AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Poisoning: ಫುಡ್ ಪಾಯ್ಸನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಾದರೆ ಈ ಮನೆಮದ್ದು ಪ್ರಯತ್ನಿಸಿ

ಈ ಫುಡ್ ಪಾಯ್ಸನ್ ಎಂಬುದು ಜೀವಕ್ಕೆ ಕುತ್ತು ತರುವ ಸಮಸ್ಯೆಯಲ್ಲದಿದ್ದರೂ ನಿಶ್ಯಕ್ತಿಯನ್ನುಂಟು ಮಾಡುತ್ತದೆ. ಕೆಲವೊಮ್ಮೆ ನಮಗಿಷ್ಟವಾದ ಆಹಾರವನ್ನು ಸೇವಿಸಿದಾಗಲೂ ಫುಡ್ ಪಾಯ್ಸನ್ ಆಗಬಹುದು.

Food Poisoning: ಫುಡ್ ಪಾಯ್ಸನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಾದರೆ ಈ ಮನೆಮದ್ದು ಪ್ರಯತ್ನಿಸಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 26, 2022 | 7:00 AM

Share

ಮನೆ ಆಹಾರಕ್ಕಿಂತ ಹೆಚ್ಚಾಗಿ ಹೋಟೆಲ್​ಗಳಲ್ಲಿ ಅಥವಾ ರಸ್ತೆ ಬದಿಯ ಆಹಾರವನ್ನು ಸೇವಿಸುವುದರಿಂದ ಫುಡ್ ಪಾಯ್ಸನ್ (Food Poison) ಉಂಟಾಗುತ್ತದೆ. ಪರಿಣಾಮವಾಗಿ, ವಾಂತಿ, ಅತಿಸಾರ ಮತ್ತು ಹೊಟ್ಟೆ ನೋವು ಸಂಭವಿಸುತ್ತದೆ. ತೀವ್ರತೆ ಹೆಚ್ಚಿದ್ದರೆ ಕೆಲವೊಮ್ಮೆ ಸಾವು ಕೂಡ ಸಂಭವಿಸುತ್ತದೆ. ಈ ಫುಡ್ ಪಾಯ್ಸನ್ ಎಂಬುದು ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಆರೋಗ್ಯ ಸಮಸ್ಯೆಯಾಗಿದೆ. ನೀವು ಆರೋಗ್ಯಕರ ಆಹಾರವನ್ನು ಸೇವಿಸದಿದ್ದಾಗ ಇದು ಸಂಭವಿಸುತ್ತದೆ. ಈ ಫುಡ್ ಪಾಯ್ಸನ್ ಎಂಬುದು ಜೀವಕ್ಕೆ ಕುತ್ತು ತರುವ ಸಮಸ್ಯೆಯಲ್ಲದಿದ್ದರೂ ನಿಶ್ಯಕ್ತಿಯನ್ನುಂಟು ಮಾಡುತ್ತದೆ. ಕೆಲವೊಮ್ಮೆ ನಮಗಿಷ್ಟವಾದ ಆಹಾರವನ್ನು ಸೇವಿಸಿದಾಗಲೂ ಫುಡ್ ಪಾಯ್ಸನ್ ಆಗಬಹುದು. ನೈರ್ಮಲ್ಯವಿಲ್ಲದ ಆಹಾರ, ಸಿಹಿ ತಿನಿಸು, ಮಸಾಲೆಯುಕ್ತ ಪದಾರ್ಥಗಳನ್ನು ಸೇವಿಸಿದಾಗ ಉದರಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿಮ್ಮನ್ನು ಕಾಡಬಹುದು.

ಈ ಫುಡ್ ಪಾಯ್ಸನ್ ಸಮಸ್ಯೆಯಿಂದ ಪಾರಾಗಲು ಕೆಲ ಸಲಹೆಗಳು ಇಲ್ಲಿವೆ.

  1. ಒಂದು ಕಪ್ ಬಿಸಿ ನೀರಿಗೆ 2 ಚಮಚ ಆಪಲ್ ಸೈಡರ್ ವಿನೆಗರ್ ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ಕುಡಿದರೆ ಫುಡ್ ಪಾಯ್ಸನ್ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ.
  2. ಒಂದು ಚಿಟಿಕೆ ಸಕ್ಕರೆಗೆ ಒಂದು ಚಮಚ ನಿಂಬೆ ರಸವನ್ನು ಸೇರಿಸಿ ಮತ್ತು ದಿನಕ್ಕೆ 2 ರಿಂದ 3 ಬಾರಿ ತಿನ್ನಿರಿ. ಇದನ್ನು ಸೇವಿಸುವುದರಿಂದ ಆಹಾರ ವಿಷದ ಸಮಸ್ಯೆ ದೂರವಾಗುತ್ತದೆ.
  3. ಒಂದು ಬಟ್ಟಲಿನಲ್ಲಿ ಚಮಚ ಮೊಸರು. ಇದಕ್ಕೆ ಒಂದು ಚಮಚ ಮೆಂತ್ಯ ಬೀಜಗಳನ್ನು ಸೇರಿಸಿ. ನಂತರ ಈ ಮಿಶ್ರಣವನ್ನು ಜಗಿಯದೆ ನುಂಗಿ. ಇದು ಹೊಟ್ಟೆ ನೋವು ಮತ್ತು ವಾಂತಿ ಸಮಸ್ಯೆಯನ್ನು ನಿವಾರಿಸುತ್ತದೆ.
  4. ಶುಂಠಿ ಮತ್ತು ಜೇನುತುಪ್ಪವನ್ನು ಬಳಸುವುದರಿಂದ ಜೀರ್ಣಕ್ರಿಯೆಯ ತೊಂದರೆಗಳು ದೂರವಾಗುತ್ತವೆ. ಒಂದು ಚಮಚ ಜೇನುತುಪ್ಪಕ್ಕೆ ಸ್ವಲ್ಪ ಶುಂಠಿ ರಸವನ್ನು ಸೇರಿಸಿ. ನಂತರ ಅದನ್ನು ಕುಡಿಯಿರಿ. ಈ ಸಲಹೆಯು ಹೊಟ್ಟೆ ನೋವಿನಿಂದ ಉತ್ತಮ ಪರಿಹಾರವನ್ನು ನೀಡುತ್ತದೆ.
  5. ಬಾಣಲೆಯಲ್ಲಿ ಜೀರಿಗೆಯನ್ನು ಹುರಿದು ಪುಡಿಮಾಡಿ, ಈ ಹುರಿದ ಜೀರಿಗೆ ಪುಡಿಯನ್ನು ಸೂಪ್​ಗೆ ಸೇರಿಸಿ ತಿಂದರೆ ಹೊಟ್ಟೆನೋವಿನ ಸಮಸ್ಯೆ ಕಡಿಮೆಯಾಗುತ್ತದೆ.
  6. ಒಂದು ಬಟ್ಟಲಿನಲ್ಲಿ ತುಳಸಿ ಎಲೆಗಳ ರಸವನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ. ಇದನ್ನು ಕುಡಿಯುವುದರಿಂದ ಹೊಟ್ಟೆನೋವಿನ ಸಮಸ್ಯೆ ಕ್ರಮೇಣ ಕಡಿಮೆಯಾಗುತ್ತದೆ.
  7. ಬಾಳೆಹಣ್ಣು ಪೊಟ್ಯಾಸಿಯಮ್ನಲ್ಲಿ ಸಮೃದ್ಧವಾಗಿದೆ. ಬಾಳೆಹಣ್ಣನ್ನು ಮೊಸರಿನಲ್ಲಿ ಮ್ಯಾಶ್ ಮಾಡಿ ನಂತರ ತಿನ್ನಿರಿ. ಆಹಾರ ವಿಷದ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಸಲಹೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?