AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಳು, ಮಾಲಿನ್ಯದಿಂದ ನಿಮ್ಮ ಕೂದಲು ಉದುರದಂತೆ ತಡೆಯುವುದು ಹೇಗೆ?

ವಿಷಕಾರಿ ಮಾಲಿನ್ಯಕಾರಕಗಳು ನಮ್ಮ ಕೂದಲನ್ನು ಹಾನಿಗೊಳಿಸುತ್ತವೆ. ಸಂಶೋಧನೆಯು ಕೂದಲಿನ ಬೆಳವಣಿಗೆ ಮತ್ತು ಆರೋಗ್ಯದ ಮೇಲೆ ವಾಯು ಮಾಲಿನ್ಯ ಹಲವಾರು ವಿಧಗಳಲ್ಲಿ ಹಾನಿಕಾರಕ ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಿದೆ.

ಧೂಳು, ಮಾಲಿನ್ಯದಿಂದ ನಿಮ್ಮ ಕೂದಲು ಉದುರದಂತೆ ತಡೆಯುವುದು ಹೇಗೆ?
ತಲೆಕೂದಲು ಉದುರುವುದು
ಸುಷ್ಮಾ ಚಕ್ರೆ
|

Updated on: Nov 09, 2023 | 2:56 PM

Share

ಕೂದಲು ಉದುರುವಿಕೆ ನಮ್ಮಲ್ಲಿ ಹೆಚ್ಚಿನವರು ಎದುರಿಸುವ ದಿನನಿತ್ಯದ ಸಮಸ್ಯೆಯಾಗಿದೆ. ಇದು ಸಾಮಾನ್ಯವಾಗಿ ಆಯಾ ಪ್ರದೇಶಗಳ ನೀರು, ಆರೋಗ್ಯ ಸಮಸ್ಯೆ ಅಥವಾ ಕೆಲವೊಮ್ಮೆ ತೀವ್ರ ಒತ್ತಡದ ಕಾರಣದಿಂದಾಗಿ ಕೂದಲು ಉದುರುತ್ತದೆ. ದೆಹಲಿ ಮಾತ್ರವಲ್ಲದೆ ಬೆಂಗಳೂರು, ಮುಂಬೈನಲ್ಲೂ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಈ ಮಾಲಿನ್ಯದಿಂದ ಕೂದಲು ಉದುರುವಿಕೆ ಹೆಚ್ಚಾಗುತ್ತಿದೆ. ಇದು ಕೇವಲ ಪೌಷ್ಠಿಕಾಂಶದ ಕೊರತೆ ಅಥವಾ ಒತ್ತಡದ ಸಮಸ್ಯೆಯಲ್ಲ. ವಿಷಕಾರಿ ಮಾಲಿನ್ಯಕಾರಕಗಳು ನಮ್ಮ ಕೂದಲನ್ನು ಹಾನಿಗೊಳಿಸುತ್ತವೆ. ಸಂಶೋಧನೆಯು ಕೂದಲಿನ ಬೆಳವಣಿಗೆ ಮತ್ತು ಆರೋಗ್ಯದ ಮೇಲೆ ವಾಯು ಮಾಲಿನ್ಯ ಹಲವಾರು ವಿಧಗಳಲ್ಲಿ ಹಾನಿಕಾರಕ ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಿದೆ.

ವಾಯು ಮಾಲಿನ್ಯಕಾರಕಗಳು ನೇರವಾಗಿ ನೆತ್ತಿಯ ಮೇಲೆ ದಾಳಿ ಮಾಡಬಹುದು. ಇದು ಕಿರಿಕಿರಿ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ. ಇದು ಕೂದಲ ಕಿರುಚೀಲಗಳ ಸೂಕ್ಷ್ಮ ರಚನೆಗಳನ್ನು ಹಾನಿಗೊಳಿಸುತ್ತದೆ. ಕೂದಲಿನ ಬೆಳವಣಿಗೆಯನ್ನು ದುರ್ಬಲಗೊಳಿಸುತ್ತದೆ. ವಾಯು ಮಾಲಿನ್ಯವು ಸ್ವತಂತ್ರ ರಾಡಿಕಲ್​ಗಳನ್ನು ಸಹ ಉತ್ಪಾದಿಸುತ್ತದೆ. ಈ ಸ್ವತಂತ್ರ ರಾಡಿಕಲ್​ಗಳು ಆಕ್ಸಿಡೇಟಿವ್ ಒತ್ತಡವನ್ನು ಉಂಟುಮಾಡಬಹುದು. ಇದು ಸೆಲ್ಯುಲಾರ್ ಹಾನಿಗೆ ಕಾರಣವಾಗುತ್ತದೆ ಮತ್ತು ಕೂದಲ ಕಿರುಚೀಲಗಳ ಕಾರ್ಯವನ್ನು ದುರ್ಬಲಗೊಳಿಸುತ್ತದೆ.

ಇದನ್ನೂ ಓದಿ: ಉಗುರುಗಳನ್ನು ಉಜ್ಜಿದರೆ ಕೂದಲು ಉದ್ದವಾಗುತ್ತಾ?

ಕೆಲವು ವಾಯು ಮಾಲಿನ್ಯಕಾರಕಗಳಿಗೆ ಒಡ್ಡಿಕೊಳ್ಳುವುದರಿಂದ ಕೂದಲಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಹಾರ್ಮೋನ್ ಬದಲಾವಣೆಗಳಿಗೆ ಸಂಬಂಧವಿದೆ. ವಾಯು ಮಾಲಿನ್ಯವು ತಲೆಹೊಟ್ಟು ಮತ್ತು ಸೆಬೊರ್ಹೆಕ್ ಡರ್ಮಟೈಟಿಸ್‌ನಂತಹ ನೆತ್ತಿಯ ಸಮಸ್ಯೆಯನ್ನು ಇನ್ನಷ್ಟು ಹದಗೆಡಿಸುತ್ತದೆ. ಇದು ಕೂದಲು ಉದುರುವಿಕೆಗೆ ಕಾರಣವಾಗಬಹುದು. ಮಾಲಿನ್ಯಕಾರಕಗಳಿಂದ ಉಂಟಾಗುವ ಕಿರಿಕಿರಿಯು ಈ ಪರಿಸ್ಥಿತಿಗಳನ್ನು ಉಲ್ಬಣಗೊಳಿಸಬಹುದು, ಇದು ಉರಿಯೂತ ಮತ್ತು ಕೂದಲು ಉದುರುವಿಕೆಗೆ ಕಾರಣವಾಗುತ್ತದೆ.

ಹೆಚ್ಚುತ್ತಿರುವ ವಾಯು ಮಾಲಿನ್ಯದ ನಡುವೆ ಕೂದಲು ಉದುರುವುದನ್ನು ತಡೆಯಲು 5 ಸಲಹೆಗಳು ಇಲ್ಲಿವೆ:

ನಿಯಮಿತವಾಗಿ ಕೂದಲು ತೊಳೆಯಿರಿ:

ಕೂದಲನ್ನು ದಿನ ಬಿಟ್ಟು ದಿನ ತೊಳೆಯುವುದರಿಂದ ನೆತ್ತಿ ಮತ್ತು ಕೂದಲಿನಲ್ಲಿರುವ ಮಾಲಿನ್ಯಕಾರಕಗಳನ್ನು ತೆಗೆದುಹಾಕಲು ಸಹಾಯವಾಗುತ್ತದೆ.

ಉತ್ತಮ ಶ್ಯಾಂಪೂಗಳನ್ನು ಬಳಸಿ:

ಉತ್ತಮ ಗುಣಮಟ್ಟದ ಶ್ಯಾಂಪೂಗಳನ್ನು ಬಳಸುವುದರಿಂದ ಕೂದಲಿನಿಂದ ಕೊಳಕು ಮತ್ತು ಮಾಲಿನ್ಯಕಾರಕಗಳನ್ನು ತೆಗೆದುಹಾಕಲು ಸಹಾಯವಾಗುತ್ತದೆ.

ಇದನ್ನೂ ಓದಿ: Air Pollution: ಗರ್ಭದಲ್ಲಿರುವ ಭ್ರೂಣದ ಮೇಲೂ ವಾಯು ಮಾಲಿನ್ಯ ಅಪಾಯಕಾರಿ ಪರಿಣಾಮವನ್ನು ಬೀರುತ್ತದೆ!

ಸೂರ್ಯನಿಂದ ರಕ್ಷಣೆ ಪಡೆಯಿರಿ:

ಸೂರ್ಯನ ಹಾನಿಕಾರಕ ಯುವಿ ಕಿರಣಗಳಿಂದ ಕೂದಲನ್ನು ರಕ್ಷಿಸುವುದು ಬಹಳ ಮುಖ್ಯ. ಏಕೆಂದರೆ ಯುವಿ ಕಿರಣಗಳು ಕೂದಲ ಕಿರುಚೀಲಗಳನ್ನು ಇನ್ನಷ್ಟು ಹಾನಿಗೊಳಿಸುತ್ತದೆ.

ಆರೋಗ್ಯಕರ ಆಹಾರ ಸೇವಿಸಿ:

ಸಮತೋಲಿತ ಮತ್ತು ಪೌಷ್ಟಿಕ ಆಹಾರವು ಕೂದಲಿನ ಬೆಳವಣಿಗೆ ಮತ್ತು ಒಟ್ಟಾರೆ ಆರೋಗ್ಯಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ.

ಒತ್ತಡ ನಿರ್ವಹಣೆ:

ಅತಿಯಾದ ಒತ್ತಡವು ಕೂದಲ ಉದುರುವಿಕೆಗೆ ಕಾರಣವಾಗಬಹುದು. ವ್ಯಾಯಾಮ, ಯೋಗ, ಅಥವಾ ಧ್ಯಾನದಂತಹ ಒತ್ತಡ ನಿರ್ವಹಣೆಯ ತಂತ್ರಗಳನ್ನು ಅಭ್ಯಾಸ ಮಾಡುವುದರಿಂದ ಕೂದಲಿನ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು