AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Social Media Addiction: ಅತಿಯಾದ ಮೊಬೈಲ್ ಪೋನ್ ಬಳಕೆ ನಿಮ್ಮ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಚ್ಚರ

ಭಾರತದಲ್ಲಿ 40 ಪ್ರತಿಶತದಷ್ಟು ನಗರ ಪ್ರದೇಶಗಳಲ್ಲಿ ವಾಸಿಸುವವರಲ್ಲಿ 9 ರಿಂದ 17 ರ ನಡುವಿನ ವಯಸ್ಸಿನ ಮಕ್ಕಳು ವೀಡಿಯೊ ಗೇಮಿಂಗ್ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ವ್ಯಸನಿಯಾಗಿದ್ದಾರೆ ಎಂದು ಸ್ವತಃ ಪೋಷಕರೇ ಒಪ್ಪಿಕೊಂಡಿದ್ದಾರೆ.

Social Media Addiction: ಅತಿಯಾದ ಮೊಬೈಲ್ ಪೋನ್ ಬಳಕೆ ನಿಮ್ಮ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಚ್ಚರ
Social Media AddictsImage Credit source: Lifeberrys.com
TV9 Web
| Updated By: ಅಕ್ಷತಾ ವರ್ಕಾಡಿ|

Updated on: Dec 02, 2022 | 2:00 PM

Share

ತಂತ್ರಜ್ಞಾನಗಳು ಮುಂದುವರೆಯುತ್ತಿದ್ದಂತೆ ಸಂಬಂಧಗಳ ಬೆಲೆ ಕಡಿಮೆಯಾಗುತ್ತಿದೆ. ಕೋವಿಡ್ ನಂತರದ ದಿನಗಳಲ್ಲಿ ಮಕ್ಕಳು ಸಂಬಂಧಗಳಿಗಿಂತ ಹೆಚ್ಚಾಗಿ ತಂತ್ರಜ್ಞಾನದ ಕಡೆ ಒಲವು ತೋರಿಸುತ್ತಿರುವುದು ಕಂಡುಬರುತ್ತಿದೆ. ಸಾಮಾಜಿಕ ಜಾಲತಾಣ(Social Media) ಗಳಲ್ಲಿ ಸಕ್ರಿಯವಾಗಿದ್ದು, ಅವರ ಜೀವನದ ಪ್ರತಿಯೊಂದು ನೋವು ನಲಿವುಗಳನ್ನು ತಮ್ಮ ಖಾತೆಗಳ ಮೂಲಕ ಹಂಚಿಕೊಳ್ಳುವುದನ್ನು ದೈನಂದಿನ ಜೀವನಕ್ರಮದಲ್ಲಿ ರೂಢಿಸಿಕೊಂಡಿದ್ದಾರೆ. ಜೊತೆಗೆ ವೀಡಿಯೋ ಗೇಮ್‌ಗಳಲ್ಲಿ ದಾಸರಾಗಿರುವುದನ್ನು ಕಾಣಬಹುದು.

ಭಾರತದಲ್ಲಿ 40 ಪ್ರತಿಶತದಷ್ಟು ನಗರ ಪ್ರದೇಶಗಳಲ್ಲಿ ವಾಸಿಸುವವರಲ್ಲಿ 9 ರಿಂದ 17 ರ ನಡುವಿನ ವಯಸ್ಸಿನ ಮಕ್ಕಳು ವೀಡಿಯೊ ಗೇಮಿಂಗ್ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ವ್ಯಸನಿಯಾಗಿದ್ದಾರೆ ಎಂದು ಸ್ವತಃ ಪೋಷಕರೇ ಒಪ್ಪಿಕೊಂಡಿದ್ದಾರೆ. ಕೋವಿಡ್ ನಂತರದ ದಿನಗಳಲ್ಲಿ ಆನ್‌ಲೈನ್ ಕಲಿಕೆಯು ಆರಂಭವಾಗಿದ್ದು, ಇದರಿಂದಾಗಿ ಪ್ರತಿಯೊಂದು ಮಗುವೂ ಕೂಡ ಮೊಬೈಲ್ ಫೋನ್ ಬಳಸುವುದು ಅನಿವಾರ್ಯವಾಗಿದೆ. ಜೊತೆಗೆ ಸಂಕ್ರಾಮಿಕ ರೋಗ ಹರಡುವ ಭಯದಿಂದ ಮಕ್ಕಳನ್ನು ಹೊರಗಡೆ ಎಲ್ಲೂ ಬಿಡದೇ ಮನೋರಂಜನೆಗಾಗಿ ಕೈಯಲ್ಲಿ ಒಂದು ಫೋನ್ ಕೊಟ್ಟು ಮನೆಯೊಳಗಡೆಯೇ ಬಂಧಿಯಾಗಿಸಿದ್ದಾರೆ. ಇದು ಪೋಷಕರೇ ತಮ್ಮ ಮಕ್ಕಳನ್ನು ಸಮಸ್ಯೆಯತ್ತ ತಳ್ಳುತ್ತಿರುವಂತೆ ಆಗಿಬಿಟ್ಟಿದೆ.

ಸಾಂಕ್ರಾಮಿಕ ಸಮಯದಲ್ಲಿ ಫೋನ್ ಗಳ ಅತಿಯಾದ ಬಳಕೆ ಮತ್ತು ಆನ್‌ಲೈನ್ ಶಾಲಾ ಚಟುವಟಿಕೆಯ ಮೂಲಕ ಸುಲಭವಾಗಿ ಪ್ರವೇಶಿಸುವುದು ತಮ್ಮ ಮಕ್ಕಳು ಸಾಮಾಜಿಕ ಮಾಧ್ಯಮ, ವೀಡಿಯೊಗಳು ಮತ್ತು ಗೇಮಿಂಗ್‌ಗೆ ವ್ಯಸನಿಯಾಗಲು ಪ್ರಮುಖ ಕಾರಣಗಳಾಗಿವೆ ಎಂದು ಹೆಚ್ಚಿನ ಪೋಷಕರು ನಂಬುತ್ತಾರೆ ಎಂದು ಸಮೀಕ್ಷೆಯೊಂದು ತೋರಿಸಿದೆ. ಸಮೀಕ್ಷೆಯ ಪ್ರಕಾರ 68 ರಷ್ಟು ಪೋಷಕರು ಸಾಮಾಜಿಕ ಜಾಲತಾಣಗಳಲ್ಲಿನ ಬಳಕೆಯ ವಯೋಮಿತಿಯನ್ನು 13 ರಿಂದ 15 ವರ್ಷಕ್ಕೆ ಏರಿಸಬೇಕು ಎಂದು ಹೇಳಿದ್ದಾರೆ.

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗದ ಅಧ್ಯಯನವು 10 ವರ್ಷ ವಯಸ್ಸಿನ ಮಕ್ಕಳು ಶೇಕಡಾ 37.8ರಷ್ಟು ಮಕ್ಕಳು ಫೇಸ್‌ಬುಕ್ ಖಾತೆಯನ್ನು ಹೊಂದಿದ್ದರೆ, ಶೇಕಡಾ 24.3ರಷ್ಟು ಮಕ್ಕಳು ಇನ್ಸ್ಟಾ ಗ್ರಾಮ್ ಖಾತೆಯನ್ನು ಹೊಂದಿದ್ದಾರೆ ಎಂದು ತೋರಿಸಿದೆ.

ಸೋಶಿಯಲ್ ಮೀಡಿಯಾದ ಅತಿಯಾದ ಬಳಕೆ ನಿದ್ರೆ, ಕಿರಿಕಿರಿ, ಒತ್ತಡ, ಆತಂಕ, ಖಿನ್ನತೆ ಮತ್ತು ಏಕಾಗ್ರತೆಯ ತೊಂದರೆಗೆ ಕಾರಣವಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಹೆಚ್ಚಿನ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಖಾತೆ ತೆರೆಯಲು ಕನಿಷ್ಠ ವಯಸ್ಸು 13 ಎಂದು ನಿಗದಿಪಡಿಸಿವೆ.

ಇದನ್ನು ಓದಿ: ಹದಿಹರೆಯದವರ ಮಾನಸಿಕ ಆರೋಗ್ಯವನ್ನು ಕಾಪಾಡಲು ಇಲ್ಲಿದೆ ಸೂಕ್ತ ಸಲಹೆ

ಆದ್ದರಿಂದ ಪ್ರತಿಯೊಂದು ಪೋಷಕರೂ ಮಕ್ಕಳ ಬಳಸುವ ಮೊಬೈಲ್ ಫೋನ್ ಸಮಯವನ್ನು ನಿಗದಿಪಡಿಸಬೇಕಿದೆ. ಪ್ರತಿ ದಿನ 2ರಿಂದ ಮೂರು ಗಂಟೆಗಳ ವರೆಗೆ ಸಮಯವನ್ನು ನಿಗದಿ ಪಡಿಸಬೇಕು. ವೀಡಿಯೋ ಗೇಮ್‌ಗಳಲ್ಲಿ ಮಕ್ಕಳನ್ನು ಪ್ರೇರೇಪಿಸುವ ಬದಲು ಆದಷ್ಟು ನಿಮ್ಮ ಬಿಡುವಿನ ಸಮಯದಲ್ಲಿ ಅವರನ್ನು ಹೊರಗಡೆ ಕರೆದುಕೊಂಡು ಹೋಗಬೇಕು. ನಿಮ್ಮ ಮಕ್ಕಳಿಗೆ ನೀವು ಆದಷ್ಟು ಸಮಯ ಕೊಡುವುದು ಅತ್ಯಂತ ಅಗತ್ಯವಾಗಿದೆ. ಇದರಿಂದಾಗಿ ಅವರ ಮಾನಸಿಕ ಸ್ಥಿತಿಯನ್ನು ಆರೋಗ್ಯಗೊಳಿಸಬಹುದಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ