National Engineers Day 2024: ರಾಷ್ಟ್ರೀಯ ಇಂಜಿನಿಯರ್ಸ್ ದಿನದ ಇತಿಹಾಸ, ಮಹತ್ವವೇನು? ಈ ದಿನದ ಶುಭಾಶಯ ಈ ರೀತಿ ತಿಳಿಸಿ

ಪ್ರತಿವರ್ಷ ಸೆಪ್ಟೆಂಬರ್ 15 ರಂದು ರಾಷ್ಟ್ರೀಯ ಇಂಜಿನಿಯರ್‌ಗಳ (National Engineer’s Day) ದಿನವನ್ನು ಆಚರಿಸಲಾಗುತ್ತದೆ. ಡಾ. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಸೆಪ್ಟೆಂಬರ್ 15, 1861 ರಂದು ಜನಿಸಿದರು. ಭಾರತದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ವ್ಯಕ್ತಿಗಳಲ್ಲಿ ಅವರು ಅಗ್ರಗಣ್ಯರು. ಕೃಷ್ಣ ರಾಜ ಸಾಗರ ಅಣೆಕಟ್ಟು, ಮೈಸೂರು ಅರಮನೆ ಮತ್ತು ಬೆಂಗಳೂರು ನೀರು ಸರಬರಾಜು ಯೋಜನೆ ಸೇರಿದಂತೆ ಹಲವಾರು ಸಾಂಪ್ರದಾಯಿಕ ರಚನೆಗಳನ್ನು ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಹಾಗಾಗಿಯೇ ಅವರ ಈ ಅತ್ಯಮೂಲ್ಯ ಕೊಡುಗೆಗಳನ್ನು ನೆನೆಯುವುದಕ್ಕಾಗಿ ಸೆಪ್ಟೆಂಬರ್ 15 ರಂದು ಇಂಜಿನಿಯರ್‌​ ದಿನವನ್ನು ಆಚರಿಸಲಾಗುತ್ತದೆ.

National Engineers Day 2024: ರಾಷ್ಟ್ರೀಯ ಇಂಜಿನಿಯರ್ಸ್ ದಿನದ ಇತಿಹಾಸ, ಮಹತ್ವವೇನು? ಈ ದಿನದ ಶುಭಾಶಯ ಈ ರೀತಿ ತಿಳಿಸಿ
Engineer’s Day 2024
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Sep 15, 2024 | 10:26 AM

ಭಾರತದ ಶ್ರೇಷ್ಠ ಇಂಜಿನಿಯರ್‌ಗಳಲ್ಲಿ ಒಬ್ಬರಾದ ಡಾ. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿಗಾಗಿ ಮತ್ತು ವಿಶ್ವದಾದ್ಯಂತ ಇಂಜಿನಿಯರ್‌ ಗಳ ಅಪಾರ ಕೊಡುಗೆಗಳು ಮತ್ತು ಸಾಧನೆಗಳನ್ನು ಗೌರವಿಸಲು ಪ್ರತಿವರ್ಷ ಸೆಪ್ಟೆಂಬರ್ 15 ರಂದು ರಾಷ್ಟ್ರೀಯ ಇಂಜಿನಿಯರ್‌ಗಳ (National Engineer’s Day) ದಿನವನ್ನು ಆಚರಿಸಲಾಗುತ್ತದೆ. ಡಾ. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಸೆಪ್ಟೆಂಬರ್ 15, 1861 ರಂದು ಜನಿಸಿದರು. ಭಾರತದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ವ್ಯಕ್ತಿಗಳಲ್ಲಿ ಅವರು ಅಗ್ರಗಣ್ಯರು. ಕೃಷ್ಣ ರಾಜ ಸಾಗರ ಅಣೆಕಟ್ಟು, ಮೈಸೂರು ಅರಮನೆ ಮತ್ತು ಬೆಂಗಳೂರು ನೀರು ಸರಬರಾಜು ಯೋಜನೆ ಸೇರಿದಂತೆ ಹಲವಾರು ಸಾಂಪ್ರದಾಯಿಕ ರಚನೆಗಳನ್ನು ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಹಾಗಾಗಿಯೇ ಅವರ ಈ ಅತ್ಯಮೂಲ್ಯ ಕೊಡುಗೆಗಳನ್ನು ನೆನೆಯುವುದಕ್ಕಾಗಿ ಸೆಪ್ಟೆಂಬರ್ 15 ರಂದು ಇಂಜಿನಿಯರ್‌​ ದಿನವನ್ನು ಆಚರಿಸಲಾಗುತ್ತದೆ.

ಇಂಜಿನಿಯರ್‌​ ದಿನದ ಇತಿಹಾಸ:

ಸರ್ಕಾರವು 1968 ರಲ್ಲಿ ಸೆಪ್ಟೆಂಬರ್ 15 ಅನ್ನು ಇಂಜಿನಿಯರ್‌ಗಳ ದಿನವೆಂದು ಘೋಷಿಸಿತು. ವಿಶ್ವೇಶ್ವರಯ್ಯನವರ ಪರಂಪರೆಯನ್ನು ಗೌರವಿಸಲು ಮತ್ತು ಸಮಾಜಕ್ಕೆ ಎಲ್ಲಾ ಇಂಜಿನಿಯರ್‌ಗಳ ಕೊಡುಗೆಗಳನ್ನು ಗುರುತಿಸಲು ಭಾರತದಾದ್ಯಂತ ಇಂಜಿನಿಯರ್‌ಗಳು ಈ ದಿನವನ್ನು ಆಚರಿಸುತ್ತಾರೆ. ಅದಲ್ಲದೆ ಈ ದಿನವನ್ನು ಆಚರಿಸುವ ಮೂಲಕ, ನಮ್ಮ ಜೀವನವನ್ನು ಉತ್ತಮಗೊಳಿಸುವ ಇಂಜಿನಿಯರ್‌ಗಳಿಗೆ ನಾವು ನಮ್ಮ ಮೆಚ್ಚುಗೆಯನ್ನು ತೋರಿಸಬಹುದು.

ಇಂಜಿನಿಯರ್‌​ ದಿನದ ಮಹತ್ವ ಮತ್ತು ಆಚರಣೆಗಳು:

ಇಂಜಿನಿಯರ್‌ ಗಳ ದಿನದ ಮಹತ್ವವು ಸಮಾಜದಲ್ಲಿ ಅವರು ವಹಿಸುವ ನಿರ್ಣಾಯಕ ಪಾತ್ರವನ್ನು ಗುರುತಿಸುವುದರಲ್ಲಿದೆ. ಮೂಲಸೌಕರ್ಯ ಮತ್ತು ಸಾರಿಗೆಯಿಂದ ತಂತ್ರಜ್ಞಾನ ಮತ್ತು ಆರೋಗ್ಯ ರಕ್ಷಣೆಯ ವರೆಗೆ, ಇಂಜಿನಿಯರ್‌ ಗಳು ದೈನಂದಿನ ಜೀವನದ ಭಾಗವಾಗಿರುತ್ತಾರೆ. ಸರಳ ಭಾಷೆಯಲ್ಲಿ ಹೇಳುವುದಾದರೆ ಇಂಜಿನಿಯರ್‌ಗಳ ಜಾಣ್ಮೆ ಮತ್ತು ಸೃಜನಶೀಲತೆಯನ್ನು ಕೊಂಡಾಡುವ ದಿನ ಇದು ಎಂದು ಹೇಳಬಹುದಾಗಿದೆ. ಈ ದಿನವನ್ನು ಶಿಕ್ಷಣ ಸಂಸ್ಥೆಗಳು, ಇಂಜಿನಿಯರ್‌ ಕಾಲೇಜುಗಳು ಮತ್ತು ವೃತ್ತಿಪರ ಸಂಸ್ಥೆಗಳು ನಾನಾ ರೀತಿಯ ಸೆಮಿನಾರ್ ಗಳನ್ನು ಆಯೋಜಿಸಲಾಗುತ್ತದೆ. ಜೊತೆಗೆ ವಿವಿಧ ಕಾರ್ಯಾಗಾರಗಳು ಮತ್ತು ಸಮ್ಮೇಳನಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: ಯಾವ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ಅಗತ್ಯವಿರುತ್ತದೆ? ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡುವುದು ಹೇಗೆ?

ಇಂಜಿನಿಯರ್ಸ್ ದಿನ ಈ ರೀತಿ ಶುಭಾಶಯ ತಿಳಿಸಿ:

  • “ಉತ್ತಮ ಭವಿಷ್ಯವನ್ನು ರಚಿಸಲು ದಣಿವರಿಯದೆ ಕೆಲಸ ಮಾಡುತ್ತಿರುವ ಎಲ್ಲಾ ಪ್ರತಿಭಾವಂತರಿಗೆ ಇಂಜಿನಿಯರ್‌ ಗಳಿಗೆ ಶುಭಾಶಯಗಳು. ನಿಮ್ಮ ಕೆಲಸ ಆಧುನಿಕ ಸಮಾಜದ ಬೆನ್ನೆಲುಬು!”
  • ರಸ್ತೆ, ಸೇತುವೆ, ಮನೆ, ಕಟ್ಟಡ ಹೀಗೆ ಪ್ರತಿಯೊಂದು ಕಾಮಗಾರಿಯಲ್ಲಿ ತಮ್ಮ ಚಾಣಾಕ್ಷ ತೋರಿ ಪ್ರಗತಿಗೆ ಸಹಕಾರಿಯಾಗಿರುವ ಪ್ರತಿಯೊಬ್ಬ ಇಂಜಿನಿಯರ್ಸ್‌ಗೆ ಇಂಜಿನಿಯರ್ ದಿನದ ಶುಭಾಶಯಗಳು.
  • ದುಡಿಮೆಗೆ ಗುರಿಯಿರಲಿ ದುಡಿಯುವುದರಲ್ಲಿ ನಿಯಮವಿರಲಿ -ಸರ್ ಎಂ.ವಿಶ್ವೇಶ್ವರಯ್ಯ
  • ನಾಡು ಕಂಡು ಮಹೋನ್ನತ ಇಂಜಿಯನರ್ ಸರ್ ಎಂ ವಿ, ಅವರ ಹಾದಿಯಲ್ಲಿ ಸಾಗುತ್ತಿರುವ ನಿಮಗೆ ಇಂಜಿನಿಯರ್ಸ್ ಡೇಯ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ