Hair Care : ನಿಮ್ಮ ಕೂದಲು ಸೊಂಪಾಗಿ ಬೆಳೆಯಬೇಕಾ? ದೇಸಿ ತುಪ್ಪವನ್ನು ಈ ರೀತಿ ಬಳಸಿ

ಪ್ರತಿಯೊಬ್ಬರಿಗೂ ತಮ್ಮ ಕೂದಲು ಸೊಂಪಾಗಿ ಇರಬೇಕು ಎನ್ನುವ ಆಸೆಯಿರುತ್ತದೆ. ಆದರೆ ಇರುವ ನಾಲ್ಕು ಕೂದಲನ್ನೇ ಕಾಪಾಡುವುದೇ ಕಷ್ಟವಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಹಾರ್ಮೋನ್‌ ಅಸಮತೋಲನ, ಥೈರಾಯ್ಡ ಗ್ರಂಥಿಯ ನಿಷ್ಕ್ರಿಯತೆ, ಪೋಷಕಾಂಶಗಳ ಕೊರತೆಯಿಂದ ಕೂದಲು ಉದುರುವಿಕೆ, ತಲೆ ಹೊಟ್ಟು ಸೇರಿದಂತೆ ನಾನಾ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಆದರೆ ಮನೆಯಲ್ಲಿರುವ ದೇಸಿ ತುಪ್ಪವನ್ನು ಕೂದಲಿಗೆ ಹಚ್ಚುವುದು ಪರಿಣಾಮಕಾರಿಯಾಗಿದೆ. ಹಾಗಾದ್ರೆ ಕೂದಲಿನ ಆರೈಕೆಗೆ ದೇಸಿ ತುಪ್ಪ ಹೇಗೆ ಪ್ರಯೋಜನಕಾರಿಯಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

Hair Care : ನಿಮ್ಮ ಕೂದಲು ಸೊಂಪಾಗಿ ಬೆಳೆಯಬೇಕಾ? ದೇಸಿ ತುಪ್ಪವನ್ನು ಈ ರೀತಿ ಬಳಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 24, 2024 | 2:38 PM

ತಲೆಯ ಕೂದಲು ಪ್ರತಿಯೊಬ್ಬರ ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಕೂದಲಿಗೆ ಸಂಬಂಧ ಪಟ್ಟ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಹೀಗಾಗಿ ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವ ಹಲವಾರು ಪ್ರಾಡಕ್ಟ್ ಗಳ ಮೊರೆ ಹೋಗುತ್ತಿದ್ದಾರೆ. ಆದರೆ ಅಡುಗೆ ಮನೆಯಲ್ಲಿ ದೇಸಿ ತುಪ್ಪವು ಕೂದಲಿನ ಎಲ್ಲಾ ಸಮಸ್ಯೆಗಳನ್ನು ನಿವಾರಿಸುತ್ತದೆ. ಈ ಕೂದಲ ಆರೈಕೆಗೆ ದೇಸಿ ತುಪ್ಪ ಉತ್ತಮ ಆಯ್ಕೆಯಾಗಿದೆ. ಈ ತುಪ್ಪವನ್ನು ತಲೆಗೆ ಹಚ್ಚುವುದರಿಂದ ಕೂದಲು ಸೊಂಪಾಗಿ, ದಟ್ಟವಾಗಿ ಬೆಳೆಯಲು ಸಹಾಯ ಮಾಡುತ್ತದೆ.

  • ದೇಸಿ ತುಪ್ಪವನ್ನು ತಲೆಗೆ ಹಚ್ಚುವುದರಿಂದ ತಲೆಹೊಟ್ಟು ಉಂಟುಮಾಡುವ ಶಿಲೀಂಧ್ರವನ್ನು ನಿವಾರಿಸಿ ಕೂದಲನ್ನು ಆರೋಗ್ಯಕರವಾಗಿಡುತ್ತದೆ. ಅದಲ್ಲದೇ, ತುಪ್ಪವನ್ನು ಹಚ್ಚುವುದರಿಂದ ಕೂದಲಿನ ಅನೇಕ ಸಮಸ್ಯೆಗಳು ನಿವಾರಿಸುತ್ತದೆ.
  • ದೇಸಿ ತುಪ್ಪದಲ್ಲಿ ವಿಟಮಿನ್ ಎ ಮತ್ತು ಇ ಸಮೃದ್ಧವಾಗಿದೆ. ತುಪ್ಪವು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುವ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದ್ದು, ಇದು ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ.
  • ದೇಸಿ ತುಪ್ಪದಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳು, ವಿಟಮಿನ್ ಎ, ಜಿ, ಕೆ 2 ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ಕೂದಲಿಗೆ ನೈಸರ್ಗಿಕ ಕಂಡೀಷನರ್ ಆಗಿ ಕಾರ್ಯನಿರ್ವಹಿಸುತ್ತದೆ.
  • ದೇಸಿ ತುಪ್ಪದಲ್ಲಿರುವ ವಿಟಮಿನ್ ಇ ಕೂದಲು ಉದುರುವುದನ್ನು ತಡೆದು ನೆತ್ತಿಯನ್ನು ಬಲಪಡಿಸಲು ಸಹಕಾರಿಯಾಗಿದೆ. ತಲೆಗೆ ನಿಯಮಿತವಾಗಿ ದೇಸಿ ತುಪ್ಪವನ್ನು ಹಚ್ಚುವುದರಿಂದ ಸತ್ತ ಚರ್ಮಕೋಶಗಳನ್ನು ತೆಗೆದುಹಾಕಿ ಕೂದಲಿನಲ್ಲಿ ರಕ್ತ ಪರಿಚಲನೆ ಹೆಚ್ಚಿಸುತ್ತದೆ.

ದೇಸಿ ತುಪ್ಪವನ್ನು ಹೀಗೆ ಬಳಸಿ

ಮೊದಲಿಗೆ ದೇಸಿ ತುಪ್ಪವನ್ನು ಲಘುವಾಗಿ ಬಿಸಿ ಮಾಡಿಕೊಳ್ಳಿ. ಹದವಾಗಿ ಬಿಸಿ ಮಾಡಿದ ನಿಮ್ಮ ನೆತ್ತಿ ಮತ್ತು ಕೂದಲಿನ ಬೇರುಗಳನ್ನು ಮಸಾಜ್ ಮಾಡಿ. ತುಪ್ಪವು ಕನಿಷ್ಠ ಒಂದು ಗಂಟೆ ಅಥವಾ ರಾತ್ರಿ ಪೂರ್ತಿ ಕೂದಲಿನಲ್ಲಿ ಉಳಿಯಲು ಬಿಡುವುದು ಒಳ್ಳೆಯದು. ಒಂದು ಗಂಟೆಯ ನಂತರ ಅಥವಾ ಬೆಳಗ್ಗೆ ಶಾಂಪೂ ಬಳಸಿ ಕೂದಲನ್ನು ತೊಳೆಯುವುದನ್ನು ಮರೆಯದಿರಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
Video: ಕ್ರಿಸ್​ಮಸ್​ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
Video: ಕ್ರಿಸ್​ಮಸ್​ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ವಾಜಪೇಯಿ ಜನ್ಮದಿನ, ವಿಡಿಯೋ ಮೂಲಕ ಅಟಲ್ ಕಾರ್ಯ ಹೊಗಳಿದ ಪ್ರಧಾನಿ ಮೋದಿ
ವಾಜಪೇಯಿ ಜನ್ಮದಿನ, ವಿಡಿಯೋ ಮೂಲಕ ಅಟಲ್ ಕಾರ್ಯ ಹೊಗಳಿದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಕ್ರಿಸ್ಮಸ್​ ಸಡಗರ​, ಲೈಟಿಂಗ್ಸ್​ನಲ್ಲಿ ಚರ್ಚ್​ಗಳು ಝಗಮಗ
ಬೆಂಗಳೂರಿನಲ್ಲಿ ಕ್ರಿಸ್ಮಸ್​ ಸಡಗರ​, ಲೈಟಿಂಗ್ಸ್​ನಲ್ಲಿ ಚರ್ಚ್​ಗಳು ಝಗಮಗ
ಆಪರೇಷನ್ ಬಳಿಕ ಶಿವರಾಜ್​ಕುಮಾರ್ ಹೆಲ್ತ್​ಅಪ್​ಡೇಟ್ ನೀಡಿದ ವೈದ್ಯರು
ಆಪರೇಷನ್ ಬಳಿಕ ಶಿವರಾಜ್​ಕುಮಾರ್ ಹೆಲ್ತ್​ಅಪ್​ಡೇಟ್ ನೀಡಿದ ವೈದ್ಯರು
ಎದುರಾಳಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ ರಜತ್
ಎದುರಾಳಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ ರಜತ್