AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Shopping: ವಾರದ ಯಾವ ದಿನ ಚಿನ್ನ ಖರೀದಿಸಿದರೆ ಒಳ್ಳೆಯದು ಗೊತ್ತಾ?

ಚಿನ್ನವನ್ನು ಶುಭದ ಸಂಕೇತವೆಂದು ಪರಿಗಣಿಸಲಾಗಿದೆ. ಇದಕ್ಕಾಗಿಯೇ ಅಕ್ಷಯ ತೃತೀಯ, ದೀಪಾವಳಿ ಸೇರಿದಂತೆ ಹಬ್ಬಗಳ ಸಮಯದಲ್ಲಿ ಜನ ಚಿನ್ನವನ್ನು ಖರೀದಿ ಮಾಡುತ್ತಾರೆ. ಅಕ್ಷಯ ತೃತೀಯ ಹಬ್ಬದ ದಿನ ಚಿನ್ನ ಖರೀದಿಸಿದರೆ ಮನೆಯಲ್ಲಿ ಸಂಪತ್ತು, ಸಮೃದ್ಧಿ ನೆಲೆಸುತ್ತದೆ ಅನ್ನೋದು ಹೆಚ್ಚಿನವರಿಗೆ ತಿಳಿದೇ ಇದೆ. ಆದರೆ ಇದನ್ನು ಬಿಟ್ಟು ವಾರದ ಯಾವ ದಿನ ಬಂಗಾರ ಕೊಳ್ಳುವುದು ಶ್ರೇಷ್ಠ ಎಂಬ ವಿಚಾರ ಹಲವರಿಗೆ ತಿಳಿದಿಲ್ಲ. ಹಾಗಿದ್ರೆ ವಾರದ ಯಾವ ದಿನ ಗೋಲ್ಡ್‌ ಖರೀದಿಸುವುದು ಬೆಸ್ಟ್‌ ಅನ್ನೋದನ್ನು ನೋಡೋಣ ಬನ್ನಿ.

Gold Shopping: ವಾರದ ಯಾವ ದಿನ ಚಿನ್ನ ಖರೀದಿಸಿದರೆ ಒಳ್ಳೆಯದು ಗೊತ್ತಾ?
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 22, 2025 | 5:32 PM

Share

ಶುಭದ ಸಂಕೇತವಾಗಿರುವ ಚಿನ್ನ (Gold) ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅದರಲ್ಲೂ ಭಾರತೀಯ ನಾರಿಮಣಿಯರಿಗಂತೂ ಚಿನ್ನ ಎಂದ್ರೆ ಪಂಚಪ್ರಾಣ. ಹೀಗೆ ಮಹಿಳೆಯರು ಹಣವನ್ನು ಕೂಡಿಟ್ಟು ಚಿನ್ನವನ್ನು ಖರೀದಿ ಮಾಡುತ್ತಾರೆ. ವಿಶೇಷವಾಗಿ ಅಕ್ಷಯ ತೃತೀಯ ದೀಪಾವಳಿ ಹಬ್ಬದಂದು ಚಿನ್ನ ಖರೀದಿಸಿದರೆ ತುಂಬಾನೇ ಶ್ರೇಷ್ಠ ಅನ್ನೋ ಕಾರಣಕ್ಕೆ ಹಲವರು ಈ ಶುಭ ಸಂದರ್ಭಗಳಲ್ಲಿಯೇ ಹೆಚ್ಚಾಗಿ ಚಿನ್ನಾಭರಣ ಕೊಳ್ಳುತ್ತಾರೆ. ಯಾವ ಹಬ್ಬದ ದಿನ ಬಂಗಾರ ಕೊಳ್ಳುವುದು ಶುಭವೆಂದು ಹೆಚ್ಚಿನವರಿಗೆ ಗೊತ್ತಿದೆ, ಆದ್ರೆ ವಾರದ ಯಾವ ದಿನ (best day to buy gold) ಚಿನ್ನ ಖರೀದಿ ಮಾಡಿದ್ರೆ ಒಳ್ಳೆಯದು ಎಂದು ಹಲವರಿಗೆ ಗೊತ್ತಿಲ್ಲ. ಹಾಗಿದ್ರೆ ವಾರದ ಯಾವ ದಿನ ಬಂಗಾರವನ್ನು ಖರೀದಿಸಿ, ಮನೆಗೆ ತಂದ್ರೆ ಅದೃಷ್ಟ ಎಂಬ ಮಾಹಿತಿಯನ್ನು ತಿಳಿಯಿರಿ.

ಚಿನ್ನವನ್ನು ವಾರದ ಯಾವ ದಿನ ಖರೀದಿಸಿದರೆ ಒಳ್ಳೆಯದು:

ಮದುವೆ, ಗೃಹ ಪ್ರವೇಶ ಇತ್ಯಾದಿ ಶುಭ ಸಮಾರಂಭಗಳಿಗೆ ಸರಿಯಾದ ಸಮಯ, ಘಳಿಗೆಯನ್ನು ಆಯ್ಕೆ ಮಾಡುವಂತೆ, ಶುಭದ ಸಂಕೇತವಾಗಿರುವ ಚಿನ್ನವನ್ನು ಕೂಡ ಸರಿಯಾದ ಸಮಯದಲ್ಲಿ ಖರೀದಿಸುವುದು ಬಹಳ ಮುಖ್ಯ. ಇದಕ್ಕಾಗಿಯೇ ಜನ ದೀಪಾವಳಿ, ಅಕ್ಷಯ ತೃತೀಯ ಹೀಗೆ ಹಬ್ಬದ ಸಂದರ್ಭದಲ್ಲಿ ಬಂಗಾರ ಖರೀದಿ ಮಾಡುತ್ತಾರೆ. ಇದರ ಹೊರತಾಗಿ ವಾರದ ಯಾವ ದಿನ ಚಿನ್ನ ಖರೀದಿಸಿದರೆ ಒಳ್ಳೆಯದು ಗೊತ್ತಾ?

ಶಾಸ್ತ್ರಗಳಲ್ಲಿ ಗುರುವಾರ ಮತ್ತು ಭಾನುವಾರ ಚಿನ್ನ ಖರೀದಿಸುವುದು ಶುಭವೆಂದು ಪರಿಗಣಿಸಲಾಗಿದೆ. ಚಿನ್ನವು ಸೂರ್ಯ ಮತ್ತು ಗುರು ಗ್ರಹಕ್ಕೆ ಸಂಬಂಧಿಸಿರುವುದರಿಂದ ಈ ದಿನಗಳಲ್ಲಿ ಖರೀದಿಸಿದ ಚಿನ್ನವು ನಿಮ್ಮ ಜಾತಕದಲ್ಲಿ ಗುರು ಮತ್ತು ಸೂರ್ಯನ ಸ್ಥಾನವನ್ನು ಬಲಪಡಿಸುತ್ತದೆ ಎಂದು ನಂಬಲಾಗಿದೆ. ಇದಲ್ಲದೆ ಪುಷ್ಯ ನಕ್ಷತ್ರ ಯಾವ ದಿನ ಬರುತ್ತದೆಯೋ ಆ ದಿನ ಚಿನ್ನ ಖರೀದಿಸಿದರೂ ಒಳ್ಳೆಯದು ಎಂದು ಹೇಳಲಾಗುತ್ತದೆ. ಈ ನಕ್ಷತ್ರದಲ್ಲಿ ಬಂಗಾರ ಖರೀದಿಸಿದರೆ ಲಕ್ಷ್ಮೀ ದೇವಿಯ ಆಶೀರ್ವಾದ ಲಭಿಸುತ್ತದೆ,  ಮನೆಯಲ್ಲಿ ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆಯಿದೆ.

ಇದನ್ನೂ ಓದಿ
Image
ಹಣ, ಯಶಸ್ಸು ಮತ್ತು ಸಂತೋಷಕ್ಕಾಗಿ ಪ್ರತಿ ರಾತ್ರಿ ಮಲಗುವಾಗ ಹೀಗೆ ಮಾಡಿ
Image
ಬೆಕ್ಕು ಆದಾಗೇ ನಿಮ್ಮ ಮನೆಗೆ ಬಂದ್ರೆ ಏನರ್ಥ, ಅದೃಷ್ಟ ಕೈ ಹಿಡಿಯುತ್ತಾ?
Image
Vastu Tips: ನಿಮ್ಮ ಪರ್ಸನಲ್ಲಿಯೂ ಈ ರೀತಿ ನೋಟಿದ್ದರೆ ಕಷ್ಟ ತಪ್ಪಿದ್ದಲ್ಲ
Image
ಪರ್ಸ್‌ನಲ್ಲಿ ಹೆಂಡ್ತಿ ಫೋಟೋ ಇಟ್ಕೊಂಡ್ರೆ ಏನಾಗುತ್ತೆ ಗೊತ್ತಾ?

ಇದನ್ನೂ ಓದಿ: ಗಂಡಸರೇ… ಪರ್ಸ್‌ನಲ್ಲಿ ನಿಮ್‌ ಹೆಂಡ್ತಿ ಫೋಟೋ ಇಟ್ಕೊಂಡ್ರೆ ಏನಾಗುತ್ತೆ ಗೊತ್ತಾ?

ಯಾವ ದಿನ ಚಿನ್ನ ಖರೀದಿಸಬಾರದು?

ಶನಿವಾರ ಚಿನ್ನ ಖರೀದಿಸುವುದು ಅಶುಭದ ಸಂಕೇತವಾಗಿದೆ. ಚಿನ್ನ ಸೂರ್ಯನ ಸಂಕೇತವಾಗಿದ್ದು, ಶನಿ ಮತ್ತು ಸೂರ್ಯ ದ್ವೇಷ ಭಾವನೆಯನ್ನು ಹೊಂದಿದ್ದಾರೆ. ಆದ್ದರಿಂದ ಶನಿ ದೇವರಿಗೆ ಸಮರ್ಪಿತವಾದ ಶನಿವಾರದಂದು ಚಿನ್ನ ಖರೀದಿ ಮಾಡಬಾರದು ಎಂದು ಹೇಳಲಾಗುತ್ತದೆ.  ಶನಿವಾರ ಚಿನ್ನ ಖರೀದಿಸುವುದರಿಂದ ಅದು ನಿಮ್ಮ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ, ಮನೆಯನ್ನು ಬಡತನ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ ಶನಿವಾರ ಬಂಗಾರ ಕೊಳ್ಳಬೇಡಿ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್