ಬೆಳಗಿನ ದಿನಚರಿಯಲ್ಲಿ ಈ ರೂಲ್ಸ್‌ಗಳನ್ನು ಪಾಲಿಸಿದ್ರೆ ನೀವು ಫಿಟ್ ಆ್ಯಂಡ್ ಹೆಲ್ತಿಯಾಗಿರಬಹುದು
ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಜೀವನಶೈಲಿಯ ಕಾರಣದಿಂದಾಗಿ ಹೃದ್ರೋಗ, ಬೊಜ್ಜು ಸೇರಿದಂತೆ ಆರೋಗ್ಯ ಸಂಬಂಧಿ ಸಮಸ್ಯೆಗಳು ತೀರಾ ಹೆಚ್ಚಾಗಿವೆ. ಹೀಗಿರುವಾಗ ಉತ್ತಮ ಆಹಾರ, ದೈನಂದಿನ ವ್ಯಾಯಾಮ ಸೇರಿದಂತೆ ಆರೋಗ್ಯಕರ ಜೀವನಶೈಲಿಯನ್ನು ಪಾಲನೆ ಮಾಡುವ ಮೂಲಕ ಆರೋಗ್ಯವನ್ನು ಸಹ ಕಾಪಾಡಿಕೊಳ್ಳಬಹುದು. ಅದರಲ್ಲೂ ಬೆಳಗಿನ ದಿನಚರಿಯಲ್ಲಿ ಈ ಒಂದಷ್ಟು ಕೆಲಸಗಳನ್ನು ಮಾಡುವುದರಿಂದ ನೀವು ಫಿಟ್ ಮತ್ತು ಆರೋಗ್ಯಕರವಾಗಿರಬಹುದು. ಹಾಗಿದ್ರೆ, ಬೆಳಗಿನ ದಿನಚರಿಯಲ್ಲಿ ಪಾಲಿಸಬೇಕಾದ ಆ ಅಭ್ಯಾಸಗಳು ಯಾವುವು ಎಂಬುದರ ಮಾಹಿತಿಯನ್ನು ತಿಳಿಯಿರಿ.

ದೈಹಿಕ ಮಾತ್ರವಲ್ಲದೆ ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಲು ಮೂಲ ಕಾರಣವೇ ಜೀವನಶೈಲಿ (Unhealthy Lifestyle). ಇತ್ತೀಚಿನ ದಿನಗಳಲ್ಲಿ ಕಳಪೆಗುಣಮಟ್ಟದ ಜೀವನಶೈಲಿ, ಆಹಾರ ಪದ್ಧತಿಯ ಕಾರಣದಿಂದಾಗಿ ಮಧುಮೇಹ, ಹೃದ್ರೋಗ, ರಕ್ತದೊತ್ತಡ ಇತ್ಯಾದಿ ಆರೋಗ್ಯ ಸಮಸ್ಯೆಗಳ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚುತ್ತಿವೆ. ಹೀಗಿರುವಾಗ ಆರೋಗ್ಯಕರ ಆಹಾರ ಸೇವನೆ, ದೈಹಿಕ ಚಟುವಟಿಕೆ, ಉತ್ತಮ ನಿದ್ರೆ ಸೇರಿದಂತೆ ಜೀವನಶೈಲಿಯಲ್ಲಿ ಆರೋಗ್ಯಕ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ನೀವು ಫಿಟ್ ಮತ್ತು ಹೆಲ್ತಿಯಾಗಿರಬಹುದು. ಅದರಲ್ಲೂ ಬೆಳಗಿನ ದಿನಚರಿಯಲ್ಲಿ ಈ ಒಂದಷ್ಟು ಅಭ್ಯಾಸಗಳನ್ನು ಪಾಲಿಸಿದರೆ ಖಂಡಿತವಾಗಿಯೂ ನೀವು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಹಾಗಿದ್ದರೆ ಬೆಳಗಿನ ದಿನಚರಿಯಲ್ಲಿ ಪಾಲಿಸಬೇಕಾದಂತಹ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.
ಅನಾರೋಗ್ಯದಿಂದ ದೂರವಿರಲು ಬೆಳಗಿನ ದಿನಚರಿ ಹೀಗಿರಲಿ:
ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ: ನೀವು ನಿಮ್ಮ ದಿನವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರು ಕುಡಿಯುವುದರ ಮೂಲಕ ಪ್ರಾರಂಭಿಸಿದರೆ, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇದು ದೇಹಕ್ಕೆ ಜಲಸಂಚಯನವನ್ನು ಒದಗಿಸುವುದರ ಜೊತೆಗೆ ದೇಹದಿಂದ ವಿಷಕಾರಿ ಅಂಶಗಳನ್ನು ಹೊರ ಹಾಕಲು, ಚಯಾಪಚಯಕ್ರಿಯೆಯನ್ನು ವೃದ್ಧಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಆರೋಗ್ಯವನ್ನು ಕಾಪಾಡಿಕೊಳ್ಳಲು ಬೆಳಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ.
ದೈಹಿಕ ಚಟುವಟಿಕೆ: ಇಂದಿನ ಕಾಲದಲ್ಲಿ, ಜಡ ಜೀವನಶೈಲಿಯು ಅನೇಕ ರೋಗಗಳಿಗೆ ಮೂಲ ಕಾರಣವಾಗಿದೆ. ಆದ್ದರಿಂದ ದೇಹವನ್ನು ಸಕ್ರಿಯವಾಗಿಡಲು ದೈಹಿಕ ಚಟುವಟಿಕೆಗಳನ್ನು ಮಾಡುವುದು ಅತ್ಯಗತ್ಯ. ಇದಕ್ಕಾಗಿ, ನೀವು ಬೆಳಿಗ್ಗೆ ಈಜು, ಸೈಕ್ಲಿಂಗ್, ಜಾಗಿಂಗ್, ವಾಕಿಂಗ್ ಅಥವಾ ನೃತ್ಯದಂತಹ ಯಾವುದೇ ರೀತಿಯ ದೈಹಿಕ ಚಟುವಟಿಕೆಯನ್ನು ಅಭ್ಯಾಸ ಮಾಡಿ. ಇದು ಖಂಡಿತವಾಗಿಯೂ ನಿಮ್ಮಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ಉಂಟು ಮಾಡುತ್ತವೆ.
ಧ್ಯಾನ ಮತ್ತು ಯೋಗ: ಇಂದಿನ ಬ್ಯುಸಿ ಜೀವನಶೈಲಿಯ ಕಾರಣದಿಂದಾಗಿ ಹಲವರು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಈ ಒತ್ತಡವೇ ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಹಾಗಾಗಿ ಒತ್ತಡವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಬೆಳಗ್ಗೆ ಎದ್ದ ತಕ್ಷಣ ಯೋಗ, ಧ್ಯಾನವನ್ನು ಮಾಡಿ, ಇದು ಮನಸ್ಸನ್ನು ಶಾಂತಗೊಳಿಸಲು ಮತ್ತು ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಬೆಳಗ್ಗೆ ಎದ್ದ ತಕ್ಷಣ ನೀವು ಮಾಡುವ ಈ ತಪ್ಪುಗಳು ಆರೋಗ್ಯದ ಪರಿಣಾಮ ಬೀರಬಹುದು ಎಚ್ಚರ
ಪೌಷ್ಟಿಕ ಆಹಾರ ಸೇವನೆ: ಬೆಳಗಿನ ಉಪಹಾರ ನಮಗೆ ದಿನವಿಡೀ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ, ಹಾಗಾಗಿ ಪೌಷ್ಟಿಕ ಉಪಹಾರವನ್ನು ಸೇವಿಸುವುದು ಅತೀ ಅವಶ್ಯಕವಾಗಿದೆ. ಆದ್ದರಿಂದ ಹಸಿರು ತರಕಾರಿ, ಹಣ್ಣುಗಳು, ಧಾನ್ಯಗಳು ಹಾಗೂ ಪ್ರೋಟೀನ್, ಕಾರ್ಬೋಹೈಡ್ರೇಟ್‌ಗಳು, ಜೀವಸತ್ವಗಳು, ಖನಿಜಗಳು ಮತ್ತು ಆರೋಗ್ಯಕರ ಕೊಬ್ಬನ್ನು ಒಳಗೊಂಡ ಉಪಹಾರವನ್ನೇ ಸೇವನೆ ಮಾಡಿ, ಇದು ದೇಹವು ದಿನವಿಡೀ ಕಾರ್ಯನಿರ್ವಹಿಸಲು ಅಗತ್ಯವಾದ ಶಕ್ತಿಯನ್ನು ಒದಗಿಸುತ್ತದೆ.
ಪ್ರತಿದಿನ ಸೂರ್ಯನ ಬೆಳಕನ್ನು ಪಡೆಯಿರಿ: ಉತ್ತಮ ಆರೋಗ್ಯಕ್ಕೆ ಬೆಳಗ್ಗಿನ ಸೂರ್ಯನ ಬೆಳಕು ಅತ್ಯಗತ್ಯ. ಇದು ವಿಟಮಿನ್ ಡಿ ಯ ಪ್ರಮುಖ ಮೂಲವಾಗಿದ್ದು, ಇದು ಮೂಳೆಗಳನ್ನು ಬಲಪಡಿಸಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಮನಸ್ಥಿತಿಯನ್ನು ಸುಧಾರಿಸಲು ಸಹಕಾರಿಯಾಗಿದೆ. ಹಾಗಾಗಿ ಬೆಳಗ್ಗಿನ ಸೂರ್ಯನ ಕಿರಣಗಳಿಗೆ ದೇಹವನ್ನು ಒಡ್ಡಿಕೊಳ್ಳುವ ಅಭ್ಯಾಸವನ್ನು ರೂಢಿಸಿಕೊಳ್ಳಿ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




