AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fennel Seed Water: ಪ್ರತಿದಿನ ಸೋಂಪು ನೀರು ಕುಡಿಯುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನಗಳು ಲಭಿಸುತ್ತದೆ?

ಸಾಮಾನ್ಯವಾಗಿ ಬಹುತೇಕ ಮಂದಿ ಊಟದ ಬಳಿಕ ಒಂದು ಸ್ಪೂನ್‌ ಸೋಂಪು ಸೇವನೆ ಮಾಡ್ತಾರೆ. ಇದು ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಲು, ಜೀರ್ಣಕ್ರಿಯೆಯನ್ನು ಸುಧಾರಿಸಲು ತುಂಬಾನೇ ಸಹಕಾರಿ. ಇದಲ್ಲದೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ನಂತರ ಸೋಂಪು ನೀರನ್ನು ಕುಡಿಯುವುದು ಸಹ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಒಟ್ಟಾರೆಯಾಗಿ ಸೋಂಪು ನೀರು ಕುಡಿಯುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

Fennel Seed Water: ಪ್ರತಿದಿನ ಸೋಂಪು ನೀರು ಕುಡಿಯುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನಗಳು ಲಭಿಸುತ್ತದೆ?
ಸೋಂಪು ನೀರುImage Credit source: Getty Images
ಮಾಲಾಶ್ರೀ ಅಂಚನ್​
|

Updated on: Aug 24, 2026 | 7:49 PM

Share

ಮುಖ್ಯಾಂಶಗಳು

  • ಸೋಂಪು ನೀರು ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ
  • ಸೋಂಪು ನೀರು ಗ್ಯಾಸ್, ಹಿಟ್ಟೆ ಉಬ್ಬರ ಮತ್ತು ಆಮ್ಲೀಯತೆಯ ಸಮಸ್ಯೆಯನ್ನು ನಿವಾರಿಸುತ್ತದೆ
  • ಸೋಂಪು ನೀರು ಬಾಯಿದ ದುರ್ವಾಸನೆಯನ್ನು ನಿವಾರಿಸಲು ಸಹ ಸಹಕಾರಿ

ಸೋಂಪು (fennel)  ಉತ್ಕರ್ಷಣ ನಿರೋಧಕ, ಉರಿಯೂತ ನಿವಾರಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿಂದ ಸಮೃದ್ಧವಾಗಿದೆ. ಅಲ್ಲದೆ ಇದರಲ್ಲಿ ವಿಟಮಿನ್ ಸಿ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಫೈಬರ್ ನಂತಹ ಅನೇಕ ಪೋಷಕಾಂಶಗಳಿದ್ದು, ಇದು ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಹೌದು ಇದು ಜೀರ್ಣಾಕ್ರಿಯೆಯನ್ನು ಸುಧಾರಿಸಲು, ಆಮ್ಲೀಯತೆಯನ್ನು ಕಡಿಮೆ ಮಾಡಲು, ಬಾಯಿಯ ದುರ್ವಾಸನೆಯನ್ನು ಕಡಿಮೆ ಮಾಡಲು ತುಂಬಾನೇ ಸಹಕಾರಿ. ಅದಕ್ಕಾಗಿಯೇ ಹೆಚ್ಚಿನವರು ಊಟದ ಬಳಿಕ ಒಂದು ಸ್ಪೂನ್‌ ಸೋಂಪು ಕಾಳನ್ನು ಸೇವನೆ ಮಾಡೋದು. ಇದಲ್ಲದೆ ಸೋಂಪು ನೀರನ್ನು ಕುಡಿಯುವುದು ಸಹ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ನೀವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ಬಳಿಕ ಸೋಂಪು ನೀರನ್ನು ಕುಡಿಯಿರಿ.

ಪ್ರತಿದಿನ ಒಂದು ಗ್ಲಾಸ್‌ ಸೋಂಪು ನೀರನ್ನು ಕುಡಿಯುವುದರ ಪ್ರಯೋಜನಗಳು:

ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ:

ಪ್ರತಿ ಊಟದ ನಂತರ ಒಂದು ಲೋಟ ಸೋಂಪು ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆಯ ಸಮಸ್ಯೆಗಳು ಕಡಿಮೆಯಾಗುತ್ತವೆ. ಇದು ನಿಮ್ಮ ಹೊಟ್ಟೆಯನ್ನು ಹಗುರವಾಗಿರಿಸಲು ಮತ್ತು ಸರಿಯಾದ ಜೀರ್ಣಕ್ರಿಯೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೆ ಇದು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಉತ್ತೇಜಿಸುತ್ತದೆ.  ಹೊಟ್ಟೆಯ ಅನಿಲ, ಆಮ್ಲೀಯತೆ, ಮಲಬದ್ಧತೆ ಮತ್ತು ಉಬ್ಬುವಿಕೆಯಿಂದ ತ್ವರಿತ ಪರಿಹಾರವನ್ನು ನೀಡುತ್ತದೆ. ಸೋಂಪು ಅನೆಥೋಲ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ, ಇದು ಹೊಟ್ಟೆಯ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಸೆಳೆತವನ್ನು ಕಡಿಮೆ ಮಾಡುತ್ತದೆ.

ತೂಕ ಇಳಿಸಿಕೊಳ್ಳಲು ಸಹಾಯಕ:

ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಸೋಂಪು ನೀರು ಅತ್ಯುತ್ತಮ ಆಯ್ಕೆಯಾಗಿದೆ. ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ದೇಹವು ಕ್ಯಾಲೊರಿಗಳನ್ನು ವೇಗವಾಗಿ ಸುಡಲು ಸಹಾಯ ಮಾಡುತ್ತದೆ. ಸೋಂಪು ನೀರು ನೈಸರ್ಗಿಕ ಮೂತ್ರವರ್ಧಕವಾಗಿದ್ದು, ಹೆಚ್ಚುವರಿ ದ್ರವಗಳು ಮತ್ತು ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದಲ್ಲದೆ, ಇದರ ಫೈಬರ್ ಅಂಶವು ನಿಮ್ಮನ್ನು ಹೆಚ್ಚು ಸಮಯದವರೆಗೆ ಹೊಟ್ಟೆ ತುಂಬಿರುವಂತೆ ಮಾಡುತ್ತದೆ, ಅನಾರೋಗ್ಯಕರ ತಿಂಡಿಯ ಹಂಬಲ ಮತ್ತು ಅತಿಯಾಗಿ ತಿನ್ನುವುದನ್ನು ಕಡಿಮೆ ಮಾಡುತ್ತದೆ.

ಗ್ಯಾಸ್‌  ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ:

ಸೋಂಪು ನೀರು ಹೊಟ್ಟೆ ಉಬ್ಬರ ಮತ್ತು ಗ್ಯಾಸ್ ಕಡಿಮೆ ಮಾಡುವ ಕಾರ್ಮಿನೇಟಿವ್ ಗುಣಗಳನ್ನು ಹೊಂದಿವೆ. ಅವು ಹೊಟ್ಟೆಯ ಆಮ್ಲವನ್ನು ತಟಸ್ಥಗೊಳಿಸಲು ಸಹಾಯ ಮಾಡುತ್ತದೆ, ಆಮ್ಲೀಯತೆ ಮತ್ತು ಎದೆಯುರಿಯಿಂದ ಪರಿಹಾರವನ್ನು ನೀಡುತ್ತದೆ. ಇದರ ನೀರಿನಲ್ಲಿ ಫೈಬರ್ ಅಧಿಕವಾಗಿದ್ದು, ಇದು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ದೇಹವನ್ನು ಡಿಟಾಕ್ಸ್ ಮಾಡುತ್ತದೆ:

ಸೋಂಪು ನೀರು  ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ಯಕೃತ್ತು ಮತ್ತು ಮೂತ್ರಪಿಂಡಗಳನ್ನು ಶುದ್ಧೀಕರಿಸುತ್ತದೆ, ಇದರಿಂದಾಗಿ ಸ್ಪಷ್ಟ ಮತ್ತು ಹೊಳೆಯುವ ಚರ್ಮ ನಿಮ್ಮದಾಗುತ್ತದೆ.

ಇದನ್ನೂ ಓದಿ: ರಾತ್ರಿ ಮಲಗುವ ಒಂದು ಲೋಟ ಕೊತ್ತಂಬರಿ ಬೀಜದ ನೀರನ್ನು ಕುಡಿಯುವುದರಿಂದ ಏನಾಗುತ್ತೆ ಗೊತ್ತಾ?

ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ:

ವಿಟಮಿನ್ ಸಿ ಮತ್ತು ಕಬ್ಬಿಣದ ಅತ್ಯುತ್ತಮ ಮೂಲವಾಗಿರುವುದರಿಂದ, ಸೋಂಪು ಬೀಜಗಳು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಪ್ರತಿದಿನ ಸೋಂಪು ನೀರನ್ನು ಕುಡಿಯುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಬಹುದು.

ಬಾಯಿಯ ದುರ್ವಾಸನೆಯನ್ನು ಕಡಿಮೆ ಮಾಡುತ್ತದೆ:

ಪ್ರತಿದಿನ ಸೋಂಪು ನೀರನ್ನು ಕುಡಿಯುವುದರಿಂದ ಬಾಯಿಯ ದುರ್ವಾಸನೆ ಕಡಿಮೆಯಾಗುತ್ತದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ಬಾಯಿಯ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ ಮತ್ತು ಉಸಿರಾಟವನ್ನು ತಾಜಾವಾಗಿರಿಸುತ್ತದೆ.ಇದಲ್ಲದೆ ಬರೀ ಸೋಂಪು ಕಾಳುಗಳನ್ನು ಸಹ ನೀವು ಸೇವನೆ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us