AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಅರಶಿನ ನೀರು ಕುಡಿದರೆ ಆರೋಗ್ಯ ಲಾಭಗಳು ಖಂಡಿತ

ಆರೋಗ್ಯವು ಉತ್ತಮವಾಗಿರಬೇಕಾದರೆ ಒಳ್ಳೆಯ ಅಭ್ಯಾಸವನ್ನು ರೂಢಿಸಿಕೊಳ್ಳುವುದು ಮುಖ್ಯ. ದಿನನಿತ್ಯದ ಜೀವನದಲ್ಲಿನ ನಮ್ಮ ಕೆಲ ಅಭ್ಯಾಸಗಳಿಂದ ನಮಗಾಗುವ ಆರೋಗ್ಯ ಲಾಭಗಳ ಬಗ್ಗೆ ತಿಳಿದಿರುವುದಿಲ್ಲ. ಮುಂಜಾನೆಯ ವೇಳೆಯಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಕೆಲ ಆಹಾರ ಹಾಗೂ ಪಾನೀಯಗಳು ಆರೋಗ್ಯಕ್ಕೆ ನಾನಾ ರೀತಿಯ ಲಾಭಗಳಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಅರಶಿನ ನೀರು ಸೇವಿಸುತ್ತಿದ್ದರೆ ಆರೋಗ್ಯದಲ್ಲಿ ನಾನಾ ರೀತಿಯ ಬದಲಾವಣೆಗಳನ್ನು ಕಾಣಬಹುದು.

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಅರಶಿನ ನೀರು ಕುಡಿದರೆ ಆರೋಗ್ಯ ಲಾಭಗಳು ಖಂಡಿತ
ಸಾಯಿನಂದಾ
| Edited By: |

Updated on: Feb 23, 2024 | 5:24 PM

Share

ಭಾರತೀಯರ ಅಡುಗೆ ಮನೆಯಲ್ಲಿರುವ ಪ್ರಮುಖ ಪದಾರ್ಥಗಳಲ್ಲಿ ಒಂದು ಈ ಅರಶಿನ. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಇ, ಕಬ್ಬಿಣ, ಸತು ಸೇರಿದಂತೆ ಹಲವು ಪೋಷಕಾಂಶಗಳು ಹೇರಳವಾಗಿದ್ದು, ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ಮತ್ತು ನಂಜುನಿರೋಧಕ ಗುಣವನ್ನು ಹೊಂದಿದೆ. ಹೀಗಾಗಿ ಅನಾದಿ ಕಾಲದಿಂದಲೂ ಔಷಧಿಗಳ ತಯಾರಿಕೆಯಲ್ಲಿ ಈ ಅರಶಿನವನ್ನು ಬಳಸುತ್ತಾ ಬರಲಾಗುತ್ತಿದೆ. ಅದಲ್ಲದೇ ಸೌಂದರ್ಯವರ್ಧಕಗಳಲ್ಲಿ ಅರಶಿನ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

* ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ : ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರು ಕುಡಿಯುವುದರಿಂದ ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ದೂರ ಮಾಡುತ್ತದೆ. ಈ ಅರಶಿನದ ನೀರು ಜೀರ್ಣಕಾರಿ ಕಿಣ್ವಗಳಲ್ಲಿ ಪಿತ್ತರಸದ ಉತ್ಪಾದನೆಯನ್ನು ಹೆಚ್ಚಿಸಿ ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ. ಹೊಟ್ಟೆ ಉಬ್ಬರ, ಮಲಬದ್ಧತೆ ಮತ್ತು ಇತರ ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ದೂರಾಗಿಸುತ್ತದೆ.

* ತೂಕ ನಷ್ಟಕ್ಕೆ ಸಹಕಾರಿ : ಅರಶಿನ ನೀರು ತೂಕ ಇಳಿಸಿಕೊಳ್ಳುವವರಿಗೆ ಸಹಕಾರಿಯಾಗಿದೆ. ಬೆಳಗ್ಗೆ ಅರಶಿನ ನೀರು ಸೇವನೆಯಿಂದ ದೇಹವು ಕೊಬ್ಬನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುತ್ತದೆ.

* ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ : ಅರಿಶಿನದಲ್ಲಿ ಉತ್ಕರ್ಷಣ ನಿರೋಧಕಗಳು, ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿವೈರಲ್ ಗುಣಗಳು ಹೇರಳವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅನಾರೋಗ್ಯ ಸಮಸ್ಯೆ ಬಾರದಂತೆ ನೋಡಿಕೊಳ್ಳುತ್ತದೆ.

* ಹೃದಯದ ಆರೋಗ್ಯವನ್ನು ಕಾಪಾಡುತ್ತದೆ : ದಿನನಿತ್ಯ ಅರಿಶಿನ ನೀರನ್ನು ಕುಡಿಯುವುದರಿಂದ ಹೃದಯದ ಆರೋಗ್ಯಕ್ಕೆ ಸಹಕಾರಿಯಾಗಿದೆ. ಅರಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ಕೊಲೆಸ್ಟ್ರಾಲ್ ಮಟ್ಟ ಹಾಗೂ ರಕ್ತದೊತ್ತಡವನ್ನು ಕಡಿಮೆಗೊಳಿಸಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

* ಉರಿಯೂತವನ್ನು ಕಡಿಮೆ ಮಾಡುತ್ತದೆ : ಅರಶಿನದ ನೀರು ಉರಿಯೂತದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ವಯಸ್ಸಾದಂತೆ ಕೀಲುಗಳಲ್ಲಿನ ಕಾಣಿಸಿಕೊಳ್ಳುವ ನೋವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ದೋಸೆ, ಇಡ್ಲಿ ಜೊತೆಗೆ ಬೆಸ್ಟ್ ಕಾಂಬಿನೇಶನ್ ಈ ಬದನೆಕಾಯಿ ಚಟ್ನಿ, ಮಾಡುವ ವಿಧಾನವಂತೂ ತುಂಬಾನೇ ಸರಳ

* ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ : ಅರಶಿನದಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಇದು ವಯಸ್ಸಾಗಿರುವುದನ್ನು ತಡೆದು, ಚರ್ಮವನ್ನು ಕಾಂತಿಯುತ ಹಾಗೂ ಆರೋಗ್ಯಕರವಾಗಿರಿಸುತ್ತದೆ.

* ನಂಜು ನಿರೋಧಕ : ಅರಶಿನದಲ್ಲಿ ನಂಜು ನಿರೋಧಕ ಗುಣವನ್ನು ಹೊಂದಿದೆ. ಮೈಯಲ್ಲಿ ಗಾಯಗಳಿದ್ದರೆ ಅರಶಿನ ನೀರನ್ನು ಕುಡಿಯುವುದರಿಂದ ಗಾಯವು ಮಾಗುತ್ತದೆ.

* ಮೆದುಳಿನ ಕಾರ್ಯವು ಸುಧಾರಿಸುತ್ತದೆ : ನಿಯಮಿತವಾಗಿ ಅರಶಿನ ನೀರು ಕುಡಿಯುವುದರಿಂದ ಮೆದುಳಿನ ಕಾರ್ಯವು ಸುಧಾರಿಸುತ್ತದೆ. ಅದಲ್ಲದೇ ಅರಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ಅಲ್ಜೈಮೆರ್ ಕಾಯಿಲೆಯ ಮಟ್ಟವನ್ನು ಕಡಿಮೆಗೊಳಿಸಿ, ಈ ಮರೆವಿನ ಕಾಯಿಲೆಯು ಬಾರದಂತೆ ತಡೆಯುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು