Hair Care: ಪುರುಷರಲ್ಲಿ ಬೋಳುತಲೆ ಹೆಚ್ಚಾಗಲು ಕಾರಣವೇನು?

ಕೂದಲು ಮಹಿಳೆಯರಿಗೆ ಮಾತ್ರವಲ್ಲ ಪುರುಷರ ಸೌಂದರ್ಯಕ್ಕೂ ಬಹಳ ಮುಖ್ಯ. ಮಹಿಳೆಯರಿಗಿಂತಲೂ ಪುರುಷರಲ್ಲಿ ಬಹಳ ಬೇಗ ಬೋಳುತಲೆಯ ಸಮಸ್ಯೆ ಉಂಟಾಗುತ್ತದೆ. ತಲೆಕೂದಲನ್ನು ಮಾನವನ ದೇಹದ ಅತ್ಯಂತ ನಿರ್ಣಾಯಕ ಅಂಶಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು, ವಿಶೇಷವಾಗಿ ಯುವಜನರು ಕೂದಲು ಉದುರುವಿಕೆ, ಕೂದಲು ತೆಳುವಾಗುವ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಇದಕ್ಕೆ ಕಾರಣವೇನು?

Hair Care: ಪುರುಷರಲ್ಲಿ ಬೋಳುತಲೆ ಹೆಚ್ಚಾಗಲು ಕಾರಣವೇನು?
ಸಾಂದರ್ಭಿಕ ಚಿತ್ರ Image Credit source: iStock
Follow us
ಸುಷ್ಮಾ ಚಕ್ರೆ
|

Updated on: Feb 01, 2024 | 7:08 PM

ಪುರುಷರಲ್ಲಿ ಬೋಳುತಲೆಯ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಅನುವಂಶೀಯತೆ, ಹಾರ್ಮೋನ್ ಸಮಸ್ಯೆ, ಆಹಾರ ಪದ್ಧತಿ, ಪರಿಸರ ಮಾಲಿನ್ಯ ಮತ್ತು ಜೀವನಶೈಲಿಯೂ ಕಾರಣವಾಗುತ್ತದೆ. ಪುರುಷರಲ್ಲಿ ಕಂಡುಬರುವ ಬೋಳುತಲೆಯನ್ನು ಆಂಡ್ರೊಜೆನೆಟಿಕ್ ಅಲೋಪೆಸಿಯಾ ಎಂದು ಕರೆಯಲಾಗುತ್ತದೆ. ಸುಮಾರು ಶೇ. 50ರಷ್ಟು ಜನಸಂಖ್ಯೆಯಲ್ಲಿ ಕೂದಲು ಉದುರುವಿಕೆಗೆ ಇದು ಸಾಮಾನ್ಯ ಕಾರಣವಾಗಿದೆ.

ಕೂದಲು ಉದುರುವಿಕೆಗೆ ಕಾರಣಗಳೇನು?:

– ಸರಿಯಾದ ಸಮತೋಲಿತ ಆಹಾರವು ಕೂದಲ ಆರೋಗ್ಯವನ್ನು ಹೆಚ್ಚಿಸುತ್ತದೆ. ಅದು ಕೂದಲನ್ನು ಆರೋಗ್ಯಕರವಾಗಿ ಮಾಡುತ್ತದೆ.

ಇದನ್ನೂ ಓದಿ: Hair Care: ಕೂದಲು ದಟ್ಟವಾಗಿ ಬೆಳೆಯಬೇಕಾ?; ಶುಂಠಿ ರಸವನ್ನು ಈ ರೀತಿ ಬಳಸಿ

– ಅನಿಯಮಿತ ನಿದ್ರೆ, ಆಹಾರ ಮತ್ತು ಧೂಮಪಾನದಂತಹ ಅಭ್ಯಾಸಗಳು ಕೂದಲಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತವೆ.

– ಕೂದಲ ರಕ್ಷಣೆಯ ಉತ್ಪನ್ನಗಳ ಅತಿಯಾದ ಬಳಕೆ ಅಥವಾ ತಪ್ಪಾದ ಬಳಕೆ ಕೂಡ ಕೂದಲು ಉದುರಲು ಕಾರಣವಾಗಬಹುದು. ಸ್ಟೈಲಿಂಗ್ ಉಪಕರಣಗಳು ಮತ್ತು ಸಾಧನಗಳು ಕೂದಲಿಗೆ ಅಷ್ಟು ಒಳ್ಳೆಯದಲ್ಲ.

– ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ವಿವಿಧ ರೀತಿಯಲ್ಲಿ ಪರಿಣಾಮ ಬೀರುವುದಲ್ಲದೆ ಕೂದಲು ಉದುರುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒತ್ತಡವು ನಿಮ್ಮ ಕೂದಲಿನ ವಿನ್ಯಾಸವನ್ನು ಸಹ ಹಾಳುಮಾಡುತ್ತದೆ.

ಇದನ್ನೂ ಓದಿ: Hair Care: ನಟಿ ಸಾಯಿ ಪಲ್ಲವಿಯ ಉದ್ದ ಕೂದಲಿನ ರಹಸ್ಯವೇನು?

ಕೂದಲು ಉದುರು ತಲೆ ಬೋಳಾಗುವುದನ್ನು ತಡೆಯಲು ನಮ್ಮ ದೇಹಕ್ಕೆ ಅಗತ್ಯವಿದ್ದಷ್ಟು ನೀರು ಕುಡಿಯುವುದು ಕೂಡ ಬಹಳ ಮುಖ್ಯ. ನಿರ್ಜಲೀಕರಣ ನಿಮ್ಮ ದೇಹ ಮತ್ತು ಕೂದಲಿನ ಮೇಲೆ ಪರಿಣಾಮ ಬೀರುತ್ತದೆ. ದಿನವಿಡೀ ಸಾಕಷ್ಟು ನೀರು ಕುಡಿಯುವುದರಿಂದ ಅದು ನಿಮ್ಮ ದೇಹವನ್ನು ತೇವಾಂಶದಿಂದಿರಿಸುತ್ತದೆ. ಇದು ಕೂದಲು ಉದುರುವಿಕೆಯನ್ನು ತಡೆಯುತ್ತದೆ. ಕೂದಲಿಗೆ ಬಿಸಿಯಾದ ಎಣ್ಣೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಸಂಚಾರ ಚೆನ್ನಾಗಿ ಆಗಿ, ಕೂದಲು ಉದುರುವಿಕೆ ಕಡಿಮೆಯಾಗುತ್ತದೆ. ಜೊತೆಗೆ, ಪೌಷ್ಟಿಕಾಂಶಭರಿತ ಆಹಾರ ಸೇವಿಸಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’