರ್ಗತಿಕರಿಗೆ ಹಾಗೂ ಮೂರನೇ ಭಾಗವನ್ನು ಕುಟುಂಬದವರು ಇಟ್ಟುಕೊಳ್ಳುತ್ತಾರೆ. ಈ ದೇವರ ಪ್ರಸಾದವನ್ನು ಅಡುಗೆ ಮಾಡಿ ಕುಟುಂಬ ಸದಸ್ಯರು ಸವಿದು ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ