AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guru Purnima Wishes 2026: ಬದುಕನ್ನು ಬೆಳಗಿದ ಗುರುಗಳಿಗೆ ಶುಭಾಶಯಗಳನ್ನು ತಿಳಿಸಲು ಇಲ್ಲಿವೆ ಅರ್ಥಪೂರ್ಣ ಸಂದೇಶ

ಪ್ರತಿವರ್ಷ ಆಷಾಢ ಮಾಸದ ಶುಕ್ಲ ಪೂರ್ಣಿಮೆಯ ತಿಥಿಯಂದು ಗುರು ಪೂರ್ಣಿಮಾ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಜುಲೈ 29 ರಂದು ಈ ದಿನವನ್ನು ಆಚರಿಸಲಾಗುತ್ತಿದ್ದು, ಈ ಶುಭ ದಿನದಂದು ನಿಮ್ಮ ಬದುಕನ್ನು ಬೆಳಗಿದ ಗುರುಗಳಿಗೆ ಶುಭಾಶಯಗಳನ್ನು ತಿಳಿಸಿ ನಿಮ್ಮ ಜೀವನಕ್ಕೆ ದಾರಿ ತೋರಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿ. ನಿಮಗಾಗಿ ಇಲ್ಲಿದೆ ಗುರು ಪೂರ್ಣಿಮೆಯ ಅರ್ಥಪೂರ್ಣ ಸಂದೇಶಗಳು.

Guru Purnima Wishes 2026: ಬದುಕನ್ನು ಬೆಳಗಿದ ಗುರುಗಳಿಗೆ ಶುಭಾಶಯಗಳನ್ನು ತಿಳಿಸಲು ಇಲ್ಲಿವೆ ಅರ್ಥಪೂರ್ಣ ಸಂದೇಶ
ಗುರು ಪೂರ್ಣಿಮೆಯ ಶುಭಾಶಯಗಳುImage Credit source: vecteezy
ಮಾಲಾಶ್ರೀ ಅಂಚನ್​
|

Updated on: Jul 29, 2026 | 10:11 AM

Share

ಗುರು ಪೂರ್ಣಿಮೆಯ (Guru Purnima) ಪವಿತ್ರ ಹಬ್ಬವು ನಮ್ಮ ಜೀವನದಲ್ಲಿ ನಮಗೆ ಸರಿಯಾದ ಮಾರ್ಗವನ್ನು ತೋರಿದ ಮತ್ತು ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನೆಡೆಗೆ ಕರೆದೊಯ್ದ ಎಲ್ಲಾ ಗುರುಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಒಂದು ವಿಶೇಷ ಅವಕಾಶವನ್ನು ಒದಗಿಸುತ್ತದೆ. ಈ ದಿನವು ವಿದ್ಯೆ ನೀಡಿದ ಗುರುಗಳನ್ನು ಗೌರವಿಸಲು ಮಾತ್ರವಲ್ಲದೆ, ತಂದೆ ತಾಯಿ, ಹಿರಿಯರು ಸೇರಿದಂತೆ ಒಂದಲ್ಲ ಒಂದು ರೀತಿಯಲ್ಲಿ ನಮಗೆ ಬದುಕಿನ ಪಾಠ ಕಲಿಸಿದ, ಜೀವನಕ್ಕೆ ದಾರಿ ದೀಪವಾಗಿ ನಿಂತ ಪ್ರತಿಯೊಬ್ಬರನ್ನು ಗೌರವಿಸಲು ಒಂದು ಅವಕಾಶವನ್ನು ಒದಗಿಸುತ್ತದೆ. ಈ ಶುಭದಿನದಂದು  ನಿಮ್ಮ ಜೀವನಕ್ಕೆ ದಾರಿದೀಪವಾಗಿ ನಿಂತ ಗುರುಗಳಿಗೆ ಈ ಅರ್ಥಪೂರ್ಣ ಸಂದೇಶಗಳನ್ನು ತಿಳಿಸುವ ಮೂಲಕ ಧನ್ಯವಾದಗಳನ್ನು ತಿಳಿಸಿ.

ಗುರು ಪೂರ್ಣಿಮೆಯ ಶುಭ ಸಂದೇಶಗಳು:

  • ವಿದ್ಯೆ, ಬುದ್ಧಿ ಹೇಳಿಕೊಟ್ಟು, ಅಜ್ಞಾನವನ್ನು ಕಳೆದು ಸುಜ್ಞಾನದ ಕಡೆಗೆ ದಾರಿ ತೋರಿದ ಗುರುಗಳಿಗೆ ಕೋಟಿ ಕೋಟಿ ನಮಸ್ಕಾರಗಳು.
  • ಗುರಿ ಮುಟ್ಟಲು ದಾರಿ ತೋರಿದ, ನಿಸ್ವಾರ್ಥ ಮನೋಭಾವದಿಂದ ದಾರಿದೀಪವಾದ ನನ್ನ ಗುರುಗಳಿಗೆ ಗುರು ಪೂರ್ಣಿಮೆಯ ಶುಭಾಶಯಗಳು.
  • ಜ್ಞಾನದ ದೀಪವನ್ನು ಬೆಳಗಿಸಿದ ನನ್ನ ಗುರುಗಳಿಗೆ ವಂದನೆಗಳು. ನಿಮ್ಮ ಆಶೀರ್ವಾದದಿಂದ ನಾನು ಇಡುವ ಪ್ರತಿಯೊಂದು ಹೆಜ್ಜೆಗೂ ಯಶಸ್ಸು ಸಿಗಲಿ. ಈ ಗುರು ಪೂರ್ಣಿಮೆ ಸಂತೋಷವನ್ನು ತರಲಿ. ಗುರು ಪೂರ್ಣಿಮೆಯ ಹಾರ್ದಿಕ ಶುಭಾಶಯಗಳು.
  • ನಾನು ನಿಮ್ಮಿಂದ ಬಹಳಷ್ಟು ಕಲಿತಿದ್ದೇನೆ ಮತ್ತು ತಿಳಿದಿದ್ದೇನೆ, ನಿಮ್ಮನ್ನು ನನ್ನ ಗುರು ಎಂದು ಪರಿಗಣಿಸಿದ್ದೇನೆ, ನಿಮಗೆ ಗುರು ಪೂರ್ಣಿಮೆಯ ಶುಭಾಶಯಗಳು.
  • ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ದಾಸರ ವಾಕ್ಯದಂತೆ ನನ್ನ ಬದುಕನ್ನು ಬೆಳಗಿದ ಗುರುಗಳಿಗೆ ಗುರು ಪೂರ್ಣಿಮೆಯ ಶುಭಾಶಯಗಳು.
  • ನನ್ನ ಜೀವನವನ್ನು ರೂಪಿಸಿದ, ಸರಿಯಾದ ಮಾರ್ಗದರ್ಶನವನ್ನು ನೀಡಿ ನನ್ನ ಜೀವನವನ್ನು ಬೆಳಗಿದ ನಿಮಗೆ ಗುರು ಪೂರ್ಣಿಮೆಯ ಶುಭಾಶಯಗಳು.
  • ನನ್ನ ಸಾಧನೆಯ ಹಾದಿಯಲ್ಲಿ ಬೆನ್ನೆಲುಬಾಗಿ ನಿಂತ ನಿಮಗೆ ಗುರುಪೂರ್ಣಿಮೆಯ ಶುಭಾಶಯಗಳು.
  • ಕತ್ತಲೆಯಿಂದ ಬೆಳಕಿನೆಡೆಗೆ ಸಾಗಲು ಕಲಿಸಿದ ನನ್ನ ಪೂಜ್ಯ ಗುರುಗಳಿಗೆ ಕೋಟಿ ಕೋಟಿ ನಮನಗಳು.
  • ಗುರು ಸಾಕ್ಷಾತ್ ಪರಂ ಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ: ಅಂದರೆ ಗುರುವೇ ಬ್ರಹ್ಮ, ಗುರುವೇ ವಿಷ್ಣು ಮತ್ತು ಗುರುವೇ ಶಿವ, ಗುರುವೇ ಪರಮ ಬ್ರಹ್ಮ, ದೇವರ ಸ್ಥಾನದಲ್ಲಿರುವ ನನ್ನ ಗುರುಗಳಿಗೆ ಕೋಟಿ ಕೋಟಿ ನಮನಗಳು.
  • ಗುರುವಿನ ಪ್ರೀತಿ ಜ್ಞಾನದ ಸಾಗರ, ಅವರಿಲ್ಲದೆ ಜೀವನ ಅಪೂರ್ಣ. ಬದುಕಿನ ಪಾಠ ಕಲಿಸಿದ ನನ್ನೆಲ್ಲಾ ಗುರುಗಳಿಗೂ ಗುರು ಪೂರ್ಣಿಮೆಯ ಶುಭಾಶಯಗಳು.
  • ಜ್ಞಾನ, ಉತ್ತಮ ನಡವಳಿಕೆ ಮತ್ತು ಮೌಲ್ಯಗಳನ್ನು ಕಲಿಸಿಕೊಟ್ಟ ನಿಮಗೆ ಗುರು ಪೂರ್ಣಿಮೆಯ ಶುಭಾಶಯಗಳು.
  • ಜ್ಞಾನದ ಬೆಳಕು ಯಾವಾಗಲೂ ಉರಿಯಲಿ, ಗುರುಗಳ ಆಶೀರ್ವಾದ ನಿಮ್ಮ ಜೀವನದಲ್ಲಿ ನಿರಂತರವಾಗಿ ಬೆಳೆಯಲಿ. ನಿಮ್ಮ ಪ್ರತಿಯೊಂದು ಕನಸು ನನಸಾಗಲಿ. ಗುರು ಪೂರ್ಣಿಮೆಯ ಶುಭಾಶಯಗಳು.
  • ಗುರುರ್ಬ್ರಹ್ಮ ಗುರುರ್ವಿಷ್ಣು: ಗುರುರ್ದೇವೋ ಮಹೇಶ್ವರಃ. ಗುರು: ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ. ಗುರು ಪೂರ್ಣಿಮೆಯ ಶುಭಾಶಯಗಳು.
  • ಗುರುಗಳು ನಮಗೆ ಕೇವಲ ಪುಸ್ತಕದ ಜ್ಞಾನವನ್ನು ಕಲಿಸುವುದಿಲ್ಲ, ಬದಲಿಗೆ ಜೀವನ ಪಾಥಗಳನ್ನು ಸಹ ಕಲಿಸುತ್ತಾರೆ. ಜೀವನಕ್ಕೆ ದಾರಿ ತೋರಿದ ಗುರುಗಳಿಗೆ ನಮನಗಳು.
  • ನೀವು ಕೇವಲ ಪಾಠಗಳನ್ನು ಕಲಿಸಲಿಲ್ಲ, ಬದಲಾಗಿ, ಅದು ಜೀವನವನ್ನು ರೂಪಿಸುವ ಕಲೆಯನ್ನು ಕಲಿಸಿದ್ದೀರಿ, ನನ್ನೆಲ್ಲಾ ಸಾಧನೆಗಳಿಗೂ ನೀವೇ ಮೂಲ ಕಾರಣಕರ್ತರು. ನಿಮಗೆ ಗುರು ಪೂರ್ಣಿಮೆಯ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ