AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikoo Benefits In Winter: ಚಳಿಗಾಲದಲ್ಲಿ ಸಪೋಟಾ ಹಣ್ಣು ಸೇವಿಸುವುದು ಉತ್ತಮ, ಇದರಲ್ಲಿ ಈ ಆರೋಗ್ಯ ಪ್ರಯೋಜನ

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯ ಕೊರತೆಯಿಂದಾಗಿ ಶೀತ, ಕೆಮ್ಮು ಸೇರಿದಂತೆ ಹಲವಾರು ಆರೋಗ್ಯ ಸಂಬಂಧಿ ಸಮಸ್ಯೆಗಳು ನಮ್ಮನ್ನು ಕಾಡತೊಡಗುತ್ತವೆ. ಹಾಗಿರುವಾಗ ಇಂತಹ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಉತ್ಕರ್ಷಣ ನಿರೋಧಕಗಳು, ಖನಿಜಗಳು ಮತ್ತು ಜೀವಸತ್ವಗಳಿಂದ ಸಮೃದ್ಧವಾಗಿರುವ ಸಪೋಟಾ ಹಣ್ಣನ್ನು ಸೇವನೆ ಮಾಡುವುದು ಉತ್ತಮ.

Chikoo Benefits In Winter: ಚಳಿಗಾಲದಲ್ಲಿ ಸಪೋಟಾ ಹಣ್ಣು ಸೇವಿಸುವುದು ಉತ್ತಮ, ಇದರಲ್ಲಿ ಈ ಆರೋಗ್ಯ ಪ್ರಯೋಜನ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Oct 31, 2023 | 6:36 PM

Share

ಚಳಿಗಾಲದಲ್ಲಿನ ಶೀತ ಹವಾಮಾನದಿಂದಾಗಿ  ದೇಹದ ರೋಗನಿರೋಧಕ ಶಕ್ತಿ ಕುಂಠಿತಗೊಂಡು ಶೀತ, ಜ್ವರ, ಕೆಮ್ಮು ಇತ್ಯಾದಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಹಾಗಾಗಿ ಚಳಿಗಾಲದಲ್ಲಿ ಆರೋಗ್ಯಕರ, ಪೌಷ್ಟಿಕಾಂಶಯುಕ್ತ  ಆಹಾರವನ್ನು ಸೇವನೆ ಮಾಡಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.  ಈ ಚಳಿಗಾಲದಲ್ಲಿ ತಿನ್ನಲು ಯೋಗ್ಯವಾದ ಆರೋಗ್ಯಕರ ಹಣ್ಣುಗಳಲ್ಲಿ ಸಪೋಟಾ ಕೂಡಾ ಒಂದು.  ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿರುವ  ಸಪೋಟಾ ತಿನ್ನಲು ರುಚಿಕರ ಮಾತ್ರವಲ್ಲದೆ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಇದರಲ್ಲಿರುವ ಹೆಚ್ಚಿನ  ಫೈಬರ್ ಅಂಶವು ಹೊಟ್ಟೆ ಸಂಬಂಧಿ ಸಮಸ್ಯೆಗಳನ್ನು ತಡೆಯುತ್ತದೆ ಮತ್ತು ಇದರಲ್ಲಿರುವ ನೈಸರ್ಗಿಕ ಗ್ಲೂಕೋಸ್  ಅಂಶವು ನಿಮಗೆ ತ್ವರಿತ ಶಕ್ತಿಯನ್ನು ನೀಡುತ್ತದೆ. ಆದ್ದರಿಂದ ಇದು ಚಳಿಗಾಲದ ಶೀತ ವಾತವರಣದಲ್ಲಿ ಸೇವಿಸಲು ಪರಿಪೂರ್ಣವಾದ  ಹಣ್ಣಾಗಿದೆ.

ಚಳಿಗಾಲದಲ್ಲಿ ಸಪೋಟಾ ಸೇವಿಸುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳು:

ಕೆಮ್ಮು ಮತ್ತು ಶೀತದಿಂದ ಪರಿಹಾರ: ಚಳಿಗಾಲದಲ್ಲಿ ಸಪೋಟಾ ತಿಂದರೆ ಕೆಮ್ಮು ಮತ್ತು ನೆಗಡಿ ಸಮಸ್ಯೆ ನಿವಾರಣೆಯಾಗುತ್ತದೆ. ಸಪೋಟಾ ದೇಹವನ್ನು ಬೆಚ್ಚಗಾಗಿರಿಸಲು ಸಹಾಯ ಮಾಡುತ್ತದೆ.  ಆದ್ದರಿಂದ ಇದನ್ನು ತಿನ್ನುವುದರಿಂದ ದೀರ್ಘಕಾಲದ ಕೆಮ್ಮು ಸಹ ನಿವಾರಣೆಯಾಗುತ್ತದೆ. ಅಲ್ಲದೆ ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ: ಚಳಿಗಾಲದಲ್ಲಿ ಸಾಮಾನ್ಯವಾಗಿ ರೋಗನಿರೋಧಕ ಶಕ್ತಿ ಕುಂಠಿತಗೊಳ್ಳುತ್ತದೆ. ಹಾಗಿರುವಾಗ  ಸಪೋಟಾ ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು. ಇದರಲ್ಲಿ ಹೆಚ್ಚಿನ ಉತ್ಕರ್ಷಣ ನಿರೋಧಕಗಳಿದ್ದು, ಇದು ರೋಗಗಳ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ. ಮತ್ತು ಇದರ ಸೇವನೆಯಿಂದ ರೋಗನಿರೋಧಕ ಶಕ್ತಿಯು ಬಲಗೊಳ್ಳುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ: ಹಲವರಿಗೆ ಚಳಿಗಾಲದಲ್ಲಿ ರಕ್ತದೊತ್ತಡದ ಸಮಸ್ಯೆ ಹೆಚ್ಚಾಗತೊಡಗುತ್ತದೆ. ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ನೀವು ಸಪೋಟಾ ಸೇವಿಸಬಹುದು. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ಮೆಗ್ನೇಸಿಯಂ ಹೇರಳವಾಗಿದ್ದು, ಇದು ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾರಿ: ಸಾಮಾನ್ಯವಾಗಿ ಚಳಿಗಾಲದಲ್ಲಿ ಚರ್ಮವು ನಿರ್ಜೀವವಾಗಿ ಮತ್ತು ಶುಷ್ಕವಾಗಿ ಕಾಣಲು ಪ್ರಾರಂಭಿಸುತ್ತದೆ.  ಅಲ್ಲದೆ ತ್ವಚೆಯ ತೇವಾಂಶ ಮತ್ತು ಹೊಳಪು ಕಡಿಮೆಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ವಿಟಮಿನ್ ಸಿ ಮತ್ತ ಫೈಬರ್ ಅಂಶಗಳಲ್ಲಿ ಸಮೃದ್ಧವಾಗಿರುವ ಸಪೋಟಾ ಹಣ್ಣನ್ನು ಸೇವನೆ ಮಾಡುವ ಮೂಲಕ ತ್ವಚೆಯ ಹೊಳಪನ್ನು ಹೆಚ್ಚಿಸಬಹುದು.

ಇದನ್ನೂ ಓದಿ: ಈ 4 ಹಣ್ಣುಗಳನ್ನು ಸಿಪ್ಪೆಯೊಂದಿಗೆ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಿಸಬಹುದು

ಮೂಳೆಗಳನ್ನು ಬಲಡಿಸುತ್ತದೆ: ಚಳಿಗಾಲದಲ್ಲಿ ಹೆಚ್ಚಿನವರಿಗೆ ಕೀಲು ನೋವು ಅಥವಾ ಮೂಳೆ ಸಂಬಂಧಿ ಸಮಸ್ಯೆಗಳು ಬಾಧಿಸುತ್ತವೆ. ಹಾಗಿರುವಾಗ ಈ ಸಮಯದಲ್ಲಿ ಕ್ಯಾಲ್ಸಿಯಂನಿಂದ ಸಮೃದ್ಧವಾಗಿರುವ ಸಪೋಟಾ ಹಣ್ಣನು ಸೇವನೆ ಮಾಡುವ ಮೂಲಕ ಮೂಳೆಗಳ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅಲ್ಲದೆ  ಇದರಲ್ಲಿ ಕಬ್ಬಿಣಾಂಶ, ಮೆಗ್ನೇಷಿಯಂ, ರಂಜಕ ಮತ್ತು ಫೋಲೆಟ್ ಇತ್ಯಾದಿ ಖನಿಜಗಳಿದ್ದು, ಇದು ನಿಮ್ಮ ಮೂಳೆಗಳನ್ನು ದೀರ್ಘಕಾಲದವರೆಗೆ ಆರೋಗ್ಯಕರವಾಗಿರಿಸುತ್ತದೆ.

ತೂಕ ಇಳಿಕೆಗೆ ಸಹಕಾರಿ: ನೀವು ಚಳಿಗಾಲದ ತೂಕ ಇಳಿಸಿಕೊಳ್ಳುವ ಯೋಜನೆಯಲ್ಲಿದ್ದರೆ ಖಂಡಿತವಾಗಿ ನಿಮ್ಮ ಆಹಾರದಲ್ಲಿ ಸಪೋಟಾವನ್ನು ಸೇರಿಸಿ. ಸಪೋಟಾ ತಿನ್ನುವುದರಿಂದ ಚಯಾಪಚಯ ಕ್ರಿಯೆಯು ಸರಾಗಗೊಳ್ಳುತ್ತದೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?