Global Day of Parents 2024: ಅಮ್ಮನ ಮಡಿಲು, ಅಪ್ಪನ ಹೆಗಲು ಸ್ವರ್ಗಕ್ಕಿಂತಲೂ ಮಿಗಿಲು

ಮಕ್ಕಳ ಲಾಲನೆ ಪಾಲನೆ ಮಾಡುತ್ತಾ ಸದಾ ಅವರ ಬದುಕಿನ ಸಂತೋಷವನ್ನು ಬಯಸುವ ಜೀವಗಳೆಂದರೆ ಅದುವೇ ಹೆತ್ತವರು. ಹೀಗಾಗಿ ಪೋಷಕರ ಪ್ರೀತಿ, ವಾತ್ಸಲ್ಯಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ತಮ್ಮ ಬದುಕನ್ನು, ಸರ್ವಸ್ವವನ್ನೇ ಮಕ್ಕಳಿಗಾಗಿ ಮುಡಿಪಾಗಿಟ್ಟಿರುವ ತಂದೆ ತಾಯಂದಿರನ್ನು ಗೌರವಿಸಲು ಇರುವ ದಿನವೇ ಪೋಷಕರ ಜಾಗತಿಕ ದಿನ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಈ ಕೆಳಗಿದೆ.

Global Day of Parents 2024: ಅಮ್ಮನ ಮಡಿಲು, ಅಪ್ಪನ ಹೆಗಲು ಸ್ವರ್ಗಕ್ಕಿಂತಲೂ ಮಿಗಿಲು
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 01, 2024 | 10:09 AM

ಮಾತೃದೇವೋ ಭವ, ಪಿತೃದೇವೋ ಭವ ‘ತಾಯಿ ತಂದೆ ದೇವರಿಗೆ ಸಮಾನ. ಹೀಗಾಗಿ ಪ್ರತಿಯೊಬ್ಬರ ಜೀವನದಲ್ಲಿ ಹೆತ್ತವರ ಪಾತ್ರವನ್ನು ವಿವರಿಸಲು ಅಸಾಧ್ಯ. ತಮ್ಮ ಮಕ್ಕಳ ಏಳಿಗೆಗಾಗಿ ತಮ್ಮ ಜೀವಮಾನದ ಗಳಿಕೆಯನ್ನೇ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಉತ್ತಮ ಜೀವನವನ್ನು ಕಟ್ಟಿಕೊಡುವ ತಂದೆ ತಾಯಿಯರ ಋಣವನ್ನು ತೀರಿಸಲು ಸಾಧ್ಯವೇ ಇಲ್ಲ. ಪೋಷಕರು ಮಕ್ಕಳ ಭವಿಷ್ಯಕ್ಕೆ ಭದ್ರ ಅಡಿಪಾಯವನ್ನು ಹಾಕಿಕೊಡುವ, ತಂದೆ ತಾಯಂದಿರ ನಿಸ್ವಾರ್ಥ, ಪ್ರೀತಿ ವಾತ್ಸಲ್ಯವನ್ನು ಗೌರವಿಸುವ ಸಲುವಾಗಿ ಪೋಷಕರ ಜಾಗತಿಕ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

ಜಾಗತಿಕ ಪೋಷಕರ ದಿನದ ಇತಿಹಾಸ

ಆರ್ಥಿಕ ಮತ್ತು ಸಾಮಾಜಿಕ ಮಂಡಳಿ ಮತ್ತು ಸಾಮಾಜಿಕ ಅಭಿವೃದ್ಧಿ ಆಯೋಗವು 1983ರಲ್ಲಿ ಪೋಷಕರ ಜಾಗತಿಕ ದಿನದ ಆರಂಭಕ್ಕೆ ಮುಂದಾಯಿತು. 1989ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು 1994 ಅನ್ನು ಅಂತರಾಷ್ಟ್ರೀಯ ಕೌಟುಂಬಿಕ ವರ್ಷವೆಂದು ಘೋಷಣೆ ಮಾಡಿತು. ವಿಶ್ವದಾದ್ಯಂತ ಪೋಷಕರ ಪಾತ್ರವನ್ನು ಗೌರವಿಸುವ ಸಲುವಾಗಿ 2012ರಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಜೂನ್‌ 1 ಅನ್ನು ಅಧಿಕೃತವಾಗಿ ಜಾಗತಿಕ ಪಾಲಕರ ದಿನವನ್ನಾಗಿ ಘೋಷಿಸಿತು.

ಇದನ್ನೂ ಓದಿ: ವಿಶ್ವ ಹಾಲು ದಿನ; ಕೋಟ್ಯಂತರ ಜನರ ಸ್ವಾವಲಂಬಿ ಬದುಕಿಗೆ ಆಸರೆಯಾದ ಕ್ಷೀರೋದ್ಯಮ

ಜಾಗತಿಕ ಪೋಷಕರ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ಮಕ್ಕಳನ್ನು ಬೆಳೆಸುವಲ್ಲಿ ಹಾಗೂ ಮಕ್ಕಳ ಬದುಕನ್ನು ರೂಪಿಸುವ ಈ ಪೋಷಕರ ಪಾತ್ರವನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಜಾಗತಿಕ ಫೋಷಕರ ದಿನವು ಮಹತ್ವದ್ದಾಗಿದೆ. ಈ ದಿನದಂದು ವಿವಿಧ ದೇಶಗಳಲ್ಲಿ ಮಕ್ಕಳು ತಂದೆ ತಾಯಂದಿರಿಗೆ ಶುಭಾಶಯಗಳನ್ನು ಕೋರಿ, ಉಡುಗೊರೆಯನ್ನು ನೀಡುವ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 9:19 am, Sat, 1 June 24

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ