Good Governance Day 2024: ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮ ದಿನದಂದೇ ಉತ್ತಮ ಆಡಳಿತ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Dec 24, 2024 | 6:24 PM

Vajpayee Birth Anniversary : ಪ್ರತಿ ವರ್ಷ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಡಿಸೆಂಬರ್ 25 ರಂದು ದೇಶಾದ್ಯಂತ ಉತ್ತಮ ಆಡಳಿತ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶಕ್ಕೆ ನೀಡಿದ ಕೊಡುಗೆಗಳು ಹಾಗೂ ರಾಜಕೀಯರಂಗದಲ್ಲಿದ್ದಾಗ ಮಾಡಿದ ಅಭಿವೃದ್ಧಿಯ ಕೆಲಸವನ್ನು ನೆನಪಿಸಿಕೊಳ್ಳಲಾಗುತ್ತದೆ. ಹಾಗಾದ್ರೆ ಉತ್ತಮ ಆಡಳಿತ ದಿನದ ಆಚರಣೆಯೂ ಆರಂಭವಾದದ್ದು ಯಾವಾಗ? ಈ ದಿನದ ಮಹತ್ವ ಕುರಿತಂತೆ ಇನ್ನಿತ್ತರ ಮಾಹಿತಿ ಇಲ್ಲಿದೆ.

Good Governance Day 2024: ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮ ದಿನದಂದೇ ಉತ್ತಮ ಆಡಳಿತ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ
ಮಾಜಿ ಪ್ರಧಾನಿ ವಾಜಪೇಯಿ
Follow us on

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅದ್ಭುತ ರಾಜಕಾರಣಿ, ಕವಿಹೃದಯಿ, ಹಾಸ್ಯಪ್ರಜ್ಞೆ, ಅದ್ಭುತ ಭಾಷಕಕಾರರಾಗಿಯೂ ಖ್ಯಾತರಾಗಿದ್ದರು. ಅತ್ಯಂತ ಜನಪ್ರಿಯ ನಾಯಕರಾಗಿದ್ದ ವಾಜಪೇಯಿಯವರು ಮಧ್ಯ ಪ್ರದೇಶದ ಗ್ವಾಲಿಯರ ಹತ್ತಿರದ ಶಿಂದೆ ಕಿ ಚವ್ವಾಣಿ ಎಂಬ ಗ್ರಾಮದಲ್ಲಿ 1924ರ ಡಿಸೆಂಬರ್ 25ರಂದು ಕೃಷ್ಣದೇವಿ ಹಾಗೂ ಕೃಷ್ಣ ಬಿಹಾರಿ ವಾಜಪೇಯಿ ಅವರ ಮಗನಾಗಿ ಜನಿಸಿದರು. ಈ ಬಾರಿ ಅಟಲ್ ಬಿಹಾರಿ ವಾಜಪೇಯಿಯವರ 100 ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಈ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿಯೂ ಆಚರಿಸಿಕೊಂಡು ಬರಲಾಗುತ್ತಿದೆ. ಹೌದು, ಮೂರು ಬಾರಿ ಪ್ರಧಾನ ಮಂತ್ರಿಯಾಗಿ, 11 ಬಾರಿ ಲೋಕಸಭೆ ಹಾಗೂ 2 ಬಾರಿ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸುವ ಮೂಲಕ ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳು ಮತ್ತು ಕಾರ್ಯಕ್ರಮಗಳು ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾದರು. ಹೀಗಾಗಿ ದೇಶದ ಅಭಿವೃದ್ಧಿಗೆ ವಾಜಪೇಯಿ ನೀಡಿದ ಕೊಡುಗೆಯನ್ನು ಸ್ಮರಿಸಲು ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುತ್ತಿದೆ.

ಉತ್ತಮ ಆಡಳಿತ ದಿನದ ಇತಿಹಾಸ

2014ರ ಡಿ.23 ರಂದು ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪಂಡಿತ್ ಮದನ್ ಮೋಹನ್ ಮಾಳವೀಯ ಮರಣೋತ್ತರ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಿಸಲಾಯಿತು. ತದನಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮದಿನವನ್ನು ಭಾರತದಲ್ಲಿ ವಾರ್ಷಿಕವಾಗಿ ಉತ್ತಮ ಆಡಳಿತ ದಿನವಾಗಿ ಸ್ಮರಿಸಲಾಗುತ್ತದೆ ಎಂದು ಘೋಷಿಸಿತು. ಅಂದಿನಿಂದ ಪ್ರತಿ ವರ್ಷ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

ಉತ್ತಮ ಆಡಳಿತ ದಿನದ ಮಹತ್ವ

ಉತ್ತಮ ಆಡಳಿತದ ಮೂಲಕ ನಾಗರಿಕರಲ್ಲಿ ಸರ್ಕಾರದ ಹೊಣೆಗಾರಿಕೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ಉತ್ತಮ ಆಡಳಿತ ದಿನವು ಸರ್ಕಾರದ ಜವಾಬ್ದಾರಿಗಳು ಮತ್ತು ಕರ್ತವ್ಯಗಳ ಬಗ್ಗೆ ನಾಗರೀಕರಿಗೆ ತಿಳಿಸುವುದಕ್ಕೆ ಪ್ರಮುಖ ವೇದಿಕೆಯಾಗಿದೆ. ಈ ದಿನದ ಆಚರಣೆಯೂ ನಾಗರಿಕರು ಮತ್ತು ಸರ್ಕಾರದ ನಡುವಿನ ಅಂತರವನ್ನು ಕಡಿಮೆ ಮಾಡುವ ಮೂಲಕ ಸರ್ಕಾರ ಮತ್ತು ವಿವಿಧ ಸಂಘ ಸಂಸ್ಥೆಗಳು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಕ್ರಿಸ್‌ಮಸ್‌ ಹಬ್ಬಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭಾಶಯಗಳು ಕೋರಲು ಇಲ್ಲಿದೆ ಸಂದೇಶಗಳು

ಮಾಜಿ ಪ್ರಧಾನಿ ವಾಜಪೇಯಿಯವರ ನುಡಿಮುತ್ತುಗಳು

* ನಾವು ಅನಗತ್ಯವಾಗಿ ಯುದ್ಧಗಳಲ್ಲಿ ನಮ್ಮ ಅಮೂಲ್ಯ ಸಂಪನ್ಮೂಲಗಳನ್ನು ವ್ಯರ್ಥ ಮಾಡುತ್ತಿದ್ದೇವೆ.

ಬದಲಿಗೆ ನಿರುದ್ಯೋಗ, ರೋಗ, ಬಡತನ ನಿರ್ಮೂಲನೆಗೆ ಅದನ್ನು ಬಳಸಬೇಕಿದೆ.

* ನಾನು ಯಾವತ್ತು ಆಶ್ವಾಸನೆ ಇಟ್ಟುಕೊಂಡು ಬಂದಿಲ್ಲ, ಗುರಿ ಇಟ್ಟುಕೊಂಡು ಬಂದಿದ್ದೇನೆ.

* ಒಂದೇ ಕೈಯಿಂದ ಚಪ್ಪಾಳೆ ತಟ್ಟಲು ಬರುವುದಿಲ್ಲ, ನಾನು ಚಿಟಿಕೆ ಹೊಡೆಯುತ್ತೇನೆ ಬಿಡಿ.

* ನೀವು ನಮ್ಮ ಸ್ನೇಹಿತರನ್ನು ಬದಲಾಯಿಸಬಹುದು ಆದರೆ ನೆರೆಹೊರೆಯವರನ್ನಲ್ಲ.

* ಶಾಂತಿಯನ್ನು ಸ್ವಾತಂತ್ರ್ಯದಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಏಕೆಂದರೆ ಯಾರೂ ತನ್ನ ಸ್ವಾತಂತ್ರ್ಯವನ್ನು ಹೊಂದಿರದ ಹೊರತು ಶಾಂತಿಯಿಂದ ಇರಲು ಸಾಧ್ಯವಿಲ್ಲ.

* ಗೆಲುವು ಮತ್ತು ಸೋಲು ಜೀವನದ ಒಂದು ಭಾಗ. ಅದನ್ನು ಸಮಚಿತ್ತದಿಂದ ನೋಡಬೇಕು.

* ಭಯೋತ್ಪಾದನೆ ಕೊಳೆಯುವ ಗಾಯವಾಗಿ ಮಾರ್ಪಟ್ಟಿದೆ. ಇದು ಮಾನವೀಯತೆಯ ಶತ್ರು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ