AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care: ಬೋಳು ತಲೆಯಲ್ಲಿಯೂ ಚಿಗುರುತ್ತೆ ಕೂದಲು, ಇದನ್ನು ಹಚ್ಚಿ ನೋಡಿ

ಇತ್ತೀಚೆಗಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ, ಬೋಳು ತಲೆ, ತಲೆ ಹೊಟ್ಟು ಸೇರಿದಂತೆ ಇನ್ನಿತರ ಸಮಸ್ಯೆಗಳು ಎಲ್ಲರನ್ನು ಕಾಡುತ್ತಿದೆ. ಹೆಚ್ಚಿನವರು ಈ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಶ್ಯಾಂಪೂ ಸೇರಿದಂತೆ ಇನ್ನಿತ್ತರ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಈ ಎಲ್ಲಾ ಸಮಸ್ಯೆಗೆ ಅಲೋವೆರಾ ಪರಿಣಾಮಕಾರಿಯಾಗಿದೆ. ಈ ಅಲೋವೆರಾ ವಿಟಮಿನ್‌ಗಳು, ಖನಿಜಗಳು ಕಿಣ್ವಗಳು ಮತ್ತು ಅಮೈನೋ ಆಮ್ಲಗಳಿಂದ ಸಮೃದ್ಧವಾಗಿದ್ದು ಇದು ನೆತ್ತಿಯ ನೈಸರ್ಗಿಕ ಪಿಹೆಚ್ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಹಾಗಾದ್ರೆ ಕೂದಲಿನ ಬೆಳವಣಿಗೆಗೆ ಅಲೋವೆರಾ ಜೆಲ್ ಹೇಗೆ ಬಳಸಬಹುದು? ಎನ್ನುವ ಕುರಿತಾದ ಮಾಹಿತಿ ಇಲ್ಲಿದೆ.

Hair Care: ಬೋಳು ತಲೆಯಲ್ಲಿಯೂ ಚಿಗುರುತ್ತೆ ಕೂದಲು, ಇದನ್ನು ಹಚ್ಚಿ ನೋಡಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Mar 06, 2025 | 3:37 PM

Share

ಸಣ್ಣ ವಯಸ್ಸಿನಲ್ಲಿ ಕೂದಲು ಉದುರುವುದು, ಬೋಳು ತಲೆ ಸಮಸ್ಯೆ ಸರ್ವೆ ಸಾಮಾನ್ಯವಾಗಿ ಬಿಟ್ಟಿದೆ. ಕೆಲಸದ ಒತ್ತಡ, ಸರಿಯಾದ ಪೋಷಣೆಯ ಕೊರತೆ ಮತ್ತು ನಿದ್ರೆಯ ಕೊರತೆಯಿಂದ ಕೂದಲು ಉದುರುವಿಕೆ ಉಂಟಾಗುತ್ತದೆ. ಒಮ್ಮೆ ಕೂದಲು ಉದುರಲು ಆರಂಭಿಸಿದರೆ ಅದನ್ನು ನಿಯಂತ್ರಿಸುವುದು ಕಷ್ಟ. ಆ ಜಾಗದಲ್ಲಿ ಕೂದಲು ಬೆಳೆಯುವುದೇ ಇಲ್ಲ. ಇದು ಸೌಂದರ್ಯವನ್ನು ಹಾಳು ಮಾಡುತ್ತದೆ. ಆದರೆ ಮನೆಯಂಗಳದಲ್ಲಿರುವ ಅಲೋವೆರಾ ಸಸ್ಯದಿಂದ ಜೆಲ್ (Aloevera Gel) ತೆಗೆದು ಕೂದಲಿಗೆ ಹಚ್ಚುವುದು ಪರಿಣಾಮಕಾರಿಯಾಗಿದೆಯಂತೆ. ಹಾಗಾದ್ರೆ ಬೋಳು ಸಮಸ್ಯೆಯಿದ್ದವರಿಗೆ ಅಲೋವೆರಾ ಜೆಲ್ ಹೇಗೆ ಪ್ರಯೋಜನಕಾರಿಯಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

ಬೋಳು ತಲೆ ಸಮಸ್ಯೆಯಿರವವರಿಗೆ ಅಲೋವೆರಾ ಜೆಲ್ ಹೇಗೆ ಪರಿಣಾಮಕಾರಿ?

  • ಅಲೋವೆರಾದಲ್ಲಿರುವ ಪೋಷಕಾಂಶಗಳು ನೆತ್ತಿಯನ್ನು ಆರೋಗ್ಯಕರವಾಗಿಡುವಲ್ಲಿ, ಕೂದಲು ಕಿರುಚೀಲಗಳನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ.
  • ಅಲೋವೆರಾ ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು ಅದು ನೆತ್ತಿಯ ಸಮಸ್ಯೆಗಳು ಮತ್ತು ಉರಿಯೂತವನ್ನು ಶಮನಗೊಳಿಸುತ್ತದೆ. ಅಲೋವೆರಾ ನೆತ್ತಿಯ ನೈಸರ್ಗಿಕ ಪಿಹೆಚ್ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಕೂದಲಿನ ಬೆಳವಣಿಗೆಗೆ ಬೇಕಾದ ವಾತಾವರಣವನ್ನು ಸೃಷ್ಟಿಸುತ್ತದೆ.
  • ಅಲೋವೆರಾವು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದ್ದು, ಕೂದಲು ಉದುರುವಿಕೆಗೆ ಕಾರಣವಾಗುವ ತಲೆಹೊಟ್ಟನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
  • ಅಲೋವೆರಾವೂ ಪ್ರೋಟಿಯೋಲೈಟಿಕ್ ಕಿಣ್ವಗಳನ್ನು ಹೊಂದಿದ್ದು, ಇದು ಸತ್ತ ಚರ್ಮದ ಕೋಶಗಳನ್ನು ಸರಿಪಡಿಸಿ, ಮುಚ್ಚಿಹೋಗಿರುವ ರಂಧ್ರಗಳನ್ನು ಸ್ವಚ್ಛಗೊಳಿಸುತ್ತದೆ. ಅದಲ್ಲದೆ ಕೂದಲಿನ ಕಿರುಚೀಲಗಳ ಬೆಳವಣಿಗೆಗೆ ಅನುವು ಮಾಡಿಕೊಡುತ್ತದೆ.
  • ಅಲೋವೆರಾ ನೆತ್ತಿಯ ರಕ್ತ ಪರಿಚಲನೆ ಹೆಚ್ಚಿಸುತ್ತದೆ. ಇದು ಕೂದಲಿನ ಕಿರುಚೀಲಗಳು, ಕೂದಲಿನ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳು ಮತ್ತು ಆಮ್ಲಜನಕವನ್ನು ರವಾನಿಸುತ್ತದೆ.

ಇದನ್ನೂ ಓದಿ: ನಿಮ್ಮ ಕಣ್ಣಿನ ಆಕಾರ ಯಾವುದು? ಸಣ್ಣ ಕಣ್ಣುಗಳು ನಿಮ್ಮದಾಗಿದ್ರೆ ನೀವು ಅತೀ ಬುದ್ಧಿವಂತರು

ಬೋಳು ತಲೆಗೆ ಅಲೋವೆರಾ ಜೆಲ್ ಹೀಗೆ ಅನ್ವಯಿಸಿ

ಅಲೋವೆರಾ ಜೆಲ್ ಹಚ್ಚುವ ಮೊದಲು, ನಿಮ್ಮ ನೆತ್ತಿಯೂ ಸ್ವಚ್ಛವಾಗಿದೆಯೇ. ಕೊಳಕು, ಎಣ್ಣೆ ಮತ್ತು ಇತರ ಉತ್ಪನ್ನಗಳಿಂದ ಮುಕ್ತವಾಗಿದೆ ಎಂದು ಖಚಿತಪಡಿಸಿಕೊಳ್ಳುವುದು ಮುಖ್ಯ. ಹೀಗಾಗಿ ನಿಮ್ಮ ಕೂದಲನ್ನು ಸೌಮ್ಯವಾದ ಶಾಂಪೂ ಮತ್ತು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ಆ ಬಳಿಕ ಒಂದರಿಂದ ಎರಡು ಚಮಚ ಅಲೋವೆರಾ ಜೆಲ್ ತೆಗೆದುಕೊಂಡು, ಅದನ್ನು ನೇರವಾಗಿ ನೆತ್ತಿಗೆ ಹಚ್ಚಿ. ನಿಮ್ಮ ಬೆರಳ ತುದಿಯನ್ನು ಬಳಸಿ, ವೃತ್ತಾಕಾರದ ಚಲನೆಯಲ್ಲಿ ನಿಧಾನವಾಗಿ ಮಸಾಜ್ ಮಾಡಿ. ಈ ಜೆಲ್ ನಿಮ್ಮ ನೆತ್ತಿಯ ಮೇಲೆ ಕನಿಷ್ಠ 30 ನಿಮಿಷಗಳ ಕಾಲ ಹಾಗೆಯೇ ಇರಲಿ. ಒಂದು ಗಂಟೆಯ ಕಾಲ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ಇದನ್ನು ವಾರಕ್ಕೆ ಎರಡರಿಂದ ಮೂರು ಬಾರಿ ಮಾಡಿದರೆ ಉತ್ತಮ ಫಲಿತಾಂಶ ಪಡೆಯಬಹುದು.

ಇದನ್ನೂ ಓದಿ
Image
ಮಕ್ಕಳಲ್ಲಿ ‘ಬೊಜ್ಜು’ ಬರುಲು ಪೋಷಕರೇ ಕಾರಣ, ಅದು ಹೇಗೆ?
Image
ಸ್ಥೂಲಕಾಯತೆಯನ್ನು ಎದುರಿಸುವ ಕುರಿತು ಜಾಗೃತಿ ಮೂಡಿಸಿದ ಏಮ್ಸ್
Image
ಮೋದಿ ಫಿಟ್ ಇಂಡಿಯಾ ಕರೆಗೆ ಅಕ್ಷಯ್ ಕುಮಾರ್, ವೈದ್ಯರು,ಕ್ರೀಡಾಪಟುಗಳ ಬೆಂಬಲ
Image
ಸ್ಥೂಲಕಾಯತೆಯಿಂದ ಬಳಲುತ್ತಿದ್ದೀರಾ? ಆಹಾರದಲ್ಲಿ ಈ ಬದಲಾವಣೆ ಮಾಡಿ

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Thu, 6 March 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್